Thursday, March 23, 2023

ಉಳ್ಳಾಲ ಸಮುದ್ರದಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ..!

ಉಳ್ಳಾಲ: ಉಳ್ಳಾಲದ ಮುಕ್ಕಚ್ಚೇರಿ ಸಮುದ್ರ ಕಿನಾರೆಯಲ್ಲಿ ಅಪರಿಚಿತ ವೃದ್ಧ ಮಹಿಳೆಯ ಮೃತದೇಹ ಇಂದು ಪತ್ತೆಯಾಗಿದೆ. ವಾರೀಸುದಾರರಿದ್ದಲ್ಲಿ ಉಳ್ಳಾಲ ಪೊಲೀಸ್‌ ಠಾಣೆ ಸಂಪರ್ಕಿಸುವಂತೆ ಕೋರಲಾಗಿದೆ.

ಸುಮಾರು 60-70 ರ ಹರೆಯದ ಮಹಿಳೆ ಮೃತದೇಹ ಇದಾಗಿದೆ. ಸೀರೆ ಉಟ್ಟಿರುವ ಮಹಿಳೆ ಇಂದೇ ಸಮುದ್ರಕ್ಕೆ ಬಿದ್ದಿರುವ ಶಂಕೆಯಿದೆ.

ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಮ್ಮರ್‌ ಸ್ಯಾಂಡ್‌ ಹಿಂಭಾಗದಲ್ಲಿ ಶವ ತೇಲುತ್ತಿರುವುದನ್ನು ಕಂಡು ಸ್ಥಳೀಯರು ಉಳ್ಳಾಲ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದರು.

ಅದರಂತೆ ಪೊಲೀಸರು ಗೃಹರಕ್ಷಕ ದಳದ ಸಿಬ್ಬಂದಿ ಮೊಗವೀರಪಟ್ನ ನಿವಾಸಿ ಪ್ರಸಾದ್‌ ಸುವರ್ಣ ಅವರಿಗೆ ಮಾಹಿತಿ ನೀಡಿದ್ದು, ಅವರು ಖುದ್ದಾಗಿ ಸಮುದ್ರದಲ್ಲಿ ಈಜಿ ಮೃತದೇಹವನ್ನು ದಡಕ್ಕೆ ಸೇರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

 

LEAVE A REPLY

Please enter your comment!
Please enter your name here

Hot Topics

ಕಲಬುರಗಿಯಲ್ಲಿ ಹಾಡು ಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ ಹತ್ಯೆ..!

ಹಾಡುಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ ಹತ್ಯೆ ಮಾಡಲಾದ ಘಟನೆ ಕಲಬುರಗಿಯ ಹಾಗರಗಾ ಕ್ರಾಸ್ ಬಳಿ ನಡೆದಿದೆ. ಮಜತ್ ಸುಲ್ತಾನ್ (35) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಕಲಬುರಗಿ : ಹಾಡುಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ...

40 ವರ್ಷಗಳಿಂದ ಅದೇ ಪೊಳ್ಳು ಭರವಸೆ : ಚುನಾವಣಾ ಬಹಿಷ್ಕಾರಕ್ಕೆ ಮುಂದಾದ ಸುಳ್ಯ ಅರಮನೆಗಾಯದ ಜನತೆ..!

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಈ ಗ್ರಾಮದ ಜನ ಕಳೆದ 40 ವರ್ಷಗಳಿಂದ ಬಿದಿರಿನ ತೂಗು ಸೇತುವೆಯ ಮುಖಾಂತರ ಜೀವ ಭಯದಲ್ಲಿ ಜೀವನ ನಡೆಸುತಿದ್ದಾರೆ.ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ...

ಚಿಕ್ಕಮಗಳೂರು : ಬೈಕಿಗೆ ಬಸ್ ಡಿಕ್ಕಿ – ಇಬ್ಬರು ಸವಾರರು ಸ್ಥಳದಲ್ಲೇ ಮೃತ್ಯು..!

ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನಲ್ಲಿ ಸಂಭವಿಸಿದೆ. ಚಿಕ್ಕಮಗಳೂರು: ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು...