Connect with us

    LATEST NEWS

    ಭೂಗತ ಪಾತಕಿ ಛೋಟಾ ರಾಜನ್ ಗೆ ಜೀವಾವಧಿ ಶಿಕ್ಷೆ

    Published

    on

    ಮುಂಬೈ : 2001 ರಲ್ಲಿ ಹೋಟೆಲ್‌ ಉದ್ಯಮಿ ಜಯ ಶೆಟ್ಟಿ ಹ*ತ್ಯೆ ಪ್ರಕರಣದಲ್ಲಿ ದರೋಡೆಕೋರ ಛೋಟಾ ರಾಜನ್ ಅಪರಾಧಿ ಎಂದು ಮುಂಬೈ ನ್ಯಾಯಾಲಯ ಗುರುವಾರ ತೀರ್ಪು ನೀಡಿದ್ದು, ಜೀವಾ*ವಧಿ ಶಿಕ್ಷೆ ವಿಧಿಸಿದೆ. ಮಹಾರಾಷ್ಟ್ರದ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯಿದೆ (MCOCA) ಅಡಿಯಲ್ಲಿ ಪ್ರಕರಣಗಳ ವಿಶೇಷ ನ್ಯಾಯಾಧೀಶ ಎ.ಎಂ.ಪಾಟೀಲ್ ಅವರು ರಾಜನ್ ದೋಷಿ ಎಂದು ತೀರ್ಪು ನೀಡಿ ಆದೇಶಿಸಿದ್ದಾರೆ.


    ಏನಿದು ಪ್ರಕರಣ?

    ಹ*ತ್ಯೆಯಾದ ಜಯಾ ಶೆಟ್ಟಿ ಸೆಂಟ್ರಲ್ ಮುಂಬೈನ ಗಾಮ್‌ದೇವಿಯಲ್ಲಿರುವ ಗೋಲ್ಡನ್ ಕ್ರೌನ್ ಹೋಟೆಲ್‌ನ ಮಾಲಕರಾಗಿದ್ದರು. ಇವರಿಗೆ ಛೋಟಾ ರಾಜನ್ ಗ್ಯಾಂಗ್‌ನಿಂದ ಸುಲಿಗೆ ಕರೆಗಳು ಬರುತ್ತಿದ್ದವು. 2001 ರ ಮೇ 4 ರಂದು ಹೋಟೆಲ್‌ನಲ್ಲಿ ರಾಜನ್‌ ಗ್ಯಾಂಗ್‌ನ ಇಬ್ಬರು ಸದಸ್ಯರು ಜಯಾ ಶೆಟ್ಟಿಯನ್ನು ಗುಂಡಿಕ್ಕಿ ಹ*ತ್ಯೆ ಮಾಡಿದ್ದರು.

    ಆರಂಭದಲ್ಲಿ ಮಹಾರಾಷ್ಟ್ರ ಪೊಲೀಸರು ಹೋಟೆಲ್‌ ಮಾಲೀಕ ಜಯಾ ಶೆಟ್ಟಿ ಅವರಿಗೆ ಭದ್ರತೆ ಒದಗಿಸಿದ್ದರು. ಆದರೆ, ಕೊ*ಲೆಯಾಗುವ ಎರಡು ತಿಂಗಳ ಮೊದಲು ಅವರ ಭದ್ರತೆಯನ್ನು ಹಿಂಪಡೆಯಲಾಗಿತ್ತು.

