Connect with us

    LATEST NEWS

    ಮೆಗಾ ಹರಾಜಿನಲ್ಲಿ ಅನ್‌ಸೋಲ್ಡ್; ನಿವೃತ್ತಿ ಘೋಷಿಸಿದ ಆರ್‌ಸಿಬಿ ಮಾಜಿ ಆಟಗಾರ

    Published

    on

    ಮಂಗಳೂರು/ಮುಂಬೈ : ಐಪಿಎಲ್ 2025ರ ಮೆಗಾ ಹರಾಜು ಪ್ರಕ್ರಿಯೆ ನವೆಂಬರ್ 23 ಹಾಗೂ 24 ರಂದು ನಡೆದಿದೆ.  ಈ ಹರಾಜಿನಲ್ಲಿ ಅನೇಕ ಸ್ಟಾರ್ ಆಟಗಾರರಿಗೆ ಫ್ರಾಂಚೈಸಿಗಳು ಮಣೆ ಹಾಕಿಲ್ಲ. ಅವರಲ್ಲಿ ಟೀಂ ಇಂಡಿಯಾದ ವೇಗಿ ಸಿದ್ಧಾರ್ಥ್ ಕೌಲ್ ಕೂಡ ಒಬ್ಬರು. ಮೆಗಾ ಹರಾಜಿನಲ್ಲಿ ಅನ್ ಸೋಲ್ಡ್ ಆದ 3 ದಿನಗಳ ಬಳಿಕ ಸಿದ್ಧಾರ್ಥ್ ಕೌಲ್ ತಮ್ಮ ಕ್ರಿಕೆಟ್ ವೃತ್ತಿ ಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ಭಾವನಾತ್ಮಕತ ಪೋಸ್ಟ್‌ವೊಂದನ್ನು ಅವರು ಹಂಚಿಕೊಂಡಿದ್ದಾರೆ.

    ಸಿದ್ಧಾರ್ಥ್ ಕೌಲ್ ಅವರು ಭಾರತ ಪರ 2018 ಮತ್ತು 2019ರ ನಡುವೆ 3 ಏಕದಿನ ಮತ್ತು 3 ಟಿ 20 ಪಂದ್ಯಗಳನ್ನು ಆಡಿದ್ದಾರೆ. ಆದರೆ ಭಾರತ ಪರ ಆಡಿದ ಮೂರು ಏಕದಿನ ಪಂದ್ಯಗಳಲ್ಲಿ ಒಂದು ವಿಕೆಟ್ ಪಡೆಯಲು ಸಾಧ್ಯವಾಗಿಲ್ಲ. ಆದರೆ, ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಟ್ಟು 4 ವಿಕೆಟ್​​ ಪಡೆದಿದ್ದಾರೆ.

    ಸಿದ್ಧಾರ್ಥ್ ಕೌಲ್ ಪೋಸ್ಟ್ ಏನು ?

    ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಸಿದ್ಧಾರ್ಥ್ ಕೌಲ್ ಈ ಬಗ್ಗೆ ಬರೆದುಕೊಂಡಿದ್ದಾರೆ. ಬಾಲ್ಯದಲ್ಲಿ ನಾನು ಪಂಜಾಬ್‌ನ ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದಾಗ, ನನಗೆ ಒಂದು ಕನಸು ಇತ್ತು. ನನ್ನ ದೇಶವನ್ನು ಪ್ರತಿನಿಧಿಸುವ ಕನಸು. 2018 ರಲ್ಲಿ, ದೇವರ ಕೃಪೆಯಿಂದ, ನಾನು T20i ತಂಡದಲ್ಲಿ ನನ್ನ ಭಾರತ ಕ್ಯಾಪ್ ನಂಬರ್ 75 ಮತ್ತು ODI ತಂಡದಲ್ಲಿ ಕ್ಯಾಪ್ ನಂಬರ್ 221 ಅನ್ನು ಸ್ವೀಕರಿಸಿದ್ದೇನೆ.  ನನ್ನ ನಿವೃತ್ತಿಯನ್ನು ಘೋಷಿಸುವ ಸಮಯ ಈಗ ಬಂದಿದೆ. ನನ್ನ ವೃತ್ತಿಜೀವನದ ಎಲ್ಲಾ ಏರಿಳಿತಗಳ ವೇಳೆ ನಾನು ಪಡೆದ ಪ್ರೀತಿ ಮತ್ತು ಬೆಂಬಲಕ್ಕಾಗಿ ನನ್ನ ಕೃತಜ್ಞತೆಯನ್ನು ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ. ನನಗಾಗಿ ಒಂದು ದಾರಿ ತೋರಿದಕ್ಕಾಗಿ ನಾನು ದೇವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಅಂತ್ಯವಿಲ್ಲದ ಬೆಂಬಲಕ್ಕಾಗಿ ಅಭಿಮಾನಿಗಳಿಗೆ ಧನ್ಯವಾದ.  ಪೋಷಕರು ಮತ್ತು ಕುಟುಂಬ ವರ್ಗ ನನಗಾಗಿ ಮಾಡಿದ ತ್ಯಾಗ, ನನ್ನ ಮೇಲಿಟ್ಟ ವಿಶ್ವಾಸಕ್ಕೆ ಧನ್ಯವಾದ.

