Thursday, March 23, 2023

ಉಳ್ಳಾಲ: ಕೊರೊನಾಕ್ಕೆ ‘ರಮ್’ ಮದ್ದು ಅಂದಿದ್ದ ಪಾನಕ ರವಿ ಕಾಂಗ್ರೆಸ್ ಪಕ್ಷದಿಂದ ಔಟ್..!

ಉಳ್ಳಾಲ: ರಮ್ ಕುಡಿದು ಪೆಪ್ಪರ್ ಹಾಕಿ ಮೊಟ್ಟೆ ತಿಂದರೆ ಕೊರೊನಾ ದೂರವಾಗುತ್ತದೆ’ ಎಂದು ಹೇಳಿ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್ ಆಗಿ ದೇಶಾದ್ಯಂತ ಸುದ್ಧಿಯಾದ ಉಳ್ಳಾಲ ನಗರಸಭೆ ಕಾಂಗ್ರೆಸ್ ಕೌನ್ಸಿಲರ್ ‘ಪಾನಕ ರವಿ’ ಎಂದೇ ಹೆಸರಾದ ರವಿಚಂದ್ರ ಗಟ್ಟಿ ಇವರನ್ನು ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಮುಂದಿನ ಆದೇಶದವರೆಗೆ ಅಮಾನತುಗೊಳಿಸಲಾಗಿದೆ ಎಂದು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಕಮಿಟಿ ಆದೇಶ ಹೊರಡಿಸಿದೆ.


ನಗರಸಭೆ ಸದಸ್ಯರಾಗಿರುವ ರವಿಚಂದ್ರ ಗಟ್ಟಿ, ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಪಾನಮತ್ತರಾಗಿ ಮೈಮೇಲಿನ ಬಟ್ಟೆಗಳನ್ನು ಕಳಚಿ ಬಿದ್ದುಕೊಂಡು ಸಾರ್ವಜನಿಕವಾಗಿ ಮತ್ತು ದೃಶ್ಯ ಮಾಧ್ಯಮಗಳಲ್ಲಿ ಪಕ್ಷದ ವಿರುದ್ಧ ಹೇಳಿಕೆಗಳನ್ನು ನೀಡುತ್ತಾ ಬಂದಿರುತ್ತಾರೆ.


ಮೊನ್ನೆ ನಡೆದ ಉಳ್ಳಾಲ ನಗರಸಭೆಯ ಸ್ಥಾಯಿಸಮಿತಿ ಅಧ್ಯಕ್ಷರ ಆಯ್ಕೆಯಂದೂ ಸಭೆಯಲ್ಲಿ ಭಾಗವಹಿಸದೆ ಪಕ್ಷದ ವಿರುದ್ಧ ಹೇಳಿಕೆಗಳನ್ನು ನೀಡಿ ಪಕ್ಷದ ತತ್ವ ಸಿದ್ಧಾಂತಗಳನ್ನು ಉಲ್ಲಂಘಿಸಿರುತ್ತೀರಿ.

ಆದುದರಿಂದ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನುತಗೊಳಿಸಲಾಗುತ್ತಿದೆ ಎಂದು ಬ್ಲಾಕ್ ಅಧ್ಯಕ್ಷ ಸದಾಶಿವ ಉಳ್ಳಾಲ್ ಆದೇಶ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಚಿಕ್ಕಮಗಳೂರು : ಬೈಕಿಗೆ ಬಸ್ ಡಿಕ್ಕಿ – ಇಬ್ಬರು ಸವಾರರು ಸ್ಥಳದಲ್ಲೇ ಮೃತ್ಯು..!

ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನಲ್ಲಿ ಸಂಭವಿಸಿದೆ. ಚಿಕ್ಕಮಗಳೂರು: ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು...

ಓಮನ್‌ನಲ್ಲಿ ಹೃದಯಾಘಾತದಿಂದ ಅನಿವಾಸಿ ಭಾರತೀಯ ಮಹಿಳೆ ಮೃತ್ಯು..!

ಓಮನ್‌ ನಲ್ಲಿ ಭಾರತೀಯ ಮೂಲದ ಮಹಿಳೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕೇರಳ ಕೊಟ್ಟಾಯಂನ ಮಹಿಳೆ ಸೈಮಾ ಬಾಲಕೃಷ್ಣ ಮೃತ ಮಹಿಳೆಯಾಗಿದ್ದಾಳೆ.ಓಮನ್ : ಓಮನ್‌ ನಲ್ಲಿ ಭಾರತೀಯ ಮೂಲದ ಮಹಿಳೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕೇರಳ ಕೊಟ್ಟಾಯಂನ...

ಕಲಬುರಗಿಯಲ್ಲಿ ಹಾಡು ಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ ಹತ್ಯೆ..!

ಹಾಡುಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ ಹತ್ಯೆ ಮಾಡಲಾದ ಘಟನೆ ಕಲಬುರಗಿಯ ಹಾಗರಗಾ ಕ್ರಾಸ್ ಬಳಿ ನಡೆದಿದೆ. ಮಜತ್ ಸುಲ್ತಾನ್ (35) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಕಲಬುರಗಿ : ಹಾಡುಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ...