Sunday, November 27, 2022

ಉಳ್ಳಾಲ ಕೊಲೆ ಯತ್ನ ಪ್ರಕರಣ: ಪ್ರಮುಖ ಆರೋಪಿ ತಲ್ಹತ್ ಬಜಾಲ್ ಬಂಧನ..

ಮಂಗಳೂರು : ನಾಲ್ಕು ತಿಂಗಳ ಹಿಂದೆ ಉಳ್ಳಾಲ ಉಚ್ಚಿಲ ನಿವಾಸಿ ಆರಿಫ್ ಎಂಬಾತನ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ತಲ್ಹತ್ ಬಜಾಲ್ ಎಂಬಾತನನ್ನು ರವಿವಾರ ಪೊಲೀಸರು ಬಂಧಿಸಿದ್ದಾರೆ.

ಈ ಕೊಲೆಯತ್ನ ಪ್ರಕರಣದಲ್ಲಿ 7 ಮಂದಿ ಆರೋಪಿಗಳು ಭಾಗಿಯಾಗಿದ್ದು, ಅದರಲ್ಲಿ ಐದು ಮಂದಿಯನ್ನು ಈ ಹಿಂದೆ ಬಂಧಿಸಲಾಗಿತ್ತು,

ಬಳಿಕ ಪೊಲೀಸರು ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಕಿಂಗ್ ಪಿನ್ ತಲ್ಹತ್ ಗಾಗಿ ಶೋಧ ನಡೆಸುತ್ತಿದ್ದು, ನಿನ್ನೆ ಆತನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಬಂದರಿನ ಮೀನು ವ್ಯಾಪಾರಕ್ಕೆ ಸಂಬಂಧಿಸಿದಂತೆ ಈ ಕೊಲೆಯತ್ನ ನಡೆದಿದ್ದು, ಪ್ರಕರಣದಲ್ಲಿ ಭಾಗಿಯಾಗಿದ್ದ, ಆಚಿ ,ನೌಫಾಲ್, ಅಶ್ಫಾಕ್, ನಿಸಾಕ್, ರಿಫತ್ ಆಲಿ, ರಹೀಮ್ ಎಂಬವರನ್ನು ಈ ಹಿಂದೆ ಬಂಧಿಸಲಾಗಿತ್ತು.

ಇದೀಗ ಮತ್ತೊಬ್ಬನನ್ನು ಪೊಲೀಸರು ಬಂಧಿಸಿದ್ದು, ಪ್ರಕರಣದಲ್ಲಿ ಒಟ್ಟು ಏಳು ಮಂದಿ ಶಾಮೀಲಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಬಂಟ್ವಾಳದಲ್ಲಿ ಪಿಕಪ್ ವಾಹನಕ್ಕೆ ಗುದ್ದಿದ ಕಾರು..

ಬಂಟ್ವಾಳ: ವಿರುದ್ಧ ದಿಕ್ಕಿನಲ್ಲಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನಕ್ಕೆ ಡಿಕ್ಕಿಯಾಗಿ ಬಳಿಕ ಪಿಕಪ್ ವಾಹನ ರಸ್ತೆಯ ಬದಿಯಲ್ಲಿರುವ ಮನೆಗೆ ನುಗ್ಗಿ ಗೋಡೆ ಜರಿದು ಬಿದ್ದಂತಹ ಘಟನೆ ದಕ್ಷಿಣ ಕನ್ನಡ...

ಬಾಂಬ್ ಸ್ಫೋಟ ಆರೋಪಿ ಶಾರೀಕ್‌ಗೆ ಆಸ್ಪತ್ರೆಯಲ್ಲಿ ಬಿಗು ಪೊಲೀಸ್ ಬಂದೋಬಸ್ತ್‌-ಸ್ಪೋಟದ ಬೆನ್ನಲ್ಲೇ ಟ್ವೀಟ್‌ ಮಾಡಿದ ಝಾಕೀರ್‌…

ಮಂಗಳೂರು: ಮಂಗಳೂರಿನಲ್ಲಿ ರಿಕ್ಷಾದಲ್ಲಿ ನಡೆದ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಆರೋಪಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾನೆ. ಇದೀಗ ಶಾರೀಕ್‌ ಜೀವಕ್ಕೂ ಆಪತ್ತು ಇರುವ ಹಿನ್ನೆಲೆಯಲ್ಲಿ ಆಸ್ಪತ್ರೆ ಬಳಿ ಪೊಲೀಸರು ಬಿಗು...

ಉಡುಪಿ: ಹೊಟೇಲ್‌ನಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅನಾಹುತ….

ಉಡುಪಿ: ಹೊಟೇಲ್‌ವೊಂದರಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅನಾಹುತ ಸಂಭವಿಸಿದ್ದು, ಅಗ್ನಿಶಾಮಕದಳದ ಸಿಬ್ಬಂದಿ ಸಕಾಲಿಕ ಕಾರ್ಯಾಚರಣೆಯಿಂದ ಸಂಭಾವ್ಯ ಅವಘಡವೊಂದು ತಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.ಇಲ್ಲಿನ ಸಿಟಿ ಬಸ್ ನಿಲ್ದಾಣ ಸಮಿಪದಲ್ಲಿರುವ ಟಾಪ್ ಟೌನ್...