DAKSHINA KANNADA
Ullala: ಮುನ್ನೂರು ಗ್ರಾಮ ಪಂಚಾಯತ್ ಸದಸ್ಯ ಭುಜಂಗ ರೈ ನಿಧನ..!
Published
1 year agoon
By
Adminಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮ ಪಂಚಾಯತ್ ಸದಸ್ಯ, ಸಿಪಿಐಎಂ ಮುಖಂಡ ಅಸೌಖ್ಯದಿಂದ ಜು.19ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.
ಉಳ್ಳಾಲ: ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮ ಪಂಚಾಯತ್ ಸದಸ್ಯ, ಸಿಪಿಐಎಂ ಮುಖಂಡ ಅಸೌಖ್ಯದಿಂದ ಜು.19ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.
ಕುತ್ತಾರು ಮದಕ ನಿವಾಸಿ ಭುಜಂಗ ರೈ (74) ಮೃತರು.
ಮೂಲತ: ಕಾಸರಗೋಡು ನಿವಾಸಿಯಾಗಿದ್ದ ಅವರು ಕುತ್ತಾರು ಮದಕಕ್ಕೆ 30 ವರ್ಷಗಳ ಹಿಂದೆ ಬಂದಿದ್ದರು.
ರಿಕ್ಷಾ ಚಾಲಕರಾಗಿ ವೃತ್ತಿ ನಿರ್ವಹಿಸುತ್ತಿದ್ದರು. ಸಿಪಿಐಎಂ ಪಕ್ಷದ ಚಟುವಟಿಕೆಗಳು ಹಾಗೂ ಸಾಮಾಜಿಕ ಸೇವೆಯಲ್ಲಿ ಮುಂಚೂಣಿಯಲ್ಲಿದ್ದರು.
ಯಕ್ಷಗಾನ ಕಲಾವಿದರೂ ಆಗಿದ್ದ ಅವರು ಆಂಗ್ಲ ಭಾಷೆಯಲ್ಲಿ ಪರಿಣತರಾಗಿದ್ದರು.
1999 ರಲ್ಲಿ ಮುನ್ನೂರು ಗ್ರಾಮ ಪಂಚಾಯತಿನ ಸಂತೋಷನಗರ ವಾರ್ಡಿನಿಂದ ಸ್ಪರ್ಧಿಸಿ ಸದಸ್ಯರಾಗಿದ್ದರು.
ಬಳಿಕ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಿ 4 ನೇ ವಾರ್ಡಿನಿಂದ ಆಯ್ಕೆಯಾಗಿದ್ದರು.
ಕಾಂಗ್ರೆಸ್ ಅಭ್ಯರ್ಥಿಗಳೇ ತಾಲೂಕು ಪಂಚಾಯತ್ ಸದಸ್ಯರಾಗುತ್ತಿದ್ದ ಸಂದರ್ಭ ಅಂಬ್ಲಮೊಗರು- ಮುನ್ನೂರು ಗ್ರಾಮದಿಂದ 1995ರ ಅವಧಿಯಲ್ಲಿ ಪ್ರಥಮವಾಗಿ ಸ್ಪರ್ಧಿಸಿ ಎದುರಾಳಿ ಅಭ್ಯರ್ಥಿಯಿಂದ ಕೇವಲ 7 ಮತಗಳ ಅಂತರದಲ್ಲಿ ಪರಾಜಿತರಾಗಿದ್ದರು.
ಕಳೆದ ಐದು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.
ಜ್ಯೋತಿಷ್ಯ ಶಾಸ್ತ್ರವನ್ನು ಮನೆಯಲ್ಲಿ ನಡೆಸುತ್ತಿದ್ದರು. ಪುತ್ರ 1ರ ಹರೆಯದವನಾಗಿದ್ದ ಸಂದರ್ಭದಲ್ಲಿ ಪತ್ನಿಯನ್ನು ಅಗಲಿದ್ದ ಅವರು ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.
ಇಂದು ನಡೆಯ ಬೇಕಾಗಿದ್ದ ಮುನ್ನೂರು ಗ್ರಾಮ ಪಂಚಾಯತ್ ನ ಮಾಸಿಕ ಸಾಮಾನ್ಯ ಸಭೆಯನ್ನು ಮೃತರ ಗೌರವಾರ್ಥ ರದ್ದು ಪಡಿಸಲಾಗಿದೆ.
BIG BOSS
ಮಂಗಳೂರು: ಪತಿಯ ಅ*ನೈತಿಕ ಸಂಬಂಧ; ತ್ರಿವಳಿ ತಲಾಕ್ ಮೂಲಕ ಪತ್ನಿಗೆ ವಿಚ್ಚೇದನ
Published
37 minutes agoon
23/11/2024ಮಂಗಳೂರು: ತಂದೆಯನ್ನು ಮನೆಗೆ ಕರೆದು ತಂದೆಯ ಎದುರಿನಲ್ಲಿ ಪತಿ ನನಗೆ ತ್ರಿವಳಿ ತಲಾಕ್ ನೀಡಿದ್ದಾರೆ ಎಂದು ಮಹಿಳೆಯೊಬ್ಬರು ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ.
