Connect with us

DAKSHINA KANNADA

ಉಳ್ಳಾಲ: ನೂತನ ಮನೆಯ ಗೃಹ ಪ್ರವೇಶದ ಐದೇ ದಿನದಲ್ಲಿ ನೇಣುಬಿಗಿದು ಯುವತಿ ಆತ್ಮಹತ್ಯೆ..!

Published

on

ನೂತನ ಮನೆ ಖರೀದಿಸಿದ ಯುವತಿಯೋರ್ವಳು ಅದ್ಧೂರಿ ಗೃಹ ಪ್ರವೇಶಗೈದ ಐದೇ ದಿವಸದಲ್ಲಿ ಅದೇ ಮನೆ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಉಳ್ಳಾಲ ಕುಂಪಲದಲ್ಲಿ ನಡೆದಿದೆ.

ಉಳ್ಳಾಲ: ನೂತನ ಮನೆ ಖರೀದಿಸಿದ ಯುವತಿಯೋರ್ವಳು ಅದ್ಧೂರಿ ಗೃಹ ಪ್ರವೇಶಗೈದ ಐದೇ ದಿವಸದಲ್ಲಿ ಅದೇ ಮನೆ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಉಳ್ಳಾಲ ಕುಂಪಲದಲ್ಲಿ ನಡೆದಿದೆ.

ಮೂಲತಃ ಫರಂಗಿಪೇಟೆಯ ಸದ್ಯ ಕುಂಪಲ ಚಿತ್ರಾಂಜಲಿ ನಗರದ ನಿವಾಸಿಯಾಗಿದ್ದ ಅಶ್ವಿನಿ ಬಂಗೇರ(25) ಆತ್ಮಹತ್ಯೆಗೈದ ಯುವತಿ.

ನಿನ್ನೆ ರಾತ್ರಿ ಅಶ್ವಿನಿ ತನ್ನ‌ ಸ್ನೇಹಿತೆ ಜೊತೆ ಚಾಟ್ ಮಾಡಿದ್ದಳು ಎನ್ನಲಾಗಿದ್ದು ಸ್ನೇಹಿತೆ ಬೆಳಗ್ಗೆ ಬಂದು ಕೋಣೆಯ ಬಾಗಿಲು ಒಡೆದು ನೋಡಿದಾಗ ಅಶ್ವಿನಿ ಫ್ಯಾನಿಗೆ ಸೀರೆಯಿಂದ ನೇಣು ಬಿಗಿದು ಆತ್ಮ ಹತ್ಯೆಗೈದಿದ್ದು ಬೆಳಕಿಗೆ ಬಂದಿದೆ.

ಅಶ್ವಿನಿ ಬರೆದ 24 ಪುಟಗಳ ಡೆತ್ ನೋಟ್ ಪೊಲೀಸರಿಗೆ ದೊರೆತಿದೆ.

ಡೆತ್ ನೋಟಲ್ಲಿ ತಾನು ಮನೆ ಖರೀದಿಸಿ ಮೋಸ ಹೋಗಿದ್ದು ಬ್ಯಾಂಕ್ ಅಧಿಕಾರಿಗಳು ಬಂದು ಪೀಡಿಸುತ್ತಿರುವ ಬಗ್ಗೆ ಉಲ್ಲೇಖಿಸಲಾಗಿದೆಯಂತೆ.

ಅಶ್ವಿನಿ ಸಾಮಾನ್ಯ ಕುಟುಂಬದವರಾಗಿದ್ದು ವಿದೇಶದಲ್ಲಿ ಉದ್ಯೋಗದಲ್ಲಿದ್ದು ಒಂದೂವರೆ ತಿಂಗಳ ಹಿಂದೆ ಊರಿಗೆ ಬಂದಿದ್ದಳು.

ಕುಂಪಲದ ಚಿತ್ರಾಂಜಲಿ ನಗರದಲ್ಲಿ ಸಂಗೀತಾ ಎಂಬವರಿಂದ ಅಶ್ವಿನಿಯೇ ಮನೆಯೊಂದನ್ನ ಖರೀದಿಸಿದ್ದು ಕಳೆದ ಜೂ.3 ರಂದು ಗೃಹ ಪ್ರವೇಶ ಮಾಡಿ ತಾಯಿ ದೇವಕಿ, ದೊಡ್ಡಮ್ಮನ ಇಬ್ಬರು ಗಂಡು ಮಕ್ಕಳೊಂದಿಗೆ ನೆಲೆಸಿದ್ದರೆನ್ನಲಾಗಿದೆ.

ನಿನ್ನೆ ರಾತ್ರಿ ಇವರೆಲ್ಲ ಇದ್ದರೂ, ತನ್ನ ಕೋಣೆಯಲ್ಲಿ ಅಶ್ವಿನಿ ಸಾವಿಗೆ ಶರಣಾಗಿದ್ದು ಮನೆಯವರಿಗೇ ತಿಳಿದಿರಲಿಲ್ಲ.

ಅಶ್ವಿನಿ ಗೃಹ ಪ್ರವೇಶದಂದು ರಾತ್ರಿ ಸ್ನೇಹಿತೆಯರ ಜೊತೆ ಪಾರ್ಟಿ ಮಾಡಿ ಕುಣಿದು ಸಂಭ್ರಮಿಸಿದ್ದಳಂತೆ.

ನಂತರವೂ ಸ್ನೇಹಿತೆಯರು ಮನೆಗೆ ಬರುತ್ತಿದ್ದು ಟೆರೇಸ್ ಮೇಲೆ ಪಾರ್ಟಿ ಮಾಡುತ್ತಿದ್ದರಂತೆ. ಡೆತ್ ನೋಟಲ್ಲಿ ಅಶ್ವಿನಿ ತನ್ನ ಪ್ರಿಯಕರನ ಹೆಸರು ಉಲ್ಲೇಖಿಸಿ ಐ ಲವ್ ಯೂ ಅಂತ ಬರೆದಿದ್ದು ತಾನು ಬಳಸುತ್ತಿದ್ದ ಐ ಫೋನನ್ನ ಆತನಿಗೆ ನೀಡಬೇಕೆಂದು ಹೇಳಿದ್ದಾಳೆ.

ಅಶ್ವಿನಿಯ ತಾಯಿ ಮಗಳನ್ನ ನೆನೆದು ಮನೆಯೊಳಗಡೆ ಬಿದ್ದು ಹೊರಳಾಡುತ್ತಿರುವ ದೃಶ್ಯ ಮನಕಲಕುವಂತಿತ್ತು.

ಬ್ಯಾಂಕ್ ಸಾಲದಿಂದ ಅಶ್ವಿನಿ‌ ಖಿನ್ನತೆಗೊಳಗಾಗಿ ಆತ್ಮ ಹತ್ಯೆಗೈದಿರುವುದಾಗಿ ಪೊಲೀಸರು ಶಂಕಿಸಿದ್ದಾರೆ.

ಮೃತದೇಹವನ್ನ ಉಳ್ಳಾಲ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

DAKSHINA KANNADA

MANGALURU : ಪೆಟ್ರೋಲ್ ಬಂಕ್ ಸಿಬ್ಬಂದಿ ಎಡವಟ್ಟು; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿ ಅನಾಹುತ

Published

on

ಮಂಗಳೂರು : ಪೆಟ್ರೋಲ್ ಬಂಕ್ ಸಿಬ್ಬಂದಿ ಎಡವಟ್ಟಿನಿಂದ ಕಾರಿಗೆ ಪೆಟ್ರೋಲ್ ತುಂಬಿಸುವ ಬದಲು ಡೀಸೆಲ್ ತುಂಬಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪರಿಣಾಮ ಕಾರು ಇಂಜಿನ್ ಸಂಪೂರ್ಣ ಹಾಳಾಗಿ ಲಕ್ಷಾಂತರ ರೂ.ನಷ್ಟವಾಗಿದೆ ಎಂದು ಕಾರು ಮಾಲಕ ಆರೋಪಿಸಿದ್ದಾರೆ.

ಹೊಟೇಲ್ ಉದ್ಯಮಿ ಜೀವನ್ ಶೆಟ್ಟಿ ಎಂಬವರು ತಮ್ಮ ಹುಂಡೈ ಐ 10 ಗ್ರ್ಯಾಂಡ್ ಕಾರ್ ಗೆ ಪೆಟ್ರೋಲ್ ತುಂಬಿಸುವ ಸಲುವಾಗಿ, ಎಪ್ರಿಲ್ 5 ರಂದು ಮಧ್ಯಾಹ್ನ 12 ರ ಸುಮಾರಿಗೆ ಬಲ್ಮಠದ ಜ್ಯೂಸ್ ಜಂಕ್ಷನ್ ಮುಂಭಾಗದ ಹೆಚ್ ಪಿ ಪೆಟ್ರೋಲ್ ಬಂಕ್ ಗೆ ಬಂದಿದ್ದರು. ಕ್ಯಾಪ್ ಮೇಲೆ ಪೆಟ್ರೋಲ್ ಎಂದು ಬರೆದಿದ್ದರೂ, ಸಿಬ್ಬಂದಿ ಮಾತ್ರ ಕಾರಿಗೆ ಡೀಸೆಲ್ ತುಂಬಿಸಿದ್ದಾರೆ.

