Connect with us

DAKSHINA KANNADA

Ullala: ದೈವ ಕೋಲದಲ್ಲಿ ಸ್ಪೀಕರ್ ಖಾದರ್ ಮತ್ತೆ ಭಾಗಿ- ವಿವಾದಕ್ಕೆ ತಲೆ ಕೆಡಿಸದ ಶಾಸಕ

Published

on

ಉಳ್ಳಾಲ: ಕಳೆದೆರಡು ಹಿಂದೆ ಕಲ್ಲುರ್ಟಿ ಕಲ್ಕುಡ ದೈವಗಳಿಗೆ ಹರಕೆ ಕೋಲ ಸಮರ್ಪಿಸಿದ ಸ್ಪೀಕರ್ ಯುಟಿ ಖಾದರ್ ಅವರಿಗೆ ಸ್ವಧರ್ಮೀಯ ಧಾರ್ಮಿಕ ಮುಖಂಡರಿಂದ ತೀವ್ರ ಟೀಕೆಗಳು ಬಂದಿತ್ತು. ಆದರೆ ಸದಾ ಎಲ್ಲರನ್ನು ಗೌರವಿಸುವ ನಾಯಕ ಎಂದೇ ಬಿಂಬಿತರಾಗಿರೋ ಖಾದರ್ ಈ ಟೀಕೆಗಳ ಬಗ್ಗೆ ತಲೆಕೆಡಿಸಿಕೊಂಡಿಲ್ಲ ಅನ್ನೋದು ಸಾಬೀತು ಮಾಡಿದ್ದಾರೆ.

ಬುಧವಾರ ಮತ್ತೆ ತಮ್ಮ ಕ್ಷೇತ್ರದಲ್ಲಿ ನಡೆಯುತ್ತಿದ್ದ ಉಳ್ಳಾಲ ಬೈಲು ವೈದ್ಯನಾಥ ದೈವದ ಕೋಲದಲ್ಲಿ ಭಾಗವಹಿಸಿದ್ದಾರೆ. ಮತ್ತೆ ಅದೇ ತಮ್ಮ ಎಂದಿನ ನಗೆಯೊಂದಿಗೆ ದೈವದ ಕೋಲದಲ್ಲಿ ಭಾಗವಹಿಸಿ, ದೈವದ ನುಡಿ ಪಡೆದುಕೊಂಡಿದ್ದಾರೆ. ಸ್ಪೀಕರ್ ಖಾದರ್ ಅವರು ವೈದ್ಯನಾಥ ದೈವದ ಕೋಲದಲ್ಲಿ ಭಾಗವಹಿಸಿದ್ದ ವಿಡಿಯೋವನ್ನು ಖಾದರ್ ಅಭಿಮಾನಿ ಬಳಗ ಎಂಬ ಪೇಜ್‌ನಲ್ಲಿ ಹಾಕಲಾಗಿದೆ. ಸಾಕಷ್ಟು ಜನರು ಈ ವಿಡಿಯೋ ಲೈಕ್ ಮಾಡಿ ಖಾದರ್ ಅವರ ನಡೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸರ್ವಧರ್ಮದ ಬಗ್ಗೆ ಖಾದರ್ ಅವರಿಗೆ ಇರೋ ಈ ಅಭಿಮಾನ ಎಲ್ಲರಿಗೂ ಇರಲಿ ಎಂದು ಕೆಲವರು ಕಮೆಂಟ್ ಮಾಡಿದ್ದರೆ. ಇನ್ನೂ ಕೆಲವರು ನಿಜವಾದ ರಾಮರಾಜ್ಯ ಆಗಬೇಕಾದರೆ ಖಾದರ್ ಅವರಂತ ನಾಯಕ ಬೇಕು ಎಂದು ಕಮೆಂಟ್ ಮಾಡಿದ್ದಾರೆ. ಪನೋಳಿ ಬೈಲು ಕಲ್ಲುರ್ಟಿ ಕಲ್ಕುಡ ದೈವಕ್ಕೆ ಹರಕೆ ಕೋಲ ಸಲ್ಲಿಸಿದ ಖಾದರ್ ತಮ್ಮ ಪೇಜ್‌ನಲ್ಲೇ ವಿಡಿಯೋ ಹಂಚಿಕೊಂಡಿದ್ದರು. ಈ ವೇಳೆ ಹಲವರು ಇಂತಹದೇ ಪಾಸಿಟಿವ್ ಕಮೆಂಟ್ ಮಾಡಿದ್ದರೆ. ಒಂದಷ್ಟು ಮುಸ್ಲಿಂ ಧಾರ್ಮಿಕ ಮುಖಂಡರು ಖಾದರ್ ನಡೆಯನ್ನು ಖಂಡಿಸಿದ್ದರು. ಕೆಲವು ಧಾರ್ಮಿಕ ಮುಖಂಡರು ಖಾದರ್ ಅವರನ್ನು ಒಬ್ಬ ರಾಜಕೀಯ ವ್ಯಕ್ತಿಯಾಗಿ ನೋಡಿ ಧಾರ್ಮಿಕ ಮುಖಂಡರ ವೇದಿಕೆಯಲ್ಲಿ ಅವಕಾಶ ನೀಡಬೇಡಿ ಎಂದು ಪೋಸ್ಟ್ ಮಾಡಿದ್ದರು. ಆದರೆ ಇದ್ಯಾವುದರ ಬಗ್ಗೆ ತಲೆ ಕೆಡಿಸಿಕೊಳ್ಳದ ಸ್ಪೀಕರ್ ಖಾದರ್ ಎಂದಿನಂತೆ ತಮ್ಮ ಕ್ಷೇತ್ರದ ಜನರ ಜೊತೆ ಬೆರೆತುಕೊಂಡಿದ್ದಾರೆ. ಇದು ನಿಜವಾದ ನಾಯಕನಿಗೆ ಇರಬೇಕಾದ ಗುಣ ಅಂತ ಹಲವು ಜನ ಖಾದರ್ ಗುಣಗಾನ ಮಾಡಿದ್ದಾರೆ.