    ಇದನ್ನೂ ಓದಿ : ಗ್ಯಾಸ್‌ ಹೇರಿಕೊಂಡು ಹೋಗುತ್ತಿದ್ದ ಟ್ಯಾಂಕರ್ ಪಲ್ಟಿ..! ತಪ್ಪಿದ ಭಾರೀ ಅನಾಹುತ

    2001 ರ ಮೇ 4 ರಂದು ರಾತ್ರಿ ಛೋಟಾ ರಾಜನ್ ನ ಇಬ್ಬರು ಶೂಟರ್‌ಗಳು ಹೋಟೆಲ್ ಆವರಣಕ್ಕೆ ನುಗ್ಗಿ, ಜಯ ಶೆಟ್ಟಿಯನ್ನು ಕೊ*ಲೆ ಮಾಡಿದ್ದರು. 2011 ರ ಜೂನ್ 11 ರಂದು ಪತ್ರಕರ್ತ ಜೆ. ಡೇ ಅವರನ್ನು ಹ*ತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 2018ರ ಮೇ ತಿಂಗಳಲ್ಲಿ ಜೀವಾವ*ಧಿ ಶಿಕ್ಷೆ ವಿಧಿಸಿದ ನಂತರ ಮುಂಬೈನಲ್ಲಿ ಛೋಟಾ ರಾಜನ್‌ಗೆ ಇದು ಎರಡನೇ ಜೀವಾವಧಿ ಶಿಕ್ಷೆಯಾಗಿದೆ.

    LATEST NEWS

    ಕುಂದಾಪುರ : ಸಕ್ಕರೆ ತುಂಬಿಕೊಂಡು ಸಾಗುತ್ತಿದ್ದ ಲಾರಿ ಪಲ್ಟಿ

    Published

    on

    ಕುಂದಾಪುರ : ಸಕ್ಕರೆ ತುಂಬಿಕೊಂಡು ಕೇರಳಕ್ಕೆ ತೆರಳುತ್ತಿದ್ದ ಲಾರಿಯೊಂದು ಚಾಲಕ ನಿಯಂತ್ರಣ ತಪ್ಪಿ ಇನ್ನೊಂದು ಲಾರಿಗೆ ಡಿ*ಕ್ಕಿ ಹೊಡೆದು ಪಲ್ಟಿಯಾದ ಘಟನೆ ಕುಂದಾಪುರ ತಾಲೂಕಿನ ಮಲ್ಲಿಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು(ಜು.5) ಬೆಳಿಗ್ಗೆ ಸಂಭವಿಸಿದೆ.

    ಲಾರಿಯು ಸೋಲಾಪುರದಲ್ಲಿ ಸಕ್ಕರೆ ತುಂಬಿಕೊಂಡು ಕೇರಳಕ್ಕೆ ತೆರಳುತ್ತಿತ್ತು. ಮಲ್ಲಿಕಟ್ಟೆ ಜಂಕ್ಷನ್ ನಲ್ಲಿ ಎದುರಿನಿಂದ ಬರುತ್ತಿದ್ದ ಲಾರಿಗೆ ಡಿ*ಕ್ಕಿ‌ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡ ಲಾರಿಯು ಇನ್ನೊಂದು ಲಾರಿಗೆ ಡಿ*ಕ್ಕಿ ಹೊಡೆದು ಪಲ್ಟಿಯಾಗಿದೆ.

    ಇದನ್ನೂ ಓದಿ : ಉಡುಪಿ : ಪ್ರೇಯಸಿಯೊಂದಿಗೆ ಜಗಳ; ಅರ್ಧ ದಾರಿಯಲ್ಲೇ ಬಸ್ ನಿಲ್ಲಿಸಿ ಹೋದ ಡ್ರೈವರ್!

    ಚಾಲಕ ಅಪಾಯದಿಂದ ಪಾರಾಗಿದ್ದು, ಹೆದ್ದಾರಿಯಲ್ಲಿ ಸಂಚಾರವು ಕೆಲಹೊತ್ತು ಅಸ್ತವ್ಯಸ್ತಗೊಂಡಿತ್ತು. ಗಂಗೊಳ್ಳಿ ಪೊಲೀಸರು ಹಾಗೂ ಹೆದ್ದಾರಿ ಗಸ್ತು ಸಿಬ್ಬಂದಿ ಸ್ಥಳಕ್ಕೆ ಬಂದು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