    ಇದನ್ನೂ ಓದಿ : ಬೆಂಗಳೂರಿನಲ್ಲಿ ನಡೆಯಲಿದೆ ಡಬ್ಲ್ಯುಪಿಎಲ್ ಮಿನಿ ಹರಾಜು

    ಡ್ರೆಸ್ಸಿಂಗ್ ರೂಮ್ ನೆನಪುಗಳು ಮತ್ತು ನನ್ನ ತಂಡದ ಸದಸ್ಯರೊಂದಿಗಿನ ಸ್ನೇಹ… ಭಾರತವನ್ನು ಪ್ರತಿನಿಧಿಸುವ ಮತ್ತು 2008 ರ ಅಂಡರ್-19 ವಿಶ್ವಕಪ್ ಗೆಲ್ಲುವ ಮತ್ತು 2018 ರಲ್ಲಿ ನನ್ನ T20i ಮತ್ತು ODI ಕ್ಯಾಪ್‌ಗಳನ್ನು ಸ್ವೀಕರಿಸುವ ಚಿಕ್ಕ ಮಗುವಾಗಿದ್ದಾಗಿನ ಕನಸನ್ನು ಈಡೇರಿಸಿದ BCCI… ಕೋಲ್ಕತ್ತಾ ನೈಟ್ ರೈಡರ್ಸ್ , ಡೆಲ್ಲಿ ಡೇರ್‌ಡೆವಿಲ್ಸ್, ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು, IPL ಫ್ರಾಂಚೈಸಿಗಳು ನನಗೆ ಜೀವಮಾನದ ನೆನಪುಗಳು… 2007 ರಲ್ಲಿ ಪ್ರಥಮ ದರ್ಜೆಗೆ ಪದಾರ್ಪಣೆ ಮಾಡಲು ಅವಕಾಶವನ್ನು ನೀಡಿದ್ದಕ್ಕಾಗಿ ಮತ್ತು ನನ್ನ ವೃತ್ತಿಜೀವನದುದ್ದಕ್ಕೂ ನನಗೆ ಬೆಂಬಲ ನೀಡಿದ್ದಕ್ಕಾಗಿ @pcacricketassociation ಗೆ ಧನ್ಯವಾದ.

    ನಿಮ್ಮೆಲ್ಲರ ಬೆಂಬಲವಿಲ್ಲದಿದ್ದರೆ ನಾನು ಇಷ್ಟೊಂದು ಸಾಧನೆ ಮಾಡಲಾಗುತ್ತಿರಲಿಲ್ಲ. ಭವಿಷ್ಯವು ಏನಾಗುತ್ತದೆ ಎಂದು ನನಗೆ ತಿಳಿದಿಲ್ಲ ಆದರೆ ನಾನು ಈ ಅಧ್ಯಾಯದ ಸವಿನೆನಪುಗಳೊಂದಿಗೆ  ಮುಂದಿನ ಅಧ್ಯಾಯಕ್ಕೆ ಹೋಗುತ್ತೇನೆ. ಎಲ್ಲರಿಗೂ ಧನ್ಯವಾದ ಎಂದು ಬರೆದುಕೊಂಡಿದ್ದಾರೆ.

    FILM

    ಪುತ್ರಿಯೊಂದಿಗೆ ಶ್ರೀಕೃಷ್ಣ ಮಠಕ್ಕೆ ನಟಿ ಮಾಲಾಶ್ರೀ ಭೇಟಿ; ಕೋಟಿ ಗೀತಾ ಲೇಖನ ಯಜ್ಞ ದೀಕ್ಷೆ ಸ್ವೀಕಾರ

    Published

    on

    ಉಡುಪಿ : ಖ್ಯಾತ ನಟಿ  ಮಾಲಾಶ್ರೀ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದಾರೆ. ದೇವರ ದರ್ಶನ ಮಾಡಿ ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು. ಮಾಲಾಶ್ರೀ ಜೊತೆ ಪುತ್ರಿ ಕಾಟೇರಾ ನಟಿ ಆರಾಧನಾ ಕೂಡ ಉಪಸ್ಥಿತರಿದ್ದರು.

    ಪರ್ಯಾಯದಲ್ಲಿ ಭಗವದ್ಗೀತೆಯನ್ನು ಬರೆಯುವ ಕೋಟಿಗೀತಾ ಲೇಖನ ಯಜ್ಞದೀಕ್ಷೆಯನ್ನು ಇಬ್ಬರೂ ಸ್ವೀಕರಿಸಿದರು.

