Monday, July 4, 2022

ಉಳ್ಳಾಲ: ನೀರಿನ ಗಲಾಟೆ ಪ್ರಕರಣದಲ್ಲಿ ಪರಾರಿಯಾಗಿದ್ದ ಆರೋಪಿ ಬಂಧನ

ಉಳ್ಳಾಲ: ಕುಡಿಯುವ ನೀರು ಸರಬರಾಜು ಮಾಡುವ ವಿಚಾರದಲ್ಲಿ ರಿಝ್ವಾನ್ ಎಂಬವರಿಗೆ ಹಲ್ಲೆ ಮಾಡಿ ಚೂರಿಯಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಟ್ಯಾಂಕರ್ ಚಾಲಕ ಮೇಲಂಗಡಿ ನಿವಾಸಿ ಖಲೀಲ್ ಎಂಬಾತನನ್ನು ಉಳ್ಳಾಲ ಇನ್ಸ್‌ ಪೆಕ್ಟರ್ ಸಂದೀಪ್ ನೇತೃತ್ವದ ತಂಡ ಬಂಧಿಸಿದೆ.

ಏಪ್ರಿಲ್ 29ರಂದು ನಗರ ಸಭೆಯ ನೀರು ಸರಬರಾಜು ಬಗ್ಗೆ ಚೆಂಬುಗುಡ್ಡೆ ನಿವಾಸಿ ರಿಝ್ವಾನ್ ಅವರಿಗೆ ಖಲೀಲ್ ಚೂರಿಯಿಂದ ಇರಿದು ಪರಾರಿಯಾಗಿದ್ದ.

ಈ ಬಗ್ಗೆ ರಿಝ್ವಾನ್ ಸ್ನೇಹಿತ ಸೈಫುದ್ದೀನ್ ನೀಡಿದ ದೂರಿನ ಮೇರೆಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮೆರೆಸಿಕೊಂಡಿದ್ದ ಟ್ಯಾಂಕರ್ ಚಾಲಕ ಖಲೀಲ್ ನನ್ನು ಉಳ್ಳಾಲ ಪೊಲೀಸರು ನಿನ್ನೆ ಬಂಧಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ನೀರುಪಾಲು-ಓರ್ವನ ರಕ್ಷಣೆ

ಬಂಟ್ವಾಳ: ನದಿಯಲ್ಲಿ ಈಜಲು ತೆರಳಿದ್ದ ಐವರು ಬಾಲಕರಲ್ಲಿ ಇಬ್ಬರು ನೀರು ಪಾಲಾಗಿದ್ದು, ಓರ್ವನನ್ನು ಸ್ಥಳೀಯರು ರಕ್ಷಣೆ ಮಾಡಿದರೆ, ಮತ್ತೋರ್ವ ಬಾಲಕ ನಾಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಳ್ಳಾಲ ತಾಲೂಕಿನ ಸಜಿಪಪಡು...

ಮಂಗಳೂರು: ಬೆಂಗ್ರೆ ವಾರ್ಡಿನ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಕಾಮತ್

ಮಂಗಳೂರು: ಮಹಾನಗರ ಪಾಲಿಕೆಯ ಬೆಂಗ್ರೆ ವಾರ್ಡಿನಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು.ತೋಟ ಬೆಂಗ್ರೆಯ ಪ್ಯಾಸೆಂಜರ್ ಬೋಟ್ ಜೆಟ್ಟಿಯ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿ ಮಾತನಾಡಿದ ಶಾಸಕ...

ಪುತ್ತೂರಿನಲ್ಲಿ ಬೈಕ್‌ – ಕಾರು ಡಿಕ್ಕಿ: ಓರ್ವ ಜೀವಾಂತ್ಯ

ಪುತ್ತೂರು: ಬೈಕ್ ಮತ್ತು ಮಾರುತಿ ಕಾರು ನಡುವೆ ಡಿಕ್ಕಿ ಸಂಭವಿಸಿ ಓರ್ವ ಮೃತಪಟ್ಟು ಇನ್ನೋರ್ವ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಹೊರ ವಲಯದ ಕುಂಬ್ರದಲ್ಲಿ ನಡೆದಿದೆ.ಕು೦ಬ್ರ...