DAKSHINA KANNADA

ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು..!

Published

on

ಬಂಟ್ವಾಳ : ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ಬಂಟ್ವಾಳದ ನಾವೂರು ಎಂಬಲ್ಲಿ ಭಾನುವಾರ(ಎ.5) ಸಂಜೆ ನಡೆದಿದೆ. ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ ಅಶ್ರಾ (11) ಮತ್ತು ಇಲಿಯಾಸ್ ಅವರ ಪುತ್ರಿ ಮರಿಯಮ್ ನಾಶೀಯಾ (14 )ಮೃತಪಟ್ಟ ಬಾಲಕಿಯರು.

nethravathi river

ಮುಂದೆ ಓದಿ..; ಬರ್ಬರ ಹತ್ಯೆಯಾದ ಬ್ಯೂಟಿ ಕ್ವೀನ್.!! ಮುಳುವಾಯಿತಾ ಇನ್ಸ್ಟಾಗ್ರಾಮ್ ಪೋಸ್ಟ್‌..! ಸಿಸಿಟಿವಿಯಲ್ಲಿ ಸೆರೆಯಾದ ಭಯಾನಕ ದೃಶ್ಯ

ಮೂಲತಃ ನಾವೂರ ನಿವಾಸಿಯಾದ ಇಲಿಯಾಸ್ ಅವರು ಇತ್ತೀಚಿಗೆ ಉಳ್ಳಾಲದಲ್ಲಿ ಮನೆ ಕಟ್ಟಿಸಿದ್ದರು. ನಿನ್ನೆ  ನಾವೂರು ಮೈಂದಾಳದಲ್ಲಿರುವ ಸಂಬಂಧಿಕರ ಮನೆಗೆ ತೆರಳಿದ್ದರು. ಸಂಜೆ ವೇಳೆ ಮನೆಯವರ ಜತೆಗೆ ನಾವೂರಿನ ನೀರಕಟ್ಟೆ ಎಂಬಲ್ಲಿ ನೇತ್ರಾವತಿ ನದಿಗೆ ತೆರಳಿದ್ದರು. ಈ ವೇಳೆ ಮನೆ ಮಂದಿ ಇರುವಾಗಲೇ ಮಕ್ಕಳು ನೀರಿನಲ್ಲಿ ಆಟ ಆಡುತ್ತಾ ಇದ್ದರು. ಈ ಸಂದರ್ಭದಲ್ಲಿ ಇಬ್ಬರು ಮಕ್ಕಳು ಏಕಾ ಏಕಿ ನೀರಿನಲ್ಲಿ ಮುಳುಗಿದ್ದಾರೆ. ನೀರಿನಲ್ಲಿ ಮುಳುಗುವುದನ್ನು ಕಣ್ಣಾರೆ ಕಂಡರೂ ಈಜು ಬಾರದ ಕಾರಣ ಮಕ್ಕಳನ್ನು ರಕ್ಷಣೆ ಮಾಡಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

 

 

Continue Reading

DAKSHINA KANNADA

‘ಅಡ್ಡಣ ಪೆಟ್ಟು’ ದೈವಾರಾಧನೆಯ ವಿಶೇಷ ಆಚರಣೆ…! ಇದು ಸೌಹಾರ್ದತೆ ಬಯಸೋ ದೈವ..!

Published

on

ಮಂಗಳೂರು : ತುಳುನಾಡಿನ ದೈವಾರಾಧನೆಯಲ್ಲಿ ಒಂದಕ್ಕಿಂತ ಒಂದು ವಿಶೇಷವಾದ ಆಚರಣೆ ಹಾಗೂ ನಂಬಿಕೆಗಳು ಇದೆ. ಅದು ಪ್ರದೇಶದಿಂದ ಪ್ರದೇಶಕ್ಕೆ ಒಂದಷ್ಟು ಬದಲಾವಣೆಯೊಂದಿಗೆ ನಡೆಯುತ್ತದೆ ಕೂಡಾ. ಕೇರಳದ ಗಡಿಗೆ ಹೊಂದಿಕೊಂಡಿರುವ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದಲ್ಲಿ ನಡೆಯೋ ದೈವಾರಾಧನೆ ಕೂಡಾ ಅದೇ ರೀತಿಯಾದ ವಿಶೇಷ ಆಚರಣೆಯೊಂದಕ್ಕೆ ಹೆಸರಾಗಿದೆ. ಇಲ್ಲಿನ ಶ್ರೀ ಮಹಾವಿಷ್ಣುಮೂರ್ತಿ ದೇವರ ಜಾತ್ರೆಯ ಬಳಿಕ ನಡೆಯುವ ದೈವದ ನೇಮದಲ್ಲಿ ‘ಅಡ್ಡಣ ಪೆಟ್ಟು’ ಅನ್ನೋ ಸಂಪ್ರದಾಯವಿದೆ. ಗ್ರಾಮದ ಜಾತ್ರೆಯ ಪ್ರಮುಖ ಆಕರ್ಷಣೆ ಕೂಡಾ ಇದೇ ಆಗಿದ್ದು, ಇದನ್ನು ನೋಡಲೆಂದೆ ಸಾವಿರಾರು ಜನ ಬರ್ತಾರೆ.


ನಾಲ್ಕು ಮನೆತನಗಳ ನಡುವೆ ಹೊಡೆದಾಟ…!

