Connect with us

DAKSHINA KANNADA

ಉಳ್ಳಾಲ: ಸದ್ದಿಲ್ಲದೆ ನಾಮಪತ್ರ ಹಿಂಪಡೆದ ಜೆಡಿಎಸ್ ಅಭ್ಯರ್ಥಿ- ಮೊಬೈಲ್ ಸ್ವಿಚ್ಆಫ್..!?

Published

on

ಉಳ್ಳಾಲ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ ಎಸ್ ಎಸ್ ಎಫ್ ನಾಯಕ ಅಲ್ತಾಫ್ ಕುಂಪಲ ಪಕ್ಷದ ಮುಖಂಡರಿಗೆ ಮಾಹಿತಿಯೇ ನೀಡದೆ ನಾಮಪತ್ರವನ್ನು ಹಿಂಪಡೆದುಕೊಂಡಿದ್ದಾರೆ.

ಉಳ್ಳಾಲ: ಉಳ್ಳಾಲ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ ಎಸ್ ಎಸ್ ಎಫ್ ನಾಯಕ ಅಲ್ತಾಫ್ ಕುಂಪಲ ಪಕ್ಷದ ಮುಖಂಡರಿಗೆ ಮಾಹಿತಿಯೇ ನೀಡದೆ ನಾಮಪತ್ರವನ್ನು ಹಿಂಪಡೆದುಕೊಂಡಿದ್ದಾರೆ.

ಉಳ್ಳಾಲ ಜೆಡಿಎಸ್

ಅಲ್ಲದೆ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿರುವುದಾಗಿ ನಾಯಕರು ಆರೋಪಿಸಿದ್ದಾರೆ.

ಅಲ್ತಾಫ್ ಕುಂಪಲ ಇವರು ಹಲವು ವರ್ಷಗಳಿಂದ ಎಸ್ ಎಸ್ ಎಫ್ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದವರು.

ಇತ್ತೀಚೆಗೆ ಜೆಡಿಎಸ್ ಪಕ್ಷದಲ್ಲಿ ಕಾಣಿಸಿಕೊಂಡ ಅವರು ವಿಧಾನಪರಿಷತ್ ಸದಸ್ಯ ಬಿ.ಎಂ ಫಾರುಕ್ ಅವರ ಮನವೊಲಿಸಿ ಜೆಡಿಎಸ್ ನಿಂದ ಉಳ್ಳಾಲ ಕ್ಷೇತ್ರದಿಂದ ಸ್ಪರ್ಧಿಸಲು ಬಿ ಫಾರಂ ಪಡೆದುಕೊಂಡಿದ್ದರು.

ಉಳ್ಳಾಲ ನಗರಸಭೆಯ ಜೆಡಿಎಸ್ ಕೌನ್ಸಿಲರ್ ಹಾಗೂ ಜಿಲ್ಲಾ ಮುಖಂಡರ ಜೊತೆಗೆ ನಾಮಪತ್ರ ಸಲ್ಲಿಸಿದ್ದ ಅವರು ಪ್ರಚಾರ ಕಾರ್ಯದಲ್ಲಿ ಕಾಣಿಸಿಕೊಂಡಿರಲಿಲ್ಲ.

ಆದರೆ ಎ.21 ರಂದು ಅಲ್ತಾಫ್ ಅವರು ತನ್ನ ಪಕ್ಷದ ಮುಖಂಡರುಗಳಿಗೆ ಮಾಹಿತಿಯೇ ಇಲ್ಲದೆ ನಾಮಪತ್ರ ವಾಪಸ್ಸು ಪಡೆದುಕೊಂಡಿದ್ದರು.

ಈ ಕುರಿತು ಎ.22 ರಂದು ನೋಟೀಸು ಬೋರ್ಡಿನಲ್ಲಿ ಮಾಹಿತಿಯನ್ನು ಹಾಕಲಾಗಿತ್ತು.

ಇದನ್ನು ಗಮನಿಸಿದ ಸ್ಥಳೀಯರು ಜೆಡಿಎಸ್ ಮುಖಂಡರುಗಳಿಗೆ ಮಾಹಿತಿ ನೀಡಿದ್ದಾರೆ. ಮುಖಂಡರು ಅಲ್ತಾಫ್ ಅವರನ್ನು ಸಂಪರ್ಕಿಸಲು ಯತ್ನಿಸಿದರೂ ಕಳೆದ ಎರಡು ದಿನಗಳಿಂದ ಮೊಬೈಲ್ ಸ್ವಿಚ್ ಆಫ್ ಆಗಿದೆ.

Click to comment

Leave a Reply

Your email address will not be published. Required fields are marked *

DAKSHINA KANNADA

ಪತಿ ಇನ್ನಿಲ್ಲ ಅನ್ನೋ ಸುದ್ದಿ ಗೊತ್ತಾಗಿ ಮತದಾನದ ಕೊನೆ ಆಸೆ ತೀರಿಸಿದ ಪತ್ನಿ.‌.!

