LATEST NEWS
ಸದನದಲ್ಲಿ ಅಶಿಸ್ತಿನ ವರ್ತನೆ – ಅಧಿವೇಶನದಿಂದ 10 ಬಿಜೆಪಿ ಶಾಸಕರು ಅಮಾನತು
ಸದನದಲ್ಲಿ ಅಗೌರವ ಹಾಗೂ ಅಶಿಸ್ತಿನಿಂದ ನಡೆದುಕೊಂಡ ಹಿನ್ನಲೆಯಲ್ಲಿ ಬಿಜೆಪಿಯ ಹತ್ತು ಮಂದಿ ಶಾಸಕರನ್ನು ಈ ವಿಧಾನಸಭಾ ಅಧಿವೇಶನ ಮುಗಿಯುವವರೆಗೆ ಅಮಾನತು ಮಾಡಿ ಸ್ಪೀಕರ್ ಯು.ಟಿ.ಖಾದರ್ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು: ಸದನದಲ್ಲಿ ಅಗೌರವ ಹಾಗೂ ಅಶಿಸ್ತಿನಿಂದ ನಡೆದುಕೊಂಡ ಹಿನ್ನಲೆಯಲ್ಲಿ ಬಿಜೆಪಿಯ ಹತ್ತು ಮಂದಿ ಶಾಸಕರನ್ನು ಈ ವಿಧಾನಸಭಾ ಅಧಿವೇಶನ ಮುಗಿಯುವವರೆಗೆ ಅಮಾನತು ಮಾಡಿ ಸ್ಪೀಕರ್ ಯು.ಟಿ.ಖಾದರ್ ಆದೇಶ ಹೊರಡಿಸಿದ್ದಾರೆ.
ಅಧಿವೇಶನ ಜು. 21 ರಂದು ಕೊನೆಗೊಳ್ಳಲಿದೆ
ಅಮಾನತುಗೊಂಡ ಶಾಸಕರು:
ಆರ್. ಅಶೋಕ್, ಆರಗ ಜ್ಞಾನೇಂದ್ರ, ವಿ. ಸುನಿಲ್ ಕುಮಾರ್, ಅರವಿಂದ ಬೆಲ್ಲದ, ಧೀರಜ್ ಮುನಿರಾಜು, ಭರತ್ ಶೆಟ್ಟಿ, ಡಾ. ಅಶ್ವತ್ಥ ನಾರಾಯಣ, ಉಮಾನಾಥ ಕೋಟ್ಯಾನ್, ಯಶ್ ಪಾಲ್ ಸುವರ್ಣ, ವೇದವ್ಯಾಸ ಕಾಮತ್ ಅವರು ಸೇರಿದ್ದಾರೆ.
ಕರ್ನಾಟಕ ವಿಧಾನಸಭೆ ಕಾರ್ಯವಿಧಾನ ಹಾಗೂ ನಡಾವಳಿ ನಿಯಮ 348 ಮೇರೆಗೆ ಅಮಾನತು ಮಾಡಲಾಗಿದೆ.
ಈ ಪ್ರಸ್ತಾವಕ್ಕೆ ಸ್ಪೀಕರ್ ಖಾದರ್ ಅಂಗೀಕಾರ ನೀಡಿದರು ಹಾಗೂ ಸದಸ್ಯರನ್ನು ಸದನದಿಂದ ಹೊರಗೆ ಹೋಗುವಂತೆ ಸೂಚಿಸಿದರು.
ಸದನದ ಬಾವಿಗಿಳಿದು ರಾಜ್ಯ ಸರಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ ಬಿಜೆಪಿ ಶಾಸಕರು ಬಜೆಟ್ ಪ್ರತಿಗಳ ಕಾಗದಗಳನ್ನು ಹರಿದು ಚೂರು ಮಾಡಿ ಉಪ ಸಭಾಪತಿ ರುದ್ರಪ್ಪ ಲಮಾಣಿ ಅವರ ಮೇಲೆ ಎಸೆದಿದ್ದರು.
ಸದನದ ಬಾವಿಗಿಳಿದು ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಧರಣಿ ನಡೆಸಿದರು.