ಉಳ್ಳಾಲದ ಸಮ್ಮರ್ ಸ್ಯಾಂಡ್ ಬಳಿಯ ನಿವಾಸಿಯಾಗಿರುವ ಮಹಮ್ಮದ್ ದಿಲ್ಫಾಜ್ ಎಂಬವರ ವಿರುದ್ಧ ಈ ದೂರು ದಾಖಲಾಗಿದೆ. 2019 ರಲ್ಲಿ ಪ್ರೀತಿಸಿ ಮದುವೆಯಾಗಿದ್ದು, ಕೆಲ ಕಾಲ ಚೆನ್ನಾಗಿ ಸಂಸಾರ ಕೂಡಾ ನಡೆಸಿ ಬಳಿಕ ಪತಿ ಪರ ಸ್ತ್ರೀಯ ಜೊತೆ ಸಂಬಂಧ ಬೆಳೆಸಿದ್ದಾಗಿ ಆರೋಪಿಸಲಾಗಿದೆ.
ಈ ವಿಚಾರವನ್ನು ಪ್ರಶ್ನೆ ಮಾಡಿದ ಪತ್ನಿಗೆ ದೈಹಿಕ ಹಿಂ*ಸೆ ನೀಡಲಾಗಿದ್ದು, ನಿರಂತರ ಕಿ*ರುಕುಳ ನೀಡಲಾದ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬಗ್ಗೆ ಎರಡೂ ಮನೆಯವರೂ ರಾಜಿ ಪಂಚಾಯತಿ ನಡೆಸಿದ್ದರೂ ಸಂಸಾರ ಸರಿ ಹೋಗಿರಲಿಲ್ಲ. ಇದೀಗ ಹಣಕ್ಕಾಗಿ ಬೇಡಿಕೆ ಇಟ್ಟು ತಂದೆಯನ್ನು ಮನೆಗೆ ಕರೆಸಿ ಅವರ ಸಮ್ಮುಖದಲ್ಲಿ ಮೂರ ಬಾರಿ ತಲಾಕ್ ಹೇಳಿ ತವರು ಮನೆಗೆ ಕಳುಹಿಸಲಾಗಿದೆ ಎಂದು ನೊಂದ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಎಫ್‌ಐಆರ್ ದಾಖಲಿಸಿಕೊಂಡಿರುವ ಪಾಂಡೇಶ್ವರ ಮಹಿಳಾ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ. ತ್ರಿವಳಿ ತಲಾಕ್ ಕಾನೂನನ್ನು ಕೇಂದ್ರ ಸರ್ಕಾರ ರದ್ದು ಮಾಡಿರುವುದರಿಂದ ಈ ದೂರಿಗೆ ಪೊಲೀಸರು ಹೆಚ್ಚಿನ ಮಾನ್ಯತೆ ನೀಡಿ ವಿಚಾರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.
BIG BOSS
ಮಂಗಳೂರು: ಕುಖ್ಯಾತ ರೌಡಿಶೀಟರ್ ದಾವೂದ್ ಸಂಚು ರೂಪಿಸುತ್ತಿದ್ದಾಗಲೇ ಅರೆಸ್ಟ್
Published
3 hours agoon
23/11/2024ಮಂಗಳೂರು: ಕುಖ್ಯಾತ ರೌಡಿಶೀಟರ್ ದಾವೂದ್ (43) ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರ ತಂಡವು ನವೆಂಬರ್ 22ರ ಸಂಜೆ ಬಂಧಿಸಿದೆ.
ಆರೋಪಿ ದಾವೂದ್ ಉಳ್ಳಾಲದ ಧರ್ಮನಗರ ನಿವಾಸಿ. ಅವನು ಮಂಗಳೂರಿನ ತಲಪಾಡಿ-ದೇವಿಪುರ ರಸ್ತೆ ಬಳಿ ಪ್ರತಿಸ್ಪರ್ಧಿ ಗ್ಯಾಂಗ್ ಸದಸ್ಯರ ವಿರುದ್ಧ ಅಪರಾಧ ಎಸಗಲು ಸಂಚು ರೂಪಿಸುತ್ತಿದ್ದಾಗಲೇ ಬಂಧಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಪಿಎಸ್ ಐ ನರೇಂದ್ರ ನೇತೃತ್ವದ ಸಿಸಿಬಿ ತಂಡ ರೌಡಿಶೀಟರ್‌ನನ್ನು ಬಂಧಿಸಲು ಮುಂದಾಗಿದೆ.