Published

on

ಮಂಗಳೂರು : ಅವರ ಪತಿ ಆಸ್ಪತ್ರೆಯಲ್ಲಿ ಕೊನೆ ಉಸಿರು ಎಳೆದಿದ್ದಾರೆ. ಅದೇ ದಿನ ರಾಜ್ಯದಲ್ಲಿ ಎರಡನೇ ಹಂತದ ಮತದಾನ ಕೂಡಾ ನಡೆದಿದೆ. ಆಕೆಗೆ ಪತಿ ಇನ್ನಿಲ್ಲ ಅನ್ನೋ ವಿಚಾರವನ್ನು ಯಾರೋ ತಿಳಿಸಿದ್ದಾರೆ. ಆದ್ರೆ ಆಕೆ ಪತಿಯ ಕೊನೆ ಆಸೆ ಈಡೇರಿಸಿದ ಬಳಿಕ ಪತಿಯ ಅಂತಿಮ ದರ್ಶನ ಪಡೆದಿದ್ದಾರೆ‌.

ಇದು ಮತದಾನ ಮಾಡದೇ ಇರುವವರಿಗೆ ಇವರೊಂದು ಪಾಠವಾಗಿದೆ. ಮಂಗಳವಾರ ರಾಜ್ಯದಲ್ಲಿ ನಡೆದ ಎರಡನೇ ಹಂತದ ಮತದಾನದಲ್ಲಿ ನಡೆದ ಘಟನೆ ಇದು. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಗುಡ್ಡೇಕೊಪ್ಪ ಪಂಚಾಯತ್ ವ್ಯಾಪ್ತಿಯಲ್ಲಿ ಇದು ನಡೆದಿದೆ. ಇಲ್ಲಿನ ಆಡುಗೋಡಿನ ಕಲಾವತಿ ವೆಂಕಟೇಶ್ ಇವರ ಪತಿ ವೆಂಕಟೇಶ್ ಚುನಾವಣೆಯ ದಿನ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ  ಇಹಲೋಕ ತ್ಯಜಿಸಿದ್ದಾರೆ.  ಇನ್ನೇನು ಓಟು ಹಾಕಲು ಹೋಗಬೇಕು ಅನ್ನೋ ಅಷ್ಟರಲ್ಲಿ ಪತಿ ಇಹಲೋಕ ತ್ಯಜಿಸಿದ ಮಾಹಿತಿ ಪತ್ನಿ ಕಲಾವತಿಗೆ ಬಂದಿದೆ. ಆದ್ರೆ ಕಲಾವತಿ ಅವರು ಈ ವೇಳೆ ತಮ್ಮ ಅಮೂಲ್ಯ ಮತ ಚಲಾಯಿಸಿ, ಬಳಿಕ ಪತಿಯ ದೇಹವನ್ನು ನೋಡಲು ತೆರಳಿದ್ದಾರೆ.

ಪತಿ ಒಂದು ಪಕ್ಷದ ಅಭಿಮಾನಿಯಾಗಿದ್ದು ,ಆ ಪಕ್ಷದ ನಾಯಕನನ್ನು ಯಾವಾಗಲು ಜಪಿಸ್ತಾ ಇದ್ರು ಹಾಗಾಗಿ ಪತಿಯ ಕೊ‌‌ನೆಯ ಆಸೆಯಾಗಿ ಅವರ ಪ್ರೀಯಪಟ್ಟವರಿಗೆ ಮತ ಚಲಾಯಿಸಿದೆ ಅಂತ ಕಲಾವತಿ ಹೇಳಿಕೊಂಡಿದ್ದಾರೆ.

Continue Reading

DAKSHINA KANNADA

ಪ್ರಜ್ವಲ್‌ ಅಶ್ಲೀಲ್ ವಿಡಿಯೋ ಡಿಲೀಟ್ ಮಾಡಿ..! ಎಸ್‌ಐಟಿ ವಾರ್ನಿಂಗ್..!

Published

on

ಮಂಗಳೂರು : ಸದ್ಯ ಸಂಸದ ಪ್ರಜ್ವಲ್ ರೇವಣ್ಣ ವೀಡಿಯೋ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಪ್ರಕರಣ ಬೆಂಬತ್ತಿರುವ ಎಸ್ ಐ ಟಿ ಖಡಕ್ ವಾರ್ನ್ ಮಾಡಿದೆ. ಅಶ್ಲೀಲ ವಿಡಿಯೋಗಳನ್ನು ಶೇರ್ ಮಾಡದಂತೆ ಹೇಳಿದೆ. ಅಷ್ಟೇ ಅಲ್ಲದೆ, ಅಶ್ಲೀಲ ವಿಡಿಯೋ ಮೊಬೈಲ್ ನಲ್ಲಿ ಸ್ಟೋರ್ ಮಾಡಿಕೊಂಡಿದ್ದರೆ, ಒಂದು ವೇಳೆ ಡಿಲೀಟ್‌ ಮಾಡದೇ ಇದ್ದರೆ ಕಾನೂನು ಕ್ರಮಗಳನ್ನು ಎದುರಿಸಬೇಕಾದೀತು ಎಂದು ಎಸ್ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್ ಮಾಧ್ಯಮ ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದ್ದಾರೆ.

