Connect with us

DAKSHINA KANNADA

ಉಳ್ಳಾಲ: ಮರಳು ದಂಧೆಕೋರರಿಂದ CC ಟಿವಿ ಕೆಡವಲು ಯತ್ನ-ದೂರು ದಾಖಲು

Published

on

ಉಳ್ಳಾಲ: ಮರಳು ದಂಧೆಕೋರರು ಅಟ್ಟಹಾಸ ಮೆರೆದು ಜಿಲ್ಲಾಡಳಿತ ನಿರ್ದೇಶನದಂತೆ ಹಾಕಿದ್ದ ಸಿಸಿಟಿವಿಯನ್ನು ಕೆಡವಲು ಯತ್ನಿಸಿರುವ ಘಟನೆ ಸೋಮೇಶ್ವರ ಮೂಡ ಲೇಔಟ್ ನಲ್ಲಿ ನಡೆದಿದ್ದು, ಈ ಕುರಿತು ಉಳ್ಳಾಲದ ಗ್ರಾಮಲೆಕ್ಕಾಧಿಕಾರಿ ನೀಡಿದ ದೂರಿನಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಕೆಲ ತಿಂಗಳ ಹಿಂದೆ ತಂಡವೊಂದು ಸೋಮೇಶ್ವರ ಬೀಚ್ ನಲ್ಲಿ ಅಳವಡಿಸಿದ್ದ ಸಿಸಿಟಿವಿಯನ್ನು ಲಾರಿ ಮೂಲಕ ಗುದ್ದಿ ಕೆಡವಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಬಂಧಿಸಲಾಗಿತ್ತು.

ನವೆಂಬರ್ 6 ರಂದು ನಸುಕಿನ ಜಾವ 2.25 ರ ಸುಮಾರಿಗೆ ಕೆಎ 19, ಝಡ್ 7354ರ ವ್ಯಾಗನಾರ್ ಕಾರಿನಲ್ಲಿ ಬಂದ ತಂಡದ ಪೈಕಿ ಓರ್ವ ಕೆಳಗಿಳಿದು ಅಕ್ರಮ ಮರಳುಗಾರಿಕೆ ತಡೆಗಟ್ಟಲು ಹಾಕಿದ್ದ ಸಿಸಿಟಿವಿಯನ್ನು ಕೆಡವಲು ಯತ್ನಿಸಿದ್ದಾನೆ.

ಸಿ ಆರ್ ಝೆಡ್ ವ್ಯಾಪ್ತಿಯಲ್ಲಿ ಮರಳುಗಾರಿಕೆ ನಡೆಸದಂತೆ ಜಿಲ್ಲಾಧಿಕಾರಿ, ಮರಳು ಸಮಿತಿ ಅಧ್ಯಕ್ಷರು, ಆದೇಶದಂತೆ ಕುಂದಾಪುರದ ಸೈನ್ ಇನ್ ಸೆಕ್ಯುರಿಟಿ ಒಂದು ವರ್ಷದವರೆಗೆ 24 ಗಂಟೆಗಳ ಕಾಲ ಸಿಸಿಟಿವಿ ನಿರ್ವಹಣೆ ಜವಾಬ್ದಾರಿ ವಹಿಸಿಕೊಂಡಿದ್ದು, ಇದೀಗ ಎರಡನೇ ಬಾರಿ ಮರಳು ದಂಧೆಕೋರರು ಸಿಸಿಟಿವಿ ಕೆಡವಲು ಯತ್ನಿಸಿದ್ದಾರೆ‌.

ಈ ಕುರಿತು ಉಳ್ಳಾಲದ ಗ್ರಾಮಲೆಕ್ಕಾಧಿಕಾರಿ ಸಂತೋಷ್ ಎಂಬವರು ನೀಡಿದ ದೂರಿನಡಿ ಪ್ರಕರಣ ದಾಖಲಾಗಿದೆ.

ಕೆಲ ತಿಂಗಳುಗಳ ಹಿಂದೆ ಸೋಮೇಶ್ವರ ಸಮುದ್ರ ತೀರದಲ್ಲಿ ಅಳವಡಿಸಿದ್ದ ಸಿಸಿಟಿವಿಯನ್ನು ಲಾರಿ ಮೂಲಕ ಢಿಕ್ಕಿ ಹೊಡೆಸಿ ಕೆಡವಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರ ಬಂಧನವಾಗಿತ್ತು.

ಮರುದಿನವೇ ಎಲ್ಲರೂ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು.

Click to comment

Leave a Reply

Your email address will not be published. Required fields are marked *

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending