Thursday, June 30, 2022

ಪ್ರತಾಪ್ ಸಿಂಹ ಮಗಳಿಗೆ ಕುರ್ಚಿ ಬಿಟ್ಟು ಕೊಟ್ಟ ಕೇಂದ್ರ ಸಚಿವೆ ಸ್ಮೃತಿ ಇರಾನಿ..!

ನವದೆಹಲಿ: ಸರಳರಲ್ಲಿ ಸರಳರಾಗಿ ಕಾಣುತ್ತಾರೆ ಕೇಂದ್ರ ಸಚಿವೆ ಸ್ಮೃತಿ ಇರಾನಿ.  ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾಗಿರುವ ಸ್ಮೃತಿ ಇರಾನಿ ಅವರು ಸಂಸದ ಪ್ರತಾಪ್ ಸಿಂಹ ಅವರ ಮಗಳಿಗೆ ತಮ್ಮ ಕುರ್ಚಿ ಬಿಟ್ಟು ಕೊಟ್ಟ ಪ್ರಸಂಗ ನಡೆದಿದೆ.

ಕಾರ್ಯ ನಿಮಿತ್ತ ಇಂದು ನವದೆಹಲಿಯಲ್ಲಿ ಸ್ಮೃತಿ ಇರಾನಿ ಅವರ ಕಚೇರಿಗೆ ತಮ್ಮ ಪುಟ್ಟ ಮಗಳು ವಿಪಂಚಿ ಸಿಂಹ ಅವಳೊಟ್ಟಿಗೆ ತೆರಳಿದ್ದ ಸಂಸದ ಪ್ರತಾಪ್ ಸಿಂಹ ಅವರು ಇರಾನಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಇದೇ ವೇಳೆ ಪ್ರತಾಪ್ ಸಿಂಹ ಅವರ ಮಗಳನ್ನು ಕಂಡು ಮುದ್ದಿನಿಂದ ಮಾತನಾಡಿಸಿದ ಸ್ಮೃತಿ ಇರಾನಿ, ತಮ್ಮ ಕುರ್ಚಿ ಮೇಲೆ ಮಗುವನ್ನು ಕೂರಿಸಿ ಸಂಭ್ರಮಿಸಿದ್ದಾರೆ. ಜೊತೆಗೆ ಕೆಲ ಹೊತ್ತು ಮಾತನಾಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರತಾಪ್ ಸಿಂಹ ಕೇಂದ್ರ ಸಚಿವೆಯ ಸರಳತೆಗೆ ತಲೆಬಾಗಿ ಧನ್ಯವಾದ ಹೇಳಿದ್ದಾರೆ. 

LEAVE A REPLY

Please enter your comment!
Please enter your name here

Hot Topics

ಮುಲ್ಕಿ: ಆಯತಪ್ಪಿ ಚರಂಡಿಗೆ ಬಿದ್ದು ವ್ಯಕ್ತಿ ಜೀವಾಂತ್ಯ…

ಮುಲ್ಕಿ: ನಡೆದುಕೊಂಡು ಹೋಗುತ್ತಿರುವಾಗ ಆಯತಪ್ಪಿ ಚರಂಡಿಗೆ ಬಿದ್ದು ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದ ಘಟನೆ ಮುಲ್ಕಿಯ ನಗರ ಪಂಚಾಯತ್ ವ್ಯಾಪ್ತಿಯ ಕೆಎಸ್ ರಾವ್ ನಗರ ಲಿಂಗಪ್ಪಯ್ಯಕಾಡು ಸರಕಾರಿ ಬಾವಿ ಬಳಿ ನಿನ್ನೆ ರಾತ್ರಿ ನಡೆದಿದೆ.ಮೃತ ವ್ಯಕ್ತಿಯನ್ನು...

ಬೆಳ್ತಂಗಡಿಯಲ್ಲಿ ನಾರಾಯಣ ಗುರು ಪಠ್ಯ ಸೇರ್ಪಡೆಗಾಗಿ ಜು.4 ರಂದು ಪ್ರತಿಭಟನೆ

ಬೆಳ್ತಂಗಡಿ: 10 ನೇ ತರಗತಿ ಸಮಾಜ ವಿಜ್ಞಾನ ಪಠ್ಯ ಪುಸ್ತಕದಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಪಠ್ಯ ಸೇರ್ಪಡೆ ಮಾಡದಿರುವುದರ ವಿರುದ್ಧ ಪ್ರತಿಭಟನೆ ನಡೆಸುವ ಹಿನ್ನೆಲೆ ಇಂದು ಬೆಳ್ತಂಗಡಿಯ ಗುರು ನಾರಾಯಣ ಸಭಾ ಭವನದಲ್ಲಿ...

ಕುಂದಾಪುರ: ಗದ್ದೆಯಲ್ಲಿ ಕೆಲಸ ಮಾಡುತ್ತಿರುವಾಗಲೇ ಕುಸಿದು ಕೃಷಿಕ ಜೀವಾಂತ್ಯ…

ಕುಂದಾಪುರ: ಭತ್ತದ ಗದ್ದೆಯಲ್ಲಿ ಕೃಷಿ ಕೆಲಸ ಮಾಡುತ್ತಿರುವಾಗಲೇ ಕೃಷಿಕರೋರ್ವರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಕುಂದಾಪುರದ ಕೆರಾಡಿ ಗ್ರಾಮದ ದೀಟಿ ಎಂಬಲ್ಲಿ ನಿನ್ನೆ ನಡೆದಿದೆ.ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ನಿವಾಸಿ ಪ್ರಸ್ತುತ ಕುಂದಾಪುರ...