Tuesday, May 30, 2023

ಉಳ್ಳಾಲ: ಐಸಿಸ್‌ ನಂಟು ಶಂಕೆ ಕಾಂಗ್ರೆಸ್‌ ಮಾಜಿ ಶಾಸಕನ ಮಗನ ಮನೆ ಮೇಲೆ ಎನ್‌ಐಎ ದಾಳಿ..!

ಮಂಗಳೂರು: ಐಸಿಸ್‌ ನಂಟು ಶಂಕೆ ಹಿನ್ನೆಲೆ ಉಳ್ಳಾಲದ ಮಾಜಿ ಶಾಸಕ ದಿವಂಗತ ಬಿ.ಎಂ. ಇದಿನಬ್ಬ ಅವರ ಪುತ್ರನ ಮನೆಗೆ ಇಂದು ಬೆಳಗ್ಗೆ 25 ಎನ್‌ಐಎ ಅಧಿಕಾರಿಗಳ ತಂಡ ದಾಳಿ ನಡೆಸಿದೆ.


ನಾಲ್ಕು ಕಾರುಗಳಲ್ಲಿ 25 ಮಂದಿಯಿದ್ದ ತಂಡ ಉಳ್ಳಾಲದ ಮಾಸ್ತಿಕಟ್ಟೆಗೆ ಆಗಮಿಸಿದೆ. ಎನ್ಐಎ ಜೊತೆಗೆ ಮಂಗಳೂರಿನ ಸ್ಥಳೀಯ ಪೊಲೀಸರು ಸಹ ಸ್ಥಳದಲ್ಲಿ ಇದ್ದಾರೆ ಎಂಬ ಮಾಹಿತಿ ಇದೆ.
ಸದ್ಯ ಮನೆಯಲ್ಲಿ ಇದಿನಬ್ಬ ಅವರ ಪುತ್ರ ಬಿ.ಎಂ. ಬಾಷಾ ಎಂಬವರು ತಮ್ಮ ಕುಟುಂಬದ ಜೊತೆಗೆ ವಾಸವಿದ್ದಾರೆ. ಹತ್ತು ವರ್ಷಗಳ ಹಿಂದೆ ಇದಿನಬ್ಬ ಅವರ ಮೊಮ್ಮಗಳು ಕೇರಳದಲ್ಲಿ ನಾಪತ್ತೆಯಾಗಿದ್ದು ಐಸಿಸ್ ಸೇರಿದ್ದಾಗಿ ಹೇಳಲಾಗಿತ್ತು.

 

ಆದ್ದರಿಂದ ಇವರ ಕುಟುಂಬ ಸದಸ್ಯರಿಗೆ ಸಿರಿಯಾ ಮೂಲದ ಐಸಿಸ್ ಉಗ್ರ ಸಂಘಟನೆಯ ಕುರಿತು ನಂಟು ಇರುವ ಶಂಕೆಯಲ್ಲಿ ದಾಳಿ ನಡೆದಿದೆ ಎನ್ನಲಾಗುತ್ತಿದೆ.
ಇದಿನಬ್ಬ ಪುತ್ರ ಬಿ.ಎಂ. ಬಾಷಾ ಮಂಗಳೂರಿನಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದರು. ಇವರ ಪುತ್ರರು ವಿದೇಶದಲ್ಲಿದ್ದಾರೆ. ಇವರ ಕುಟುಂಬದವರು ಐಸಿಸ್ ಸಂಬಂಧಿಸಿದ ಯೂಟ್ಯೂಬ್ ಚಾನೆಲ್ ಗಳನ್ನು ಸಬ್ ಸ್ಕ್ರೈಬ್ ಮಾಡಿದ್ದಾರೆ.

ಅಲ್ಲದೆ, ಐಸಿಸ್ ಸಂಪರ್ಕ ಮತ್ತು ಜಮ್ಮು ಕಾಶ್ಮೀರದ ಉಗ್ರ ಸಂಘಟನೆಯ ಯುವಕರ ಜೊತೆ ಮೊಬೈಲ್ ಸಂಪರ್ಕ ಇರುವ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎನ್ನಲಾಗಿದೆ. ಎನ್ಐಎ ವಿಭಾಗದ ಡಿಐಜಿ ಶ್ರೇಣಿಯ ಅಧಿಕಾರಿ ಉಮಾ ಎಂಬವರ ನೇತೃತ್ವದಲ್ಲಿ ದಾಳಿ ನಡೆದಿದೆ ಎಂಬ ಮಾಹಿತಿ ಇದೆ.

LEAVE A REPLY

Please enter your comment!
Please enter your name here

Hot Topics