DAKSHINA KANNADA
Ullala: ಕುಂಪಲ ಅಖಂಡ ಭಾರತ ಸಂಕಲ್ಪ ದಿನದಲ್ಲಿ ಗಮನಸೆಳೆದ ಸೌಜನ್ಯ ಹೋರಾಟದ ಬ್ಯಾನರ್ !
Published
1 year agoon
By
Adminಹಿಂದು ಜಾಗರಣ ವೇದಿಕೆ ಉಳ್ಳಾಲ ತಾಲೂಕು ಇದರ ವತಿಯಿಂದ ಕುಂಪಲ ಮೈದಾನದಲ್ಲಿ ನಡೆದ ಅಖಂಡ ಭಾರತ ಸಂಕಲ್ಪ ದಿನ ಪ್ರಯುಕ್ತ ಸೌಜನ್ಯ ಹೋರಾಟಕ್ಕೆ ಬೆಂಬಲವಾಗಿ ಹಾಕಲಾದ ಬ್ಯಾನರ್ ಗಮನಸೆಳೆಯಿತು.
ಉಳ್ಳಾಲ: ಹಿಂದು ಜಾಗರಣ ವೇದಿಕೆ ಉಳ್ಳಾಲ ತಾಲೂಕು ಇದರ ವತಿಯಿಂದ ಕುಂಪಲ ಮೈದಾನದಲ್ಲಿ ನಡೆದ ಅಖಂಡ ಭಾರತ ಸಂಕಲ್ಪ ದಿನ ಪ್ರಯುಕ್ತ ಸೌಜನ್ಯ ಹೋರಾಟಕ್ಕೆ ಬೆಂಬಲವಾಗಿ ಹಾಕಲಾದ ಬ್ಯಾನರ್ ಗಮನಸೆಳೆಯಿತು.
‘ಸೌಜನ್ಯ ಹೆಣ್ಣಲ್ಲವೇ?. ಜಸ್ಟೀಸ್ ಫಾರ್ ಕುಮಾರಿ ಸೌಜನ್ಯ ಹಾಗಾದರೆ 11 ವರ್ಷ ಕಳೆದರೂ ಈ ಬಡ ಹೆಣ್ಣಿನ ಅತ್ಯಾಚಾರ ನಡೆಸಿದವರ ಪತ್ತೆ ಯಾಕೆ ಇಲ್ಲ?
ಸೌಜನ್ಯ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ಯಾವಾಗ? ಹಳ್ಳಿಗೊಂದು ನ್ಯಾಯ ದಿಲ್ಲಿಗೊಂದು ನ್ಯಾಯವೇ? 11 ವರ್ಷ ಶಿಕ್ಷೆ ಅನುಭವಿಸಿದ ನಿರಪರಾಧಿ ಸಂತೋಷ್ ರಾವ್ ಮತ್ತು ಅವರ ಕುಟುಂಬಕ್ಕೆ ಆದ ಅವಮಾನಕ್ಕೆ ಯಾರು ಹೊಣೆ?
ಪ್ರಜ್ಞಾವಂತ ನಾಗರಿಕರೇ ಎಚ್ಚೆತ್ತುಕೊಳ್ಳಿ ಸೌಜನ್ಯಾಳನ್ನು ಅತ್ಯಾಚಾರ ನಾಡಿ ಕೊಂದು ಮುಗಿಸಿದ ಪಾಪಿಗಳಿಗೆ ಗಲ್ಲುಶಿಕ್ಷೆ ಆಗುವವರೆಗೆ ನಮ್ಮ ಹೋರಾಟ ಮುಂದುವರಿಯಲಿ’ ಎಂದು ಹಿಂದೂ ಜಾಗರಣಾ ವೇದಿಕೆ ಕುಂಪಲ ಓಂಶಕ್ತಿ ಘಟಕ ಬ್ಯಾನರ್ ಅಳವಡಿಸಿದೆ.
