ಉಳ್ಳಾಲದಲ್ಲಿ ನದಿಗೆ ಹಾರಿದ್ದ ತಂದೆ -ಮಗ ಶವ ಉಡುಪಿ ಕಟಪಾಡಿ ಸಮುದ್ರ ಕಿನಾರೆಯಲ್ಲಿ ಪತ್ತೆ..!!?
ಉಡುಪಿ : ಉಡುಪಿಯ ಸಮುದ್ರ ತೀರದಲ್ಲಿ ಕೊಳೆತ ಸ್ಥಿತಿಯಲ್ಲಿ 2 ಅಪರಿಚಿತ ಶವಗಳು ಪತ್ತೆಯಾಗಿವೆ.
ಕಟಪಾಡಿಯ ಮಟ್ಟು ಸಮುದ್ರ ಕಿನಾರೆಯಲ್ಲಿ ಈ ಶವಗಳು ಪತ್ತೆಯಾಗಿದ್ದು, ಅದರಲ್ಲಿ ಒಂದು ಶವ ಗಂಡಸಿದ್ದು ಹಾಗೂ ಮತೊಂದು ಗಂಡು ಮಗುವಿನ ಶವಗಳು ಎಂದು ಹೇಳಲಾಗಿದೆ.
ಈ ಶವಗಳು ಫೆಬ್ರವರಿ 16 ರಂದು ಮಂಗಳೂರಿನ ಉಳ್ಲಾಲ ನೇತ್ರಾವತಿ ಸೇತುವೆಯಲ್ಲಿ ಕಾರನ್ನು ಪಾರ್ಕ್ ಮಾಡಿ ನಿಗೂಢವಾಗಿ ಕಣ್ಮರೆಯಾಗಿದ್ದ ಬಾಳ್ತಿಲ ಶಂಭೂರು ಚರ್ಚ್ ಬಳಿಯ ನಿವಾಸಿ ಗೋಪಾಲಕೃಷ್ಣ ರೈ(45), ಹಾಗೂ ಅವರ ಪುತ್ರ ಅನೀಶ್ ರೈ(6) ಎಂದು ಶಂಕಿಸಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ಮಂದುವರೆಸಿದ್ದಾರೆ.
ಫೆಬ್ರವರಿ 16 ರ ಮುಂಜಾನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ತಂದೆ ಹಾಗೂ ಆರು ವರ್ಷದ ಪುತ್ರ ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66 ರ ನೇತ್ರಾವತಿ ಸೇತುವೆ ಬಳಿ ಭಾನುವಾರ ಬೆಳಗ್ಗೆ ನಾಪತ್ತೆಯಾಗಿದ್ರುದರು ನಾಪತ್ತೆಯಾದವರನ್ನು ಬಂಟ್ವಾಳ , ಬಾಳ್ತಿಲ ಶಂಭೂರು ಚರ್ಚ್ ಬಳಿಯ ನಿವಾಸಿ ಗೋಪಾಲಕೃಷ್ಣ ರೈ(45), ಹಾಗೂ ಅವರ ಪುತ್ರ ಅನೀಶ್ ರೈ(6) ಎಂದು ಗುರುತಿಸಲಾಗಿತ್ತು. ಪ್ರಸ್ತುತ ಮುಂಬೈಯಲ್ಲಿ ನೆಲೆಸಿರುವ ಗೋಪಾಲಕೃಷ್ಣ ರೈ ಅವರು ಕಳೆದ ಎರಡು ದಿನಗಳ ಹಿಂದೆ ಮುಂಬಯಿಯಿಂದ ಕೊಣಾಜೆಯ ಪಾವೂರಿಗೆ ಕುಟುಂಬದವರ ಸಂಬಂಧಿಕರ ಮನೆಗೆ ನೇಮಕ್ಕೆ ಬಂದಿದ್ದರು. ಭಾನುವಾರ ನಸುಕಿನ ಜಾವ 4.30 ರ ವೇಳೆ ಮಗ ಅನೀಶ್ ರೈ ರೊಂದಿಗೆ ಗೋಪಾಕೃಷ್ಣ ರೈ ಅವರು ಕಾರು ಚಲಾಯಿಸಿ ಮನೆಯಿಂದ ಹೊರಗೆ ಹೊರಟಿದ್ದರು ಎನ್ನಲಾಗಿದ್ದು, ಈ ಕಾರು ಭಾನುವಾರ ಬೆಳಗ್ಗಿನ ಜಾವ ಉಳ್ಳಾಲ ನೇತ್ರಾವತಿ ಸೇತುವೆ ಬಳಿ ಪತ್ತೆಯಾಗಿತ್ತು.ನೇತ್ರಾವತಿ ಸೇತುವೆಯಲ್ಲಿ ಕಾರು ನಿಂತಿದ್ದು ವಾಹನದಲ್ಲಿ ಯಾರು ಇಲ್ಲದ್ದು ನೋಡಿ ಸಾರ್ವಜನಿಕರು ಪೋಲಿಸರಿಗೆ ಮಾಹಿತಿಯನ್ನು ನೀಡಿದ್ದರು.
