ಮೈಸೂರು: ಮೂರೂವರೆ ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಾಬೀತಾಗಿದ್ದು, 45 ವರ್ಷದ ಜಗದೀಶ್ ಎಂಬಾತನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 50 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ.
ಮೈಸೂರಿನ ಪೋಕ್ಸೋ ವಿಶೇಷ ನ್ಯಾಯಾಲಯ ಈ ಆದೇಶ ನೀಡಿದೆ. 2019ರಲ್ಲಿ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮದಲ್ಲಿ ಪ್ರಕರಣ ನಡೆದಿತ್ತು. ಆಟವಾಡುತ್ತಿದ್ದ ಮಗುವಿನ ಮೇಲೆ ಜಗದೀಶ್ ದೌರ್ಜನ್ಯ ನಡೆಸಿದ್ದ.
ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸರ್ಕಾರದ ಪರ ಪಿ.ಪಿ ಪುಷ್ಪಲತಾ ವಾದ ಮಂಡಿಸಿದ್ದರು.