    Continue Reading

    DAKSHINA KANNADA

    ‘HSRP’ ನಂಬರ್ ಪ್ಲೇಟ್ ಅಳವಡಿಸಲು ಸೆ.15 ರವರೆಗೆ ಗಡುವು ವಿಸ್ತರಣೆ

    Published

    on

    ಬೆಂಗಳೂರು: ರಾಜ್ಯದಲ್ಲಿ ಎಚ್​ಎಸ್​ಆರ್​ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಸರ್ಕಾರವು ಹೈಕೋರ್ಟ್​ಗೆ ಮಾಹಿತಿ ನೀಡಿದೆ.

    ಹೆಚ್ಚುವರಿ ಅಡ್ವೋಕೇಟ್ ಜನರಲ್ ವಿಕ್ರಮ್ ಹುಯಿಲಗೋಳ ಅವರು ನ್ಯಾಯಪೀಠದ ಮುಂದೆ ಹಾಜರಾಗಿ, ಎಚ್‌ಎಸ್‌ಆರ್​ಪಿ ಅಳವಡಿಸಿಕೊಳ್ಳಲು ನಿಗದಿಪಡಿಸಲಾಗಿದ್ದ ಅವಧಿಯನ್ನು ಸೆಪ್ಟೆಂಬರ್ 15ರವರೆಗೆ ರಾಜ್ಯ ಸರ್ಕಾರ ವಿಸ್ತರಿಸಿದೆ ಎಂದು ಮಾಹಿತಿ ತಿಳಿಸಿದರು.

    ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರ ಈ ಮಾಹಿತಿ ನೀಡಿತು.

    ಎಚ್‌ಎಸ್‌ಆರ್‌ಪಿಗಳನ್ನು ಅಳವಡಿಸಲು ಸಾರಿಗೆ ಇಲಾಖೆ ಗಡುವನ್ನು ವಿಸ್ತರಿಸಿರುವುದು ಇದು ನಾಲ್ಕನೇ ಬಾರಿಯಾಗಿದೆ . ಹಿಂದಿನ ಗಡುವು ನವೆಂಬರ್ 17, 2023, ಫೆಬ್ರವರಿ 17, 2024 ಮತ್ತು ಮೇ 17, 2024 ಆಗಿತ್ತು. HSRP ಗಳನ್ನು ಪಡೆಯದ ವಾಹನ ಮಾಲೀಕರು ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ.

    Continue Reading

    DAKSHINA KANNADA

    ಶ್ರೀ ಗಜಾನನ ಯಕ್ಷಗಾನ ವೇಷಭೂಷಣ ಸಂಸ್ಥೆ ಸಂಸ್ಥಾಪಕ ಹಂದಾಡಿ ಬಾಲಕೃಷ್ಣ ನಾಯಕ್ ನಿಧ*ನ..!

    Published

    on

    ಮಂಗಳೂರು: ಶ್ರೀ ಗಜಾನನ ಯಕ್ಷಗಾನ ವೇಷಭೂಷಣ ಸಂಸ್ಥೆಯ ಸಂಸ್ಥಾಪಕ, ಬಡಗುತಿಟ್ಟಿನ ಹಿರಿಯ ಪ್ರಸಾದನ ತಜ್ಞ ಹಂದಾಡಿ ಬಾಲಕೃಷ್ಣ ನಾಯಕ್ ತಮ್ಮ 76ರ ಹರೆಯದಲ್ಲಿ ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿ*ಧನ ಹೊಂದಿದರು.


