Connect with us

DAKSHINA KANNADA

ಉಳ್ಳಾಲ ಮಹಿಳೆಗೆ ಅತ್ಯಾಚಾರ – ಕಿರುಕುಳ ಆರೋಪ, ತಪ್ಪಿತಸ್ಥರಿಗೆ ಕಾನೂನು ಪ್ರಕಾರ ಶಿಕ್ಷೆಯಾಗಲಿ :ಎಸ್‌ಡಿಪಿಐ

Published

on

ಉಳ್ಳಾಲ ಮಹಿಳೆಗೆ ಅತ್ಯಾಚಾರ – ಕಿರುಕುಳ ಆರೋಪ, ತಪ್ಪಿತಸ್ಥರಿಗೆ ಕಾನೂನು ಪ್ರಕಾರ ಶಿಕ್ಷೆಯಾಗಲಿ :ಎಸ್‌ಡಿಪಿಐ

  ಆರೋಪಿಯನ್ನು ಪತ್ತೆ ಹಚ್ಚಲು ಎರಡು ತಂಡಗಳ ರಚನೆ : ಪೋಲಿಸ್ ಆಯುಕ್ತರು. 

ಮಂಗಳೂರು: ಉಳ್ಳಾಲ ಮಹಿಳೆಗೆ ಅತ್ಯಾಚಾರ – ಕಿರುಕುಳ ಆರೋಪ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಕಾನೂನು ಪ್ರಕಾರ ಶಿಕ್ಷೆಯಾಗಲಿ ಎಂದು ಎಸ್‌ಡಿಪಿಐ ಹೇಳಿದೆ.

ಉಳ್ಳಾಲದಲ್ಲಿ ಮಹಿಳೆಗೆ ಎಸ್‌ಡಿಪಿಐ ಅಧ್ಯಕ್ಷ ಸಿದ್ದೀಕ್ ಎಂಬಾತ ಕಿರುಕುಳ ನೀಡಿದ್ದಾನೆಂದು ಮಾದ್ಯಮಗಳಲ್ಲಿ ವರದಿಯಾಗುತ್ತಿದ್ದು ಸಿದ್ದೀಕ್ ಎಂಬಾತ ಎಸ್‌ಡಿಪಿಐಯ ಅಧ್ಯಕ್ಷನಲ್ಲ ಆತ ಸಾಮಾನ್ಯ ಕಾರ್ಯಕರ್ತನಾಗಿದ್ದು, ಎ.ಆರ್.ಅಬ್ಬಾಸ್ ಎಂಬವರು ಉಳ್ಳಾಲ ನಗರ ಸಮಿತಿಯ ಅಧ್ಯಕ್ಷರಾಗಿದ್ದಾರೆ ಎಂದು ಅದು ಹೇಳಿದೆ.

ಇದರ ಬಗ್ಗೆ ಪಕ್ಷದ ಆಂತರಿಕ ತನಿಖೆ ನಡೆಸಲು ಸಮಿತಿಯನ್ನು ರಚಿಸಲಾಗಿದ್ದು, ವಾಸ್ತವಾಂಶ ತಿಳಿಯಲು ಆತ ಇದುವರೆಗೂ ನಮ್ಮ ಸಂಪರ್ಕಕ್ಕೆ ಲಭ್ಯವಾಗಿಲ್ಲ,ಒಂದು ವೇಳೆ ಆತ ತಪ್ಪಿತಸ್ಥನಾಗಿದ್ದರೆ ಆತ ನಮ್ಮ ಕಾರ್ಯಕರ್ತ ಎಂದುಕೊಂಡು ಯಾವುದೇ ಕಾರಣಕ್ಕೂ ಆತನನ್ನು ನಮ್ಮ ಪಕ್ಷ ಬೆಂಬಲಿಸುವುದಿಲ್ಲ, ಹಾಗೂ ಯಾವುದೇ ರೀತಿಯ ಸಹಾಯವನ್ನು ಮಾಡುವುದಿಲ್ಲ ಹಾಗೂ ಪೋಲಿಸ್ ಇಲಾಖೆ ಆತನ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತೇವೆ.

ಅದೇ ರೀತಿ ಪೋಲಿಸ್ ಇಲಾಖೆ ಕೂಡ ಎರಡೂ ಕಡೆಯಿಂದಲೂ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು.ಯಾಕೆಂದರೆ ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಹಿಳೆಯರನ್ನು ಉಪಯೋಗಿಸಿಕೊಂಡು ಹನಿಟ್ರಾಪ್ ಮತ್ತು ಯುವಕರ ಫೋಟೋ ತೆಗೆದು ಬ್ಲಾಕ್ ಮೇಲ್ ನಡೆಸಲಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆ ದೃಷ್ಟಿಕೋನವನ್ನು ಇಟ್ಟುಕೊಂಡು ಕೂಡ ಪೋಲಿಸ್ ಇಲಾಖೆ ತನಿಖೆ ನಡೆಸಬೇಕು.

ಅಂತಹ ಷಡ್ಯಂತರಕ್ಕೆ ಈತ ಬಲಿಯಾಗಿದ್ದಾನೆಯೇ ಎಂದು ತನಿಖೆಯಿಂದ ಗೊತ್ತಾಗಬೇಕಿದೆ ಎಂದು ಎಸ್‌ಡಿಪಿಐ ಮಂಗಳೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಅಬ್ಬಾಸ್ ಕಿನ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ಆರೋಪಿಯನ್ನು ಪತ್ತೆ ಹಚ್ಚಲು ಎರಡು ತಂಡಗಳ ರಚನೆ : 

ಇನ್ನು ಉಳ್ಳಾಲ ಮಹಿಳೆ ಮತ್ತು ಅಪ್ರಾಪ್ತೆಯ ಅತ್ಯಾಚಾರ ಪ್ರಕರಣ ಸಂಬಂಧಿಸಿದಂತೆ ತಪ್ಪಿಸಿಕೋಮಡಿರುವ ಆರೋಪಿಯ ಬಂಧನಕ್ಕೆ ಪ್ರತ್ಯೇಕ ಪೊಲೀಸ್ ತಂಡಗಳನ್ನು ರಚನೆ ಮಾಡಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಎನ್ ಶಶಿ ಕುಮಾರ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆಯುಕ್ತರು ಆರೋಪಿ ಸಿದ್ದಿಕ್ ಕೇರಳಕ್ಕೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭಿರವಾಗಿ ಪರಿಗಣಿಸಿದ್ದು, ಶೀಘ್ರವೇ ಆರೋಪಿಯನ್ನು ಬಂಧಿಸಲಾಗುವುದು ಎಂದಿದ್ದಾರೆ.     

Click to comment

Leave a Reply

Your email address will not be published. Required fields are marked *

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

LATEST NEWS

Trending