‘ತನಗೆ ಒಂದು ವಾರದಿಂದ ನಿದ್ರೆ ಬರುತ್ತಿಲ್ಲ. ನಾನೊಬ್ಬ ಮಗನನ್ನು ಕೊಲ್ಲುವ ಮಹಾ ಪಾಪಿ. ಇದಕ್ಕಾಗಿ ನನ್ನ ಕ್ಷಮಿಸಿರಿ.ಪತ್ನಿ ಅಶ್ವಿನಿ ರೈ ನಿನ್ನ ಬಿಟ್ಟು ಇಬ್ಬರೂ ದೂರ ಹೋಗುತ್ತಿರುವುದಾಗಿ’ ಡೆತ್ ನೋಟ್ ಬರೆದಿಟ್ಟದ್ದೂ ಪತ್ತೆಯಾಗಿತ್ತು. ಮಂಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತದೇಹಕ್ಕಾಗಿ ರಾತ್ರಿ ಹಗಲು ಶೋಧಕಾರ್ಯ ನಡೆಸಿದ್ದರು. ಆದರೂ ಯಾವುದೇ ಕುರುಹುಗಳು ಪತ್ತೆಯಾಗಿರಲಿಲ್ಲ. ಇದೇಗ ಕಟಪ್ಪಾಡಿಯಲ್ಲಿಂದು ಸಿಕ್ಕಿದ ದೇಹಗಳು ಇವರದ್ದೇ ಎಂಬ ಅನುಮಾನ ಬಲವಾಗಿದ್ದು, ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಪರಿಶೀಲನೆ ಆರಂಭಿಸಿದ್ದಾರೆ.
ಬಂಟ್ವಾಳ: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಹಾಗೂ ಪ್ರಾದೇಶಿಕ ಘಟಕಗಳ ಸಹಯೋಗ ದೊಂದಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಮತ್ತು ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕ ಡಾ. ವೈ.ಭರತ್ ಶೆಟ್ಟಿ ಅವರ ನೇತೃತ್ವದಲ್ಲಿ ‘ಯಕ್ಷದ್ರುವ ವಿದ್ಯಾರ್ಥಿ ಸಮ್ಮಿಲನ-2025’ ಕಾರ್ಯಕ್ರಮವು ಬುಧವಾರ ಗಂಜಿಮಠದ ಒಡ್ಡೂರು ಫಾರ್ಮ್ ಹೌಸ್‌ನಲ್ಲಿ ನಡೆಯಿತು.
ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಡಾ.ಭರತ್ ಶೆಟ್ಟಿ, ದೀಪಬೆಳಗಿಸಿ ಉದ್ಘಾಟನೆ ನೆರವೇರಿಸಿದರು. ಯಕ್ಷಧ್ರುವ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ, ಪ್ರಮುಖರಾದ ಚಂದ್ರಹಾಸ ಶೆಟ್ಟಿ ರಂಗೋಲಿ, ದೇವದಾಸ್ ಶೆಟ್ಟಿ, ಸರಪಾಡಿ ಅಶೋಕ್ ಶೆಟ್ಟಿ, ಜಗನ್ನಾಥ ಶೆಟ್ಟಿ ಬಾಳ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.
ಯಕ್ಷಧ್ರುವ – ಯಕ್ಷಶಿಕ್ಷಣದಲ್ಲಿ ತರಬೇತಿ ಪಡೆದ ಸುಮಾರು 1000 ಕ್ಕೂ ಅಧಿಕ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ರಂಗ ಪ್ರವೇಶ ಮಾಡಿದರು. ಬಂಟ್ವಾಳ ಕ್ಷೇತ್ರದ 10 ಹಾಗೂ ಮಂಗಳೂರು ನಗರ ಉತ್ತರ ಕ್ಷೇತ್ರದ 10 ಸರಕಾರಿ ಶಾಲೆಯ ವಿದ್ಯಾರ್ಥಿಗಳು ಪ್ರತ್ಯೇಕ ಪ್ರತ್ಯೇಕವಾದ ಎರಡು ರಂಗಸ್ಥಳದಲ್ಲಿ ತಮ್ಮ ಪ್ರದರ್ಶನ ನೀಡಿದರು.
ಕೀರ್ತಿಶೇಷ ಮಿಜಾರುಗುತ್ತು ಆನಂದ ಆಳ್ವ ವೇದಿಕೆಯಲ್ಲಿ ಬಂಟ್ವಾಳ ಕ್ಷೇತ್ರದ 10 ಶಾಲೆಯ ವಿದ್ಯಾರ್ಥಿಗಳು ಹಾಗೂ ಕೀರ್ತಿಶೇಷ ಡಾ. ವೈ. ಚಂದ್ರಶೇಖರ ಶೆಟ್ಟಿ ವೇದಿಕೆಯಲ್ಲಿ ಉತ್ತರ ಕ್ಷೇತ್ರದ 11 ಶಾಲೆಗಳ ವಿದ್ಯಾರ್ಥಿಗಳು ರಂಗಪ್ರವೇಶ ಮಾಡಿದರು.
ಮಂಗಳೂರು: ನಗರದ ಹೊರವಲಯದ ಸುರತ್ಕಲ್ ಬಳಿ ಇರುವ ಹೊಸಬೆಟ್ಟು ಬೀಚ್ ನ ನಿರ್ಮಾಣ ಹಂತದ ಜೆಟ್ಟಿ ಬಳಿ ಇರುವ ಬೀಚ್ ಗೆ ಪ್ರವಾಸಕ್ಕೆ ಬಂದ ಮೂವರು ಯುವಕರು ನೀರುಪಾಲಾಗಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಉಪ್ಪರಿಗೇನಹಳ್ಳಿ ನಿವಾಸಿ ಮಂಜುನಾಥ್ ಎಸ್(31), ಶಿವಮೊಗ್ಗ ಜಿಲ್ಲೆಯ ಶಿವಕುಮಾರ್, ಬೆಂಗಳೂರು ಜೆಪಿ ನಗರ ನಿವಾಸಿ ಸತ್ಯವೇಲು(30) ಹಾಗೂ ಬೀದರ್ ಜಿಲ್ಲೆ ಹಂಗಾರಗಾ ನಿವಾಸಿ ಪರಮೇಶ್ವರ್ (30 ) ಎಂಬವರು ಬೀಚಿಗೆ ತಿರುಗಾಡಲು ಬಂದಿದ್ದು, ಸಮುದ್ರದಲ್ಲಿ ಈಜಾಟಕ್ಕೆ ಇಳಿದ ವೇಳೆ ಈ ದುರಂತ ಸಂಭವಿಸಿದೆ.
ನಾಲ್ವರು ನೀರಿನಲ್ಲಿ ಮುಳುಗುತ್ತಿದ್ದ ವೇಳೆ ಸ್ಥಳೀಯ ಮೀನುಗಾರರು ಹಂಗಾರಗಾ ನಿವಾಸಿ ವಿಶ್ವಂಬರ್ ಎಂಬವರ ಪುತ್ರ ಪರಮೇಶ್ವರ(30) ನನ್ನು ರಕ್ಷಿಸಿದ್ದಾರೆ. ಮೃತಪಟ್ಟವರನ್ನು ಚಿತ್ರದುರ್ಗ ಜಿಲ್ಲೆಯ ಮಂಜುನಾಥ ಎಸ್ ಮತ್ತು ಶಿವಮೊಗ್ಗದ ಶಿವಕುಮಾರ್ ಎಂದು ಗುರುತಿಸಲಾಗಿದೆ.
ಚಿತ್ರದುರ್ಗದ ಮಂಜುನಾಥ ನೀರುಪಾಲಾಗಿದ್ದು, ದೇಹಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ. ಸುರತ್ಕಲ್ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಎರಡು ಶವಗಳನ್ನು ನಗರದ ಎ.ಜೆ.ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದ್ದು, ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು/ಒಟ್ಟಾವ : ಜಸ್ಟಿನ್ ಟ್ರುಡೊ ರಾಜೀನಾಮೆಯ ನಂತರ, ಭಾರತೀಯ ಮೂಲದ ಅನಿತಾ ಆನಂದ್ ಕೆನಡಾದ ಮುಂದಿನ ಪ್ರಧಾನ ಮಂತ್ರಿಯಾಗುವ ರೇಸ್ ನಲ್ಲಿದ್ದಾರೆ. ಆನಂದ್ ಅವರಿಗೆ ಭಾರತದೊಂದಿಗೆ ಆಳವಾದ ಸಂಬಂಧವಿದೆ.
ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಸುಮಾರು ಒಂದು ದಶಕದ ಆಡಳಿತ ನಂತರ ಸೋಮವಾರ (ಜ.6) ರಾಜೀನಾಮೆ ನೀಡಿದರು. ಇದರಿಂದಾಗಿ ರಾಜಕೀಯ ವಲಯದಲ್ಲಿ ಸಂಚಲನ ಜೋರಾಗಿದೆ. ಅವರ ಉತ್ತರಾಧಿಕಾರಿ ಬಗ್ಗೆ ಚರ್ಚೆ ಶುರುವಾಗಿದೆ.
ಕೆನಡಾದ ಮುಂದಿನ ಪ್ರಧಾನಿ ರೇಸ್ ನಲ್ಲಿ ಅನಿತಾ ಆನಂದ್, ಕ್ರಿಸ್ಟಿನಾ ಫ್ರೀಲ್ಯಾಂಡ್ ಮತ್ತು ಮಾರ್ಕ್ ಕೆರ್ನಿ ಅವರಂತಹ ಪ್ರಮುಖ ಹೆಸರುಗಳು ಹೊರಹೊಮ್ಮುತ್ತಿವೆ. ಇವರಲ್ಲಿ ಭಾರತೀಯ ಮೂಲದ ನಾಯಕಿ ಅನಿತಾ ಆನಂದ್ ಅವರ ಪರಿಣಾಮಕಾರಿ ಆಡಳಿತ ಮತ್ತು ಸಾರ್ವಜನಿಕ ಸೇವೆಯ ಉತ್ತಮ ದಾಖಲೆಯಿಂದಾಗಿ ಪ್ರಬಲ ಸ್ಪರ್ಧಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ.
ಹಲವಾರು ಖಾತೆ ನಿರ್ವಹಣೆ
2019ರಿಂದ ಸಂಸದರಾಗಿರುವ ಅನಿತಾ ಆನಂದ್ ಕೆನಡಾದ ಲಿಬರಲ್ ಪಾರ್ಟಿಯ ಹಿರಿಯ ಸದಸ್ಯೆ. ಸಾರ್ವಜನಿಕ ಸೇವೆ ಮತ್ತು ನೇಮಕಾತಿ, ರಾಷ್ಟ್ರೀಯ ರಕ್ಷಣೆ ಖಾತೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ ಅವರು ಖಜಾನೆ ಮಂಡಳಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. 2024ರಿಂದ ಅವರು ಸಾರಿಗೆ ಮತ್ತು ಆಂತರಿಕ ವ್ಯಾಪಾರ ಖಾತೆ ಸಚಿವರಾಗಿದ್ದಾರೆ.
ಭಾರತದಿಂದ ಕೆನಾಡಾಗೆ ವಲಸೆ
ಅನಿತಾ ಆನಂದ್ ರವರ ತಂದೆ ಎಸ್.ವಿ.ಆನಂದ್ ತಮಿಳುನಾಡಿನವರು, ತಾಯಿ ಸರೋಜ್ ಡಿ ರಾಮ್ ಪಂಜಾಬಿನವರು. ಇಬ್ಬರು ವೈದ್ಯರಾಗಿದ್ದರು. 1960ರ ದಶಕದ ಆರಂಭದಲ್ಲಿ ಭಾರತದಿಂದ ಕೆನಡಾಗೆ ವಲಸೆ ಬಂದಿದ್ದರು. ವೈದ್ಯ ದಂಪತಿಯ ಪುತ್ರಿಯಾಗಿ 1967ರ ಮೇ 20ರಂದು ಜನಿಸಿದ ಅನಿತಾ, ವಿದ್ಯಾರ್ಥಿ ಜೀವನದಿಂದಲೂ ತಮ್ಮ ಪೋಷಕರಿಂದ ಮೌಲ್ಯಗಳನ್ನು ರೂಡಿಸಿಕೊಂಡಿದ್ದರು ಮತ್ತು ವೃತ್ತಿಸಂಹಿತೆಯನ್ನು ಅಳವಡಿಸಿಕೊಂಡಿದ್ದರು.
ಅನಿತಾರ ವಿದ್ಯಾಭ್ಯಾಸ
57 ವರ್ಷದ ಅನಿತಾ ಆನಂದ್ ಪ್ರಸ್ತುತ ಕೆನಡಾ ದೇಶದ ಸಾರಿಗೆ ಮತ್ತು ಆಂತರಿಕ ವ್ಯಾಪಾರ ಖಾತೆ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಶೈಕ್ಷಣಿಕ ಮತ್ತು ರಾಜಕೀಯ ಹಿನ್ನೆಲೆಯಿಂದಾಗಿ, ಅವರು ಪ್ರಮುಖ ರಾಜಕೀಯ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ. ಅನಿತಾ ಆನಂದ್ ಅವರು ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಿಂದ ಬ್ಯಾಚುಲರ್ ಆಫ್ ಜ್ಯೂರಿಸ್ ಪ್ರೂಡೆನ್ಸ್, ಡಾಲ್ ಹೌಸಿ ಮತ್ತು ಟೊರೊಂಟೊ ವಿಶ್ವವಿದ್ಯಾಲಯದಿಂದ ಬ್ಯಾಚುಲರ್ ಆಫ್ ಲಾಸ್ ಅನ್ನು ಹೊಂದಿದ್ದಾರೆ.
ಹೆಚ್ಚುವರಿಯಾಗಿ, ಅವರು ಯೇಲ್, ಕ್ವೀನ್ಸ್ ವಿಶ್ವವಿದ್ಯಾಲಯ ಮತ್ತು ವೆಸ್ಟರ್ಸ್ ವಿಶ್ವವಿದ್ಯಾಲಯದಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಕಲಿಸಿದ್ದಾರೆ. ರಾಜಕೀಯಕ್ಕೆ ಪ್ರವೇಶಿಸುವ ಮೊದಲು, ಅವರು ಟೊರೊಂಟೊ ವಿಶ್ವವಿದ್ಯಾಲಯದಲ್ಲಿ ಕಾನೂನು ಪ್ರಾಧ್ಯಾಪಕರಾಗಿದ್ದರು.
ಸ್ಕೋಟಿಯಾದಿಂದ ಒಂಟಾರಿಯೊಗೆ ಸ್ಥಳಾಂತರ
ಅನಿತಾ ಅವರು ಓಕ್ ವಿಲ್ಲೆಯ ಸಂಸದೆಯಾಗಿದ್ದರು. ನೋವಾ ಸ್ಕೋಟಿಯಾದಲ್ಲಿ ಜನಿಸಿದ್ದ ಅನಿತಾ ಆನಂದ್, 1985ರಲ್ಲಿ ಒಂಟಾರಿಯೊಗೆ ಸ್ಥಳಾಂತರಗೊಂಡಿದ್ದರು. ಅನಿತಾ ಮತ್ತು ಪತಿ ಜಾನ್ ಅವರೊಂದಿಗೆ ನಾಲ್ವರು ಮಕ್ಕಳನ್ನು ಬೆಳೆಸಿದರು.
ವೃದ್ದಿಸುತ್ತಾ ಎರಡು ದೇಶಗಳ ಸಂಬಂಧ
ಕೆನಡಾದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯ ಮೂಲದ ಜನರಿದ್ದಾರೆ. ಈ ಕಾರಣಕ್ಕಾಗಿ, ಭಾರತೀಯ ಮೂಲದ ವ್ಯಕ್ತಿ ಪ್ರಧಾನಿಯಾಗುವುದು ಭಾರತಕ್ಕೆ ಒಳ್ಳೆಯ ಸಂಕೇತಗಳನ್ನು ನೀಡಬಹುದು. ಈ ಹಿಂದೆ, ಟ್ರುಡೊ ಅವರ ಆಳ್ವಿಕೆಯಲ್ಲಿ, ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಬಗ್ಗೆ ಭಾರತದ ಮೇಲೆ ಸುಳ್ಳು ಆರೋಪ ಹೊರಿಸಲಾಯಿತು, ನಂತರ ಉಭಯ ದೇಶಗಳ ನಡುವಿನ ಸಂಬಂಧಗಳು ಹದಗೆಟ್ಟವು.
ಈಗ ಭಾರತ ಮೂಲದವರೇ ಆದ ಅನಿತಾ ಆನಂದ್ ರವರು ಕೆನಡಾ ದೇಶದ ಪ್ರಧಾನಿಯಾದರೆ ಭಾರತ ಮತ್ತು ಕೆನಡಾ ದೇಶಗಳ ಸಂಬಂಧ ಇನ್ನಷ್ಟು ವೃದ್ದಿಯಾಗಲಿದೆ.