Connect with us

DAKSHINA KANNADA

 ಉಳ್ಳಾಲ : ವಿಷಕಾರಿ ಸೊಪ್ಪು ತಿಂದು ನಾಲ್ಕು ಜಾನುವಾರು ಗಂಭೀರ, ಒಂದು ಸಾವು..!

Published

on

ಸೊಪ್ಪು ತಿಂದ ಎರಡು ಹಸುಗಳು, ಮೂರು ಕರುಗಳು ಅಸೌಖ್ಯಕ್ಕೀಡಾಗಿ ಗಂಭೀರ ಸ್ಥಿತಿ ತಲುಪಿದ್ದು, ಇದರಲ್ಲಿ ಒಂದು ಹಸು ಸಾವನ್ನಪ್ಪಿ ಉಳಿದ ನಾಲ್ಕು ಜಾನುವಾರುಗಳು ಗಂಭೀರ ಸ್ಥಿತಿಗೆ ತಲುಪಿದ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಸೋಮೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಂಡೋಳಿ ಎಂಬಲ್ಲಿ ಸಂಭವಿಸಿದೆ.

ಉಳ್ಳಾಲ: ಸೊಪ್ಪು ತಿಂದ ಎರಡು ಹಸುಗಳು, ಮೂರು ಕರುಗಳು ಅಸೌಖ್ಯಕ್ಕೀಡಾಗಿ ಗಂಭೀರ ಸ್ಥಿತಿ ತಲುಪಿದ್ದು, ಇದರಲ್ಲಿ ಒಂದು ಹಸು ಸಾವನ್ನಪ್ಪಿ ಉಳಿದ ನಾಲ್ಕು ಜಾನುವಾರುಗಳು ಗಂಭೀರ ಸ್ಥಿತಿಗೆ ತಲುಪಿದ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಸೋಮೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಂಡೋಳಿ ಎಂಬಲ್ಲಿ ಸಂಭವಿಸಿದೆ. 

ಕೋಟೆಕಾರು ಪಶು ವೈದ್ಯಾಧಿಕಾರಿ ಡಾ. ಗಜೇಂದ್ರ ಕುಮಾರ್ ಪಿ.ಕೆ ನೇತೃತ್ವದಲ್ಲಿ ಚಿಕಿತ್ಸೆ ನಡೆಸಲಾಗುತ್ತಿದೆ.

ಕೃಷಿಕ ಸಂಜೀವ ಪೂಜಾರಿ ಎಂಬವರಿಗೆ ಸೇರಿದ ಮನೆಯಲ್ಲಿ ಘಟನೆ ಸಂಭವಿಸಿದೆ.

ಮಾ.8 ರ ಮಧ್ಯಾಹ್ನ ಮನೆಯವರು ಕರಿ ಬಸ್ರಿ ತಳಿಯ ಸೊಪ್ಪು ಜಾನುವಾರುಗಳು ಮಲಗುವ ಬೆಡ್ಡಿಂಗ್ ಗೆಂದು ಹಾಕಲಾಗಿದೆ.

ಆದರೆ ಹಸುಗಳೆಲ್ಲಾ ಅದನ್ನೇ ತಿಂದ ನಂತರ ಅಸ್ವಸ್ಥತೆಗೆ ಒಳಗಾಗಿದೆ. ಸಂಜೆ ನಂತರ ಹಸುಗಳು ಕೆಲವು ಮಲಗಿದ್ದಲ್ಲೇ ಬಿದ್ದರೆ, ಇನ್ನುಳಿದ ಕಾಲುಗಳನ್ನು ನೆಲಕ್ಕೆ ಹೊಡೆಯುವ ರೀತಿಯಲ್ಲಿ ವರ್ತಿಸುತಿತ್ತು.

ಇದನ್ನು ಗಮನಿಸಿದ ಮನೆಮಂದಿ ಕೋಟೆಕಾರು ಪಶುವೈದ್ಯರಿಗೆ ದೂರವಾಣಿ ಮೂಲಕ ತಿಳಿಸಿದ್ದರು . ಅವರು ಸಹಾಯಕ ಆಯುಕ್ತರ ತುರ್ತು ಸಭೆಯಲ್ಲಿದ್ದ ಕಾರಣ ಸಹಾಯಕರನ್ನು ಸ್ಥಳಕ್ಕೆ ಕಳುಹಿಸಿ ಪ್ರಾಥಮಿಕ ಚಿಕಿತ್ಸೆಯನ್ನು ಕೊಡಿಸಿದ್ದರು.

ಇಂದು ಮುಂಜಾನೆ ವೇಳೆಗೆ ತಿಂದ ಎಲೆಗಳ ವಿಷಾಹಾರ ಹಸುವಿನ ಇಡಿ ದೇಹಕ್ಕೆ ಪಸರಿ ನಸುಕಿನ ಜಾವ ಒಂದು ಹಸು ಸಾವನ್ನಪ್ಪಿತ್ತು.

ಇನ್ನುಳಿದ ಹಸುಗಳು ಗಂಭೀರ ಸ್ಥಿತಿಗೆ ತಲುಪಿದ್ದವು. ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಮನೆಮುಂದೆ ಜಮಾಯಿಸಿದ್ದು, ಪಶುವೈದ್ಯರ ವಿರುದ್ಧ ಅಸಮಧಾನ ವ್ಯಕ್ತಪಡಿಸಿದರು.

ಬಳಿಕ ಸ್ಥಳಕ್ಕಾಗಮಿಸಿದ ಕೋಟೆಕಾರು ಪಶು ವೈದ್ಯಾಧಿಕಾರಿ ಡಾ. ಚಂದ್ರಹಾಸ್ ನೇತೃತ್ವದಲ್ಲಿ ಚಿಕಿತ್ಸೆಯನ್ನು ಆರಂಭಿಸಲಾಯಿತು.

ತಲಪಾಡಿ ಪಶು ವೈದ್ಯಾಧಿಕಾರಿ ಡಾ. ರಚನಾ ಅವರೂ ಸ್ಥಳಕ್ಕಾಗಮಿಸಿ ಗಂಭೀರ ಸ್ಥಿತಿಯಲ್ಲಿರುವ ಜಾನುವಾರುಗಳಿಗೆ ಚಿಕಿತ್ಸೆ ನಡೆಸುತ್ತಿದ್ದಾರೆ.

ಘಟನೆ  ಏನು..?
ಜಾನುವಾರು ಮಲಗುವ ಹಟ್ಟಿಗೆ ಗೋಳಿ ಸೊಪ್ಪು (ಕರಿ ಬಸ್ರಿ) ಬೆಡಿಂಗ್ ಹಾಕಲಾಗಿದೆ.

ಜಾನುವಾರುಗಳು ಆಕಸ್ಮಿಕವಾಗಿ ಅದೇ ಸೊಪ್ಪುಗಳನ್ನು ತಿಂದಿವೆ. ಅಧಿಕವಾಗಿ ತಿಂದಿರುವುದರಿಂದ ಪಾಯಿಸನಿಂಗ್ ಆಗಿದೆ.

ರಕ್ತದ ಜೊತೆಗೆ ಸೇರಿಕೊಂಡು ಎಲೆಯಲ್ಲಿರುವ ಸೊನೆ ( ಸಿಸರ್ಸ್) ದೇಹದೊಳಕ್ಕೆ ಸ್ಟಿಕನಿಂಗ್ ಉಂಟಾಗಿದೆ.

ಇದರಿಂದ ಒಂದು ಜಾನುವಾರು ಗಂಭೀರವಾಗಿ ಸಾವನ್ನಪ್ಪಿ, ಉಳಿದವುಗಳಿಗೆ ಚಿಕಿತ್ಸೆಯನ್ನು ಮುಂದುವರಿಸಲಾಗಿದೆ.

ಉಳ್ಳಾಲ ತಾಲೂಕಿಗೆ ಒಬ್ಬರೇ ಪಶುವೈದ್ಯಾಧಿಕಾರಿ. !

ಇಡೀ ತಾಲೂಕಿಗೆ ಕೋಟೆಕಾರು ಪಶುವೈದ್ಯಾಧಿಕಾರಿ ಡಾ. ಗಜೇಂದ್ರ ಕುಮಾರ್ ಪಿ.ಕೆ ಒಬ್ಬರೇ ಕರ್ತವ್ಯ ನಿರ್ವಹಿಸುವಂತಾಗಿದೆ.