ಸ್ಪೀಕರ್ ಭೋಜನ ವಿರಾಮ ರದ್ದುಪಡಿಸಿ ಕಲಾಪ ಮುಂದುವರಿಸಿದರು.
ಬಜೆಟ್ ಮೇಲಿನ ಚರ್ಚೆ ಮುಂದುವರಿಸಲಾಗಿದ್ದು, ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಮಾತನಾಡುತ್ತಿದ್ದರು.
ರಾಜ್ಯ ಸರಕಾರದ ಐದು ಗ್ಯಾರಂಟಿ ಮತ್ತು ಇತರ ಯೋಜನೆಗಳನ್ನು ಹೊಗಳುತ್ತಿದ್ದರು.
ಈ ವೇಳೆ ಬಿಜೆಪಿ ಶಾಸಕರು ಸದನದ ಬಾವಿಗಿಳಿದು ಧರಣಿ ಮುಂದುವರಿಸಿದ್ದರು.
ಉಪಸಭಾಧ್ಯಕ್ಷರು ಸ್ಪೀಕರ್ ಪೀಠದಲ್ಲಿ ಕುಳಿತಿದ್ದರು.
ಬಿಜೆಪಿ ಶಾಸಕರು ಬಜೆಟ್ ಪ್ರತಿಗಳನ್ನ ಹರಿದು ಚೂರು ಮಾಡಿ ಎಸೆದಿದ್ದರು.
ಉಪ ಸ್ಪೀಕರ್ ರುದ್ರಪ್ಪ ಲಮಾಣಿ ಆಕ್ರೋಶ ಹೊರ ಹಾಕಿದ್ದು, ನಿಮ್ಮನ್ನು ಆಯ್ಕೆ ಮಾಡಿ ಕಳುಹಿಸಿದ ಮತದಾರರಿಗೆ ಈ ರೀತಿ ವರ್ತನೆ ತೋರಿ ಅವಮಾನ ಮಾಡಬೇಡಿ ಎಂದರು.
ಸಭೆಯನ್ನು 3 ಗಂಟೆಗೆ ಮುಂದೂಡಿದ್ದರು.
ಕಾಂಗ್ರೆಸ್ ಶಾಸಕರು ಮತ್ತು ಸಚಿವರು ದಲಿತ ಸಮುದಾಯಕ್ಕೆ ಸೇರಿದ ಉಪಸಭಾಪತಿ ಅವರ ವಿರುದ್ಧ ಈ ರೀತಿ ವರ್ತನೆ ಸರಿಯಲ್ಲ ಎಂದು ಕಿಡಿ ಕಾರಿದ್ದಾರೆ.
DAKSHINA KANNADA
ಮಂಗಳೂರು : ‘ಮಹೇಶ್’ ಬಸ್ ಮಾಲೀಕ ಆತ್ಮಹತ್ಯೆ..!
ಮಂಗಳೂರು: ಮಂಗಳೂರಿನ ಖಾಸಗಿ ಬಸ್ ನ ಮಾಲೀಕರೊಬ್ಬರು ತಾವು ಇರುವ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತರನ್ನು ಮಹೇಶ್ ಬಸ್ ಮಾಲೀಕ ಪ್ರಕಾಶ್ ಶೇಖ ಎಂದು ಗುರುತಿಸಲಾಗಿದೆ. ಅವರು ಕದ್ರಿ ಕಂಬಳ ಸಮೀಪ ಇರುವ ಅಪಾರ್ಟ್ ಮೆಂಟ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಹೇಶ್ ಹೆಸರಿನಲ್ಲಿ ಹಲವಾರು ಸಿಟಿ ಬಸ್ ಗಳು ದಿನನಿತ್ಯ ಸಂಚರಿಸುತ್ತಿದ್ದು, ಜನಮನ್ನಣೆ ಪಡೆದಿದೆ.
