Tuesday, January 26, 2021

ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಕಾರು ಅಪಘಾತ: ಪತ್ನಿ ಸೇರಿ ಇಬ್ಬರ ದುರ್ಮರಣ..!

ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಕಾರು ಅಪಘಾತ: ಪತ್ನಿ ಸೇರಿ ಇಬ್ಬರ ದುರ್ಮರಣ..!

ಕಾರವಾರ: ಕೇಂದ್ರ ಆಯುಷ್ ಇಲಾಖೆ ಸಚಿವರಾದ ಶ್ರೀಪಾದ್ ನಾಯಕ್ ಅವರ ಕಾರು ಅಪಘಾತವಾಗಿದ್ದು ಅವರ ಧರ್ಮ ಪತ್ನಿ ಅಸುನೀಗಿದ್ದಾರೆ. ಜೊತೆಗೆ ಸಚಿವರ ಆಪ್ತ ಸಹಾಯಕ ಕೂಡ ಸಾವನ್ನಪ್ಪಿದ್ದಾರೆ.

ಅಂಕೋಲಾ ತಾಲೂಕಿನ ಹೊಸಕಂಬಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ.

ಯಲ್ಲಾಪುರದ ಚಂದಗುಳಿ ಗಂಟೆ ಗಣಪತಿ ದೇವಸ್ಥಾನಕ್ಕೆ ಸೋಮವಾರ ಕುಟುಂಬ ಸಮೇತ ಆಗಮಿಸಿದ್ದ ಶ್ರೀಪಾದ ನಾಯಕ ಅವರು ಗಣಹವನ ನೆರವೇರಿಸಿದ್ದರು.

ನಂತರ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದರು. ಸಾಯಂಕಾಲ ಯಲ್ಲಾಪುರದಿಂದ ಹೊಸಕಂಬಿ ಮಾರ್ಗವಾಗಿ ಗೋಕರ್ಣಕ್ಕೆ ಪ್ರಯಾಣ ಬೆಳೆಸಿದ್ದರು. ಆ ಸಂದರ್ಭದಲ್ಲಿ ಅಪಘಾತವಾಗಿದೆ.

 

ದುರ್ಘಟನೆಯಲ್ಲಿ ಕೇಂದ್ರ ಸಚಿವ ಪತ್ನಿ ವಿಜಯ ಶ್ರೀಪಾದ್ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಸಚಿವರು ಸೇರಿ ಮೂವರಿಗೆ ಗಾಯಗಳಾಗಿವೆ.

ಗಾಯಾಳುಗಳನ್ನು ಕೂಡಲೇ ಅಂಕೋಲಾ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತವಾದ ಕಾರಿನಲ್ಲಿ ಒಟ್ಟು ಐವರಿದ್ದರು.

ಗಂಭೀರವಾಗಿ ಗಾಯಗೊಂಡ ಸಚಿವ ಶ್ರೀಪಾದ ನಾಯಕ ಸೇರಿ ಮೂವರಿಗೆ ಅಂಕೋಲಾ‌ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಗೋವಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...
Copy Protected by Chetans WP-Copyprotect.