Wednesday, October 5, 2022

ಬುಲ್ಡೋಜರ್‌ ಪಾಲಿಟಿಕ್ಸ್‌: 3 ದಿನದಲ್ಲಿ ಉತ್ತರಿಸುವಂತೆ ಯುಪಿ ಸರ್ಕಾರಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ: ಉತ್ತರಪ್ರದೇಶದಲ್ಲಿ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ 3 ದಿನಗಳಲ್ಲಿ ಉತ್ತರ ನೀಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚಿಸಿದೆ.


ನಿರ್ದಿಷ್ಟ ಸಮುದಾಯವನ್ನು ಉತ್ತರ ಪ್ರದೇಶ ಸರ್ಕಾರ ಗುರಿ ಮಾಡುತ್ತಿದ್ದು, ಅದರ ಸದಸ್ಯರ ಆಸ್ತಿಗಳನ್ನು ನೆಲಸಮ ಮಾಡುತ್ತಿದೆ. ಈ ತೆರವು ಕಾರ್ಯಾಚರಣೆಗೂ ಮುನ್ನ ತಮಗೆ ಯಾವುದೇ ನೋಟಿಸ್ ನೀಡುತ್ತಿಲ್ಲ ಎಂದು ಆರೋಪಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ, ಸುಪ್ರೀಂಕೋರ್ಟ್ ಈ ನಿರ್ದೇಶನ ಕೊಟ್ಟಿದೆ.
ಕಟ್ಟಡಗಳ ತೆರವು ಕಾರ್ಯಾಚರಣೆ ವೇಳೆ ಯಾವುದೇ ಕಾನೂನು ಉಲ್ಲಂಘನೆ ಮಾಡಿಲ್ಲ. ಬುಲ್ಡೋಜರ್ ಹತ್ತಿಸುವ ಮುನ್ನ ನೋಟಿಸ್‌ಗಳನ್ನು ನೀಡಿಲ್ಲ ಎಂಬ ಆರೋಪ ಸುಳ್ಳು ಎಂದು ಸರ್ಕಾರ ಆರೋಪ ನಿರಾಕರಿಸಿದೆ.
ಇದೇ ವೇಳೆ “ತೆರವು ಕಾರ್ಯಾಚರಣೆಗಳು ಎಲ್ಲ ಕ್ರಮಗಳನ್ನು ನಿಲ್ಲಿಸುವಂತೆ ಹೇಳುತ್ತಿಲ್ಲ ಎಂದ ಕೋರ್ಟ್, ಅವುಗಳು ಪ್ರತೀಕಾರದ ಕ್ರಮವಾಗಬಾರದು. ಆದರೆ ಎಲ್ಲ ಕ್ರಮಗಳೂ ಕಾನೂನಿನ ಪರಿಮಿತಿಯಲ್ಲಿ ನಡೆಯಬೇಕು. ಎಲ್ಲವೂ ನ್ಯಾಯಸಮ್ಮತವಾಗಿ ಕಾಣಬೇಕು. ಎಂದು ಸುಪ್ರೀಂಕೋರ್ಟ್ ಹೇಳಿದೆ.

ಕಾನೂನಿಗೆ ಅನುಗುಣವಾಗಿ ಅಧಿಕಾರಿಗಳು ವರ್ತಿಸುತ್ತಾರೆ ಎಂದು ನಾವು ನಿರೀಕ್ಷಿಸುತ್ತೇವೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಸುರಕ್ಷತೆ ಕಾಪಾಡಬೇಕು” ಎಂದು ಹೇಳಿದೆ.

ಪ್ರಕರಣದ ಮುಂದಿನ ವಿಚಾರಣೆಯನ್ನು ಮಂಗಳವಾರಕ್ಕೆ ನಿಗದಿಪಡಿಸಿದ್ದು, ರಾಜ್ಯ ಸರ್ಕಾರ ಹಾಗೂ ಪ್ರಯಾಗ್‌ರಾಜ್ ಮತ್ತು ಕಾನ್ಪುರ ಜಿಲ್ಲಾಡಳಿತಗಳಿಂದ ಉತ್ತರ ಕೇಳಿದೆ.