‘ಅಡ್ಡಣ ಪೆಟ್ಟು’ ಇದು ಮಂಡೆಕೋಲು ಗ್ರಾಮದ ಜಾತ್ರೆ ಮುಗಿದ ಬಳಿಕ ನಡೆಯುವ ಉಳ್ಳಾಕುಲು ಹಾಗೂ ಪರಿವಾರ ದೈವದ ನೇಮದಲ್ಲಿ ಕಾಣುವ ದೃಶ್ಯ. ನಾಲ್ಕು ಗೌಡ ಮನೆತನದವರು ಬೆತ್ತದ ಗುರಾಣಿ ಹಿಡಿದು ಕೋಲಿನಿಂದ ಹೊಡೆದಾಡುವುದೇ ಈ ‘ಅಡ್ಡಣ ಪೆಟ್ಟು’ ಅನ್ನೋ ವಿಶಿಷ್ಠ ಆಚರಣೆ. ದೇವಸ್ಥಾನಕ್ಕೆ ಸಂಬಂಧಪಟ್ಟ ಕೇನಾಜೆ- ಮಾವಜಿ, ಮುರೂರು- ಬೊಳುಗಲ್ಲು ಎಂಬ ನಾಲ್ಕು ಗೌಡ ಮನೆತನಗಳು ಈ ರೀತಿ ಹೊಡೆದಾಟ ನಡೆಸ್ತಾರೆ. ಈ ವೇಳೆ ಉಳ್ಳಾಕುಲು ದೈವ ಮದ್ಯಪ್ರವೇಶ ಮಾಡಿ ಜಗಳ ಬಿಡಿಸುತ್ತದೆ. ಇದು ನೋಡಲು ಕೂಡಾ ಸಾಕಷ್ಟು ಕುತೂಹಲವಾಗಿದ್ದು, ಇದರ ಜೊತೆ ದೈವದ ಸಂದೇಶ ಕೂಡಾ ಇದೆ.


‘ಅಡ್ಡಣ ಪೆಟ್ಟು’ವಿನ ಹಿಂದೆ ಇದೆ ದೈವದ ಸಂದೇಶ..!

ಮಂಡೆಕೋಲು ನೇಮದಲ್ಲಿ ಅಡ್ಡಣ ಪೆಟ್ಟು ಸಂಪ್ರದಾಯಕ್ಕೆ ಬೇರೆ ಬೇರೆ ಐಹಿತ್ಯವಿದೆ. ಅಡ್ಡಣಪೆಟ್ಟು ನಡೆದರೆ ಊರಲ್ಲಿ ಮುಂದೆ ಗಲಾಟೆ, ಹೊಡೆದಾಟಗಳು ಸಂಭವಿಸುವುದಿಲ್ಲ ಎಂಬ ನಂಬಿಕೆಯೂ ಊರಿನ ಭಕ್ತ ಜನರಲ್ಲಿದೆ. ನಾಲ್ಕೂರಿನ ಜಗಳವನ್ನು ದೈವ ಬಿಡಿಸುವುದು, ಗಲಾಟೆ ಮಾಡದೆ ಸೌಹಾರ್ದದಿಂದ ಬಾಳಿ ಎನ್ನುವ ಸಂದೇಶವೂ ಈ ಆಚರಣೆಯಲ್ಲಿದೆ. ಪುರಾತನ ಕಾಲದಲ್ಲಿ ಯಾವುದೋ ಗಲಾಟೆ ನಡೆದ ಸಂದರ್ಭ ಉಳ್ಳಾಕುಲು ದೈವ ಬಂದು ಗಲಾಟೆ ಬಿಡಿಸಿ ಪರಸ್ಪರ ಸಂದಾನ ನಡೆಸಿತ್ತು ಎಂಬ ಪ್ರತೀತಿಯೂ ಇದೆ. ಇದೇ ಕಾರಣದಿಂದ ಪ್ರತಿ ವರ್ಷ ಉಳ್ಳಾಕುಲು ನೇಮದ ಸಂದರ್ಭ “ಅಡ್ಡಣ ಪೆಟ್ಟು” ಒಂದು ಸಂಪ್ರದಾಯವಾಗಿ ನಡೆದು ಬರುತ್ತಿದೆ.

‘ಅಡ್ಡಣ ಪೆಟ್ಟು’ವಿನ ಆಚರಣೆ ಹೇಗೆ ?

