BELTHANGADY
ಉಜಿರೆ ಬಾಲಕ ಅಪಹರಣ ಪ್ರಕರಣ : ಪೋಷಕರನ್ನು ಭೇಟಿಯಾಗಿ ಮಾಹಿತಿ ಪಡೆದ ಎಸ್ಪಿ..
ಉಜಿರೆ ಬಾಲಕ ಅಪಹರಣ ಪ್ರಕರಣ : ಪೋಷಕರನ್ನು ಭೇಟಿಯಾಗಿ ಮಾಹಿತಿ ಪಡೆದ ಎಸ್ಪಿ..
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ರಥಬೀದಿಯಿಂದ ಅಪಹರಣಕ್ಕೊಳಗಾದ ಬಾಲಕ ಅನುಭವ್ ಮನೆಗೆ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿಪ್ರಸಾದ್ ಇಂದು ಭೇಟಿ ನೀಡಿ ಕುಟುಂಬದವರೊಂದಿಗೆ ಮಾತುಕತೆ ನಡೆಸಿದ್ದಾರೆ.
ಅನುಭವ್ ಅಪಹರಣ ಮಾಡಿದವರು ಡಿ.17 ರಂದು ರಾತ್ರಿ 17 ಕೋ.ರೂ. ಗೆ ಬೇಡಿಕೆ ಇಟ್ಟಿದ್ದರು. ಆದರೆ ಇಂದು ಬೆಳಗ್ಗೆ ತಮ್ಮ ವರಸೆ ಬದಲಾಯಿಸಿ 10 ಕೋಟಿ ರೂಪಾಯಿ ಬೇಡಿಕೆ ಸಲ್ಲಿಸಿರುವ ಕುರಿತು ಮಾಹಿತಿ ಲಭ್ಯವಾಗಿದೆ.
ಹಣಕಾಸಿನ ವಿಚಾರಕ್ಕೆ ಬಾಲಕನನ್ನು ಅಪಹರಿಸಿ, ಒತ್ತೆ ಇಟ್ಟು ಹಣಕ್ಕೆ ಬೇಡಿಕೆ ನೀಡಿರುವ ಕುರಿತು ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ನಡೆಸುತ್ತಿದ್ದಾರೆ.
ಆದರೆ ಬಾಲಕನನ್ನು ಅಪಹರಣ ಮಾಡಿದವರು ಸಾಮಾಜಿಕ ಜಾಲತಾಣದ ಮೂಲಕ ಬಾಲಕನ ತಂದೆಯೊಂದಿಗೆ ಹಣದ ಬೇಡಿಕೆ ಇಡುತ್ತಿರುವುದಾಗಿ ತಿಳಿದು ಬಂದಿದೆ.
ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಗಳು ಉಜಿರೆಯಲ್ಲಿ ಮೊಕ್ಕಾಂ ಹೂಡಿದ್ದಾರೆ.
ಪ್ರಕರಣ ಸುಖಾಂತ್ಯಕ್ಕಾಗಿ ಪೊಲೀಸರು ಶ್ರಮಿಸುತ್ತಿದ್ದಾರೆ. ದ.ಕ. ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಬಾಲಕ ಮನೆಗೆ ಭೇಟಿ ಮಾಡಿ ಮನೆಯವರೊಂದಿಗೆ ಚರ್ಚಿಸಿ, ತನಿಖೆಗೆ ಚುರುಕು ಮುಟ್ಟಿಸಿದ್ದಾರೆ.
ಇನ್ನು ಈ ಬಗ್ಗೆ ಪ್ರತಿಕ್ರೀಯಿಸಿರುವ ಎಸ್ ಪಿ ಅವರು ಬಾಲಕನ ಪಾಲಕರ ದೂರಿನ ಆಧಾರದಲ್ಲಿ ಎಫ್.ಐಆರ್ ದಾಖಲು ಮಾಡಿದ್ದೇವೆ. ಪತ್ತೆ ಕಾರ್ಯಾಚರಣೆ ನಡೆಸುತ್ತಿದ್ದೇವೆ. ಅಪಹರಣಕಾರರು ಬಿಟ್ ಕಾಯಿನ್ ಕಳಿಸಿ ಅಂತಾ ಕೇಳ್ತಾ ಇದ್ದಾರೆ.
ಮಗು ಎಲ್ಲಿ ಇದೆ ಎಂದು ಗೊತ್ತಾಗ್ತಿಲ್ಲ,ಬಿಟ್ ಕಾಯಿನ್ ಬಗ್ಗೆ ತನಿಖೆ ನಡಿತಿದೆ..ಬಂಟ್ವಾಳ ಡಿ.ವೈ.ಎಸ್ಪಿ ನೇತ್ರತ್ವದಲ್ಲಿ ತನಿಖೆ ನಡೆಯುತ್ತಿದ್ದು, ನಾಲ್ಕೂ ತಂಡಗಳ ರಚನೆ ಮಾಡಿದ್ದೇವೆ. ಬಾಲಕನ ಮನೆಯವರಿಂದ ಮಾಹಿತಿ ಪಡೆದಿದ್ದೇವೆ. ಪರಿಚಯಸ್ಥರೆ ಕೃತ್ಯ ನಡೆಸಿರುವ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
BELTHANGADY
ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ
ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.
ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?
ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
BANTWAL
ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.
ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.
BELTHANGADY
ಬೆಳ್ತಂಗಡಿ: ಕೆರೆಗೆ ಬಿದ್ದು ಕಾಡುಕೋಣ ಸಾ*ವು.. ಸಾರ್ವಜನಿಕರಿಂದ ಅಂತ್ಯಸಂಸ್ಕಾರ
ಬೆಳ್ತಂಗಡಿ: ಇಲ್ಲಿನ ಬೆಳಾಲು ಗ್ರಾಮಕ್ಕೆ ಸಂಬಂಧಪಟ್ಟಂತೆ ಕೊಯ್ಯೂರು ರಸ್ತೆಯ ಬದ್ಯಾರು ಎಂಬಲ್ಲಿ ಹೆಚ್ ಪದ್ಮಗೌಡ ಎಂಬವರ ತೋಟದ ಕೆರೆಯಲ್ಲಿ ಬೃಹತ್ ಗಾತ್ರದ ಕಾಡುಕೋಣದ ಮೃತ*ದೇಹ ಪತ್ತೆಯಾಗಿದೆ.
ಮುಂದೆ ನೋಡಿ..; ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಕೆಎಸ್ ಈಶ್ವರಪ್ಪ ಬಿಜೆಪಿ ಪಕ್ಷದಿಂದ ಉಚ್ಛಾಟನೆ..!
ಈ ಕೆರೆಗೆ ಸುತ್ತ ಕಾಂಕ್ರೀಟ್ ರಿಂಗ್ ಅಳವಡಿಸಿದ್ದು ನೀರು ಕುಡಿಯಲು ಬಂದ ಕಾಡುಕೋಣ ಮೂರ್ನಾಲ್ಕು ದಿನಗಳ ಹಿಂದೆಯೇ ಬಿದ್ದು ಸಾವನ್ನಪ್ಪಿರುವ ಸಾಧ್ಯತೆ ಇದೆ. ಹೆಚ್ಚೂ ಕಮ್ಮಿ 10 ಕ್ವಿಂಟಾಲ್ ತೂಕ ಹೊಂದಿರಬಹುದೆಂದು ಅಂದಾಜಿಸಲಾಗಿದ್ದು, ಕೊಳೆತು ವಾಸನೆ ಬೀರುತ್ತಿತ್ತು. ಶೌರ್ಯ ವಿಪತ್ತು ತಂಡಕ್ಕೆ ಬಂದ ಮಾಹಿತಿಯಂತೆ ಉಜಿರೆ- ಬೆಳಾಲು ಘಟಕದ ಸಂಯೋಜಕ ಸುಲೈಮಾನ್ ಬೆಳಾಲು, ಮುಳುಗು ಪರಿಣತ ಹರೀಶ ಕೂಡುಗೆ, ಮುಹಮ್ಮದ್ ಶರೀಫ್ ಬೆಳಾಲು, ಅವಿನಾಶ್ ಭಿಡೆ ಅರಸಿಮನಕ್ಕಿ, ರವೀಂದ್ರ ಉಜಿರೆ, ಸುರೇಂದ್ರ ಉಜಿರೆ, ಅನಿಲ್ ಚಾರ್ಮಾಡಿ, ಶೌರ್ಯ ಘಟಕದ ಮಾಸ್ಟರ್ ಪ್ರಕಾಶ್ ಧರ್ಮಸ್ಥಳ, ನಳಿನ್ ಕುಮಾರ್ ಧರ್ಮಸ್ಥಳ ಮೊದಲಾದವರು ಸಾರ್ವಜನಿಕರ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿ ಕಾಡುಕೋಣದ ಕಳೇಬರವನ್ನು ಮೇಲೆತ್ತಿದ್ದಾರೆ. ಬಳಿಕ ಪಶುವೈದ್ಯಾಧಿಕಾರಿ ಮರಣೋತ್ತರ ಪರೀಕ್ಷೆ ಪ್ರಕ್ರೀಯೆ ನಡೆಸಿದ್ದು, ತೋಟದಲ್ಲೇ ಹೊಂಡ ತೋಡಿ ಅಂತ್ಯಸಂಸ್ಕಾರ ನಡೆಸಲಾಗಿದೆ.
- DAKSHINA KANNADA7 days ago
“ಸೆಕ್ಸ್” ನನ್ನ ಸಾಮರ್ಥ್ಯದ ರಹಸ್ಯ…! ಮಾಜಿ ಸಂಸದೆಯ ಹೇಳಿಕೆ ವೈರಲ್..!
- DAKSHINA KANNADA7 days ago
ಕೊರಗಜ್ಜನ ಫೋಟೋವನ್ನು ಮನೆಯಲ್ಲಿ ಇಟ್ಟು ಆರಾಧಿಸಬಹುದಾ?
- FILM3 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- LATEST NEWS6 days ago
ಆಲದ ಮರದ ಪೊಟರೆಯಲ್ಲಿ ಪತ್ತೆಯಾಯ್ತು 64 ಲಕ್ಷ ರೂ.!