DAKSHINA KANNADA
ನಿವೃತ್ತರಾದ ಪುತ್ತೂರು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಅಡುಗೆ ಸಿಬ್ಬಂದಿಗೆ ಸನ್ಮಾನ
Published
8 hours agoon
03/12/2024By
NEWS DESK4ಪುತ್ತೂರು : ಪುತ್ತೂರಿನ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ 28 ವರ್ಷಗಳಿಂದ ಅಡುಗೆ ಸಹಾಯರಾಗಿ ಕೆಲಸ ನಿರ್ವಹಿಸುತ್ತಿದ್ದ ಹೊನ್ನಪ್ಪ ಸಿ.ಎಚ್. ಅವರು ನ.30ರಂದು ನಿವೃತ್ತರಾದರು.
ವೈದ್ಯಾಧಿಕಾರಿಗಳು ಮತ್ತು ಎಲ್ಲಾ ಸಿಬ್ಬಂದಿ ವರ್ಗದವರೊಂದಿಗೆ ಉತ್ತಮ ರೀತಿಯಲ್ಲಿ ಒಡನಾಟ ಇಟ್ಟುಕೊಂಡಿದ್ದ ಅವರು, ಸರ್ಕಾರಿ ನೌಕರರಾಗಿ ನಿಷ್ಠೆ, ಜವಾಬ್ದಾರಿಯುತವಾಗಿ ಸೇವೆಯನ್ನು ಸಲ್ಲಿಸುತ್ತಾ ಬಂದಿದ್ದಾರೆ. ಸಾರ್ವಜನಿಕ ಜೀವನದಲ್ಲೂ ಎಲ್ಲರ ಪ್ರೀತಿ ಪಾತ್ರರಾಗಿದ್ದರು. ಹೊನ್ನಪ್ಪ ಸಿ.ಎಚ್ ಚಿಕ್ಕಪುತ್ತೂರಿನ ಸಿ.ಬಾಬು ಹಾಗೂ ಚಿನ್ನು ದಂಪತಿಯ ಮೂರನೇ ಪುತ್ರ.
ಇದನ್ನೂ ಓದಿ : ದೇಶದ ಅತಿ ಕಿರಿಯ, ಕರ್ನಾಟಕ ಮೂಲದ ಈ ಪೈಲಟ್ ಯಾರು ಗೊತ್ತಾ ??
ನಿವೃತ್ತರಾದ ಅವರನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಯ ಆಡಳಿತ ವರ್ಗ ಪ್ರೀತಿಯಿಂದ ಬೀಳ್ಕೊಟ್ಟಿದ್ದಾರೆ. ವೇಳೆ ಆಡಳಿತ ವೈದ್ಯಾಧಿಕಾರಿ ಡಾ. ಆಶಾಜ್ಯೋತಿ ಕೆ., ಸಹಾಯಕ ಆಡಳಿತಾಧಿಕಾರಿ ಯೋಗಾನಂದ, ಡಾ. ಪ್ರಶಾಂತ್, ಡಾ.ಜಯ ಕುಮಾರಿ, ಡಾ.ಯದುರಾಜ್, ಡಾ.ಝೈನಾಬ ಮತ್ತಿತರರು ಉಪಸ್ಥಿತರಿದ್ದರು.
DAKSHINA KANNADA
ಚುನಾವಣಾ ಬಾಂಡ್ ಅಕ್ರಮ : ನಿರ್ಮಲಾ ಸೀತಾರಾಮನ್, ನಳೀನ್ ಕುಮಾರ್ ಕಟೀಲ್‌ಗೆ ರಿಲೀಫ್
Published
8 hours agoon
03/12/2024By
NEWS DESK4ಮಂಗಳೂರು : ಚುನಾವಣಾ ಬಾಂಡ್ ಹೆಸರಲ್ಲಿ ಸುಲಿಗೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್‌ಗೆ ರಿಲೀಫ್ ಸಿಕ್ಕಿದೆ. ಅವರ ವಿರುದ್ಧ ದಾಖಲಾಗಿದ್ದ ಎಫ್‌ಐಅರ್ ರದ್ದುಗೊಳಿಸಿ ಹೈಕೋರ್ಟ್ ಆದೇಶಿಸಿದೆ.