ನೇಮೋತ್ಸವ ದಿನದಂದು ಉಳ್ಳಾಕುಲು ದೈವದ ಭಂಡಾರ ತೆಗೆದ ಬಳಿಕ ದೈವ ಸಹಿತ ನಾಲ್ಕೂರಿನ ಪ್ರತಿನಿಧಿಗಳು, ದೈವರ ಪರಿಚಾರಕರು ದೇವಸ್ಥಾನದ ಸಮೀಪದ ಗದ್ದೆಯಲ್ಲಿರುವ ಕಟ್ಟೆಗೆ ತೆರಳುತ್ತಾರೆ. ಕೇನಾಜೆ- ಮಾವಜಿ, ಮುರೂರು-ಬೊಳುಗಲ್ಲು ಮನೆತನಕ್ಕೆ ಸೇರಿದ ನಾಲ್ವರು ಪ್ರತಿನಿಧಿಗಳು ಸಮವಸ್ತ್ರ ಧರಿಸಿ ದಂಡ ಮತ್ತು ಗುರಾಣಿ (ಅಡ್ಡಣ) ಹಿಡಿದು ದೈವದ ಜತೆಯಲ್ಲಿ ತೆರಳುತ್ತಾರೆ. ಕಟ್ಟೆಯ ಬಳಿ ತೆರಳಿದ ಬಳಿಕ ಕೆಲವೊಂದು ಸಂಪ್ರದಾಯ ಆಚರಣೆಗಳು ನಡೆದು ಅಡ್ಡಣ ಹಿಡಿದ ಯುವಕರು ಅಡ್ಡಣವನ್ನು ನೆಲದಲ್ಲಿ ಎದುರು ಬದುರಾಗಿ ಇಡುತ್ತಾರೆ. ಲಾಠಿ ಮಾದರಿಯ ಹೊಡೆಯುವ ದಂಡವನ್ನು ಕೈಯಲ್ಲಿ ಹಿಡಿದಿರುತ್ತಾರೆ. ಇತ್ತ ಅಡ್ಡಣ ಹೊಡೆತದಲ್ಲಿ ಭಾಗವಹಿಸುವ ನಾಲ್ವರು ಯುವಕರಿಗೆ ಬೆನ್ನು ಹಾಕಿ ನಿಂತಿರುವ ಉಳ್ಳಾಕುಲು ದೈವಕ್ಕೆ ಅಣಿಯನ್ನು ಕೂರಿಸಲಾಗುತ್ತದೆ. ಅಣಿ ಇಟ್ಟ ಬಳಿಕ ತುಳು ನುಡಿಗಟ್ಟೊಂದನ್ನು ಹೇಳಲಾಗುತ್ತದೆ. ಈ ನುಡಿಗಟ್ಟು ಮುಗಿಯುತ್ತಿದ್ದಂತೆ ದೈವದ ಪರಿಚಾರಕರೊಬ್ಬರು ಅಡ್ಡಣ ಹೊಡೆತಕ್ಕೆ ಅಣಿಯಾಗಿ ನಿಂತಿರುವ ಯುವಕರತ್ತ ಕಲಶದ ನೀರಿನಿಂದ ಪ್ರೋಕ್ಷಣೆ ಮಾಡುತ್ತಾರೆ. ಕಲಶ ಪ್ರೋಕ್ಷಣೆ ಆಗುತ್ತಿದ್ದಂತೆ ಎದುರು ಬದುರಾಗಿ ನಿಂತಿರುವ ಯುವಕರು ನೆಲದಲ್ಲಿಟ್ಟ ಅಡ್ಡಣವನ್ನು ಕೈಗೆ ಎತ್ತಿಕೊಂಡು ಅದನ್ನು ಗುರಾಣಿಯಂತೆ ಹಿಡಿದು ಎದುರುಬದುರಾಗಿ ಹೊಡೆದಾಟ ಆರಂಭಿಸುತ್ತಾರೆ. ಪ್ರತಿಯೊಬ್ಬರೂ ಎದುರು ಪ್ರತಿನಿಧಿಯ ಕೈಯಲ್ಲಿ ಹಿಡಿದಿರುವ ಅಡ್ಡಣಕ್ಕೆ ಹೊಡೆಯಬೇಕೆಂಬ ನಿಯಮವೂ ಇದೆ. ಹೊಡೆದಾಟ ಜೋರಾಗುತ್ತಿದ್ದಂತೆ ಬೆನ್ನು ಹಾಕಿ ನಿಂತಿರುವ ಉಳ್ಳಾಕುಲು ದೈವ ಬಂದು ಹೊಡೆದಾಟವನ್ನು ಬಿಡಿಸುತ್ತದೆ.

