Connect with us

  BANTWAL

  ಉಳಾಯಿಬೆಟ್ಟು ದರೋಡೆ ಪ್ರಕರಣ : 10 ಜನರ ಬಂಧನ

  Published

  on

  ಜೂನ್ 21 ರಂದು ಉಳಾಯಿಬೆಟ್ಟಿನ ಪೆರ್ಮಂಕಿಯ ಪದ್ಮನಾಭ ಕೋಟ್ಯಾನ್ ಮನೆ ದರೋಡೆ ಪ್ರಕರಣದ 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಾತ್ರಿ 7.45 ರ ಸುಮಾರಿಗೆ ಮುಸುಕುಧಾರಿ ವ್ಯಕ್ತಿಗಳು ಪದ್ಮನಾಭ ಕೋಟ್ಯಾನ್ ಅವರಿಗೆ ಚೂರಿಯಿಂದ ಹಲ್ಲೆ ಮಾಡಿ ಮನೆಯವರನ್ನು ಕಟ್ಟಿ ಹಾಕಿ ದರೋಡೆ ನಡೆಸಿದ್ದರು. ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಳ್ಳಲಾಗಿತ್ತು.

  ಗುತ್ತಿಗೆದಾರ ಉದ್ಯಮಿ ಪದ್ಮನಾಭ ಕೋಟ್ಯಾನ್ ಅವರ ಮನೆಗೆ ನುಗ್ಗಿದ್ದ ದರೋಡೆಕೋರರು ಇಲ್ಲಿ ಅಪಾರ ಪ್ರಮಾಣದ ಹಣ ಹಾಗೂ ನಗದು ಅಡಗಿಸಿ ಇಡಲಾಗಿದೆ ಎಂಬ ಹಿನ್ನೆಲೆಯಲ್ಲಿ ದರೋಡೆ ನಡೆಸಿದ್ದಾರೆ. ದರೋಡೆ ನಡೆದ ಬಳಿಕ ಮನೆಯ ಸಿಸಿ ಟಿವಿ ಪರಿಶೀಲಿಸಿದ ಪೊಲೀಸರಿಗೆ ಇದು ಉದ್ಯಮಿಯ ಪರಿಚಯದವರದೇ ಕೃತ್ಯ ಎಂಬುವುದು ಕೂಡಾ ಅರ್ಥವಾಗಿದೆ. ಹೀಗಾಗಿ ಮೊದಲಿಗೆ ಉದ್ಯಮಿಯ ಜೊತೆಯಲ್ಲಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ನೀರುಮಾರ್ಗದ ವಸಂತ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯ ಹೊರಗೆ ಬಂದಿದೆ. ಅರೋಪಿ ವಸಂತ ಜೊತೆಯಲ್ಲಿ ನೀರುಮಾರ್ಗದ ಇನ್ನೋರ್ವ ಆರೋಪಿ ರಮೇಶ್ ಪೂಜಾರಿ ಹಾಗೂ ಅಡ್ಯನಡ್ಕದ ರೇಮಂಡ್ ಡಿಸೋಜಾ ಎಂಬವರು ಮಾಹಿತಿದಾರರಾಗಿ ಕೆಲಸ ಮಾಡಿದ್ದಾರೆ. ಇವರ ಜೊತೆ ಕಾಸರಗೋಡು ಜಿಲ್ಲೆಯ ಉಪ್ಪಳದ ಬಾಲಕೃಷ್ಣ ಶೆಟ್ಟಿ ಕೂಡಾ ಕೈ ಜೋಡಿಸಿ ಕೇರಳದ ದರೋಡೆ ತಂಡಕ್ಕೆ ಮಾಹಿತಿ ರವಾನಿಸಿದ್ದಾನೆ.

  ಈ ನಾಲ್ಕು ಆರೋಪಿಗಳು ನೀಡಿದ ಮಾಹಿತಿ ಪ್ರಕಾರ, ಕೇರಳದ ಬಿಜು ಹಾಗೂ ಸತೀಶ್ ಬಾಬು ಎಂಬ ಕ್ರಿಮಿನಲ್ ಗಳು ತಮ್ಮ ಎರಡು ತಂಡದ ಸದಸ್ಯರನ್ನು ದರೋಡೆ ನಡೆಸಲು ಮಂಗಳೂರಿಗೆ ಕಳುಹಿಸಿದ್ದಾರೆ. ಈ ದರೋಡೆಯ ಸಂಚಿನಲ್ಲಿ ಒಟ್ಟು ಹದಿನೈದು ಜನರು ಭಾಗಿಯಾಗಿದ್ದು, ಸದ್ಯ ಹತ್ತು ಜನರನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಜಾಕಿರ್, ವಿನೋಜ್ ಪಿಕೆ, ಸಜೀಶ್, ಶಿಜೋ ದೇವಸ್ಸಿ, ಸತೀಶ್ ಬಾಬು, ಬಿಜು ಕೇರಳದವರಾಗಿದ್ದರೆ, ಉಳಿದ ನಾಲ್ವರೂ ಕರ್ನಾಟಕದವರಾಗಿದ್ದಾರೆ.