ಬಸ್ ಉದ್ಯಮದ ಬಗ್ಗೆ ಭಾರೀ ಪ್ರೀತಿ ಇಟ್ಟುಕೊಂಡಿದ್ದ ಪ್ರಕಾಶ್ ಯಾಕಾಗಿ ಸಾವಿಗೆ ಶರಣಾಗಿದ್ದಾರೆ ಎನ್ನುವುದು ಆಪ್ತ ಬಳಗಕ್ಕೆ ಶಾಕ್ ನೀಡಿದೆ. ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
ಬೈಕ್ ಅಪಘಾತ: ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಲೆ ಹರಿದ ಲಾರಿ- ಮೂವರು ಸ್ಥಳದಲ್ಲೇ ಸಾವು..!
ಶಿವಮೊಗ್ಗ: ಬೈಕ್ ಗಳ ಮದ್ಯೆ ನಡೆದ ಅಪಘಾತದಿಂದ ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಳೆ ಲಾರಿ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಹತೊಳಲು ಗ್ರಾಮದಲ್ಲಿ ನಡೆದಿದೆ.
ಹಳೆ ಜಂಬರಗಟ್ಟ ನಿವಾಸಿ ವಿಕಾಸ್ (18), ಯಶ್ವಂತ್ (17), ಹಾಗೂ ಶಶಾಂಕ್ (17) ಮೃತ ದುರ್ದೈವಿಗಳು.
ಎರಡು ಬೈಕ್ ಗಳ ಮಧ್ಯೆ ನಡೆದ ಅಪಘಾತದಲ್ಲಿ ಸವಾರರ ರಸ್ತೆ ಮೇಲೆ ಬಿದ್ದಿದ್ದಾರೆ.
ಇದೇ ವೇಳೆ ರಭಸವಾಗಿ ಬಂದ ಲಾರಿ ಆ ವ್ಯಕ್ತಿಗಳ ಮೇಲೆ ಹರಿದಿದೆ.
ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಒಬ್ಬನಿಗೆ ಗಂಭೀರ ಗಾಯವಾಗಿದ್ದು, ಆತನನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
FILM
ಮೋದಿಗೆ ರಕ್ತದಲ್ಲಿ ಪತ್ರ ಬರೆದ ಚಿತ್ರ ನಟ ಪ್ರೇಮ್..!
ಚಿಕ್ಕಮಗಳೂರು: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಯಬಿಡುವುದನ್ನು ಖಂಡಿಸಿದ ಕನ್ನಡ ಚಿತ್ರನಟ ಪ್ರೇಮ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.
ಕಾವೇರಿ ವಿಚಾರವಾಗಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂದು ರಾಜ್ಯದಾದ್ಯಂತ ಹೋರಾಟ ನಡೆಯುತ್ತಿದ್ದು, ಚಿತ್ರನಟ ನೆನಪಿರಲಿ ಪ್ರೇಮ್ ಸಾಥ್ ನೀಡಿದ್ದಾರೆ.
‘ಕಾವೇರಿ ನಮ್ಮದು’ ಎಂದು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.
ಕಾವೇರಿ ನೀರಿನಿಂದ ರಾಜ್ಯಕ್ಕೆ ನ್ಯಾಯ ನೀಡಬೇಕೆಂದು ಪತ್ರದ ಮೂಲಕ ಪ್ರೇಮ್ ಅವರು ಮನವಿ ಮಾಡಿದ್ದಾರೆ.
ಇದೀಗ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
- DAKSHINA KANNADA7 days ago
2ನೇ ಮದುವೆಯಾದ ಕಿರುತೆರೆ ನಟಿ ಜ್ಯೋತಿ ರೈ …!
- LATEST NEWS7 days ago
ವಾರವಿಡೀ ಕಾಡಿನಲ್ಲಿ ಸಿಲುಕಿದ್ದ ಯುವಕ- ಮನೆಗೆ ವಾಪಸ್ ಆಗುವಂತೆ ರಕ್ಷಣೆ ಮಾಡಿದ ಸಾಕುನಾಯಿ..!
- DAKSHINA KANNADA7 days ago
Puttur: ಕಾಲೇಜು ವಿದ್ಯಾರ್ಥಿನಿ ಜಿವಾಂತ್ಯ..!
- DAKSHINA KANNADA7 days ago
Ullala: ರೈಲಿನಡಿಗೆ ತಲೆಯಿಟ್ಟು ಅವಿವಾಹಿತ ವ್ಯಕ್ತಿ ಜೀವಾಂತ್ಯ..!