 

ಪರಿಣಾಮ ಕಾರು ಕೆಲವೇ ಕಿಲೋ ಮೀಟರ್ ಸಂಚರಿಸಿ ಮುಂದಕ್ಕೆ ಹೋಗದೆ ನಿಂತಿದೆ. ಪರಿಶೀಲಿಸಿದಾಗ ಬಂಕ್ ಸಿಬ್ಬಂದಿ ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ತುಂಬಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಪ್ರಶ್ನಿಸಿದಾಗ ಪೆಟ್ರೋಲ್ ಬಂಕ್ ಮ್ಯಾನೇಜರ್ ತಮಗೂ ಇದಕ್ಕೂ ಸಂಬಂಧವೇ ಇಲ್ಲ ಎಂದು ವರ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾರು ಇಂಜಿನ್ ದುರಸ್ಥಿಗೆ 2 ಲಕ್ಷಕ್ಕೂ ಅಧಿಕ ಖರ್ಚು ಆಗಲಿದೆ. ಆದರೆ, ಪೆಟ್ರೋಲ್ ಬಂಕ್ ಮಾಲಕ ಬರೀ 30 ಸಾವಿರ ಕೊಟ್ಟು ಸುಮ್ಮನಾಗಿದ್ದಾರೆ ಎಂದು ಜೀವನ್ ಶೆಟ್ಟಿ ದೂರಿದ್ದಾರೆ. ಕಡಿಮೆ ಸಂಬಳಕ್ಕೆ ಅನುಭವವಿಲ್ಲದ ಕಾರ್ಮಿಕರನ್ನು ನೇಮಿಸುತ್ತಾರೆ. ಇಂತಹ ಸಮಸ್ಯೆಯಾದಾಗ ತಮ್ಮ ಇನ್ಶೂರೆನ್ಸ್ ನಲ್ಲಿ ಪರಿಹಾರ ನೀಡುವ ಅವಕಾಶವಿದ್ದರೂ ಬಂಕ್ ಮಾಲಕರು ಮಾತ್ರ ಹಿಂದೇಟು ಹಾಕುತ್ತಿದ್ದಾರೆ. ಆದ್ದರಿಂದ ತಾನು ಪರಿಹಾರಕ್ಕಾಗಿ ಗ್ರಾಹಕ ನ್ಯಾಯಾಲಯದ ಮೊರೆ ಹೋಗುವುದಾಗಿ ಜೀವನ್ ಶೆಟ್ಟಿ ಹೇಳಿದ್ದಾರೆ.

Continue Reading

DAKSHINA KANNADA

ಹೊತ್ತಿ ಉರಿದು ಭಸ್ಮ*ವಾದ ಸ್ವೀಟ್ ಕಾರ್ನ್ ಸ್ಟಾಲ್‌..!! ಓಡಿ ಜೀವ ಉಳಿಸಿಕೊಂಡ ಸ್ಟಾಲ್ ಮಾಲೀಕ, ಗ್ರಾಹಕರು

Published

on

ಉಳ್ಳಾಲ: ರಸ್ತೆಯ ಬದಿಯಲ್ಲಿ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಸ್ಟಾಲ್ ಒಂದರಲ್ಲಿ ಆಕಸ್ಮಿ*ಕ ಬೆಂಕಿಯಿಂದಾಗಿ ಸ್ಟಾಲ್ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಉಳ್ಳಾಲದ ದೇರಳಕಟ್ಟೆಯಲ್ಲಿ ನಡೆದಿದೆ.

sweet corn burn

ಗ್ಯಾಸ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡಿದೆ. ರಸ್ತೆಯ ಬದಿಯಲ್ಲೇ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಅಂಗಡಿ ಮಾಲೀಕ ಕಾರ್ನ್ ತಯಾರಿಸುವಾಗ ಈ ಅವಘಡ ಸಂಭವಿಸಿದೆ. ತಕ್ಷಣ ಅಂಗಡಿ ಮಾಲೀಕ ಹಾಗೂ ಸ್ವೀಟ್ ಕಾರ್ನ ತಿನ್ನಲು ಬಂದಿದ್ದ ಗ್ರಾಹಕರು ಓಡಿ ತಪ್ಪಿಸಿಕೊಂಡಿದ್ದಾರೆ. ಸ್ಥಳೀಯರು ತಕ್ಷಣ ಮರಳು ಹಾಗೂ ನೀರನ್ನ ಹಾಕಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಆದ್ರೆ ಅಷ್ಟರಲ್ಲಾಗಲೇ ಸ್ಟಾಲ್ ಉರಿದು ಭಸ್ಮವಾಗಿ ಹೋಗಿದೆ.

