Thursday, October 21, 2021

ಉಪ್ಪಿನಂಗಡಿ: ಕೆಎಸ್‌ಆರ್‌ಟಿಸಿ ಬಸ್ಸಿನಡಿಗೆ ಬಿದ್ದು ತಾಯಿ-ಮಗು ಸ್ಥಳದಲ್ಲೇ ಸಾವು-ಸ್ಥಳದಲ್ಲಿ ಉದ್ವಿಗ್ನ

ಉಪ್ಪಿನಂಗಡಿ: ಚಲಿಸುತ್ತಿದ್ದ ಸರಕಾರಿ ಬಸ್ಸಿನಡಿಗೆ ಬಿದ್ದು ತಾಯಿ ಮಗು ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಇದರಿಂದ ಉದ್ರಿಕ್ತಗೊಂಡ ಸಾರ್ವಜನಿಕರು ಸರಕಾರಿ ಬಸ್‌ಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮೃತರನ್ನು ಮೃತರು ಬೆಳ್ತಂಗಡಿ ತಾಲೂಕಿನ ಶಿರ್ಲಾಲು ನಿವಾಸಿ ಸಿದ್ದೀಕ್ ಎಂಬವರ ಪತ್ನಿ ಸಾಹಿದಾ(25) ವರ್ಷ ಸಾಹಿಲ್ (1) ಎಂದು ಗುರುತಿಸಲಾಗಿದೆ.

ಉಪ್ಪಿನಂಗಡಿ ಬಸ್ ನಿಲ್ದಾಣಕ್ಕೆ ತಾಯಿ ಮಗು ದಾಟುತ್ತಿದ್ದಾಗ ದಿಢೀರನೆ ನುಗ್ಗಿದ ಕೆಎಸ್ ಆರ್ ಟಿ ಸಿ ಅವರ ಇಬ್ಬರ ಮೇಲೆ ಚಲಿಸಿದೆ. ಘಟನೆಯಿಂದ ತಾಯಿ ಮತ್ತು ಒಂದೂವರೆ ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ.


ಸ್ಥಳದಲ್ಲಿ ಸೇರಿದ ಸಾರ್ವಜನಿಕರು ಬಸ್ಸಿನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಬಸ್ ಗಳ ನಡುವಿನ ಪೈಪೋಟಿಯಿಂದ ಇಂತಹ ಘಟನೆ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯಾವುದೇ ಬಸ್ ನಿಲ್ದಾಣದೊಳಗೆ ಪ್ರವೇಶಿಸಬಾರದು ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಬಂದ ಉಪ್ಪಿನಂಗಡಿ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...