Sunday, May 16, 2021

ಎಟಿಎಂ ದರೋಡೆಗೆ ಯತ್ನ:8 ಗಂಟೆಗಳೊಳಗೆ ಪ್ರಕರಣ ಭೇದಿಸಿದ ಉಪ್ಪಿನಂಗಡಿ ಪೊಲೀಸರು..!

ಉಪ್ಪಿನಂಗಡಿ: ಎಟಿಎಂ ಯಂತ್ರದಿಂದ ಹಣ ಕದಿಯಲು ಯತ್ನಿಸಿದ ಪ್ರಕರಣವನ್ನು ಉಪ್ಪಿನಂಗಡಿ ಪೊಲೀಸರು 48 ಗಂಟೆಗಳೊಳಗೆ ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಸವಣೂರು ಗ್ರಾಮದ ಶಾಂತಿನಗರ ಮಾಂತೇರು ನಿವಾಸಿ ಸಮೀರ್ ಯಾನೆ ಅಮ್ಮಿ (23) ಎಂದು ಗುರುತಿಸಲಾಗಿದೆ.

ಉಪ್ಪಿನಂಗಡಿಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯ ಎಟಿಎಂನಿಂದ ಹಣ ಕದಿಯಲು ಯತ್ನಿಸಿದ ಘಟನೆ ಎ.28ರಂದು ಬೆಳಕಿಗೆ ಬಂದಿದ್ದು,

ಅಲ್ಲಿದ್ದ ಎರಡು ಮೆಷಿನ್‍ಗಳನ್ನು ಆಯುಧದಿಂದ ಜಖಂಗೊಳಿಸಿ ಒಡೆಯಲು ಯತ್ನಿಸಿ, ಮೂರು ಸಿಸಿ ಕ್ಯಾಮೆರಾಗಳನ್ನು ಹಾನಿಗೊಳಿಸಲಾಗಿತ್ತು. ಆದರೆ ಎಟಿಎಂನಿಂದ ಹಣ ಕಬಳಿಸಲು ಸಾಧ್ಯವಾಗಿರಲಿಲ್ಲ.

ದರೋಡೆಕೋರರು ಎಟಿಎಂ ಮೆಷಿನ್ ಮತ್ತು ಸಿಸಿ ಕ್ಯಾಮರಾ ಹಾನಿಗೆಡವಿದ್ದರಿಂದಾಗಿ 6 ಲಕ್ಷ ನಷ್ಟವಾಗಿದೆ ಎಂದು ಬ್ಯಾಂಕಿನ ಮ್ಯಾನೇಜರ್ ಶ್ರೀಧರ್ ಅವರು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದರು.

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ  ಪೊಲೀಸರ ವಿಶೇಷ ತಂಡ ರಚಿಸಿ, ತನಿಖೆ ಕೈಗೆತ್ತಿಕೊಂಡು ಶನಿವಾರದಂದು ಆರೋಪಿಯನ್ನು ಸವಣೂರಿನಲ್ಲಿ ಬಂಧಿಸಿದ್ದು, ವಿಚಾರಣೆ ವೇಳೆ ಈತ ದರೋಡೆಗೆ ಯತ್ನಿಸಿರುವ ಕುರಿತು ಪೊಲೀಸರಲ್ಲಿ ಬಾಯ್ಬಿಟ್ಟಿದ್ದಾನೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...