DAKSHINA KANNADA
ಭೀ*ಕರ ಅ*ಪಘಾ*ತಕ್ಕೊಳಗಾಗಿ ದ್ವಿಚಕ್ರ ಸವಾರ ಸಾ*ವು
Published
2 days agoon
ಉಳ್ಳಾಲ: ಲಾರಿಗೆ ದ್ವಿಚಕ್ರ ವಾಹನವೊಂದು ಡಿ*ಕ್ಕಿ ಹೊಡೆದ ಪರಿಣಾಮ ವಾಹನ ಸವಾರ ಸ್ಥಳದಲ್ಲೇ ಮೃ*ತಪಟ್ಟ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಸಂಕೋಲಿಗೆ ಬಳಿ ನಿನ್ನೆ (ಡಿ.31) ತಡರಾತ್ರಿ ಸಂಭವಿಸಿದೆ.
ದೇರಳಕಟ್ಟೆ ಸಮೀಪದ ಪನೀರ್ ನಿವಾಸಿ ಅಝರ್ ಮೃ*ತ ವ್ಯಕ್ತಿ ಎಂದು ತಿಳಿದು ಬಂದಿದೆ.
ಮೃ*ತ ವ್ಯಕ್ತಿ ಸ್ಕೂಟರ್ ನಲ್ಲಿ ಬರುತ್ತಿದ್ದಾಗ ಕೇರಳ ಕಡೆಗೆ ಹೋಗುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಈ ಸಂದರ್ಭ ರಸ್ತೆಗೆ ಎಸೆಯಲ್ಪಟ್ಟ ಸವಾರನ ಮೇಲೆ ಲಾರಿ ಚಲಿಸಿದ ಪರಿಣಾಮ ಸ್ಥಳದಲ್ಲೇ ಸಾ*ವನ್ನಪ್ಪಿದ್ದಾನೆ. ಅಝರ್‌ನ ಮೃ*ತದೇಹವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
DAKSHINA KANNADA
ಜಮೀನು ಮಾಲೀಕರಿಗೆ ಸಿಹಿ ಸುದ್ದಿ ನೀಡಿದ ಸುಪ್ರೀಂ ಕೋರ್ಟ್..!
Published
6 hours agoon
03/01/2025By
NEWS DESKಮಂಗಳೂರು/ ನವದೆಹಲಿ : ಇತ್ತೀಚಿನ ದಿನಗಳಲ್ಲಿ ಅಭಿವೃದ್ದಿಯ ಹೆಸರಿನಲ್ಲಿ ಅನೇಕ ಜನರು ತಮ್ಮ ಕೃಷಿ ಹಾಗೂ ಪಟ್ಟಾ ಜಮೀನುಗಳನ್ನು ಸರ್ಕಾರಕ್ಕೆ ಬಿಟ್ಟುಕೊಡುವ ಪರಿಸ್ಥಿತಿ ಬಂದಿದೆ. ಹೀಗೆ ಬಿಟ್ಟು ಕೊಟ್ಟ ಜಮೀನಿಗೆ ಪರಿಹಾರ ನೀಡಲಾಗುತ್ತಿದೆಯಾದ್ರೂ ಪರಿಹಾರದ ಹಣಕ್ಕಾಗಿ ಜನರು ಅಲೆದಾಡುವ ಪರಿಸ್ಥಿತಿ ಕೂಡಾ ಇದೆ. ಆದ್ರೆ ಇನ್ನು ಮುಂದೆ ಈ ರೀತಿ ಸ್ವಾಧೀನಪಡಿಸಿದ ಜಮೀನಿಗೆ ಪರಿಹಾರ ನೀಡಲು ವಿಳಂಬವಾದ್ರೆ ಚಿಂತಿಸಬೇಕಾಗಿಲ್ಲ. ಯಾಕಂದ್ರೆ ಈ ವಿಚಾರವಾಗಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಭೂ ಪರಿಹಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಭೂಮಿ ಕಳೆದುಕೊಳ್ಳುವ ಸಂತ್ರಸ್ತರ ಪರವಾಗಿ ತೀರ್ಪೊಂದನ್ನು ನೀಡಿದೆ. ಸಂವಿಧಾನದ 142 ನೇ ವಿಧಿಯ ಅಡಿಯಲ್ಲಿ ವಿಶೇಷ ಅಧಿಕಾರ ಬಳಸಿಕೊಂಡು ನ್ಯಾಯಾಲಯವು ಈ ತೀರ್ಪು ನೀಡಿದೆ. ಈ ತೀರ್ಪಿನಿಂದಾಗಿ ಇನ್ನು ಮುಂದೆ ಭೂ ಸ್ವಾಧೀನ ಮಾಡಿ ಪರಿಹಾರ ಸಮಯಕ್ಕೆ ಸರಿಯಾಗಿ ನೀಡದೇ ಇದ್ರೆ ಸರ್ಕಾರದ ಬೊಕ್ಕಸಕ್ಕೇ ನಷ್ಟ ಉಂಟಾಗಲಿದೆ. ಯಾಕಂದ್ರೆ ಇನ್ನು ಮುಂದೆ ಸರ್ಕಾರ ಭೂ ಸ್ವಾಧೀನ ಮಾಡಿ ಧೀರ್ಘಕಾಲ ಪರಿಹಾರ ನೀಡದೇ ಇದ್ದರೆ ಪರಿಹಾರ ನೀಡುವ ಸಮಯದಲ್ಲಿನ ಮಾರುಕಟ್ಟೆಯ ದರವನ್ನು ಸಂತ್ರಸ್ತರಿಗೆ ನೀಡಬೇಕಾಗುತ್ತದೆ.
ಯಾವ ಕಾರಣಕ್ಕೆ ಈ ಅದೇಶ ನೀಡಲಾಗಿದೆ..?
ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(KIADB) ವಿರುದ್ಧ ಸಲ್ಲಿಸಿದ್ದ ಅರ್ಜಿಯೊಂದರ ವಿಚಾರಣೆ ನಡೆಸಿ ಈ ಆದೇಶ ನೀಡಲಾಗಿದೆ. ಬೆಂಗಳೂರು ಮೈಸೂರು ಕಾರಿಡಾರ್ ಯೋಜನೆಗಾಗಿ ಸಾವಿರಾರು ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲು 2003 ರಲ್ಲಿ KIADB ಅಧಿಸೂಚನೆ ಹೊರಡಿಸಿತ್ತು. ಆದ್ರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡರೂ ಸಂತ್ರಸ್ತರಿಗೆ ಪರಿಹಾರವನ್ನು ನೀಡಿರಲಿಲ್ಲ. ನೋಟಿಫಿಕೇಷನ್ ಬಳಿಕವೂ ಪರಿಹಾರ ಸಿಗದ ಕಾರಣ ಜಮೀನು ಮಾಲೀಕರು ನ್ಯಾಯಾಲಯದ ಮೆಟ್ಟಿಲೇರಿದ್ದರು. 2019 ರಲ್ಲಿ ಪರಿಹಾರ ನೀಡಲು KIADB ಮುಂದಾಗಿತ್ತಾದ್ರೂ ಅದು 2003 ರ ಮಾರುಕಟ್ಟೆ ದರವಾಗಿತ್ತು. ಹೀಗಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಪ್ರಕರಣದ ತೀರ್ಪು ಹೊರಬಿದ್ದಿದೆ. ಕೆಐಎಡಿಬಿಯು ಸಂತ್ರಸ್ತರಿಗೆ 2019 ರ ಮಾರುಕಟ್ಟೆ ದರದಲ್ಲೇ ಪರಿಹಾರ ನೀಡಬೇಕು ಎಂದು ಆದೇಶ ನೀಡಿದೆ. ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ಕೆ.ವಿ. ವಿಶ್ವನಾಥನ್ ಅವರ ಪೀಠ ಈ ಪ್ರಕರಣದ ವಿಚಾರಣೆ ನಡೆಸಿದೆ
DAKSHINA KANNADA
ಹೃದಯಾಘಾತಕ್ಕೆ ಬಲಿಯಾದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವಿಜಯಪುರ ಜಿಲ್ಲಾ ನಿದೇಶಕ ಸಂತೋಷ್ ಕುಮಾರ್ ರೈ
Published
12 hours agoon
03/01/2025By
NEWS DESK3ಮಂಗಳೂರು/ವಿಜಯಪುರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವಿಜಯಪುರ ಜಿಲ್ಲಾ ನಿರ್ದೇಶಕರಾಗಿದ್ದ ಸವಣೂರು ಗ್ರಾಮದ ಮುಗೇರು ನಿವಾಸಿ ಸಂತೋಷ್ ಕುಮಾರ್ ರೈ (40) ರವರು ಜ.2ರಂದು ಬೆಳಿಗ್ಗೆ ವಿಜಯಪುರದಲ್ಲಿ ಹೃದಯಾಘಾತದಿಂದಾಗಿ ನಿಧನರಾದರು.