ಅಲ್ಲದೇ, ಯಾವುದೇ ಅಶ್ಲೀಲ ವೀಡಿಯೋ ಹಾಗೂ ಧ್ವನಿ ಮುದ್ರಣವನ್ನು ಇಟ್ಟುಕೊಂಡಿದ್ದರೆ ಅದು ಅಪರಾಧವಾಗುವುದರಿಂದ ಜನರು ತಮ್ಮ ಮೊಬೈಲ್‌ ಅಥವಾ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ಇಟ್ಟುಕೊಳ್ಳಬಾರದು. ಒಂದು ವೇಳೆ ಇಟ್ಟುಕೊಂಡಿದ್ದರೆ ಕೂಡಲೇ ಡಿಲೀಟ್‌ ಮಾಡಿಬಿಡಿ. ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ಇದ್ದರೆ ಅದರ ರಚನಕಾರರು ನೀವು ಎಂದು ಪರಿಗಣಿಸಿ ಕ್ರಿಮಿನಲ್ ಕೇಸ್ ಬೀಳುತ್ತದೆ. ಆದ್ದರಿಂದ, ಡಿಲೀಟ್ ಮಾಡುವುದರಿಂದ ಕಾನೂನು ಕ್ರಮಗಳಿಂದ ಪಾರಾಗುವ ಸಾಧ್ಯತೆ ಇರುತ್ತದೆ ಎಂದು ಬಿ.ಕೆ. ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

BANTWAL

ಸಾಲದ ಶೂಲಕ್ಕೆ ಜೀವಾಂತ್ಯಗೊಳಿಸಿದ ಯುವಕ…!

Published

on

ಮಂಗಳೂರು : ತಾನು ತಂಗಿದ್ದ ಲಾಡ್ಜ್ ನಲ್ಲಿಯೇ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ‌ಘಟನೆ ಬಿಸಿರೋಡಿನಲ್ಲಿ ನಡೆದಿದೆ.

ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ ( 30) ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಮೇ. 5 ರಂದು ಬಿಸಿರೋಡಿನ ಖಾಸಗಿ ಬಸ್ ನಿಲ್ದಾಣದ ಹತ್ತಿರವಿರುವ ಹೋಟೆಲೊಂದರಲ್ಲಿ ರೂಂ ಮಾಡಿದ್ದ. ಈತ ಮೇ.6 ರಂದು ರಾತ್ರಿ ಊಟ ಮುಗಿಸಿ, ಬಾಗಿಲು ಹಾಕಿಕೊಂಡಿದ್ದ. ಮಂಗಖವಾರ ಬೆಳಿಗ್ಗೆ ರೂಂನ ಬಾಗಿಲು ತೆರೆಯದ ಇದ್ದ ಕಾರಣ ಹೋಟೆಲ್ ಸಿಬ್ಬಂದಿ ಕರೆದರೂ ಸ್ಪಂದಿಸಿರಲಿಲ್ಲ. ಹೀಗಾಗಿ ಪೊಲೀಸರಿಗೆ ಮಾಹಿತಿ ನೀಡಿ ಬಾಗಿಲು ತೆರೆದಾಗ ನೇಣು ಬಿಗಿದ ಸ್ಥಿತಿಯಲ್ಲಿ ಪ್ರಜ್ವಲ್ ಮೃ*ತದೇಹದ ಪತ್ತೆಯಾಗಿದೆ.


ಓನ್ ಲೈನ್ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಪ್ರಜ್ವಲ್ ಇತ್ತೀಚಿನ ದಿನಗಳಲ್ಲಿ ಮಾನಸಿಕವಾಗಿ ತೀವ್ರವಾಗಿ ನೊಂದಿದ್ದ ಎನ್ನಲಾಗಿದೆ. ತಾನು ಕೆಲಸ ಮಾಡಿಕೊಂಡಿದ್ದ ಕಂಪೆನಿಯ ಮಾಲಕರಿಂದ 60 ಸಾವಿರ ಸಾಲ ಪಡೆದು ಬಳಿಕ ಹಣ ಹೊಂದಿಸಲಾಗದೆ, ಸರಿಯಾದ ಸಮಯಕ್ಕೆ ಹಿಂದುರುಗಿಸಲಾಗಿಲ್ಲ ಎಂಬ ಕಾರಣಕ್ಕೆ ಕೊರುಗುತ್ತಿದ್ದ ಎಂದು ಹೇಳಲಾಗಿದೆ. ಸಾಲದ ವಿಚಾರವಲ್ಲದೆ ಪ್ರೀತಿಸಿದ ಯುವತಿ ಕೈಕೊಟ್ಟಿದ್ದು, ಪ್ರೇಮ ವೈಫಲ್ಯದ ನೋವಿನಲ್ಲೂ ಇದ್ದ ಎಂದು ವರದಿಯಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

Trending