ಚುನಾವಣಾ ಬಾಂಡ್ ಅಕ್ರಮಕ್ಕೆ ಸಂಬಂಧಿಸಿದ ದೂರಿನ ನಂತರ ವಿಶೇಷ ನ್ಯಾಯಾಲಯವೊಂದರ ನಿರ್ದೇಶನದಂತೆ ನಿರ್ಮಲಾ ಸೀತಾರಾಮನ್, ನಳೀನ್ ಕುಮಾರ್ ಕಟೀಲ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 384( ಸುಲಿಗೆಗೆ ಶಿಕ್ಷೆ) 120 ಬಿ (ಕ್ರಿಮಿನಲ್ ಪಿತೂರಿ) 34 (ಸಾಮಾನ್ಯ ಉದ್ದೇಶದೊಂದಿಗೆ ಹಲವಾರು ವ್ಯಕ್ತಿಗಳು ಮಾಡಿದ ಕಾರ್ಯಗಳು) ಅಡಿಯಲ್ಲಿ ಸೀತಾರಾಮನ್, ಇಡಿ ಅಧಿಕಾರಿಗಳು ಮತ್ತು ರಾಜ್ಯ ಮತ್ತು ರಾಷ್ಟ್ರ ಮಟ್ಟದ ಬಿಜೆಪಿ ಪದಾಧಿಕಾರಿಗಳ ವಿರುದ್ಧ ಎಫ್ ಐಆರ್ ದಾಖಲಾಗಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೆಸರೂ ಎಫ್ ಐಆರ್ ನಲ್ಲಿ ಕೇಳಿ ಬಂದಿತ್ತು.
ಇದನ್ನೂ ಓದಿ : ಮಾಜಿ ಪ್ರಿಯಕರನ ಹ*ತ್ಯೆ ಆರೋಪ; ಬಾಲಿವುಡ್‌ನ ಖ್ಯಾತ ನಟಿಯ ತಂಗಿ ಅರೆಸ್ಟ್
ಚುನಾವಣಾ ಬಾಂಡ್‌ಗಳ ಸೋಗಿನಲ್ಲಿ ಪ್ರತಿಷ್ಟಿತ ಕಂಪೆನಿಗಳಿಂದ ಸುಮಾರು 8 ಸಾವಿರ ಕೋಟಿ ರೂ.ಗಳನ್ನು ಸುಲಿಗೆ ಮಾಡಿದ್ದಾರೆ ಎಂದು ಆರೋಪಿಸಿ ಜನಾಧಿಕಾರ ಸಂಘರ್ಷ ಪರಿಷತ್ ಸಂಸ್ಥಾಪಕ ಆದರ್ಶ್ ಆರ್.ಅಯ್ಯರ್ ಎಂಬವರು ದೂರು ದಾಖಲಿಸಿದ್ದರು.
BELTHANGADY
ಉಜಿರೆ : ನೇತ್ರಾವತಿ ನದಿಯಲ್ಲಿ ಮು*ಳುಗಿದ್ದ ವ್ಯಕ್ತಿ ಶ*ವವಾಗಿ ಪತ್ತೆ
Published
15 hours agoon
03/12/2024ಉಜಿರೆ: ನೇತ್ರಾವತಿ ನದಿಗೆ ಇಳಿದ ವ್ಯಕ್ತಿ ನೀರಿನಲ್ಲಿ ಮು*ಳುಗಿ ನಾ*ಪತ್ತೆಯಾದ ಘಟನೆ ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ಸೋಮವಾರ (ಡಿ.02) ಸಂಜೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ರಾತ್ರಿ ಮೃ*ತದೇಹ ಹೊರತೆಗೆಯಲಾಗಿದೆ.
ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್ (38) ಎಂಬವರು ಯಾವುದೋ ಕಾರಣಕ್ಕೆ ಸಂಜೆ ಸುಮಾರು 5ರಿಂದ 6 ಗಂಟೆ ಸುಮಾರಿಗೆ ನದಿಗೆ ಇಳಿದಿದ್ದು ಬಳಿಕ ಮುಳುಗಿ ನಾ*ಪತ್ತೆಯಾಗಿದ್ದರು.
