Friday, July 1, 2022

ಮಂಗಳೂರು ವಿ.ವಿ ಕಾಲೇಜು ಹಿಜಾಬ್ ವಿವಾದ-ಟಿ.ಸಿ ಪಡೆದ ಓರ್ವ ವಿದ್ಯಾರ್ಥಿನಿ

ಮಂಗಳೂರು: ಹಿಜಾಬ್‌ ವಿವಾದ ಉಂಟಾಗಿದ್ದ ವಿಶ್ವವಿದ್ಯಾನಿಲಯ ಕಾಲೇಜಿನ ಒಬ್ಬಳು ವಿದ್ಯಾರ್ಥಿನಿ ವರ್ಗಾವಣೆ ಪ್ರಮಾಣಪತ್ರವನ್ನು ಪಡೆದುಕೊಂಡಿದ್ದು ಇಬ್ಬರು ವಿದ್ಯಾರ್ಥಿನಿಯರು ಬೇರೆ ಕಾಲೇಜಿಗೆ ಸೇರುವುದಕ್ಕಾಗಿ ಎನ್‌ಒಸಿ ಪಡೆದಿದ್ದಾರೆ.


ಈ ಮೂವರು ವಿದ್ಯಾರ್ಥಿಗಳ ಪೈಕಿ ಇಬ್ಬರು ಇತ್ತೀಚೆಗೆ ಪತ್ರಿಕಾಗೋಷ್ಠಿ ನಡೆಸಿ ಹಿಜಾಬ್‌ ಕುರಿತಾದ ವಿ.ವಿಯ ನಿರ್ಧಾರವನ್ನು ಪ್ರಶ್ನಿಸಿದ್ದರು.

ಪತ್ರಿಕಾಗೋಷ್ಠಿ ನಡೆಸಿದ್ದ ಇನ್ನೋರ್ವಳು ವಿದ್ಯಾರ್ಥಿನಿ ಪ್ರಾಂಶುಪಾಲರಲ್ಲಿ ಕ್ಷಮೆ ಕೋರಿ ಕಾಲೇಜಿನ ನಿಯಮದ ಪ್ರಕಾರ ತರಗತಿಗೆ ಹಾಜರಾಗಲು ಒಪ್ಪಿಕೊಂಡಿದ್ದಾರೆ.

ಮತ್ತೋರ್ವಳು ವಿದ್ಯಾರ್ಥಿನಿ ಆರೋಗ್ಯ ಸಮಸ್ಯೆ ಕಾರಣದಿಂದ ಇತ್ತೀಚೆಗೆ ಟಿಸಿ ಪಡೆದುಕೊಂಡಿದ್ದಾರೆ. ಹಿಜಾಬ್‌ ಧರಿಸಿ ತರಗತಿಗೆ ಬರಲು ಅವಕಾಶ ನೀಡದ ಹಿನ್ನೆಲೆಯಲ್ಲಿ 15 ಮಂದಿ ತರಗತಿಗೆ ಗೈರು ಹಾಜರಾಗುತ್ತಿದ್ದರು.

ಒಬ್ಬಾಕೆ ಟಿಸಿ ಪಡೆದುಕೊಂಡಿದ್ದು, ಇನ್ನಿಬ್ಬರು ಎನ್‌ಒಸಿ ಪಡೆದಿದ್ದಾರೆ ಎಂದು ಕಾಲೇಜಿನ ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here

Hot Topics

ಬೆಳ್ತಂಗಡಿ: ಬೀದಿ ಬದಿ ಅಂಗಡಿ ತೆರವು ಪ್ರಕರಣದ ವಿರುದ್ಧ ಪ್ರತಿಭಟನೆ

ಬೆಳ್ತಂಗಡಿ: ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಿಂದ ಕೊಕ್ಕಡ ಸಂಪರ್ಕಿಸುವ ನಿಡ್ಲೆ ಪಂಚಾಯತ್‌ ವ್ಯಾಪ್ತಿಯ ಪಾರ್ಪಿಕಲ್‌ ರಸ್ತೆಯಲ್ಲಿರುವ ಬೀದಿ ಬದಿ ವ್ಯಾಪಾರಸ್ಥರನ್ನು PWD ತೆರವುಗೊಳಿಸಿರುವ ವಿರುದ್ಧ ಬೃಹತ್ ಪ್ರತಿಭಟನೆ ಇಂದು ಬೆಳ್ತಂಗಡಿಯ ಪಿಡಬ್ಲ್ಯೂಡಿ...

ರಾಜಸ್ಥಾನ್ ಟೈಲರ್ ಹತ್ಯೆ ಖಂಡಿಸಿ ಬಂಟ್ವಾಳದಲ್ಲಿ ಪ್ರತಿಭಟನೆ

ಬಂಟ್ವಾಳ: ರಾಜಸ್ತಾನದ ಉದಯಪುರದಲ್ಲಿ ಭಯೋತ್ಪಾದಕರಿಂದ ಹಿಂಸಾತ್ಮಕ ರೀತಿಯಲ್ಲಿ ಹತ್ಯೆಯಾದ ಟೈಲರ್ ಕನ್ಹಯ್ಯಲಾಲ್ ಅವರ ಸಾವಿಗೆ ನ್ಯಾಯ ಸಿಗಬೇಕು ಹಾಗೂ ಹತ್ಯೆ ಮಾಡಿದ ಭಯೋತ್ಪಾದಕ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡುವಂತೆ ಒತ್ತಾಯಿಸಿ ವಿಶ್ವಹಿಂದೂ ಪರಿಷತ್...

ಮಹಿಳೆಯರ ಸ್ವಾವಲಂಬಿ ಬದುಕಿಗೆ ಭಾಷ್ಯ ಬರೆದ ಉಡುಪಿಯ ಸವಿತಾ ಶೇಟ್

ಉಡುಪಿ: ಮಹಿಳೆಯರಿಗೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಉಡುಪಿಯ ಮಹಿಳೆಯೊಬ್ಬರು ಪ್ರೇರಣೆಯಾಗಿದ್ದಾರೆ. ಉಡುಪಿಯ ಒಳಕಾಡು ನಿವಾಸಿ ಸವಿತಾ ಶೇಟ್ ಎಂಬವರೇ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸ್ಪೂರ್ತಿದಾಯಕರಾಗಿದ್ದಾರೆ.ಇವರ ಗಂಡ ಉದ್ಯಮಿಯಾಗಿದ್ದು ಹಾಗೂ ಮಗ ಶಿಕ್ಷಕರಾಗಿ ಕೆಲಸ...