ಪ್ರವಾದಿ ಮಹಮ್ಮದ್‌ ನಿಂದನೆ ವಿರೋಧಿಸಿ ಉತ್ತರ ಪ್ರದೇಶದಲ್ಲಿ ಗಲಭೆ ನಡೆಸಿದವರಿಗೆ ಸೇರಿದ ಮನೆಗಳನ್ನು ಧ್ವಂಸಗೊಳಿಸುವ ಮೊದಲು ಉತ್ತರ ಪ್ರದೇಶ ಸರ್ಕಾರವು ನಿಯಮಗಳನ್ನು ಪಾಲಿಸಬೇಕು.

ಜೊತೆಗೆ, ಕಾನೂನು ಬಾಹಿರವಾಗಿ ಕಟ್ಟಡ ನೆಲಸಮ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೋರಿ ಜಮೈತ್‌ ಉಲಾಮ–ಐ–ಹಿಂದ್‌ ಎಂಬ ಮುಸ್ಲಿಂ ಸಂಘಟನೆ ಅರ್ಜಿ ಸಲ್ಲಿಸಿತ್ತು.

LEAVE A REPLY

Please enter your comment!
Please enter your name here

Hot Topics

Breaking: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್‌ ಪತನ..!

ನವದೆಹಲಿ: ಭಾರತೀಯ ಸೇನೆಗೆ ಸೇರಿದ ಚೀತಾ ಹೆಲಿಕಾಪ್ಟರ್‌ ಪತನವಾಗಿದೆ. ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್‌ ಪತನವಾಗಿದೆ. ಇದರಲ್ಲಿದ್ದ ಓರ್ವ ಪೈಲೆಟ್‌ ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

‘ಮಂಗಳೂರು ದಸರಾ’ ವೈಭವದ ಶೋಭಾಯಾತ್ರೆಗೆ ಕ್ಷಣಗಣನೆ ಆರಂಭ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶರನ್ನವರಾತ್ರಿ ಅಂಗವಾಗಿ ಕಳೆದ 9 ದಿನಗಳಿಂದ ಪೂಜಿಸಲ್ಪಟ್ಟ ಶಾರದೆ ಹಾಗೂ ನವ ದುರ್ಗೆಯರ ವೈಭವದ ಶೋಭಾ ಯಾತ್ರೆ ಇಂದು ಸಂಜೆ ನಡೆಯಲಿದೆ.ಸಂಜೆ 4 ಗಂಟೆಗೆ ಶಾರದಾ...

ಮಂಗಳೂರು: ಹೆಲಿಕಾಪ್ಟರ್‌ನಲ್ಲಿ ವೈಷ್ಣೋದೇವಿ ಮಂದಿರಕ್ಕೆ ಕರೆದೊಯ್ಯುವುದಾಗಿ 38 ಸಾವಿರ ರೂ. ವಂಚನೆ

ಮಂಗಳೂರು: ವೈಷ್ಣೋದೇವಿ ಮಂದಿರ ಯಾತ್ರೆಗೆ ಹೆಲಿಕಾಪ್ಟರ್ ಬುಕ್ಕಿಂಗ್ ಮಾಡುತ್ತೇನೆಂದು ನಂಬಿಸಿ ಮಂಗಳೂರು ಮೂಲದ ವ್ಯಕ್ತಿಯೊಬ್ಬರಿಗೆ ರೂ.38 ಸಾವಿರ ವಂಚನೆಗೈದ ಬಗ್ಗೆ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವಂಚನೆಗೊಳಗಾದ ವ್ಯಕ್ತಿ ಬೆಂಗಳೂರಿನಲ್ಲಿ IT consultant...