ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಇನ್ನಿಲ್ಲ..!
ನವದೆಹಲಿ : ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರು ಇಂದು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಅವರ ಪುತ್ರ ಚಿರಾಗ್ ಟ್ವೀಟ್ ಮಾಡಿದ್ದಾರೆ.
ಕೆಲ ದಿನಗಳ ಹಿಂದೆ ದೆಹಲಿಯ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇಂತಹ ಕೇಂದ್ರ ಸಚಿವರು ಅನಾರೋಗ್ಯದಿಂದಾಗಿ ಸಾವನ್ನಪ್ಪಿರುವುದಾಗಿ ಅವರ ಪುತ್ರ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.
पापा….अब आप इस दुनिया में नहीं हैं लेकिन मुझे पता है आप जहां भी हैं हमेशा मेरे साथ हैं।
Miss you Papa… pic.twitter.com/Qc9wF6Jl6Z— युवा बिहारी चिराग पासवान (@iChiragPaswan) October 8, 2020
ಈ ಕುರಿತಂತೆ ಟ್ವಿಟ್ ಮಾಡಿರುವ ರಾಮ್ ವಿಲಾಸ್ ಪಾಸ್ವಾನ್ ಅವರ ಪುತ್ರ, ಕಳೆದ ಕೆಲ ದಿನಗಳ ಹಿಂದೆ ದೆಹಲಿಯ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ನಮ್ಮ ತಂದೆ, ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನರಾಗಿರುವುದಾಗಿ ತಿಳಿಸಿದ್ದಾರೆ.
ಈ ಮೂಲಕ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಇನ್ನಿಲ್ಲವಾಗಿದ್ದಾರೆ.
ಇನ್ನು ರಾಮ್ ವಿಲಾಸ್ ಪಾಸ್ವಾನ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಸಹಿತ ಅನೇಕ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಕ್ಯಾಬಿನೆಟ್ ಸಚಿವರಾಗಿದ್ದ ರಾಮ್ ವಿಲಾಸ್ ಪಾಸ್ವಾನ್ ಅವರು ಅಲ್ಪಾವಧಿಯ ಅನಾರೋಗ್ಯದ ನಿಮಿತ್ತ ನಿಧನರಾದ
ಸುದ್ದಿ ಕೇಳಿ ಆಘಾತವಾಯಿತು. ಭಗವಂತನು
ಅವರ ಆತ್ಮಕ್ಕೆ ಸದ್ಗತಿ ನೀಡಲೆಂದು ಪ್ರಾರ್ಥಿಸುತ್ತೇನೆ. pic.twitter.com/UlCkOCHjBj— Nalinkumar Kateel (@nalinkateel) October 8, 2020