Saturday, November 27, 2021

ಉಪ್ಪಿನಂಗಡಿ- ದ್ವಿಚಕ್ರ ವಾಹನಕ್ಕೆ ಟೆಂಪೋ ಢಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ

ಪುತ್ತೂರು: ಟೆಂಪೋವೊಂದು ದ್ವಿಚಕ್ರ ಸವಾರನಿಗೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತಪಟ್ಟು, ಸಹ ಸವಾರ ಗಾಯಗೊಂಡ ಘಟನೆ ಉಪ್ಪಿನಂಗಡಿ ಗೋಳಿತೊಟ್ಟು ಸಮೀಪದ ಸಣ್ಣಂಪಾಡಿ ಎಂಬಲ್ಲಿ ಮಂಗಳವಾರ ನಡೆದಿದೆ.


ಮಂಗಳೂರಿನ ಕುಂಟಲ್ಪಾಡಿ ಪದವು ನಿವಾಸಿ ಸಚಿನ್ (29) ಮೃತ ದ್ವಿಚಕ್ರ ಸವಾರ. ಇವರೊಂದಿಗೆ ಪ್ರಯಾಣಿಸುತ್ತಿದ್ದ ಬೆಳ್ತಂಗಡಿಯ ಅಂಕಿತ್ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ವಿವರ: ನೆಲ್ಯಾಡಿ ಕಡೆಯಿಂದ ಉಪ್ಪಿನಂಗಡಿ ಕಡೆಗೆ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬರುತ್ತಿದ್ದ ಮೀನು ಸಾಗಾಟದ ಟೆಂಪೋ ಸಣ್ಣಂಪಾಡಿ ಎಂಬಲ್ಲಿ ಉಪ್ಪಿನಂಗಡಿ ಕಡೆಯಿಂದ ನೆಲ್ಯಾಡಿ ಕಡೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ.

ಈ ಸಂದರ್ಭ ದ್ವಿಚಕ್ರ ಸವಾರರು ರಸ್ತೆಗೆಸೆಯಲ್ಪಟ್ಟಿದ್ದು, ಸಚಿನ್ ಎಂಬವರ ತಲೆಯ ಮೇಲೆ ಟೆಂಪೋದ ಚಕ್ರಗಳು ಹರಿದಿದ್ದರಿಂದ ಆತ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಳಿಕ ಟೆಂಪೋವು ಹೆದ್ದಾರಿ ಬದಿಯ ತೋಡಿಗೆ ಇಳಿದಿದೆ. ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...