Connect with us

DAKSHINA KANNADA

ರಾಜ್ಯದಲ್ಲೇ ಮಾದರಿ ನಗರಸಭೆಯಾಗಿ ಉಳ್ಳಾಲ: ಸಿದ್ದಗೊಂಡಿದೆ ವಿಶೇಷ ಕಾರ್ಯಯೋಜನೆ :ಶಾಸಕ ಖಾದರ್

Published

on

ರಾಜ್ಯದಲ್ಲೇ ಮಾದರಿ ನಗರಸಭೆಯಾಗಿ ಉಳ್ಳಾಲ: ಸಿದ್ದಗೊಂಡಿದೆ ವಿಶೇಷ ಕಾರ್ಯಯೋಜನೆ :ಶಾಸಕ ಖಾದರ್..

ಮಂಗಳೂರು: ಉಳ್ಳಾಲ ನಗರಸಭೆಯನ್ನು ರಾಜ್ಯದಲ್ಲೇ ಮಾದರಿ ನಗರಸಭೆಯಾಗಿ ರೂಪಿಸುವ ನಿಟ್ಟಿನಲ್ಲಿ ಯೋಜನೆಯನ್ನು ಹಾಕಿಕೊಂಡಿದ್ದು, ಸುಮಾರು 61 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಇದರಲ್ಲಿ 57 ಕೋಟಿ ರೂ ಕಾಮಗಾರಿ ಪ್ರಗತಿಯಲ್ಲಿದೆ. ನಾಲ್ಕು ಕೋಟಿ ರೂ ಬಿಡುಗಡೆಯಾಗಲಿದೆ ಎಂದು ಶಾಸಕ ಯು. ಟಿ. ಖಾದರ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಕಳೆದ ಎರಡು ವರ್ಷಗಳಿಂದ ಉಳ್ಳಾಲ ನಗರಸಭೆಯಲ್ಲಿ ಚುನಾಯಿತ ಪ್ರತಿನಿಧಿಗಳು ಆಡಳಿತದಲ್ಲಿರಲಿಲ್ಲ.

ಇದೀಗ ನೂತನ ಅಧ್ಯಕ್ಷ ಉಪಾಧ್ಯಕ್ಷರು ಆಯ್ಕೆಯಾಗಿದ್ದು, ನೂತನ ಆಡಳಿತದಲ್ಲಿ ಉಳ್ಳಾಲ ನಗರಸಭೆಯನ್ನು ಮಾದರಿ ನಗರಸಭೆಯಾಗಿ ರೂಪಿಸಲು ಜನಪ್ರತಿನಿ„ಗಳು, ಅಧಿಕಾರಿಗಳನ್ನೊಳಗೊಂಡ ತಂಡ ಸಿಧ್ಧವಾಗಿದ್ದು ಈಗಾಗಲೇ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದರು.

ಉಳ್ಳಾಲದಲ್ಲಿ ಕರ್ನಾಟಕ ಸರಕಾರದ ಅಲ್ಪ ಸಂಖ್ಯಾತ ನಿಗಮದಿಂದ 3.5 ಕೋಟಿ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ, ನಗರಾಭಿವೃದ್ಧಿ ಯೋಜನೆಯಿಂದ 25 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು, ಪ್ರಮುಖ ರಸ್ತೆಗಳ ಅಭಿವೃದ್ಧಿ ನಡೆಯುತ್ತಿದ್ದು ಶೇ. 75 ಕಾಮಗಾರಿ ಪೂರ್ಣಗೊಂಡಿದೆ.

ಉಳ್ಳಾಲ ರಾಜಮಾರ್ಗ ಅಭಿವೃದ್ಧಿ, ಅಬ್ಬಕ್ಕ ಸರ್ಕಲ್ ಆಭಿವೃದ್ದಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ಚತುಷ್ಫಥ ರಸ್ತೆ ನಿರ್ಮಾಣವಾಗಿದೆ. ಈ ನಡುವೆ ರಸ್ತೆ ಬದಿಯ ಸುಂದರೀಕರಣ, ಮುಕ್ಕಚ್ಚೇರಿಯಲ್ಲಿ ಮಹಿಳೆಯರಿಗೆ ಪ್ರತ್ಯೇಕ ಪಾರ್ಕ್, ಮತ್ತು ಸಾರ್ವಜನಿಕ ಪಾಕ್‍ಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ.

14 ಮತ್ತು 15ನೇ ಹಣಕಾಸು ನಿಧಿಯಡಿ 4 ಕೋಟಿ ಬಿಡುಗಡೆಯಾಗಿದೆ. ಕಾನೂನು ತೊಡಕುಗಳಿಂದ ಸ್ಥಗಿತವಾಗಿದ್ದ ಒಳಚರಂಡಿ ಕಾಮಗಾರಿಗೆ ಚಾಲನೆ ನೀಡಿದ್ದು, ಕರಾವಳಿಯಲ್ಲಿ ಕಡಲ್ಕೊರೆತಕ್ಕೆ ಶಾಶ್ವತ ಕಾಮಗಾರಿಯಾಗಿರುವ ಪ್ರದೇಶ ಉಳ್ಳಾಲವಾಗಿದ್ದು, ಮುಂದಿನ ದಿನಗಳಲ್ಲಿ ಬೀಚ್ ಪ್ರವಾಸೋದ್ಯಮಕ್ಕೆ ಉ್ತಏಜನ ನೀಡುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುವುದು ಎಂದು ಶಾಸಕರು ಮಾಹಿತಿ ನೀಡಿದ್ದಾರೆ.

Click to comment

Leave a Reply

Your email address will not be published. Required fields are marked *

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending