Connect with us

    BANTWAL

    ಉಪ್ಪಿನಂಗಡಿಯಲ್ಲಿ ನಡೆದ ಅಡಿಕೆ ಕಳ್ಳತನ: ಪ್ರಕರಣ ಭೇಧಿಸಿದ ಪೊಲೀಸರು

    Published

    on

    ಉಪ್ಪಿನಂಗಡಿ : ಮನೆಯ ಅಂಗಳದಲ್ಲಿ ಒಣಗಲು ಹಾಕಿದ ಅಡಿಕೆಯನ್ನು ಯಾರೋ ಕಳ್ಳರು ಜನವರಿ 11ರ ರಾತ್ರಿ ಸಮಯ ಕಳ್ಳತನ ಮಾಡಿಕೊಂಡು ಹೋಗಿರುವುದಾಗಿ ಉಪ್ಪಿನಂಗಡಿ ಠಾಣೆಯಲ್ಲಿ ದೂರು ನೀಡಿದ ಘಟನೆ ಬಂಟ್ವಾಳ ತಾಲೂಕಿನ ಬಿಳಿಯೂರು ಗ್ರಾಮದಲ್ಲಿ ನಡೆದಿದೆ.

    ಬಿಳಿಯೂರು ಗ್ರಾಮದ ವಸಂತ ದೇವಾಡಿಗರ ಮನೆಯ ಅಂಗಳದಲ್ಲಿ ಒಣಗಲು ಹಾಕಿದ ಅಡಿಕೆ ಜನವರಿ 11ರಂದು ರಾತ್ರಿ ಕಳ್ಳತನವಾಗಿತ್ತು.

    ಈ ಕುರಿತು ಮನೆಯ ಮಾಲಿಕ ವಸಂತ್ ದೇವಾಡಿಗ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದರು.

    ತನಿಖೆ ನಡೆಸಿದ ಪೊಲೀಸರು ಜನವರಿ 18ರಂದು 34 ನೆಕ್ಕಿಲಾಡಿ ಜಂಕ್ಷನ್ ಬಳಿ ಆರೋಪಿಗಳನ್ನು ಬಂಧಿಸಿ, ಅಟೋ ರಿಕ್ಷಾ ಹಾಗೂ ಕಳವು ಮಾಡಿದ ಅಡಿಕೆಯನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

    ಪುತ್ತೂರಿನ ಚಿಕ್ಕಮುಡ್ನೂರು ಗ್ರಾಮದ ಬಡಾವು ಮನೆ ನಿವಾಸಿ ವಿನಯ ಕುಮಾರ್ ಹಾಗು ಕೆಮ್ಮಾಯಿ ಜಂಕ್ಷನ್‍ ನಿವಾಸಿ ಜುನೈದ್ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳನ್ನು ಪುತ್ತೂರು ಮೂಲದವರೆಂದು ಗುರುತಿಸಲಾಗಿದೆ.

    BANTWAL

    ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕ ಮೃ*ತ್ಯು

    Published

    on

    ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃ*ತಪಟ್ಟಿದ್ದಾರೆ.

    ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ ಬಾತಿಷಾ( 22) ಮೃ*ತಪಟ್ಟವರು.

    ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃ*ತಪಟ್ಟಿದ್ದಾರೆ

    Continue Reading

    BANTWAL

    ಬಂಟ್ವಾಳ: ಭಾರೀ ಗಾಳಿ ಮಳೆಗೆ ತಾಲೂಕಿನ ಕೆಲ ಭಾಗಗಳಲ್ಲಿ ಹಾನಿ

    Published

    on

    ಬಂಟ್ವಾಳ: ರಾತ್ರಿ ಬೀಸಿದ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಕೆಲವು ಭಾಗದಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಹಾನಿಯಾದ ಘಟನೆ ವರದಿಯಾಗಿದೆ.

    ಬಿಸಿ ರೋಡಿನ ಸರ್ಕಲ್ ಸಹಿತ ಅನೇಕ ಭಾಗದಲ್ಲಿ ವಿದ್ಯುತ್ ಕಂಬ, ಕಾಂಪೌಂಡ್, ಮರಗಳು ಉರುಳಿಬಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

    ಮಂಗಳವಾರ ರಾತ್ರಿ ಸುಮಾರು 9.30ರ ವೇಳೆ ಭಾರಿ ಗಾಳಿ ಮಳೆಯಾಗಿದ್ದು, ಇದರಿಂದ ಬಿ.ಸಿ.ರೋಡ್ ಸರ್ಕಲ್ ಬಳಿ ಸಹಿತ ಹಲವೆಡೆ ಒಟ್ಟು 5 ವಿದ್ಯುತ್ ಕಂಬಗಳು ಉರುಳಿಬಿದ್ದು ಮೆಸ್ಕಾಂ ಇಲಾಖೆಗೆ ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ ಬಳಿ ಬೃಹತ್ ಮರವೊಂದು ಉರುಳಿಬಿದ್ದಿದ್ದು, ಅನಾಹುತವನ್ನೇ ಉಂಟುಮಾಡಿದೆ.

    ಇನ್ನು ಬಂಟ್ವಾಳ ತಾಲೂಕಿನ ಮಾಧ್ವ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದಿದ್ದು, ಅಪಾರ ಹಾನಿಯಾಗಿದೆ.

    Continue Reading

    BANTWAL

    ವಿಟ್ಲ: ಯುವಕ ನೇಣು ಬಿಗಿದು ಆತ್ಮಹ*ತ್ಯೆ..!

    Published

    on

    ವಿಟ್ಲ: ವಿಟ್ಲ ಬುಡೋಳಿ ಮಡಲ ನಿವಾಸಿ ಸುಶಾಂತ್(25 ವ) ಮನೆಯಲ್ಲಿ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಸುಶಾಂತ್ ರವರು ಇತ್ತೀಚೆಗೆ ಮಿನಿ ಬಸ್‌ ಖರೀದಿಸಿದ್ದು ಬಸ್ಸನ್ನು ತಾನೇ ಚಾಲನೆ ಮಾಡಿಕೊಂಡು ಕೆಲಸ ನಿರ್ವಹಿಸುತ್ತಿದ್ದರು. ಈತ ಸಂಘಟನೆಯ ಜೊತೆಗೆ ಸಾಮಾಜಿಕ ಸೇವಾಕಾರ್ಯಗಳನ್ನು ಮಾಡಿಕೊಂಡಿದ್ದರು. ಗ್ರಾಮದಲ್ಲಿ ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ ಈತನ ಸಾವಿಗೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

    ಸುರತ್ಕಲ್: ಖಾಸಗಿ ಬಸ್ ಢಿ*ಕ್ಕಿ; ದ್ವಿಚಕ್ರ ಸವಾರನಿಗೆ ಗಾ*ಯ

    Continue Reading

    LATEST NEWS

    Trending