ಪಾವೂರು, ಕೊಣಾಜೆ, ಅಂಬ್ಲಮೊಗರು , ಕುರ್ನಾಡು ಪಶುಚಿಕಿತ್ಸಾಲಯಗಳಲ್ಲಿ ವೈದ್ಯಾಧಿಕಾರಿಯೇ ಇಲ್ಲದೇ ಒಬ್ಬರೇ ಕಾರ್ಯನಿರ್ವಹಿಸುವಂತಾಗಿದೆ.

ತಲಪಾಡಿಯ ಅಧಿಕಾರಿ ಡಾ. ರಚನಾ ಅವರಿಗೆ ಅಡ್ಯಾರು ಭಾಗದ ಜವಾಬ್ದಾರಿ ಇರುವುದರಿಂದ ಅವರೂ ತಾಲೂಕಿನಲ್ಲಿ ಕೆಲ ದಿನಗಳಷ್ಟೇ ಕರ್ತವ್ಯ ನಿರ್ವಹಿಸುವಂತಾಗಿದೆ.

ಇದರಿಂದ ತಾಲೂಕಿನ ಬಹುತೇಕ ಕಡೆಗಳಲ್ಲಿ ಒಬ್ಬನೇ ಪಶುವೈದ್ಯಾಧಿಕಾರಿ ಕಾರ್ಯನಿರ್ವಹಿಸಬೇಕಿದೆ.

ಸಹಾಯಕ ಇನ್ಸ್ ಪೆಕ್ಟರ್ ಹುದ್ದೆಯೂ ಖಾಲಿಯಾಗಿರುವುದರಿಂದ ಕರ್ತವ್ಯ ನಿಭಾಯಿಸುವುದೇ ಕಷ್ಟಸಾಧ್ಯವಾಗಿದ್ದು ಸರ್ಕಾರ , ಜನಪ್ರತಿನಿಧಿಗಳು ಈ ನಿಟ್ಟಿನಲ್ಲಿ ಗಮನ ಹರಿಸುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.

DAKSHINA KANNADA

ನಾಲ್ಕು ತಿಂಗಳ ಮಗುವಿಗೆ ಹಾಲಿನಲ್ಲಿ ಆಲ್ಕೋಹಾಲ್ ಬೆರೆಸಿದ ಅಜ್ಜಿ..! ಅಜ್ಜಿ ಮಾಡಿದ ಎಡವಟ್ಟಿಗೆ ಕೋಮಾಗೆ ಜಾರಿದ ಮಗು !!

Published

on

ಮಂಗಳೂರು/ಇಟಲಿ: ಇಟಲಿಯಲ್ಲೊಂದು ಆಘಾತಕಾರಿ ಘಟನೆ ನಡೆದಿದೆ. ಅಜ್ಜಿಯೊಬ್ಬರು ನಾಲ್ಕು ತಿಂಗಳ ಮಗುವಿಗೆ ಕುಡಿಯುವ ಹಾಲಿನಲ್ಲಿ ಆಲ್ಕೋಹಾಲ್‌ ಬೆರೆಸಿರುವ ಘಟನೆ ನಡೆದಿದೆ.

feed

ಮೊಮ್ಮಗು ಕುಡಿಯುವ ಹಾಲಿಗೆ ಅಜ್ಜಿ ತಪ್ಪಾಗಿ ಆಲ್ಕೋಹಲ್ ಬೆರೆಸಿದ್ದಾರೆ. ಮಗು ಅರ್ಧ ಹಾಲು ಕುಡಿದ ಬಳಿಕ ಮಗು ಅಳಲು ಆರಂಭಿಸಿದೆ. ಅಜ್ಜಿಗೆ ಅನುಮಾನ ಬಂದು ತಾನು ಕುಡಿಸಿದ ಹಾಲಿನ ವಾಸನೆಯನ್ನು ತೆಗೆದು ಪರಿಶೀಲನೆ ಮಾಡಿದಾಗ ಅದರಲ್ಲಿ ಆಲ್ಕೋಹಾಲ್‌ ಮಿಶ್ರಣ ಹಾಕಿರುವುದು ಬೆಳಕಿಗೆ ಬಂದಿದೆ.  ಇದರಿಂದ ಆಘಾತಕ್ಕೊಳಗಾದ ವೃದ್ಧೆ ಮಗುವನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಮುಂದೆ ಓದಿ..; ಜೀವಾಂತ್ಯವಾದ ಕಾಂತಾಬಾರೆ-ಬೂದಬಾರೆ ಜನ್ಮಕ್ಷೇತ್ರದ ಮರ..! ಇತಿಹಾಸದ ಜೀವಂತ ಸಾಕ್ಷಿಯ ಅಂತ್ಯ..!

