Connect with us

    LATEST NEWS

    ಪಾರ್ಕಿಂಗ್​ನಲ್ಲಿ ಲೇಟಾಗಿ ಪೇ ಮಾಡಿದಕ್ಕೆ ಬಿತ್ತು 2 ಲಕ್ಷ ರೂ. ದಂಡ

    Published

    on

    ಪಾರ್ಕಿಂಗ್ ಸ್ಥಳದಲ್ಲಿ ಹಣ ಪಾವತಿಸಲು ವಿಳಂಬ ಮಾಡಿದ್ದಕ್ಕಾಗಿ ಮಹಿಳೆಯೊಬ್ಬರಿಗೆ ಎರಡು ಲಕ್ಷ ರೂಪಾಯಿ ದಂಡ ವಿಧಿಸಿರುವ ಘಟನೆ ಯುನೈಟೆಡ್ ಕಿಂಗ್‌ಡಂನ ಡರ್ಬಿಯಲ್ಲಿ ನಡೆದಿದೆ.

    ಪಾರ್ಕಿಂಗ್​ ಹಣ ಪಾವತಿಸಿ ಆ ಸ್ಥಳದಿಂದ ನಿರ್ಗಮಿಸಲು ಪ್ರತಿಯೊಬ್ಬ ಚಾಲಕನಿಗೆ ಕೇವಲ ಐದು ನಿಮಿಷಗಳನ್ನು ನೀಡಲಾಗುತ್ತದೆ. ಆದರೆ ನೆಟ್​​ವರ್ಕ್​​​​ ಸಮಸ್ಯೆಯಿಂದಾಗಿ ಮಹಿಳೆ ಸಾಕಷ್ಟು ಸಮಯ ತೆಗೆದುಕೊಂಡಿದ್ದರಿಂದ ದಂಡ ವಿಧಿಸಲಾಗಿದೆ ಎಂದು ಪಾರ್ಕಿಂಗ್ ಅಧಿಕಾರಿಗಳು ತಿಳಿಸಿದ್ದಾರೆ.

    ನೆಟ್​​ವರ್ಕ್​​​​ ಸಮಸ್ಯೆಯಿಂದಾಗಿ ಹಣ ಪಾವತಿಸುವುದು ತಡವಾಗಿದೆ. ಇದರಿಂದ ನನ್ನದೇನು ತಪ್ಪಿಲ್ಲ ಎಂದು 2 ಲಕ್ಷ ರೂ. ದಂಡ ವಿಧಿಸಿರುವುದನ್ನು ಖಂಡಿಸಿ ಮಹಿಳೆ ನ್ಯಾಯಾಲಯದ ಮೆಟ್ಟಿಲೇರಿದ್ದಾಳೆ. ಇದೀಗ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.

    “ಕಾರ್ ಪಾರ್ಕ್‌ನಲ್ಲಿ ಪಾರ್ಕಿಂಗ್ ಹಣ ಪಾವತಿಸಲು ಗರಿಷ್ಠ ಐದು ನಿಮಿಷಗಳ ಕಾಲಾವಕಾಶವಿದೆ. ನಿಯಮಗಳನ್ನು ಓದುವುದು ಮತ್ತು ಅರ್ಥಮಾಡಿಕೊಳ್ಳುವುದು ಚಾಲಕನ ಜವಾಬ್ದಾರಿ” ಎಂದು ಎಕ್ಸೆಲ್ ಪಾರ್ಕಿಂಗ್‌ನ ಪ್ರತಿನಿಧಿಯೊಬ್ಬರು ಹೇಳಿರುವುದು ವರದಿಯಾಗಿದೆ.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಉಳ್ಳಾಲ: ಯುಐ ಚಿತ್ರದ ಯಶಸ್ಸಿಗೆ ಕೊರಗಜ್ಜನಿಗೆ ಅಡ್ಡಬಿದ್ದ ಉಪೇಂದ್ರ

    Published

    on

    ಉಳ್ಳಾಲ: ಕುತ್ತಾರಿನಲ್ಲಿರುವ ಕೊರಗಜ್ಜನ ಆದಿ ಕ್ಷೇತ್ರವು ಪ್ರಕೃತಿಗೆ ಹತ್ತಿರವಾಗಿದ್ದು, ದೈವದ ಹೆಸರಲ್ಲಿ ಇಲ್ಲಿ ಪೃಕೃತಿಯ ಆರಾಧನೆಯಾಗುತ್ತಿದೆ ಎಂದು ಸ್ಯಾಂಡಲ್ ವುಡ್‌ನ ರಿಯಲ್ ಸ್ಟಾರ್ ನಟ , ನಿರ್ದೇಶಕ ಉಪೇಂದ್ರ ಹೇಳಿದರು.

