ಪುತ್ತೂರು: ಉಪ್ಪಿನಂಗಡಿ ಗ್ರಾಮದ ರಾಗ್ ಜನರಲ್ ಸ್ಟೋರ್ ಬಳಿ (40 ವರ್ಷ) ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದ್ದು, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಹರೆ ಇಂತಿದೆ:
173 ಸೆಂ.ಮೀ. ಎತ್ತರ, ಬಿಳಿ ಮೈಬಣ್ಣ, ಕೋಲು ಮುಖ, ಸಪೂರ ಶರೀರ ಹೊಂದಿದ್ದು, ಕಪ್ಪು ಬಣ್ಣದ ಟೀ ಶರ್ಟ್ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದು ಹಾಗೂ ಜಿಯೋ ಕಂಪೆನಿಯ ಮೊಬೈಲ್ ಹೊಂದಿರುತ್ತಾರೆ.
ಈ ಬಗ್ಗೆ ಮಾಹಿತಿ ದೊರೆತಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆ ಅಥವಾ ಠಾಣಾ ದೂ.ಸಂಖ್ಯೆ:08251251055, 8242220501 ಸಂಪರ್ಕಿಸುವಂತೆ ಉಪ್ಪಿನಂಗಡಿ ಪೊಲೀಸ್ ಠಾಣಾಧಿಕಾರಿ ಪ್ರಕಟಣೆ ತಿಳಿಸಿದೆ.