Connect with us

    DAKSHINA KANNADA

    ಕಾಂಗ್ರೆಸ್ ಹೈಕಮಾಂಡ್‌ಗೆ ಕಗ್ಗಂಟಾದ ಮಂಗಳೂರು ಉತ್ತರ ಕ್ಷೇತ್ರ : ಘೋಷಣೆಯಾಗದ ಕಾಂಗ್ರೆಸ್ ಟಿಕೆಟ್..!

    Published

    on

    ಒಂದು ವೇಳೆ ಇನಾಯತ್‌ ಆಲಿಗೆ ಟಿಕೆಟ್ ನೀಡಿದ್ರೆ ಮಾಜಿ ಶಾಸಕ ಟಿಕೆಟ್ ಆಕಾಂಕ್ಷಿ ಮೊಯಿದಿನ್ ಬಾವಾ ರೆಬೆಲ್ ಆಗುವ ಸಾಧ್ಯತೆ ಇದ್ದು ಇದು ಮತಗಳಿಕೆಗೆ ಹಿನ್ನಡೆಯಾಗಲಿದೆ.

    ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ ರಂಗು ಪಡೆಯುತ್ತಿದೆ. ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಇದೇ ಎಪ್ರಿಲ್20 ಕೊನೆಯ ದಿನಾಂಕವಾಗಿದೆ.

    ಆದರೆ ಮಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾರೆಂಬುದು ಇನ್ನೂ ಅಂತಿಮವಾಗದೆ ಕಗ್ಗಂಟಾಗಿ ಉಳಿದಿದೆ.

    ಕಾರಣ ಟಿಕೆಟ್ ಪಡೆಯಲು ಮಾಜಿ ಶಾಸಕ ಮೊಯ್ದಿನ್ ಬಾವ ಮತ್ತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ನಡುವೆ ನೇರ ಪೈಪೋಟಿ ಇದೆ.

    ಕ್ಷೇತ್ರದಲ್ಲೂ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಪೈಪೋಟಿ ಇದೆ. ಇಬ್ಬರು ಹೈಕಮಾಂಡ್​​ನಲ್ಲಿ ಪ್ರಬಲ ಲಾಬಿ ನಡೆಸುತ್ತಿದ್ದು, ಅಂತಿಮವಾಗಿ ಟಿಕೆಟ್ ಯಾರಿಗೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

    ಮೊಯ್ದಿನ್ ಬಾವ ಅವರು 2013ರ ವಿಧಾನಸಭಾ ಚುನಾವಣೆಯಲ್ಲಿ ಮೊದಲ ಬಾರಿ ಸ್ಪರ್ಧಿಸಿ ಕಾಂಗ್ರೆಸ್ ಪಕ್ಷದಿಂದ ಜಯಗಳಿಸಿದ್ದರು.

    2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ. ವೈ ಭರತ್ ಶೆಟ್ಟಿ ಅವರ ಎದುರು ಪರಾಭವಗೊಂಡಿದ್ದರು.

    ಇವರು ಸಿದ್ದರಾಮಯ್ಯ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದಾರೆ. ಮತ್ತೊಂದೆಡೆ ಉದ್ಯಮಿ ಇನಾಯತ್ ಅಲಿಯವರು ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

    ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಪಡೆಯಲು ಅವರು ಕಳೆದ ಎರಡು ವರ್ಷಗಳಿಂದ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರವನ್ನು ನಡೆಸಿದ್ದಾರೆ. ಇನಾಯತ್ ಅಲಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಆಪ್ತರಾಗಿದ್ದಾರೆ.

    ಡಿಕೆಶಿ ಸೂಚನೆಯಂತೆ ಈಗಾಗಲೇ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ನಡೆಸುತ್ತಿರುವ ಅವರು ಈ ಬಾರಿಯ ಕಾಂಗ್ರೆಸ್ ಅಭ್ಯರ್ಥಿಯಾಗುವ ನಿರೀಕ್ಷೆಯಲ್ಲಿದ್ದಾರೆ.

    ಮಂಗಳೂರು ಉತ್ತರದಲ್ಲಿ ಬಿಜೆಪಿ – ಕಾಂಗ್ರೆಸ್ ನಡುವೆ ನೇರ ಪೈಪೋಟಿ ಇದೆ.

    ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಡಾ.ವೈ ಭರತ್ ಶೆಟ್ಟಿ ಅವರಿಗೆ ಟಿಕೆಟ್ ನೀಡಲಾಗಿದೆ. ಆಡಳಿತ ರೂಡ ಪಕ್ಷ ಬಿಜೆಪಿ ಶಾಸಕರಾಗಿರುವ ಡಾ ಭರತ್ ಶೆಟ್ಟಿಯನ್ನು ಮಣಿಸುವುದು ಅಷ್ಟು ಸುಲಭವಲ್ಲ ಎಂದು ಕಾಂಗ್ರೆಸ್‌ ಕೂಡ ಮನಗಂಡಿದ್ದು ಪ್ರಬಲ ಅಭ್ಯರ್ಥಿಯ ಅಗತ್ಯವಿದೆ,

    ಒಂದು ವೇಳೆ ಇನಾಯತ್‌ ಆಲಿಗೆ ಟಿಕೆಟ್ ನೀಡಿದ್ರೆ ಮಾಜಿ ಶಾಸಕ ಟಿಕೆಟ್ ಆಕಾಂಕ್ಷಿ ಮೊಯಿದಿನ್ ಬಾವಾ ರೆಬೆಲ್ ಆಗುವ ಸಾಧ್ಯತೆ ಇದ್ದು ಇದು ಮತಗಳಿಕೆಗೆ ಹಿನ್ನಡೆಯಾಗಲಿದೆ.

    ಇವರೇ ಮಾತ್ರವಲ್ಲದೆ ಮಾಜಿ ಮೇಯರ್ ಎಂ.ಶಶಿಧರ್ ಹೆಗ್ಡೆ, ಲುಕ್ಮಾನ್ ಬಂಟ್ವಾಳ, ಪುರುಷೋತ್ತಮ ಚಿತ್ರಾಪುರ, ಕವಿತಾ ಸನಿಲ್, ಪ್ರತಿಭಾ ಕುಳಾಯಿ, ಅನಿಲ್ ಕುಮಾರ್ ಪೂಜಾರಿ, ಅಲ್ತಾಫ್ ಸುರತ್ಕಲ್, ಪದ್ಮನಾಭ ಕೋಟ್ಯಾನ್ ಕಾಂಗ್ರೆಸ್ ಪಕ್ಷದ ಟಿಕೆಟ್ ಪಡೆಯಲು ಅರ್ಜಿ ಸಲ್ಲಿಸಿದ್ದಾರೆ. ಆದ್ರೆ ಮೂಲಗಳ ಪ್ರಕಾರ ಮೊಯ್ದಿನ್ ಬಾವಾರನ್ನು ಕೈಬಿಟ್ಟು ಇನಾಯತ್ ಅಲಿಗೆ ಇಂದು ಸಂಜೆ ಒಳಗೆ ಟಿಕೆಟ್ ಘೋಷಣೆಯಾಗುವ ಸಾಧ್ಯತೆಗಳು ಹೆಚ್ಚಿವೆ ಎನ್ನಲಾಗಿದೆ.

    1 Comment

    1 Comment

    1. SRL Diagnostics

      18/04/2023 at 3:47 PM

      ಅಭ್ಯರ್ಥಿ ಯಾರಾದರೂ ರೆಬೆಲ್ ಆಗುವ ಆಲೋಚನೆ ಪಕ್ಷದ ಹಿತ ದೃಷ್ಟಿಯಿಂದ ಪಕ್ಷಕ್ಕೆ ಹಾನಿ ಆಗುತ್ತದೆ. ಆದುದರಿಂದ ಮೊಹಿದಿನ್ ಬಾವಾ ರವರು ಪಕ್ಷ ನಿಷ್ಠೆಯಿಂದ ಪಕ್ಷದ ಜಯಕ್ಕಾಗಿ ಶ್ರಮಿಸಬೇಕು.ಸರ್ಕಾರ ರಚನೆಯಾಗಲು ಪ್ರತಿಯೊಂದು ಸೀಟು ಅತ್ಯಂತ ಮಹತ್ವದ್ದಾಗಿದೆ. ಜೈ ಕಾಂಗ್ರೆಸ್.

    Leave a Reply

    Your email address will not be published. Required fields are marked *

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    DAKSHINA KANNADA

    ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು

    Published

    on

    ಮಂಗಳೂರು: ಗುಜರಾತ್‌ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.

     

     

    ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್‌ ಗಾರ್ಡ್‌ ತಂಡ ಹೆಲಿಕಾಪ್ಟರ್‌ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್‌ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್‌ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.

    ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್‌ ಗಾರ್ಡ್‌ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

    Continue Reading

    DAKSHINA KANNADA

    ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!

    Published

    on

    ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.

    ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.

    ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.

    ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.

    ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.

    Continue Reading

    LATEST NEWS

    Trending