Connect with us

    DAKSHINA KANNADA

    Ullala: ನಾಲಿಗೆ ಹರಿಬಿಟ್ಟ ಪ್ರಕಾಶ್ ರಾಜ್-ಮೋದಿ ವಿರುದ್ಧ ಏಕವಚನ ಬಳಕೆ

    Published

    on

    ಉಳ್ಳಾಲ: ಕರಾವಳಿಯ ಯುವಕರಲ್ಲಿ ಧರ್ಮದ ಅಪೀಮು ತುಂಬಿದ ಜನರು ಐಶಾರಾಮಿ ಕಾರಿನಲ್ಲಿ ಓಡಾಡುತ್ತಾರೆ ಆದರೆ ಯುವಕರು ಜೈಲು ಸೇರುತ್ತಿದ್ದಾರೆ. ದೇಶದಲ್ಲಿ ಅನೇಕ ಸಮಸ್ಯೆಗಳಿದ್ದರೂ ಪ್ರಧಾನಿ ಜನರ ಹಣದಲ್ಲಿ ದಿನಕ್ಕೆ ನಾಲ್ಕು ಡ್ರೆಸ್‌, ದುಬಾರಿ ಅಣಬೆ ತಿಂದು ಮಜಾ ಮಾಡ್ತಾ ಇದ್ದಾರೆ. ಹೀಗಂತ ಬಹುಬಾಷಾ ನಟ ಪ್ರಕಾಶ್ ರಾಜ್‌ ಅವರು ಬಿಜೆಪಿ ಸಂಘ ಪರಿವಾರ ಸೇರಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ತೊಕ್ಕೊಟ್ಟಿನಲ್ಲಿ ನಡೆದ ಡಿವೈಎಫ್‌ಐನ 12ನೇ ರಾಜ್ಯ ಸಮ್ಮೇಳದ ಸಮಾರೋಪ ಸಮಾವೇಶದಲ್ಲಿ ಅವರು ಮಾತನಾಡುತ್ತಿದ್ರು. ಸಮಾವೇಶಕ್ಕೆ ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಬಹುಬಾಷಾ ನಟ ಪ್ರಕಾಶ್ ರಾಜ್‌ ತಮ್ಮ ಎಂದಿನ ಶೈಲಿಯಲ್ಲೇ ಸಂಘ ಪರಿವಾರ ಹಾಗೂ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಭಾಷಣದ ಉದ್ದಕ್ಕೂ ಪ್ರಧಾನಿ ಮೋದಿಯವರನ್ನು ಏಕವಚನದಲ್ಲೇ ಸಂಭೋದಿಸಿ ಟೀಕೆ ಮಾಡಿದ ಪ್ರಕಾಶ್ ರಾಜ್‌ 2019 ರ ಚುನಾವಣೆಯಲ್ಲಿ ಕ್ಯಾಮೆರಾಮೆನ್‌ಗಳ ಜೊತೆ ಗುಹೆ ಸೇರಿದ್ದ ಮೋದಿ, ಈ ಬಾರಿ ಸಮುದ್ರ ಅಡಿ ಸೇರಿದ್ದಾರೆ ಎಂದು ಲೇವಡಿ ಮಾಡಿದ್ದಾರೆ. ಸಮುದ್ರದ ತಳದಿಂದಲೂ ಇನ್ನೂ ಸ್ವಲ್ಪ ಹೋಗಿದ್ದರೆ ಇನ್ನೂ ಚೆನ್ನಾಗಿತ್ತು ಎಂದು ವ್ಯಂಗವಾಡಿದ್ದಾರೆ. ರಾಮನ ವಿಚಾರ ಮುಗಿದ ಕಾರಣ ಕೃಷ್ಣನ್ನು ಹಿಡಿದು ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ಟೀಕೆ ಮಾಡಿದ್ದಾರೆ. ಎಲ್ಲಾ ಧರ್ಮದಲ್ಲಿ ಇರುವ ಅಂಧ ಭಕ್ತರ ವಿದೋಧಿಯಾಗಿರುವ ನಾನು ಯಾವತ್ತೂ ವಿರೋಧ ಪಕ್ಷದಲ್ಲೇ ಇದ್ದು ಬಡಜನರ ಪರವಾಗಿ ಇರುತ್ತೇನೆ ಎಂದು ಹೇಳಿದ್ದಾರೆ. ಕಲಾವಿಧರು ಜನರ ದನಿಯಾಗಿ ಇರಬೇಕು ಹಾಗಾಗಿ ಜನರ ದನಿಯಾಗಿ ಮಾತಾಡುವುದು ನನ್ನ ಜವಾಬ್ದಾರಿ ಎಂದು ಹೇಳಿದ ಪ್ರಕಾಶ್ ರಾಜ್, ಧರ್ಮದ ಆದಾರದಲ್ಲಿ ರಾಜಕಾರಣ ಮಾಡುವ ಮೂಲಕ ಬಿಜೆಪಿ ದೇಶ ಹಾಳು ಮಾಡಿದೆ ಎಂದು ಹೇಳಿದ್ದಾರೆ. ದೇಶದಲ್ಲಿ ಇರುವ ನಿರುದ್ಯೋಗ, ಮಹಿಳೆಯ ಸುರಕ್ಷತೆ, ಬಡವರ ಹಸಿವು, ಅಲ್ಪ ಸಂಖ್ಯಾತರ ರಕ್ಷಣೆ ಪ್ರಧಾನಿಯ ಕೊಡುಗೆ ಏನು ಎಂದು ಪ್ರಶ್ನೆ ಮಾಡಿದ ಪ್ರಕಾಶ್ ರಾಜ್‌, ಜನರು ಪ್ರಶ್ನೆ ಮಾಡುವುದನ್ನ ಕಲಿಯಬೇಕು . ಪ್ರಜಾಪ್ರಭುತ್ವ ಕೊಟ್ಟಿರುವ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳಬೇಕು ಎಂದು ಕರೆ ನಿಡಿದ್ರು. ಸಮಾವೇಶಕ್ಕೂ ಮೊದಲು ಕುತ್ತಾರು ಜಂಕ್ಷನ್‌ನಿಂದ ತೊಕ್ಕೊಟ್ಟು ವರೆಗೆ ಬೃಹತ್ ಮೆರವಣಿಗೆ ಆಯೋಜಿಸಲಾಗಿದ್ದು ಸಾವಿರಾರು ಜನ ಮೆರವಣಿಗೆಯಲ್ಲಿ ಭಾಗವಹಿಸಿದ್ದಾರೆ. ಕೋಟಿ ಚೆನ್ನಯ್ಯರ ಭಾವಚಿತ್ರ ಕಟೌಟ್‌ ಬಳಸದಂತೆ ಎಚ್ಚರಿಕೆ ನೀಡಿದವರಿಗೆ ಸವಾಲೆಸೆದ ಕಾರ್ಯಕರ್ತರು ಮೆರವಣಿಗೆಯಲ್ಲಿ ಮಹಾನಾಯಕರುಗಳ ಭಾವಚಿತ್ರದೊಂದಿಗೆ ಕೋಟಿ ಚೆನ್ನಯ್ಯರ ಭಾವಚಿತ್ರದ ಮೆರವಣಿಗೆಯನ್ನೂ ಮಾಡಿದ್ದಾರೆ.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಮಂಗಳೂರು: ಟ್ರಾಯ್‌ನಿಂದ ಕರೆ; 1.71 ಕೋ.ರೂ ವಂಚನೆ

    Published

    on

    ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್‌ ಸಿಮ್‌ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

    ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್‌ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್‌ ನಂಬರ್‌ ರಿಜಿಸ್ಟರ್‌ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್‌ ನೆಪದಲ್ಲಿ ಈ ನಂಬರ್‌ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್‌ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.

    ಅನಂತರ ವಾಟ್ಸಪ್‌ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್‌ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.

    Continue Reading

    DAKSHINA KANNADA

    ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?

    Published

    on

    ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.


    ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.

    ಇದನ್ನು ಓದಿ:ಯೂಟ್ಯೂಬ್​ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ

    ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.

    Continue Reading

    bangalore

    ಯಜಮಾನಿಯರಿಗೆ ಸ್ಟಾಪ್ ಆಗುತ್ತಾ ಗೃಹಲಕ್ಷ್ಮಿ ಹಣ ?

    Published

    on

    ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.


    ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.

    ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್

    ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.

    Continue Reading

    LATEST NEWS

    Trending