  ಉದ್ಯಮಿ ಮನೆಯಲ್ಲಿ ಕೋಟ್ಯಂತರ ರೂಪಾಯಿಯ ಚಿನ್ನ ಹಾಗೂ ನಗದು ಇದೆ ಎಂದು ಈ ದರೋಡೆಗೆ ಸಂಚು ರೂಪಿಸಲಾಗಿತ್ತು. ದರೋಡೆ ನಡೆಸಿದ ಆರೋಪಿಗಳು ಬಚ್ಚಿಟ್ಟ ಚಿನ್ನಾಭರಣ ನೀಡುವಂತೆ ಉದ್ಯಮಿ ಪದ್ಮನಾಭ ಕೋಟ್ಯಾನ್ ಅವರಿಗೆ ಚಾಕುವಿನಿಂದ ಹಲ್ಲೆ ಕೂಡಾ ಮಾಡಿದ್ದರು. ಬಳಿಕ ಮನೆಯಲ್ಲಿದ್ದ ಬೆಲೆ ಬಾಳುವ ವಸ್ತುಗಳು ಹಾಗೂ ಚಿನ್ನಾಭರಣ ದರೋಡೆ ಮಾಡಿ ಪರಾರಿಯಾಗಿದ್ದರು

  BANTWAL

  ಬಂಟ್ವಾಳ: ಗದ್ದೆಗೆ ಪಲ್ಟಿಯಾದ ಖಾಸಗಿ ಬಸ್

  Published

  on

  ಬಂಟ್ವಾಳ: ಅಜಿಲಮೊಗರು-ಸರಪಾಡಿ ರಸ್ತೆಯ ಮಣಿನಾಲ್ಕೂರು ಗ್ರಾಮದ ಕೊಟ್ಟುಂಜದಲ್ಲಿ ಸರಪಾಡಿ-ಬಿ.ಸಿ ರೋಡು ಮಧ್ಯೆ ಸಂಚರಿಸುವ ಖಾಸಗಿ ಬಸ್ ಪಲ್ಟಿಯಾದ ಘಟನೆ ಜುಲೈ 15 ರ ಸೋಮವಾರ ನಡೆದಿದೆ.

  ಬಸ್ ಸಂಪೂರ್ಣವಾಗಿ ಗದ್ದೆಗೆ ಪಲ್ಟಿಯಾಗಿದ್ದು, ಪ್ರಯಾಣಿಕರು ಯಾವೂದೇ ಗಾಯಗಳಿಲ್ಲದೇ ಪಾರಾಗಿದ್ದಾರೆ. ವಿಪರೀತ ಮೆಳೆಯಿಂದಾಗಿ ಗದ್ದೆಯಲ್ಲಿ ನೀರು ತುಂಬಿದ್ದು, ಹೀಗಾಗಿ ಕೆಲ ಪ್ರಯಾಣಿಕರು ಕೆಸರಿನಿಂದ ತುಂಬಿದ್ದರು ಎನ್ನಲಾಗಿದೆ.

  Continue Reading

  BANTWAL

  ಆಟೋ ರಿಕ್ಷಾದಲ್ಲೇ 4 ರಾಜ್ಯ ಸುತ್ತಿದ ಬಂಟ್ವಾಳದ ಯುವಕರು

  Published

  on

  ಬಂಟ್ವಾಳ: ನಗರದ ಯುವಕರಿಬ್ಬರು ಆಟೋ ರಿಕ್ಷಾದಲ್ಲೇ 11 ದಿನಗಳಲ್ಲಿ 4,200 ಕಿ.ಮೀ ಸಂಚರಿಸಿ ನಾಲ್ಕು ರಾಜ್ಯಗಳನ್ನು ಸುತ್ತಾಡಿ ಐದು ಜ್ಯೋತಿರ್ಲಿಂಗಗಳ ದರ್ಶನ ಮಾಡಿ ಬಂದಿದ್ದಾರೆ.

  ಮೆಲ್ಕಾರಿನ ಕ್ಯಾಟರಿಂಗ್ ಉದ್ಯಮಿ ವಿಜೇತ್ ನಾಯಕ್ ಹಾಗೂ ಕಲ್ಲಡ್ಕದ ಸಾಫ್ಟ್‌ವೇರ್ ಇಂಜಿನಿಯರ್ ವಿಶ್ವಾಸ್ ಪ್ರಭು ಅವರು ಜೂ.26 ರಂದು ಮುಂಜಾನೆ 4 ಗಂಟೆಗೆ ಪ್ರವಾಸ ಆರಂಭಿಸಿ ಜು.9 ರಂದು ಊರಿಗೆ ಮರಳಿದ್ದಾರೆ.

  ಊರಿನಿಂದ ಹೊರಟ ಯುವಕರು ಕರ್ನಾಟಕ, ಗೋವಾವನ್ನು ದಾಡಿ ಮಹಾರಾಷ್ಟ್ರಕ್ಕೆ ತೆರಳಿ ಅಲ್ಲಿ ಗೃಷ್ಣೇಶ್ವರ, ಭೀಮಾಶಂಕರ, ತ್ರ್ಯಂಬಕೇಶ್ವರ ಜ್ಯೋತಿರ್ಲಿಂಗ ಕ್ಷೇತ್ರಗಳ ದರ್ಶನ ಮಾಡಿ ಮುಂದೆ ಗುಜರಾತ್‌ನ ನಾಗೇಶ್ವರ, ಸೋಮನಾಥ ಜ್ಯೋತಿರ್ಲಿಂಗ ಕ್ಷೇತ್ರಗಳಿಗೆ ತೆರಳಿದ್ದಾರೆ. ಜತೆಗೆ ಎಲ್ಲೋರ, ದ್ವಾರಕಾ, ಏಕತಾ ವಿಗ್ರಹ ಮುಂತಾದ ಸ್ಥಳಗಳಿಗೆ ಭೇಟಿ ನೀಡಿದ್ದಾರೆ.

  ಇದಕ್ಕಾಗಿ ತಲಾ 14 ಸಾವಿರ ರೂ. ಖರ್ಚಾಗಿದೆ. 1 ದಿನಗಳ ಪ್ರವಾಸದಲ್ಲಿ ಊಟ-ಉಪಾಹಾರವನ್ನು ಇವರೇ ತಯಾರಿಸಿದ್ದಾರೆ. ಇದಕ್ಕಾಗಿ ದಿನಸಿ ಸಾಮಾನು, ಗ್ಯಾಸ್, ಪಾತ್ರೆಗಳನ್ನು ಜತೆಯಲ್ಲಿ ಕೊಂಡೊಯ್ದಿದ್ದರು.

  ಇವರಿಬ್ಬರೂ ಬಾಲ್ಯ ಸ್ನೇಹಿತರಾಗಿದ್ದು, ಈ ಹಿಂದೆ ಆಟೋ ರಿಕ್ಷಾದ ಮೂಲಕ ಅನಂತಪುರ, ಚಾರ್ಮಾಡಿ ಮೊದಲಾದ ಭಾಗಗಳಿಗೆ ಸಾಕಷ್ಟು ಬಾರಿ ತೆರಳಿದ್ದರು. ಆದರೆ ಇಷ್ಟು ದೂರದ ಪ್ರವಾಸವನ್ನು ಇದೇ ಮೊದಲ ಬಾರಿಗೆ ಕೈಗೊಂಡಿದ್ದರು.

  Continue Reading

  BANTWAL

  ಬಂಟ್ವಾಳದ ನೇತ್ರಾವತಿ ನದಿಯಲ್ಲಿ ನೀರಿನ‌ ಮಟ್ಟ ಹೆಚ್ಚಳ

  Published

  on

  ಬಂಟ್ವಾಳ: ಬಂಟ್ವಾಳದ ನೇತ್ರಾವತಿ ನದಿಯಲ್ಲಿ ನೀರಿನ‌ ಮಟ್ಟ ಹೆಚ್ಚಳವಾಗಿದ್ದು, ಸದ್ಯಕ್ಕೆ ನೀರಿನ ಮಟ್ಟ 6.1 ಮೀ.ನಷ್ಟಿದೆ.ಘಟ್ಟ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗಿರುವ ಪರಿಣಾಮ ನೀರಿನ ಮಟ್ಟ ಹೆಚ್ಚಳಗೊಂಡಿದೆ.

  ನೀರು ಹೆಚ್ಚಳದಿಂದ ತುಂಬೆ ಡ್ಯಾಮ್ ನ ಎಲ್ಲಾ ಗೇಟ್ ಗಳನ್ನು ತೆರವು ಮಾಡಿದರೆ ನೀರು ತೀರಾ ಇಳಿಕೆಯಾಗುವ ಸಾಧ್ಯತೆಯೂ ಇದೆ. ಉಪ್ಪಿನಂಗಡಿಯಲ್ಲೂ ನೀರಿನ ಮಟ್ಟ ಹೆಚ್ಚಳಗೊಂಡಿದೆ ಎನ್ನಲಾಗಿದೆ.

  ಬಂಟ್ವಾಳದಲ್ಲಿ 8 ಮೀ. ಅಪಾಯಕಾರಿ ಮಟ್ಟವಾಗಿದ್ದು, 8.5 ಮೀ. ತಲುಪಿದರೆ ಪಾಣೆಮಂಗಳೂರಿನ ಭಾಗದಲ್ಲಿ ಪ್ರವಾಹದ ನೀರು ಮನೆಯೊಳಗೆ ನುಗ್ಗುತ್ತದೆ.

  Continue Reading

  LATEST NEWS

  Trending