Monday, August 10, 2020

ಬೆಂಗಳೂರಿನಲ್ಲಿ ನಿಯಂತ್ರಣಕ್ಕೆ ಬಾರದ ಕೊರೊನಾ ಜುಲೈ 14 ರಿಂದ ಒಂದು ವಾರ ಬೆಂಗಳೂರು ಲಾಕ್​ಡೌನ್..!

Array

ಬ್ರಹ್ಮಗಿರಿ ಬೆಟ್ಟ ಕುಸಿತ ಎರಡೇ ದಿನದಲ್ಲಿ ಕಾರ್ಯಾಚರಣೆ ಮುಗಿಸಿ – ಆರ್ ಅಶೋಕ್

ಕೊಡಗು : ಕೊಡಗಿನ ತಲಕಾವೇರಿ ಬ್ರಹ್ಮಗಿರಿ ಬೆಟ್ಟ ಕುಸಿತವಾಗಿ ಕಣ್ಮರೆಯಾಗಿರುವ ನಾಲ್ವರನ್ನು ಹುಡುಕುವ ಕೆಲಸ ಎರಡೇ ದಿನಗಳಲ್ಲಿ ಮುಗಿಯಬೇಕು ಎಂದು ಕಂದಾಯ ಸಚಿವ ಆರ್ ಅಶೋಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಕೊಡಗಿನ ತಲಕಾವೇರಿಯ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಳಿಕೆ ಹಾದಿಯಲ್ಲಿ ಕೊರೊನಾ ಪ್ರಕರಣ..!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಳಿಕೆ ಹಾದಿಯಲ್ಲಿ ಕೊರೊನಾ ಪ್ರಕರಣ..! ಮಂಗಳೂರು :ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಸದ್ಯ ಇಳಿಕೆ ಹಾದಿಯಲ್ಲಿದ್ದು, ಇಂದು ಕೇವಲ 132 ಕೊರೊನಾ ಪ್ರಕರಣ ದಾಖಲಾಗಿದೆ. ಆದರೆ ಕೊರೊನಾದಿಂದ ಸಾವನಪ್ಪುತ್ತಿರುವವರ ಸಂಖ್ಯೆ...

ಉಡುಪಿ 6 ಸಾವಿರ ದಾಟಿದ ಕೊರೊನಾ ಒಟ್ಟು ಸೊಂಕಿತರ ಸಂಖ್ಯೆ

ಉಡುಪಿ ; ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 282 ಕೊರೊನಾ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಉಡುಪಿಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಆರು ಸಾವಿರ ದಾಟಿದೆ. ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 6201...

ಬಾಲಿವುಡ್ ಸ್ಟಾರ್ ನಿಧಿ ಅಗ್ರವಾಲ್..!

ಬಾಲಿವುಡ್ ಸ್ಟಾರ್ ನಿಧಿ ಅಗ್ರವಾಲ್...  ಸಮಯ ಸಿಕ್ಕಾಗ ಸೋಷಿಯಲ್ ಮೀಡಿಯಾ ಲೈವ್ ಬರುತ್ತಾ, ಅಭಿಮಾನಿಗಳ ಜೊತೆ ಮಾತನಾಡುತ್ತ ಕಾಲ ಕಳೆಯುವ ಹವ್ಯಾಸ ಇಟ್ಟುಕೊಟ್ಟಿದ್ದಾಳೆ ನಿಧಿ ಅಗ್ರವಾಲ್.. ಹೈದ್ರಾಬಾದ್ ನಲ್ಲಿ ನಲ್ಲಿ ಹುಟ್ಟಿ ಬಳಿಕ...