    ಮಂಗಳೂರು ಹೊರವಲಯದ ಉಳ್ಳಾಲ ತಾಲೂಕಿನ ಕುತ್ತಾರು ದೆಕ್ಕಾಡುವಿನ ಕೊರಗಜ್ಜನ ಆದಿಸ್ಥಳಕ್ಕೆ ಮಂಗಳವಾರದಂದು ಅವರು ಭೇಟಿ ನೀಡಿ ಡಿಸೆಂಬರ್ 20 ರಂದು ತೆರೆ ಕಾಣಲಿರುವ ತನ್ನದೇ ನಟನೆ ಮತ್ತು ನಿರ್ದೇಶನದ ಪ್ಯಾನ್ ಇಂಡಿಯ ಸಿನೆಮಾ ಯುಐ ಸಿನೆಮಾದ ಯಶಸ್ಸಿಗೆ ಪ್ರಾರ್ಥನೆ ಸಲ್ಲಿಸಿದರು.

    ಚಿತ್ರದ ಪ್ರಮೋಷನ್ ಗಾಗಿ ಮಂಗಳೂರಿಗೆ ಬಂದಿದ್ದೇವೆ. ಕುತ್ತಾರಿನ ಕೊರಗಜ್ಜ ದೈವದ ಕ್ಷೇತ್ರವು ಪ್ರಕೃತಿ ರಮಣೀಯವಾಗಿದೆ. ಕೊರಗಜ್ಜನ ದಯೆಯು ನಮ್ಮ ಮೇಲಿರಲಿ ಎಂದರು.  ಚಿತ್ರದ ನಿರ್ಮಾಪಕರಾದ ಕೆ ಪಿ ಶ್ರೀಕಾಂತ್, ಲಹರಿ ವೇಲು, ನವೀನ್ ಮನೋಹರ್ , ರಾಜೇಶ್ ಭಟ್ ಮೊದಲಾದವರಿದ್ದರು. ಶ್ರೀ ಪಂಜಂದಾಯ ಬಂಟ ವೈದ್ಯನಾಥ ಮತ್ತು ಕೊರಗತನಿಯ ದೈವಗಳ ಆದಿಸ್ಥಳ ಟ್ರಸ್ಟ್ ನ ಅಧ್ಯಕ್ಷ, ಉಪಾಧ್ಯಕ್ಷರು ಮತ್ತು ಟ್ರಸ್ಟಿಗಳು ನಟ ಉಪೇಂದ್ರ ಅವರನ್ನು  ಕ್ಷೇತ್ರದ ಪರವಾಗಿ ಅಭಿನಂದಿಸಿದರು.

    Continue Reading

    LATEST NEWS

    ಪಂಜಾಬ್ ಮಾಜಿ ಡಿಸಿಎಂ ಮೇಲೆ ಗುಂ*ಡಿನ ದಾ*ಳಿ

    Published

    on

    ಮಂಗಳೂರು/ಅಮೃತಸರ :  ಅಮೃತಸರದ ಗೋಲ್ಡನ್ ಟೆಂಪನ್ ಪ್ರವೇಶದ್ವಾರದಲ್ಲಿ ಶಿರೋಮಣಿ ಅಕಾಲಿಕದಳದ ನಾಯಕ ಮತ್ತು ಪಂಜಾಬ್ ಮಾಜಿ ಉಪಮುಖ್ಯಮಂತ್ರಿ ಸುಖಬೀರ್ ಸಿಂಗ್ ಬಾದಲ್ ಮೇಲೆ ಗುಂ*ಡಿನ ದಾ*ಳಿ ನಡೆಸಿರುವ ಬಗ್ಗೆ ವರದಿಯಾಗಿದೆ.

    ಹೊರಗೆ ನಿಂತಿದ್ದವರು ಗುಂ*ಡು ಹಾರಿಸಿದ ನರೇನ್ ಸಿಂಗ್ ಎಂಬಾತನನ್ನು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ. ಗಾಲಿ ಕುರ್ಚಿಯಲ್ಲಿ ಕುಳಿತಿದ್ದ ಸುಖ್ ಬೀರ್ ಸಿಂಗ್ ಬಾದಲ್‌ರನ್ನು ಗುರಿಯಾಗಿಸಿ ವ್ಯಕ್ತಿ ಹಾರಿಸಿದ ಗುಂಡು ಗೋಡೆಗೆ ತಗುಲಿದ್ದರಿಂದ, ಅದೃಷ್ಟವಶಾತ್ ಪ್ರಾ*ಣಾಪಾ*ಯದಿಂದ ಪಾರಾಗಿದ್ದಾರೆ.  ಭದ್ರತೆ ಒದಗಿಸಲು ಪಂಜಾಬ್ ಸರ್ಕಾರ ವಿಫಲವಾಗಿದೆ ಎಂದು ಎಸ್‌ಎಡಿ ಆರೋಪಿಸಿದೆ.

    ಇದನ್ನೂ ಓದಿ : ‘ಆರ್ ಸಿಬಿ ನನ್ನನ್ನು ಖರೀದಿ ಮಾಡಿದಕ್ಕೆ ದೇವರಿಗೆ ಧನ್ಯವಾದ’: ಜಿತೇಶ್ ಶರ್ಮಾ !