ಕೋಮಾಗೆ ಜಾರಿದ ಮಗು:

ಅದಾಗಲೇ ಮಗುವಿನ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಕೋಮ ಸ್ಥಿತಿಗೆ ಜಾರಿತ್ತು. ಬಳಿಕ ವೈದ್ಯರು ಚಿಕಿತ್ಸೆ ನೀಡಿದ ಬಳಿಕ ಚೇತರಿಸಿಕೊಂಡಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದೆ. ಮಗುವಿಗೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಆದರೆ ಮಗುವಿನ ಆರೋಗ್ಯವನ್ನು ಸಂಪೂರ್ಣ ಪರಿಶೀಲಿಸಿದ ಬಳಿಕ ಅಜ್ಜಿ ವಿರುದ್ಧ ಪ್ರಕರಣ ದಾಖಲಿಸಲು ನಿರ್ಧರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

 

 

Continue Reading

DAKSHINA KANNADA

ಚಲಿಸುತ್ತಿದ್ದಾಗ ಒಡೆದ ಬಸ್ಸಿನ ಗಾಜು; ಇಬ್ಬರು ಮಕ್ಕಳು, ಚಾಲಕನಿಗೆ ಗಾ*ಯ

Published

on

ವಿಟ್ಲ : ಚಲಿಸುತ್ತಿದ್ದ ಕೇರಳ ರಾಜ್ಯದ ಬಸ್ಸಿನ ಗಾಜು ಒಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡ ಘಟನೆ ಉರಿಮಜಲು ಎಂಬಲ್ಲಿ ಸಂಭವಿಸಿದೆ. ಪುತ್ತೂರು ಕಡೆಯಿಂದ ವಿಟ್ಲ ಮೂಲಕ ಕಾಸರಗೋಡಿಗೆ ಹೊರಟಿದ್ದ ಕೇರಳ ರಾಜ್ಯದ ಮಲಬಾರ್ ಬಸ್ ಉರಿಮಜಲು ಸೊಸೈಟಿ ತಲುಪುತ್ತಿದ್ದಂತೆ ಅದರ ಮುಂಭಾಗ ಗಾಜು ಹೊಡೆದಿದೆ.

ಇದನ್ನೂ ಓದಿ : ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೇಟಾ..! ಕಾರು ಜಖಂ

ಇದರಿಂದ ಮುಂಭಾಗದಲ್ಲಿದ್ದ ಬಾಲಕ ಗಂಭೀರ ಗಾಯಗೊಂಡಿದ್ದು, ಚಾಲಕ ಮತ್ತು ಮತ್ತೊಂದು ಮಗು ಸಣ್ಣಪುಟ್ಟವಿಗೆ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಬಾಲಕನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡಿರುವ ಬಾಲಕ ಕೇರಳದ ಚೆರ್ಕಳ ನೆಲ್ಲಿಕಟ್ಟೆ ನಿವಾಸಿ ಎಂದು ಸ್ಥಳೀಯರು ತಿಳಿಸಿದ್ದಾರೆ.

ಬಿಸಿಲಿನ ತಾಪಕ್ಕೆ ಈ ಘಟನೆ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

 

Continue Reading

DAKSHINA KANNADA

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೇಟಾ..! ಕಾರು ಜಖಂ

Published

on

ವಿಟ್ಲ: ನಿಯಂತ್ರಣ ತಪ್ಪಿ ಕ್ರೇಟಾ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ನಡೆದಿದೆ.

accident

accident

ಕಾರು ಪಲ್ಟಿಯಾದ ಪರಿಣಾಮ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಪವಾಡ ಎಂಬಂತೆ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.

ಮುಂದೆ ಓದಿ..; ಪ್ರಾಂಶುಪಾಲೆ, ಶಿಕ್ಷಕಿ ನಡುವೆ ಹೊಯ್‌ ಕೈ..!! ವೀಡಿಯೋ ವೈರಲ್

accident

Continue Reading

LATEST NEWS

Trending