ಲಕ್ನೋ: ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರಪ್ರದೇಶ ಸರ್ಕಾರವು ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿರುವುದಾಗಿ ತಿಳಿಸಿದೆ.
ಪರಿಸರ ಸ್ನೇಹಿ ಹಾಗೂ ಹಸಿರು ಪಟಾಕಿಗಳನ್ನು ಬಳಸಲು ಅನುಮತಿ ನೀಡಿರುವುದಾಗಿ ಹೇಳಿದೆ.
ಹಸಿರು ಪಟಾಕಿ ಮಾರಾಟ ಮತ್ತು ಬಳಕೆಗೆ ಸಂಬಂಧಿಸಿದಂತೆ ಎಲ್ಲಾ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ವಿವರವಾದ ಮಾರ್ಗಸೂಚಿಯನ್ನು ಕಳುಹಿಸಿಕೊಡಲಾಗಿದೆ ಎಂದು ಹೆಚ್ಚುವರಿ ಮುಖ್ಯ ಗೃಹ ಕಾರ್ಯದರ್ಶಿ ಅವ್ನೀಶ್ ಕುಮಾರ್ ಅವಾಸ್ಥಿ ತಿಳಿಸಿದ್ದಾರೆ.
ಹಸಿರು ಪಟಾಕಿಗಳನ್ನು ಕೂಡಾ ಎರಡು ಗಂಟೆಗಳಿಗಿಂತ ಹೆಚ್ಚು ಕಾಲ ಸಿಡಿಸುವಂತಿಲ್ಲ. ಕ್ರಿಸ್ ಮಸ್ ಹಾಗೂ ಹೊಸ ವರ್ಷದ ಸಂದರ್ಭದಲ್ಲಿಯೂ 11-55ರ ರಾತ್ರಿಯಿಂದ 12.30ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಲಾಗಿದೆ ಎಂದು ವಿವರಿಸಿದೆ.