ಚಾಕಲೇಟ್ ಗಂಟಲಲ್ಲಿ ಸಿಲುಕಿ ಬಾಲಕ ಸಾವು

ಮಂಗಳೂರು: ಚಾಕಲೇಟ್ ಗಂಟಲಲ್ಲಿ ಸಿಲುಕಿದ ಪರಿಣಾಮ ಎಂಟು ವರ್ಷದ ಬಾಲಕ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ಹೊರವಲಯದ ಉಳ್ಳಾಲ ಸೋಮೇಶ್ವರ ಗ್ರಾಮದ ಉಚ್ಚಿಲ ಗುಡ್ಡದಲ್ಲಿ ಈ ದುರ್ಘಟನೆ ನಡೆದಿದೆ.ರಹೀಂ ಎಂಬವರ ಮಗ...

ಬೆಂಗಳೂರಿನಲ್ಲಿ ನಿಯಂತ್ರಣಕ್ಕೆ ಬಾರದ ಕೊರೊನಾ ಜುಲೈ 14 ರಿಂದ ಒಂದುವಾರ ಬೆಂಗಳೂರು ಲಾಕ್​ಡೌನ್..!

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಕೈಮೀರಿ ಹರಡುತ್ತಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಕೊರೊನಾ ಮಿತಿಮೀರಿದೆ. ಈ ಹಿನ್ನೆಲೆಯಲ್ಲಿ ನಗರವನ್ನು ಒಂದು ವಾರ ಕಾಲ ಲಾಕ್​ ಡೌನ್ ಮಾಡಲು ಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಿರ್ಧರಿಸಿದ್ದಾರೆ.

ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನ ಒಂದು ವಾರ ಕಾಲ ಲಾಕ್ ಡೌನ್ ಮಾಡಿ ಅಧಿಕೃತ ಘೋಷಣೆ ಮಾಡಲಾಗಿದೆ. ಜುಲೈ 14, ಮಂಗಳವಾರ ರಾತ್ರಿ 8ಗಂಟೆಯಿಂದ ಜುಲೈ 23 ರವರೆಗೆ ಸಂಪೂರ್ಣ ಲಾಕ್​ಡೌನ್ ಮಾಡಲಾಗಿದೆ.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಯಡಿಯೂರಪ್ಪ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಜೊತೆ ಚರ್ಚೆ ನಡೆಸಿದ್ದರು. ಈ ವೇಳೆ, ಲಾಕ್ ಡೌನ್ ಕ್ರಮದ ಕುರಿತ ಗಂಭೀರ ಸಮಾಲೋಚನೆ ನಡೆಸಿದರು. ಯಡಿಯೂರಪ್ಪ ಅವರು ಲಾಕ್​ಡೌನ್ ಕುರಿತು ಕೇಂದ್ರ ಸಚಿವರೊಂದಿಗೂ ಸಮಾಲೋಚನೆ ನಡೆಸಿದ್ದರು.

ಎಂಟು ವಲಯಗಳ ಸಚಿವರು ಪ್ರತ್ಯೇಕವಾಗಿ ಶಾಸಕರು ಮತ್ತು ಪಾಲಿಕೆ ಸದಸ್ಯರ ಜೊತೆ ಚರ್ಚೆ ನಡೆಸಿ ತಮ್ಮ ಸಲಹೆಗಳನ್ನ ಮುಖ್ಯಮಂತ್ರಿಗೆ ತಿಳಿಸಿದ್ದರು.

ಜೊತೆಗೆ ತಜ್ಞರ ಜೊತೆ ಸಿಎಂ ಚರ್ಚೆ ನಡೆಸಿದ್ದರು. ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಸಾಧಕ ಬಾಧಕಗಳನ್ನ ಸಿಎಂ ಪರಾಮರ್ಶೆ ಮಾಡಿದ್ದರು.

ಅವರೆಲ್ಲರ ಅಭಿಪ್ರಾಯ ಪಡೆದ ನಂತರ ಯಡಿಯೂರಪ್ಪ ಅವರು ಲಾಕ್​ಡೌನ್ ಬಗ್ಗೆ ಅಂತಿಮ ನಿರ್ಧಾರಕ್ಕೆ ಬಂದರೆನ್ನಲಾಗಿದೆ.