Continue Reading

DAKSHINA KANNADA

ನಾಲ್ಕು ತಿಂಗಳ ಮಗುವಿಗೆ ಹಾಲಿನಲ್ಲಿ ಆಲ್ಕೋಹಾಲ್ ಬೆರೆಸಿದ ಅಜ್ಜಿ..! ಅಜ್ಜಿ ಮಾಡಿದ ಎಡವಟ್ಟಿಗೆ ಕೋಮಾಗೆ ಜಾರಿದ ಮಗು !!

Published

on

ಮಂಗಳೂರು/ಇಟಲಿ: ಇಟಲಿಯಲ್ಲೊಂದು ಆಘಾತಕಾರಿ ಘಟನೆ ನಡೆದಿದೆ. ಅಜ್ಜಿಯೊಬ್ಬರು ನಾಲ್ಕು ತಿಂಗಳ ಮಗುವಿಗೆ ಕುಡಿಯುವ ಹಾಲಿನಲ್ಲಿ ಆಲ್ಕೋಹಾಲ್‌ ಬೆರೆಸಿರುವ ಘಟನೆ ನಡೆದಿದೆ.

feed

ಮೊಮ್ಮಗು ಕುಡಿಯುವ ಹಾಲಿಗೆ ಅಜ್ಜಿ ತಪ್ಪಾಗಿ ಆಲ್ಕೋಹಲ್ ಬೆರೆಸಿದ್ದಾರೆ. ಮಗು ಅರ್ಧ ಹಾಲು ಕುಡಿದ ಬಳಿಕ ಮಗು ಅಳಲು ಆರಂಭಿಸಿದೆ. ಅಜ್ಜಿಗೆ ಅನುಮಾನ ಬಂದು ತಾನು ಕುಡಿಸಿದ ಹಾಲಿನ ವಾಸನೆಯನ್ನು ತೆಗೆದು ಪರಿಶೀಲನೆ ಮಾಡಿದಾಗ ಅದರಲ್ಲಿ ಆಲ್ಕೋಹಾಲ್‌ ಮಿಶ್ರಣ ಹಾಕಿರುವುದು ಬೆಳಕಿಗೆ ಬಂದಿದೆ.  ಇದರಿಂದ ಆಘಾತಕ್ಕೊಳಗಾದ ವೃದ್ಧೆ ಮಗುವನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಮುಂದೆ ಓದಿ..; ಜೀವಾಂತ್ಯವಾದ ಕಾಂತಾಬಾರೆ-ಬೂದಬಾರೆ ಜನ್ಮಕ್ಷೇತ್ರದ ಮರ..! ಇತಿಹಾಸದ ಜೀವಂತ ಸಾಕ್ಷಿಯ ಅಂತ್ಯ..!

ಕೋಮಾಗೆ ಜಾರಿದ ಮಗು:

ಅದಾಗಲೇ ಮಗುವಿನ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಕೋಮ ಸ್ಥಿತಿಗೆ ಜಾರಿತ್ತು. ಬಳಿಕ ವೈದ್ಯರು ಚಿಕಿತ್ಸೆ ನೀಡಿದ ಬಳಿಕ ಚೇತರಿಸಿಕೊಂಡಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದೆ. ಮಗುವಿಗೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಆದರೆ ಮಗುವಿನ ಆರೋಗ್ಯವನ್ನು ಸಂಪೂರ್ಣ ಪರಿಶೀಲಿಸಿದ ಬಳಿಕ ಅಜ್ಜಿ ವಿರುದ್ಧ ಪ್ರಕರಣ ದಾಖಲಿಸಲು ನಿರ್ಧರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

 

 

Continue Reading

LATEST NEWS

Trending