ಬೆಳ್ತಂಗಡಿ: ಅಪರಿಚಿತ ವ್ಯಕ್ತಿಯೋರ್ವರು ಮೇ3 ರಂದು ಉಜಿರೆಯ ರೋಟರಿ ಬಸ್ ನಿಲ್ದಾಣದ ಬಳಿ ಬಿದ್ದಿದ್ದು ಇವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ.
ಉಜಿರೆ ಗ್ರಾಮ ಪಂಚಾಯತ್ ಕಚೇರಿಗೆ ಸಾರ್ವಜನಿಕರೊಬ್ಬರು ದೂರವಾಣಿ ಕರೆ ಮಾಡಿ ಬಸ್ ನಿಲ್ದಾಣದ ಬಳಿ ಅಪರಿಚಿತ ವ್ಯಕ್ತಿಯೊಬ್ಬರು ಅಸ್ವಸ್ಥಗೊಂಡು ಬಿದ್ದಿರುವ ಬಗ್ಗೆ ಮಾಹಿತಿ ನೀಡಿದರು.
ಪಂಚಾಯತ್ ವತಿಯಿಂದ ಸಿಬ್ಬಂದಿಗಳು ಅ್ಯಂಬುಲೆನ್ಸ್‌ನವರಿಗೆ ತಿಳಿಸಿ ಚಿಕಿತ್ಸೆಗಾಗಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್‌ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ಧಾರೆ.
ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.