ನವದೆಹಲಿ: ಬರೋಬ್ಬರಿ 18 ಕೊಲೆ, ಕನಿಷ್ಠ 20 ಅತ್ಯಾಚಾರ ಮಾಡಿದ್ದು, 9 ಪ್ರಕರಣಗಳಲ್ಲಿ ಆರೋಪಿಯಾಗಿದ್ದ ವಿಕೃತ ಕಾಮಿ ಉಮೇಶ್ ರೆಡ್ಡಿ ಮರಣ ದಂಡನೆ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
ಈತ ಸೈನಿಕನಾಗಿ ಮಾತ್ರವಲ್ಲದೆ ಪೊಲೀಸ್ ಇಲಾಖೆಯಲ್ಲೂ ಕೆಲಸ ಮಾಡಿದ್ದಾನೆ. ಇದೀಗ ಶಿಕ್ಷೆಗೆ ಗುರಿಯಾಗಿದ್ದಾನೆ.
ಈತನ ಕೃತ್ಯಗಳು ಕರ್ನಾಟಕ ಮಾತ್ರವಲ್ಲದೇ ಮಹಾರಾಷ್ಟ್ರ, ಗುಜರಾತ್‌ನಲ್ಲೂ ಬೆಳಕಿಗೆ ಬಂದಿವೆ. ಇನ್ನೂ ಕೆಲವು ಪ್ರಕರಣಗಳು ಹೊರ ಜಗತ್ತಿಗೆ ಪರಿಚಯವೇ ಆಗಿಲ್ಲ ಎನ್ನುವುದು ಪೊಲೀಸರ ಅಭಿಪ್ರಾಯ.
ಕರ್ನಾಟಕ ಹೈಕೋರ್ಟ್ ಉಮೇಶ್ ರೆಡ್ಡಿಗೆ ಮರಣದಂಡನೆ ಖಾಯಂಗೊಳಿಸಿತ್ತು.
ಈ ಆದೇಶವನ್ನು ಪ್ರಶ್ನಿಸಿ ಉಮೇಶ್ ರೆಡ್ಡಿ ಸುಪ್ರೀಂ ಮೆಟ್ಟಿಲೇರಿದ್ದ. ಈ ಅರ್ಜಿಯ ವಿಚಾರಣೆ ನಡೆಸಿದ್ದ ಸಿಜೆಐ ಉದಯ್ ಲಲಿತ್ ಅವರಿದ್ದ ತ್ರಿಸದಸ್ಯ ಪೀಠ ಮರಣದಂಡನೆ ಶಿಕ್ಷೆಯನ್ನು ರದ್ದುಗೊಳಿಸಿದೆ.
ಕಾನೂನನ್ನು ಉಲ್ಲಂಘಿಸಿ 10 ವರ್ಷಗಳ ಕಾಲ ಏಕಾಂಗಿಯಾಗಿ ಬೆಳಗಾವಿ ಜೈಲಿನಲ್ಲಿ ಇರಿಸಲಾಗಿದೆ. ಅಪರಾಧಿ ಯೋಗಕ್ಷೇಮದ ಮೇಲೆ ದುಷ್ಪರಿಣಾಮ ಬೀರಿದೆ.
ಹೀಗಾಗಿ ಈತನ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಮಾರ್ಪಾಡಿಸಲಾಗಿದೆ ಎಂದು ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.