ಕಾರ್ಯಾಚರಣೆ ವೇಳೆ ದಾವೂದ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಅಧಿಕಾರಿಗಳ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದು, ಪಿಎಸ್ ಐ ನರೇಂದ್ರ ಮತ್ತು ಇತರ ಸಿಬ್ಬಂದಿಗೆ ಗಾಯಗಳಾಗಿವೆ. ದಾಳಿಯ ಹೊರತಾಗಿಯೂ ಪೊಲೀಸ್ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಮುಂದಿನ ಕ್ರಮಕ್ಕಾಗಿ ದಾವುದ್‌ನನ್ನು ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
ದಾವೂದ್ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿಎಸ್ ಐ ನರೇಂದ್ರ ಅವರ ದೂರಿನ ಮೇರೆಗೆ ಆರೋಪಿ ದಾವುದ್ ವಿರುದ್ಧ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ. ದಾವೂದ್ ಕೊಲೆ ಸೇರಿದಂತೆ ಹಲವು ಅಪರಾಧಗಳಲ್ಲಿ ಭಾಗಿಯಾಗಿರುತ್ತಾನೆ. ಉಳ್ಳಾಲ, ಮಂಗಳೂರು ದಕ್ಷಿಣ ಮತ್ತು ಬಜ್ಪೆ ಸೇರಿದಂತೆ ಇತರ ಸ್ಥಳಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದಾಗಿ ವರದಿಯಾಗಿದೆ .
ಕೊಣಾಜೆ: ಬಾಲಕಿಗೆ ಕಿ*ರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಪ್ಪತ್ತರ ಹರೆಯದ ವೃದ್ಧನನ್ನು ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಆರೋಪಿಯನ್ನು ಅಬ್ದುಲ್ಲಾ (70) ಎಂದು ಗುರುತಿಸಲಾಗಿದೆ.
ಉಳ್ಳಾಲ ತಾಲೂಕು ಬಾಳೆಪುಣಿ ಗ್ರಾಮದಲ್ಲಿ ಘಟನೆ ನಡೆದಿದೆ. 3 ವರ್ಷದ ಬಾಲಕಿ ಆಟವಾಡುತ್ತಿದ್ದಾಗ ಆರೋಪಿ ಲೈಂ*ಗಿಕ ಕಿ*ರುಕುಳ ನೀಡಿದ್ದ ಎಂದು ಆರೋಪಿಸಲಾಗಿದೆ. ಬಾಲಕಿಯ ಅಸ್ವಸ್ಥತೆಯನ್ನು ಗಮನಿಸಿದ ತಾಯಿ ವೈದ್ಯಕೀಯ ತಪಾಸಣೆ ನಡೆಸಿದ್ದು ಬಳಿಕ ಕೊಣಾಜೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಈ ಬಗ್ಗೆ ಕೊಣಾಜೆ ಪೊಲೀಸರು ಆರೋಪಿ ವಿರುದ್ಧ ಪೋ*ಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
LATEST NEWS
ಕರ್ನಾಟಕ ಉಪಚುನಾವಣೆ : ‘ಕೈ’ ಹಿಡಿದ ಮತದಾರ…ಕಮಲಕ್ಕೆ ಶಾಕ್
ಮಹಾರಾಷ್ಟ್ರದಲ್ಲಿ ಮಹಾಯುತಿಗೆ 200+ ಕ್ಷೇತ್ರಗಳಲ್ಲಿ ಮುನ್ನಡೆ
ಬಾಗಲಕೋಟೆ ಹೇರ್ ಡ್ರೈಯರ್ ಸ್ಫೋಟಕ್ಕೆ ಬಿಗ್ ಟ್ವಿಸ್ಟ್: ಪ್ರಕರಣದ ಹಿಂದಿದೆ ಪ್ರೇಮ ಪುರಾಣ
ಪತಿ ಮೇಲೆ ಅನುಮಾನ; ಇಬ್ಬರು ಮಕ್ಕಳನ್ನು ಕೊಂ*ದ ಪಾಪಿ ತಾಯಿ!
ನೀರಸ ಪ್ರದರ್ಶನ ಮುಂದುವರಿಸಿದ ಭಾರತ: ವಿವದಾತ್ಮಕ ತೀರ್ಪಿಗೆ ರಾಹುಲ್ ಬಲಿ !
ನ್ಯೂ ಇಯರ್ ನಶೆಗೆ ಸಿಸಿಬಿ ಬ್ರೇಕ್..! 6 ಕೋಟಿ ಮೌಲ್ಯದ ಡ್ರ*ಗ್ಸ್ ಜಪ್ತಿ..!
Trending
- LATEST NEWS3 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS5 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- LIFE STYLE AND FASHION2 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ
- Baindooru22 hours ago
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!