ಇಡೀ ರಾಜ್ಯವನ್ನೇ ಲಾಕ್​ಡೌನ್ ಮಾಡುವ ಆಲೋಚನೆಯೂ ಸರ್ಕಾರಕ್ಕೆ ಇತ್ತಾದರೂ ಮುಂದಿನ ವಾರದಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವ ಸಾದ್ಯತೆಗಳಿದ್ದು ಇದರಲ್ಲಿ ದಕ್ಷಿಣ ಕನ್ನಡವೂ ಸಂಪೂರ್ಣ ಲಾಕ್ ಡೌನ್ ಮಾಡುವ ಸಾಧ್ಯತೆಗಳಿವೆ.

https://twitter.com/BSYBJP/status/1281961869599600640?s=20

Hot Topics

ಕದ್ರಿ ಕಂಬ್ಳ ಜಂಕ್ಷನ್‌ ನಲ್ಲಿ ಭೀಕರ ರಸ್ತೆ ಅಪಘಾತ ಯುವತಿಯ ಮೈಮೇಲೆ ಹರಿದ ಕಾರು..! 

ಕದ್ರಿ ಕಂಬ್ಳ ಜಂಕ್ಷನ್‌ ನಲ್ಲಿ ಭೀಕರ ರಸ್ತೆ ಅಪಘಾತ ಯುವತಿಯ ಮೈಮೇಲೆ ಹರಿದ ಕಾರು..!  ಮಂಗಳೂರು : ಇಂದು ಬೆಳಿಗ್ಗೆ ಮಂಗಳೂರು ನಗರದ ಕದ್ರಿಯಲ್ಲಿ ನಡೆದಿದ್ದ ರಸ್ತೆ ಅಪಘಾತವೊಂದರಲ್ಲಿ ಯುವತಿಯೊಬ್ಬಳು ಗಂಭೀರ ಗಾಯಗೊಂಡಿದ್ದಾಳೆ. ನಗರದ ಕದ್ರಿ...

ಚಾರ್ಮಾಡಿ ಪರಿಸರದಲ್ಲಿ ಭಾರೀ ಮಳೆ :ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಮೃತ್ಯಂಜಯ ಹೊಳೆ..!

ಚಾರ್ಮಾಡಿ ಪರಿಸರದಲ್ಲಿ ಭಾರೀ ಮಳೆ :ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಮೃತ್ಯಂಜಯ ಹೊಳೆ..! ಬೆಳ್ತಂಗಡಿ : ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ಪರಿಸರದಲ್ಲಿ ಭಾರೀ ಮಳೆಯಾಗುತ್ತಿದ್ದು, ಸನಿಹದ ಮೃತ್ಯಂಜಯ ಹೊಳೆ ಅಪಾಯದ ಮಟ್ಟದಲ್ಲಿ...

ಕೇರಳ ಮನ್ನಾರ್ ಭೂ ಕುಸಿತಕ್ಕೆ 13 ಬಲಿ..ಮಣ್ಣಿನಡಿ ಸಿಲುಕಿರುವ 80ಕ್ಕೂ ಅಧಿಕ ಮಂದಿ

ತಿರುವನಂತಪುರಂ : ಕೇರಳದ ಇಡುಕ್ಕಿಯಲ್ಲಿ ಇಂದು ಬೆಳಗ್ಗೆ ಭೂಕುಸಿತವಾಗಿ 13 ಜನರು ಸಾವನ್ನಪ್ಪಿದ್ದಾರೆ. ಕೇರಳದ ಪ್ರಸಿದ್ಧ ಪ್ರವಾಸಿತಾಣ ಮುನ್ನಾರ್​​ನಿಂದ 25 ಕಿ.ಮೀ ದೂರದಲ್ಲಿರೋ ರಾಜಮಲೈ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ....
Copy Protected by Chetans WP-Copyprotect.