Saturday, November 27, 2021

ಡೀಸೆಲ್‌ ದರ ಏರಿಕೆ ಖಂಡಿಸಿ ಅನಿರ್ದಿಷ್ಟಾವಧಿ ಲಾರಿ ಮುಷ್ಕರ

ಬೆಂಗಳೂರು: ಡೀಸೆಲ್ ದರ ಏರಿಕೆ ಖಂಡಿಸಿ ಮುಂದಿನ ತಿಂಗಳಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಲಾರಿ ಮುಷ್ಕರ ನಡೆಸಲು ಲಾರಿ ಮಾಲೀಕರ ಸಂಘಟನೆಗಳು ಸಿದ್ಧತೆ ನಡೆಸುತ್ತಿವೆ.


ಡೀಸೆಲ್ ದರ ಏರಿಕೆಯಿಂದ ಲಾರಿ ಮಾಲೀಕರು ತೀವ್ರ ಸಂಪಷ್ಟ ಎದುರಿಸುತ್ತಿದ್ದಾರೆ. 2020ರ ಅಕ್ಟೋಬರ್‌ನಿಂದ 2021ರ ಅಕ್ಟೋಬರ್ ಅವಧಿಯಲ್ಲಿ ಲೀಟರ್ ಡೀಸೆಲ್ ದರ ಬರೋಬ್ಬರಿ 26 ರು. ಹೆಚ್ಚಳವಾಗಿದೆ. ಪ್ರಸ್ತುತ ರಾಜ್ಯದಲ್ಲಿ ಆರು ಲಕ್ಷ ಲಾರಿಗಳಿದ್ದು, ಈ ಪೈಕಿ ಡೀಸೆಲ್ ದರ ಏರಿಕೆಯ ಹೊಡೆತ ತಡೆಯಲಾರದ ಶೇ.30ರಷ್ಟು ಲಾರಿಗಳು ಸಂಚಾರ ನಿಲ್ಲಿಸಿವೆ.

ಲಾರಿ ಮಾಲೀಕರು, ಚಾಲಕರು ಹಾಗೂ ಅವಲಂಬಿತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಡೀಸೆಲ್ ದರ ಇಳಿಕೆ ಮಾಡದಿದ್ದರೆ ಅನಿರ್ದಿಷ್ಟಾವಧಿ ಲಾರಿ ಮುಷ್ಕರ ಮಾಡುವುದು ಅನಿವಾರ್ಯ ಎಂದು ಫೆಡರೇಶನ್ ಆಫ್ ಕರ್ನಾಟಕ ಲಾರಿ ಓನರ್ ಅಂಡ್ ಏಜೆಂಟ್ ಅಸೋಸಿ ಯೇಷನ್ ಅಧ್ಯಕ್ಷ ಜಿ.ಆರ್‌.ಷಣ್ಮುಗಪ್ಪ ಹೇಳಿದರು. ಅನಿರ್ದಿಷ್ಟಾವಧಿ ಲಾರಿ ಮುಷ್ಕರ ಸಂಬಂಧ ಚರ್ಚಿಸಲು ಆ.23ರಂದು ಸಭೆ ನಡೆಸಲಾಗುತ್ತದೆ ಎಂದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...