ಇದನ್ನೂ ಓದಿ: ಭೋಪಾಲ್ ಅನಿಲ ದುರಂ*ತ : 40 ವರ್ಷಗಳ ಬಳಿಕ ತ್ಯಾಜ್ಯ ವಿಲೇವಾರಿ
ಇವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಲ್ಲಿ ಕಳೆದ 22 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಪ್ರಸ್ತುತ 2 ವರ್ಷಗಳಿಂದ ವಿಜಯಪುರ ಜಿಲ್ಲಾ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಸಂತೋಷ್ ಕುಮಾರ್ ರೈಯವರು ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಇವರ ಅಕಾಲಿಕ ಮರಣದಿಂದ ಕುಟುಂಬ ವರ್ಗದವರು ದು:ಖತಪ್ತರಾಗಿದ್ದಾರೆ.
DAKSHINA KANNADA
ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ವಂಚನೆ; ಆರೋಪಿ ಬಂಧನ
Published
12 hours agoon
03/01/2025By
NEWS DESK3ಮಂಗಳೂರು : ನಕಲಿ ಆಧಾರ್ ಕಾರ್ಡ್ ಗಳನ್ನು ಬಳಸಿ ಪೊರ್ಜರಿ ದಾಖಲಾತಿಗಳನ್ನು ಸೃಷ್ಟಿಸಿ ನ್ಯಾಯಾಲಯದಲ್ಲಿ ವಿಚಾರಣೆ ಯಲ್ಲಿರುವ ಪ್ರಕರಣಗಳ ಆರೋಪಿಗಳಿಗೆ ಶ್ಯೂರಿಟಿದಾರನಾಗಿ ನಿಂತು ವಂಚನೆ ಮಾಡಿದ ಪ್ರಕರಣದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಕಾಪು ಕಳತ್ತೂರಿನ ಕೆ. ಉಮ್ಮರಬ್ಬ ಮ್ಯೊದೀನ್(63) ಬಂಧಿತ ಆರೋಪಿ. ಈತನ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ 2023ರಲ್ಲಿ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ: ಅಪ್ರಾಪ್ತ ಯುವತಿ ಜೊತೆ ಪ್ರೀತಿಯ ನಾಟಕ, ದೈ*ಹಿಕ ಸಂಪರ್ಕ ; ಆರೋಪಿ ಅರೆಸ್ಟ್
ಮಂಗಳೂರು ಉತ್ತರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರ ನೇತೃತ್ಬದಲ್ಲಿ ಠಾಣಾ ಪಿ ಎಸ್ ಐ ಹಾಗೂ ಸಿಬ್ಬಂದಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
LATEST NEWS
ಶುಭ್ ಮನ್ ಗಿಲ್ ಸೇರಿ 4 ಕ್ರಿಕೇಟಿಗರಿಗೆ ಸಿಐಡಿ ಸಮನ್ಸ್ !
BBK 11: 2ನೇ ಮಗುವಿನ ಬಗ್ಗೆ ಮಾತನಾಡಿದ ಧನರಾಜ್- ನಾಚಿ ನೀರಾದ ಪತ್ನಿ
ದೆಹಲಿಯಲ್ಲಿ ದಟ್ಟವಾದ ಮಂಜು, ಶೀತ ಗಾಳಿ – ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ
ಪ್ಲೇಯಿಂಗ್-11ನಿಂದ ರೋಹಿತ್ ಶರ್ಮಾ ಡ್ರಾಪ್; ಸ್ಪಷ್ಟನೆ ಕೊಟ್ಟ ಬುಮ್ರಾ !
ಫೆ.17, 18ರಂದು ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ವರ್ಷಾವಧಿ ಮಹಾಪೂಜೆ ಸಂಭ್ರಮ
185 ರನ್ ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿದ ಭಾರತ; ಆಸೀಸ್ ಗೆ ಆರಂಭಿಕ ಆಘಾತ
Trending
- DAKSHINA KANNADA2 days ago
ಬೊಜ್ಜು ಕರಗಿಸಲು ವ್ಯಾಯಾಮದ ಅಗತ್ಯ ಇಲ್ಲ : ಮಾತ್ರೆ ತಿಂದರೆ ಸಾಕು..!
- BIG BOSS6 days ago
ಎಂಟು ಮಂದಿ ನಾಮಿನೇಟ್; ಈ ವಾರ ಮನೆಯಿಂದ ಹೊರ ಬರೋದು ಇವರೇ ?
- DAKSHINA KANNADA6 days ago
‘ದಿ ಅಕ್ಸಿಡೆಂಟಲ್ PM’ ಸುಳ್ಳಿನ ಕಂತೆ..! ಕ್ಷಮಿಸಿ ಎಂದ ಚಿತ್ರ ನಿರ್ಮಾಪಕ..!
- BIG BOSS5 days ago
ಈ ವಾರ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆದ ಸ್ಪರ್ಧಿ ಇವರೇ ನೋಡಿ..!