    ಎಚ್. ಸುಬ್ಬಣ್ಣ ಭಟ್ ಮತ್ತು ಇಂದು ನಾಯಕ್ ಇವರ ಜೊತೆಯಲ್ಲಿ ಬಡಗುತಿಟ್ಟಿನ ವೇಷಭೂಷಣಗಳನ್ನು ವಿವಿಧ ಸಂಘ ಸಂಸ್ಥೆಗಳಿಗೆ ಒದಗಿಸುತ್ತಾ, ಬಳಿಕ ಸ್ವಂತ ಸಂಸ್ಥೆಯನ್ನು ಸ್ಥಾಪಿಸಿದರು. ತಮ್ಮ ಅಪೂರ್ವ ಕಲಾಪ್ರತಿಭೆ ಹಾಗೂ ಸರಳ ಸಜ್ಜನಿಕೆಯಿಂದ ಎಲ್ಲ ಸಂಘ ಸಂಸ್ಥೆಗಳಿಗೂ ಅನಿವಾರ್ಯ ಎಂಬಂತೆ ಬಾಳಿದ ಧೀಮಂತರು. ಬಡಗುತಿಟ್ಟಿನ ಕಿರೀಟ ಹಾಗೂ ವೇಷಭೂಷಣಗಳ ತಯಾರಿಕೆಯಲ್ಲಿ ಸಿದ್ಧಹಸ್ತರಾಗಿದ್ದರು.

    ದೇಶವಿದೇಶಗಳಲ್ಲಿ ನೂರಾರು ಮಂದಿಗೆ ಬಡಗುತಿಟ್ಟಿನ ಪಾರಂಪರಿಕ ವೇಷಭೂಷಣ ಸಿದ್ಧಪಡಿಸಿಕೊಟ್ಟ ಕೀರ್ತಿ ಬಾಲಕೃಷ್ಣ ನಾಯಕರದ್ದು. ತನ್ನ ಮೂವರು ಪುತ್ರರೂ ಈ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವುದು ಈ ಕುಟುಂಬದ ವಿಶೇಷತೆಯಾಗಿದೆ.

    ಇವರ ಕಲಾ ಪ್ರತಿಭೆಯನ್ನು ಗುರುತಿಸಿ ಕರ್ನಾಟಕ ಯಕ್ಷಗಾನ ಅಕಾಡೆಮಿ, ಯಕ್ಷಗಾನ ಕಲಾರಂಗ ಹಾಗೂ ಕಳೆದ ವರ್ಷ ಉಡುಪಿಯಲ್ಲಿ ಜರಗಿದ ಪ್ರಥಮ ಯಕ್ಷಗಾನ ಸಮ್ಮೇಳನದಲ್ಲಿ ಗೌರವಿಸಲಾಗಿತ್ತು. ಉಡುಪಿಯ ಯಕ್ಷಶಿಕ್ಷಣ ಅಭಿಯಾನ ಯಶಸ್ವಿಯಾಗುವಲ್ಲಿ ಬಾಲಕೃಷ್ಣ ನಾಯಕ್ ಕೊಡುಗೆ ಮಹತ್ತರವಾದುದು.

    ಮೃತರು ಪತ್ನಿ, ಮೂವರು ಪುತ್ರರು ಹಾಗೂ ಅಪಾರ ಅಭಿಮಾನಿಗಳನ್ನು ಅ*ಗಲಿದ್ದಾರೆ. ಯಕ್ಷಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರೂ, ಉಡುಪಿಯ ಶಾಸಕರೂ ಆದ ಯಶಪಾಲ್ ಸುವರ್ಣ, ಸ್ಥಾಪಕ ಟ್ರಸ್ಟಿ ಕೆ.ರಘುಪತಿ ಭಟ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್, ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಹಾಗೂ ಬ್ರಹ್ಮಾವರದ ಅಜಪುರ ಯಕ್ಷಗಾನ ಮಂಡಳಿಯ ಅಧ್ಯಕ್ಷ ಪದ್ಮನಾಭ ಗಾಣಿಗ ಹಾಗೂ ಸದಸ್ಯರು ತೀರ್ವ ಸಂತಾಪ ಸೂಚಿಸಿದ್ದಾರೆ.

    Continue Reading

    LATEST NEWS

    Trending