ಸ್ಥಳಕ್ಕೆ ಅ*ಗ್ನಿಶಾಮಕ ದಳ ಹಾಗೂ ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರು ಭೇಟಿ ನೀಡಿದ್ದು, ಮುಳುಗು ತಜ್ಞ ಈಶ್ವರ್ ಮಲ್ಪೆಗೂ ಮಾಹಿತಿ ನೀಡಲಾಗಿತ್ತು. ಆದರೆ ಮುಳುಗು ತಜ್ಞ ಬೆಳ್ತಂಗಡಿಯ ಸಂಜಯ ನಗರದ ಇಸ್ಮಾಯಿಲ್ ಹಾಗೂ ಅಗ್ನಿಶಾಮಕದಳದವರು ರಾತ್ರಿ11ರ ಸುಮಾರಿಗೆ ಮೃ*ತದೇಹ ಮೇಲೆತ್ತಿದ್ದಾರೆ. ಮೃ*ತ ವ್ಯಕ್ತಿ ಸಂಘದ ಪ್ರಚಾರಕರಾಗಿ ಐದು ವರ್ಷ ಕಾರ್ಯ ನಿರ್ವಹಿಸಿ ಪ್ರಸ್ತುತ ಪುತ್ತೂರು ಜಿಲ್ಲಾ ಧರ್ಮಜಾಗರಣ ಸಂಯೋಜಕರಾಗಿದ್ದರು.
ಅಂ*ತಿಮ ದರ್ಶನಕ್ಕೆ ಸ್ವಗ್ರಾಮ ಬೆಳಾಲ್ ನಲ್ಲಿ ಮಂಗಳವಾರ ಬೆಳಗ್ಗೆ 11 ಗಂಟೆಯಿಂದ 1 ಗಂಟೆ ತನಕ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರಸ್ತುತ ಪಾರ್ಥೀವ ಶರೀರ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶ*ವಾಗಾರದಲ್ಲಿ ಇರಿಸಲಾಗಿದೆ.
LATEST NEWS
ಚುನಾವಣಾ ಬಾಂಡ್ ಅಕ್ರಮ : ನಿರ್ಮಲಾ ಸೀತಾರಾಮನ್, ನಳೀನ್ ಕುಮಾರ್ ಕಟೀಲ್‌ಗೆ ರಿಲೀಫ್
ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ರಹಸ್ಯ ಬಯಲು !
ದೇಶದ ಅತಿ ಕಿರಿಯ, ಕರ್ನಾಟಕ ಮೂಲದ ಈ ಪೈಲಟ್ ಯಾರು ಗೊತ್ತಾ ??
ಡಿ.7 ರಂದು ಕುಡುಪು ಕ್ಷೇತ್ರದಲ್ಲಿ ಷಷ್ಠಿ ಬ್ರಹ್ಮ ರಥೋತ್ಸವ
ಮಾಜಿ ಪ್ರಿಯಕರನ ಹ*ತ್ಯೆ ಆರೋಪ; ಬಾಲಿವುಡ್‌ನ ಖ್ಯಾತ ನಟಿಯ ತಂಗಿ ಅರೆಸ್ಟ್
ಸ್ಟೇಟಸ್ನಲ್ಲಿ ಫೋಟೋ ಹಾಕಿದ ಮಾಜಿ ಪ್ರಿಯಕರ; ಆ*ತ್ಮಹತ್ಯೆಗೆ ಶರಣಾದ ವಿವಾಹಿತೆ!
Trending
- BANTWAL5 days ago
ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು
- FILM4 days ago
ಪುತ್ರಿಯೊಂದಿಗೆ ಶ್ರೀಕೃಷ್ಣ ಮಠಕ್ಕೆ ನಟಿ ಮಾಲಾಶ್ರೀ ಭೇಟಿ; ಕೋಟಿ ಗೀತಾ ಲೇಖನ ಯಜ್ಞ ದೀಕ್ಷೆ ಸ್ವೀಕಾರ
- Ancient Mangaluru6 days ago
ಮಂಗಳೂರಿನ ನರ್ಸಿಂಗ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ನೀ*ರುಪಾಲು
- LATEST NEWS6 days ago
ನಾನ್ ವೆಜ್ ತಿನ್ನಬೇಡ ಎಂದ ಪ್ರಿಯತಮ: ಆ*ತ್ಮಹತ್ಯೆಗೆ ಶರಣಾದ ಏರ್ ಇಂಡಿಯಾ ಪೈಲಟ್ !