Read More..; ಬೆಂಕಿ ಹಚ್ಚಿ ಯುವತಿಯ ಬರ್ಬ*ರ ಹ*ತ್ಯೆ..!! ಕತ್ತು ಕೊಯ್ದು ಸು*ಟ್ಟು ಹಾಕಿರುವ ಶಂಕೆ

sweet corn burn 2

Continue Reading

DAKSHINA KANNADA

ಮಂಡ್ಯದಲ್ಲಿ ಅವಳಿ ಮಕ್ಕಳ ಸಾ*ವಿನ ಪ್ರಕರಣಕ್ಕೆ ಟ್ವಿಸ್ಟ್..! ತಾಯಿಯಿಂದ ಕೃತ್ಯ..!

Published

on

ಮಂಗಳೂರು,(ಮಂಡ್ಯ): ಮಂಡ್ಯದಲ್ಲಿ ಐಸ್‌ ಕ್ರೀಮ್‌ ತಿಂದು ಅವಳಿ ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌ ಸಿಕ್ಕಿದೆ. ಬುಧವಾರ ಅವಳಿ ಮಕ್ಕಳು ಸಾವನ್ನಪ್ಪಿದ್ದರು. ಐಸ್ ಕ್ರೀಂ ತಿಂದು ಮಕ್ಕಳು ಇಹಲೋಕ ತ್ಯಜಿಸಿವೆ ಎನ್ನಲಾಗಿತ್ತು. ಆದರೆ, ಮರಣೋತ್ತರ ಪರೀಕ್ಷೆ ಬಳಿಕ ಸತ್ಯಾಂಶ ಬಯಲಾಗಿದೆ. ತಾಯಿಯೇ ಮಕ್ಕಳಿಗೆ ವಿಷ ಹಾಕಿ ಸಾಯಿಸಿದ್ದಾಳೆ ಎನ್ನುವುದು ಖಚಿತವಾಗಿದೆ.

ಹೆತ್ತ ಮಕ್ಕಳಿಗೆ ವಿಷವಿಕ್ಕಿದ ತಾಯಿ!

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದ ಪೂಜಾ ಹಾಗೂ ಪ್ರಸನ್ನ ದಂಪತಿಗಳ ಒಂದೂವರೆ ವರ್ಷದ ಅವಳಿ ಕಂದಮ್ಮಗಳು ಸಾವನ್ನಪ್ಪಿದ್ದವು.

ಪೊಲೀಸ್‌ ತನಿಖೆಯ ಬಳಿಕ ತಾಯಿ ಪೂಜಾಳೇ ಮೂವರು ಮಕ್ಕಳಿಗೆ ವಿಷ ಹಾಕಿದ್ದಾಳೆಂಬುದು ಗೊತ್ತಾಗಿದೆ.

ತ್ರಿಶುಲ್, ತ್ರಿಶ ಅವಳಿ ಮಕ್ಕಳು ಹಾಗೂ ಮಗಳು ಬೃಂದಾಗೆ ಪೂಜಾ ಹಾಕಿದ್ದಳು. ಬಳಿಕ ಐಸ್ ಕ್ರೀಂ ತಿಂದು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಬಿಂಬಿಸಲಾಗಿತ್ತು. ಇದೀಗ ಪೊಲೀಸ್ ವಿಚಾರಣೆ ವೇಳೆ ಸತ್ಯಾಂಶ ಬಯಲಾಗಿದೆ.

ಪೂಜಾ ಪತಿ ಪ್ರಸನ್ನ ಪದೇ ಪದೇ ಜಗಳವಾಡುತ್ತಿದ್ದರು. ಈ ಜಗಳದಿಂದ ಬೇಸತ್ತು ಬುಧವಾರ ಮಕ್ಕಳಿಗೆ ತಾಯಿ ವಿಷ ಉಣಿಸಿದ್ದಾಳೆ. ಬಳಿಕ ತಾನೂ ಸೇವಿಸಿದ್ದಳು. ಕೂಡಲೇ ಮಕ್ಕಳು ಹಾಗೂ ಪೂಜಾಳನ್ನು ಮಂಡ್ಯ‌ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿ, ಆಸ್ಪತ್ರೆಯಲ್ಲಿ ಅವಳಿ ಜವಳಿ ಕಂದಮ್ಮಗಳು ಕೊನೆಯುಸಿರೆಳೆದಿದ್ದವು.

ಸದ್ಯ ತಾಯಿ ಹಾಗೂ ಮೊದಲ ಮಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Continue Reading

LATEST NEWS

Trending