Connect with us

BANTWAL

Bantwala: ಅವೈಜ್ಞಾನಿಕ ಕಾಮಗಾರಿ- ಕುಸಿಯುವ ಭೀತಿಯಲ್ಲಿದೆ ಬಡ ಕುಟುಂಬದ ಮನೆ..!

Published

on

ಬಂಟ್ವಾಳ: ಯಾರೋ ಮಾಡಿದ ಅಬ್ಬೇಪಾರಿ ಕೆಲಸಗಳಿಗೆ ಇನ್ಯಾರೋ ಬಡ, ಅಮಾಯಕ ಸಾರ್ವಜನಿಕರು ಕಷ್ಟ ನಷ್ಟ ಅನುಭವಿಸುತ್ತಾರೆ. ಈ ಮಾತಿಗೆ ಇದೀಗ ಪೂರಕವಾಗಿದೆ ಬಂಟ್ವಾಳ ತಾಲೂಕು ನಾವೂರು ಗ್ರಾಮದ ಉಜಿರಾಡಿ ಗಟ್ಟಿ ಊರಿನ ಶೀನ ಪೂಜಾರಿಯವರ ಸಮಸ್ಯೆ. ಇದೀಗ ಇವರ ಮನೆ ಆಗಲೋ ಈಗಲೋ ಕುಸಿಯುವ ಭೀತಿಯಲ್ಲಿದೆ.

ಇದಕ್ಕೆ ಕಾರಣ ಇಲ್ಲಿನ ಖಾಸಗಿ ಗುತ್ತಿಗೆದಾರರು ಮಾಡಿರುವ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಮನೆ ಕುಸಿದು ಬೀಳುವ ಹಂತಕ್ಕೆ ತಲುಪಿದೆ ಎನ್ನುವುದು ಮನೆ ಮಂದಿಯ ಆರೋಪ. ಈಗಲೂ ಭಾರೀ ಮಳೆ ಸುರಿಯುತ್ತಿದ್ದು, ಎತ್ತರದ ಪ್ರದೇಶದಲ್ಲಿರುವ ಶೀನ ಪೂಜಾರಿಯವರ ಮನೆ ಕೆಳಭಾಗದಲ್ಲಿ ಖಾಸಗಿ ನಿರ್ಮಾಣ ಸಂಸ್ಥೆಯವರು ಕಾಮಗಾರಿ ಮಾಡಿದ್ದಾರೆ. ಆದರೆ ಸೂಕ್ತ ಚರಂಡಿ ಇಲ್ಲದ ಕಾರಣ ನೀರು ಹರಿದು ಹೋಗಲು ಜಾಗ ಇಲ್ಲ. ಮೇಲ್ಭಾಗದಿಂದ ಗುಡ್ಡ ಕುಸಿತ ಆಗದಂತೆ ಇಲ್ಲಿ ಮರಳಿನ ಗೋಣಿ ಚೀಲಗಳನ್ನು ಇರಿಸಿದ್ದಾರೆ. ಆದರೆ ಗೋಣಿ ಚೀಲ ಹರಿದು ಹೋದರೆ ಮತ್ತೆ ಮಣ್ಣು, ಮರಳು ಚರಂಡಿ ಸೇರುತ್ತದೆ.

ಅಲ್ಲದೆ ಮತ್ತೆ ಮೇಲ್ಭಾಗದಿಂದ ಕುಸಿದು ಬೀಳುತ್ತಿದೆ. ಇಲ್ಲಿ ಸೂಕ್ತ ತಡೆಗೋಡೆ ನಿರ್ಮಿಸಿ ಎಂದು ಆಗ್ರಹಿಸಿದರೆ ನಮಗೆ ಸದ್ಯ ಆಗಲ್ಲ ಎನ್ನುವ ಉಡಾಫೆ ಉತ್ತರ ನೀಡುತ್ತಿದ್ದಾರೆ. ಇನ್ನು ವಿಎ ಅವರಲ್ಲಿ ದೂರು ನೀಡಿದರೆ, ನಮ್ಮಲ್ಲಿ ಅನುದಾನ ಇಲ್ಲ. ಅನುದಾನ ಬಂದ ಮೇಲೆ ಮಾಡೋಣ ಎನ್ನುತ್ತಿದ್ದಾರೆ. ಒಟ್ಟಿನಲ್ಲಿ ಮನೆ ಕುಸಿಯುವ ಭೀತಿಯಲ್ಲಿಯೇ ಶೀನಪೂಜಾರಿ ಮನೆ ಮಂದಿ ಕಂಗೆಟ್ಟಿದ್ದಾರೆ. ಇವರಿಗೆ ಸೂಕ್ತ ವ್ಯವಸ್ಥೆಯನ್ನು ಆದಷ್ಟು ಬೇಗ ಸಂಬಂಧಪಟ್ಟವರು ಮಾಡಬೇಕಾಗಿದೆ. ಈ ರೀತಿಯ ಕಾಮಗಾರಿ ನಡೆಸಿ ಏನಾದರೂ ಅನಾಹುಗಳು ನಡೆದರೆ ಇದಕ್ಕೆ ಯಾರು ಹೊಣೆ…?

Click to comment

Leave a Reply

Your email address will not be published. Required fields are marked *

BANTWAL

Bantwala: ಅಕ್ಕಪಕ್ಕ ಮನೆಯ ಯುವಕ-ಯುವತಿ ಒಂದೇ ದಿನ ನಾಪತ್ತೆ..!