    ಇತ್ತೀಚೆಗಷ್ಟೇ, ಅಕಾಲಿ ದಳದ ನಾಯಕನಿಗೆ 2015ರಲ್ಲಿ ಗುರು ಗ್ರಂಥ ಸಾಹಿಬ್‌ನ ತ್ಯಾಗದಲ್ಲಿ ಡೇರಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಅವರನ್ನು ಬೆಂಬಲಿಸಿದಕ್ಕಾಗಿ ಅಕಾಲ್ ತಖ್ತ್ ಶಿಕ್ಷೆ ವಿಧಿಸಿತ್ತು. ಅವರು ಪ್ರತಿದಿನ ಒಂದು ಗಂಟೆ ದೇವಸ್ಥಾನದಲ್ಲಿ ದ್ವಾರಪಾಲಕನಾಗಿ ಕೆಲಸ ಮಾಡಬೇಕಾಗುತ್ತದೆ. ಶೌಚಾಲಯ ತೊಳೆಯುವುದು, ಪಾತ್ರೆ ತೊಳೆಯುವುದು ಸೇರಿದಂತೆ ಹಲವು ಕೆಲಸಗಳನ್ನು ಮಾಡಬೇಕಾಗುತ್ತದೆ.

    Continue Reading

    LATEST NEWS

    ಸರ್ಕಾರಿ ಉದ್ಯೋಗಿಗಳೇ ಬಿಪಿಎಲ್‌ ಕಾರ್ಡ್ ನಿಮ್ಮ ಬಳಿ ಇದೆಯಾ ? ಇದನ್ನೊಮ್ಮೆ ಓದಿ ..

    Published

    on

    ಈಗಾಗಲೇ ಕರ್ನಾಟಕ ಸರ್ಕಾರ ಬಿಪಿಎಲ್ ಕಾರ್ಡ್ ಗಳ ಪರಿಷ್ಕರಣೆ ನಡೆಸುತ್ತಿದ್ದು, ಬಿಪಿಎಲ್ ಕಾರ್ಡ್ (BPL Card) ಪಡೆಯುವ ಅರ್ಹತೆ ಷರತ್ತುಗಳ ಆಧಾರದಲ್ಲಿ ಸರ್ಕಾರೀ ನೌಕರರು, ತೆರಿಗೆದಾರರ ಬಳಿ ಬಿಪಿಎಲ್ ಇದ್ದರೆ ಅದನ್ನು ಎಪಿಎಲ್ ಗೆ ವರ್ಗಾಯಿಸುವ ಕೆಲಸ ಮಾಡುತ್ತಿದೆ. ಅಂತೆಯೇ ಈ ನಡುವೆ ಬಿಪಿಎಲ್ ಕಾರ್ಡ್ ಹೊಂದಿರುವ ಸರ್ಕಾರೀ ನೌಕರರಿಗೆ ಬಿಗ್ ಶಾಕ್ ಸಿಕ್ಕಿದೆ.

    ಸರ್ಕಾರದ ಮಾನದಂಡದ ಪ್ರಕಾರ ಸರ್ಕಾರೀ ನೌಕರರು, ತೆರಿಗೆ ಪಾವತಿ ಮಾಡುವವರಿಗೆ ಬಿಪಿಎಲ್ ಕಾರ್ಡ್ ರದ್ದಾಗಿದೆ. ಜೊತೆಗೆ ಬಿಪಿಎಲ್ ಕಾರ್ಡ್ ಹೊಂದಿದ್ದ ನೌಕರರ ರೇಷನ್ ಕಾರ್ಡ್ ನ್ನು ಎಪಿಎಲ್ ಗೆ ವರ್ಗಾಯಿಸಿರುವುದಲ್ಲದೆ ದಂಡದ ಬರೆ ನೀಡಿದೆ.

    ಇನ್ನು ಇದುವರೆಗೆ ಶಿವಮೊಗ್ಗ ಜಿಲ್ಲೆಯೊಂದರಲ್ಲೇ 4,12, 890 ರೂ. ದಂಡ ವಿಧಿಸಲಾಗಿದೆ ಹಾಗೂ ಸುಮಾರು 72 ಸರ್ಕಾರಿ ನೌಕರರಿಗೆ ದಂಡ ವಿಧಿಸಲಾಗಿದೆ. ಒಟ್ಟಿನಲ್ಲಿ ಬಿಪಿಎಲ್ ಕಾರ್ಡ್ ಅರ್ಹತೆ ಇರುವ ಬಡವರಿಗೆ ಮಾತ್ರ ಲಭಿಸುವಂತಾಗಬೇಕು. ಬಿಪಿಎಲ್ ಕಾರ್ಡ್ ಮೂಲಕ ಅನರ್ಹರೂ ಉಚಿತ ಯೋಜನೆಗಳ ಲಾಭ ಪಡೆಯುತ್ತಿದ್ದರೆ ಅದು ಸರ್ಕಾರಕ್ಕೆ ನಷ್ಟ ಉಂಟು ಮಾಡಲಿದೆ.

    Continue Reading

    LATEST NEWS

    Trending