ಹೊಸದಿಲ್ಲಿ: ಇದೇ ಜನವರಿ 26ರಂದು ದೆಹಲಿಯಲ್ಲಿ ಗಣರಾಜೋತ್ಸವದ ಅಂಗವಾಗಿ ನಡೆಯುವ ಸ್ತಬ್ಧಚಿತ್ರ ಪರೇಡ್‌ನಲ್ಲಿ ಕೇರಳ ರಾಜ್ಯದ ಪ್ರಸ್ತಾವವನ್ನು ಕೇಂದ್ರ ತಿರಸ್ಕರಿಸಿದೆ.
ಇದೀಗ ವಿವಾದಕ್ಕೆ ಕಾರಣವಾಗಿದೆ. ಕೇರಳ ಸರಕಾರ ಕಳುಸಿದ್ದ ʼಶ್ರೀ ನಾರಾಯಣ ಗುರುʼ ಹಾಗೂ ʼಜಟಾಯುಪ್ಪಾರʼ ದ ಪ್ರತಿಕೃತಿಗಳನ್ನು ಕೇಂದ್ರ ಸರಕಾರವು ತಿರಸ್ಕರಿಸಿ, ಆದಿ ಶಂಕರಾಚಾರ್ಯರ ಪ್ರತಿಮೆ ಇಡಬೇಕೆಂದು ಸೂಚಿಸಿದೆ.
ಈ ಬಾರಿಯ ಗಣರಾಜ್ಯೋತ್ಸವಕ್ಕೆ ಕೇರಳ ಸರಕಾರವು ಜಟಾಯುಪ್ಪಾರದ ಹಿನ್ನೆಲೆಯುಳ್ಳ,
ಮಹಿಳಾ ಸಬಲೀಕರಣವನ್ನು ಮತ್ತು ಪ್ರವಾಸೋದ್ಯಮವನ್ನು ಬಿಂಬಿಸುವ ಸ್ತಬ್ಧಚಿತ್ರವನ್ನು ಗಣರಾಜ್ಯೋತ್ಸವದ ಪರೇಡ್ ನಲ್ಲಿ ಪ್ರದರ್ಶಿಸಲು ಉದ್ದೇಶಿಸಿತ್ತು.
ಇದರೊಂದಿಗೆ ಅದರ ಮುಂಭಾಗದಲ್ಲಿ ಧಾರ್ಮಿಕ ಹಾಗೂ ಸಾಮಾಜಿಕ ಸುಧಾರಕರಾದ ಶ್ರೀ ನಾರಾಯಣ ಗುರುಗಳ ಪ್ರತಿಮೆಯನ್ನು ಇರಿಸುವುದಾಗಿ ಕೇಂದ್ರ ಸರಕಾರಕ್ಕೆ ಕಳಿಸಿದ್ದ ಪ್ರಸ್ತಾವನೆಯಲ್ಲಿ ಉಲ್ಲೇಖಿಸಿತ್ತು.
ಆದರೆ ಇದನ್ನು ಕೇಂದ್ರ ಸರ್ಕಾರ ತಿರಸ್ಕರಿಸಿ ಶಂಕರಾಚಾರ್ಯರ ಪ್ರತಿಮೆ ಇಡುವಂತೆ ಸೂಚಿಸಿದೆ
ಈ ಹಿಂದೆ ಕೇರಳದ ಸ್ತಬ್ಧ ಚಿತ್ರವು ಈ ಹಿಂದೆ ಐದು ಬಾರಿ ಪ್ರಶಸ್ತಿ ಗೆದ್ದಿದೆ.