Published

on

ಬಂಟ್ವಾಳ: ಅಕ್ಕ ಪಕ್ಕದ ಮನೆಯ ಯುವಕ ಮತ್ತು ಯುವತಿ ಒಂದೇ ದಿನ ನಾಪತ್ತೆ ಯಾದ ಘಟನೆ ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದಲ್ಲಿ ನಡೆದಿದ್ದು, ಈ ಕುರಿತಂತೆ ಎರಡೂ ಮನೆಯವರು ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸಜೀಪಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿ ಆಯಿಷತ್‌ ರಸ್ಮಾ (18) ಮತ್ತು  ಮಹಮ್ಮದ್‌ ಸಿನಾನ್‌ (23) ನಾಪತ್ತೆಯಾದವರು. ರಸ್ಮಾ ನಡುಪದವು ಖಾಸಗಿ ಕಾಲೇಜಿನಲ್ಲಿ ಫಾರ್ಮಸಿ ವಿದ್ಯಾರ್ಥಿನಿಯಾಗಿದ್ದಾರೆ. ಅವರು ನ. 23ರ ರಾತ್ರಿ ಊಟ ಮುಗಿಸಿ ಮನೆಯಲ್ಲಿ ಮಲಗಿದ್ದು, ಮರುದಿನ ಬೆಳಗ್ಗೆ ಎದ್ದು ನೋಡಿದಾಗ ನಾಪತ್ತೆಯಾಗಿದ್ದರು. ಸಿನಾನ್‌ ಕೆಲವು ವರ್ಷಗಳ ಕಾಲ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಬಳಿಕ ಊರಿಗೆ ಬಂದು ಕೂಲಿ ಕೆಲಸ ಮಾಡಿಕೊಂಡಿದ್ದರು. ಅವರು ನ. 23ರ ರಾತ್ರಿ ಊಟ ಮಾಡಿ ಮಲಗಿದವರು ಮರುದಿನ ಬೆಳಗಾಗುವಷ್ಟರಲ್ಲಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಪೊಲೀಸರು ಎರಡೂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

 

Continue Reading

BANTWAL

Bantwala: ಅಕ್ರಮ ಮರ ಸಾಗಾಟ-ಇಬ್ಬರು ಆರೋಪಿಗಳು ವಶ..!

Published

on

ಬಂಟ್ವಾಳ: ಅಕ್ರಮ ಮರ ಸಾಗಟ ಮಾಡುತ್ತಿದ ಸ್ಥಳಕ್ಕೆ ಖಚಿತ ಮಾಹಿತ ಪಡೆದ ಬಂಟ್ವಾಳ ಅರಣ್ಯ ಇಲಾಖೆಯವರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಸಜೀಪಮುನ್ನೂರು ಗ್ರಾಮದ ಮಾರ್ನಬೈಲು ಹಾಗೂ ಉಳ್ಳಾಲ ತಾಲೂಕಿನ ಸಜೀಪಪಡು ಗ್ರಾಮದ ಕೋಟೆಕಣಿಯಲ್ಲಿ ನಡೆದಿದೆ.

ಮರ ಹಾಗೂ ವಿವಿಧ ಜಾತಿಯ ದಿಮ್ಮಿಗಳನ್ನು ಪಿಕಪ್ ಮೂಲಕ ಆಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹಾಗೂ 2 ಪಿಕಪ್ ವಾಹನ,6 ಲಕ್ಷ ರೂ ಮೌಲ್ಯದ ದಿಮ್ಮಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿಗಲು ಪಾಲ್ಗೊಂಡಿದ್ದರು. ವಲಯ ಅರಣ್ಯ ಅಧಿಕಾರಿ ಪ್ರಪುಲ್ ಶೆಟ್ಟಿ ಪಿ.ಅವರು ತನಿಖೆ ನಡೆಯಲಿದೆ ಎಂದು ತಿಳಿಸಿದ್ದಾರೆ.

Continue Reading

BANTWAL

ಇಂಡೋನೇಷ್ಯಾದ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಬಂಟ್ವಾಳದ ಧನೇಶ್‌ ಶೆಟ್ಟಿ ಆಯ್ಕೆ

Published

on

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುಕ್ಕಿಪ್ಪಾಡಿ ಗ್ರಾಮದ ಯುವಕ ಇಂಡೋನೇಶ್ಯಾದ ರಾಷ್ಟ್ರೀಯ ಕ್ರಿಕೆಟ್‌ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಕುಕ್ಕಿಪ್ಪಾಡಿ ಹುಣಸೆಬೆಟ್ಟು ನಿವಾಸಿ ಮಹಾಬಲ ಶೆಟ್ಟಿ ಅವರ ಪುತ್ರ ಧನೇಶ್ ಶೆಟ್ಟಿ ಇಂಡೋನೇಶ್ಯಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದವರು. ವಿವಾಹಿತರಾಗಿರುವ ಧನೇಶ್ ಅವರು ತನ್ನ ಪತ್ನಿಯೊಂದಿಗೆ ಇಂಡೋನೇಶ್ಯಾದಲ್ಲಿ ನೆಲೆಸಿದ್ದು, ಆರೋಗ್ಯ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಕ್ರಿಕೆಟ್ ನಲ್ಲಿ ಆಸಕ್ತಿ ಹೊಂದಿದ್ದ ಇವರು ಇದೀಗ ಇಂಡೋನೇಸ್ಯಾದ ರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

Continue Reading

LATEST NEWS

Trending