    Continue Reading

    LATEST NEWS

    ಬೈಕ್ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಡ್ರೈವರ್ ಎಡವಟ್ಟು: 12 ಮಂದಿಯ ದುರಂತ ಅಂತ್ಯ

    Published

    on

    ಮಂಗಳೂರು/ಮಹಾರಾಷ್ಟ್ರ: ಮಹಾರಾಷ್ಟ್ರ ರಾಜ್ಯದ ಗೊಂಡಿಯಾ ಜಿಲ್ಲೆಯ ಕೊಹ್ಮಾರಾ ರಾಜ್ಯ ಹೆದ್ದಾರಿಯ ಖಾಜ್ರಿ ಎಂಬ ಗ್ರಾಮದ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು 9 ಜನರು ಪ್ರಾಣ ಕಳೆದುಕೊಂಡಿದ್ದಾರೆ.


    ಅಷ್ಟಕ್ಕೂ, ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಏಕಾಏಕಿ ಎದುರಿಗೆ ಬಂದಿದ್ದ ಬೈಕ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ನೆಲಕ್ಕೆ ಬಿದ್ದಿದೆ. ಇದರ ಪರಿಣಾಮ 9 ಜನರು ಸ್ಥಳದಲ್ಲಿಯೇ ಮೃತಪಟ್ಟು ಹಲವಾರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

    ಇದನ್ನೂ ಓದಿ: ಇನ್ಮುಂದೆ ವಿಶ್ವವಿದ್ಯಾಲಯಗಳಿಗೆ ಮುಖ್ಯಮಂತ್ರಿಯೇ ಕುಲಪತಿ!
    ಬಸ್ಸ್ ನ ಎದುರಿಗೆ ಸಡನ್ ಆಗಿ ಬಂದ ಬೈಕ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬೇರೆ ಕಡೆ ತಿರುಗಿಸಿದ ಪರಿಣಾಮ ಬಸ್ಸ್ ಅಪಘಾತಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ. ಸ್ಥಳೀಯರ ಸಹಾಯದೊಂದಿಗೆ ಘಟನೆಯಲ್ಲಿ ಗಾಯಗೊಂಡಿರುವ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದು, ಚಿಕಿತ್ಸೆಯನ್ನು ನೀಡಲಾಗುತ್ತಿದೆ.

    ಇನ್ನೂ ಅಪಘಾತ ನಡೆದ ತಕ್ಷಣವೇ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಸದ್ಯ ಪೊಲೀಸರು ಪ್ರಕರಣವನ್ನು ದಾಖಿಲಿಸಿಕೊಂಡಿದ್ದು ತನಿಖೆಯನ್ನು ಶುರು ಮಾಡಿದ್ದಾರೆ.

    Continue Reading

    LATEST NEWS

    ಓವರ್‌ಟೇಕ್ ಮಾಡಲು ಹೋಗಿ ಬೈಕ್‌ಗೆ ಕಾರು ಡಿ*ಕ್ಕಿ; ಇಬ್ಬರ ದುರ್ಮ*ರಣ

    Published

    on

    ಮಂಗಳೂರು/ಯಾದಗಿರಿ : ಕಾರು ಡಿ*ಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸಾ*ವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮದ್ರಿಕಿ ಗ್ರಾಮದ ಬಳಿ ನಡೆದಿದೆ.

    ಹಳ್ಳೆಪ್ಪ(45) ಹಾಗೂ ಮಲ್ಲಯ್ಯ(35) ಮೃ*ತ ಬೈಕ್ ಸವಾರರು. ಜೇವರ್ಗಿ ತಾಲೂಕಿನ ಚಿಕ್ಕಮುದವಾಳ ಗ್ರಾಮದ ಬಳಿಯಿರುವ ಜಮೀನು ನೋಡಿಕೊಂಡು ಬರಲು ಬೈಕ್‌ನಲ್ಲಿ ತೆರಳಿದ್ದರು. ವಾಪಾಸ್ ಊರಿಗೆ ಬರುವಾಗ, ಕಾರು ಚಾಲಕ ಬೈಕ್‌ನ್ನು ಓವರ್‌ಟೇಕ್ ಮಾಡಲು ಹೋಗಿ ಡಿ*ಕ್ಕಿ ಹೊಡೆದಿದ್ದಾನೆ, ಡಿ*ಕ್ಕಿಯ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರು ಚಾಲಕ ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.

    ಇದನ್ನೂ ಓದಿ : Watch Video: ರಸ್ತೆಯಲ್ಲಿ ಸೂಪರ್ ಮ್ಯಾನ್‌ನಂತೆ ಬೈಕ್ ಹಾರಿಸಿದ ವ್ಯಕ್ತಿ

    ಮ*ರಣೋತ್ತರ ಪರೀಕ್ಷೆಗಾಗಿ ಮೃ*ತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಭೀಮರಾಯನ ಗುಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    LATEST NEWS

    Trending