BANTWAL
ಉಪ್ಪಿನಂಗಡಿ ಹಿಜಾಬ್ ಗಲಾಟೆ ಪ್ರಕರಣ: ಪತ್ರಕರ್ತರ ವಿರುದ್ಧ ಪ್ರತಿದೂರು ದಾಖಲು
ಪುತ್ತೂರು: ಉಪ್ಪಿನಂಗಡಿಯಲ್ಲಿ ನಡೆಯುತ್ತಿರುವ ಹಿಜಾಬ್ ಗಲಾಟೆ ಪ್ರಕರಣದಲ್ಲಿ ಪತ್ರಕರ್ತರ ಹಲ್ಲೆಗೆ ಸಂಬಂಧಿಸಿದಂತೆ ಮೂವರು ಪತ್ರಕರ್ತರ ವಿರುದ್ಧ ವಿದ್ಯಾರ್ಥಿನಿಯೋರ್ವಳು ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.
ವಿದ್ಯಾರ್ಥಿನಿಯ ದೂರಿನ ಸಾರಾಂಶ
ಜೂ.2ರಂದು ಸುಮಾರು 11.30 ಗಂಟೆಗೆ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳಲ್ಲದ ಅಪರಿಚಿತ ಅಜಿತ್ ಕುಮಾರ್, ಪ್ರವೀಣ್ ಕುಮಾರ್ ಮತ್ತು ಸಿದ್ದೀಕ್ ನಿರಾಜೆ ಎಂಬ ಮೂರು ಮಂದಿ ಅಕ್ರಮವಾಗಿ ಪ್ರವೇಶ ಮಾಡಿ.
ಶಾಲು ಎಳೆಯಲು ಪ್ರಯತ್ನಿಸಿ, ಧರ್ಮ ನಿಂದನೆ ಮಾಡಿ, ಜೀವಬೆದರಿಕೆ ಹಾಕಿದ್ದಾರೆ. ನಂತರ ಅವರನ್ನು ಪ್ರಾಂಶುಪಾಲರ ಕೊಠಡಿಗೆ ಕರೆಯಿಸಿ ಅವರು ಮಾಡಿದ ವಿಡಿಯೋವನ್ನು ಡಿಲಿಟ್ ಮಾಡಿಸಿದ್ದೇವೆ. ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಇದೊಂದು ಸುಳ್ಳು ದೂರು
ಈ ಬಗ್ಗೆ ಪತ್ರಕರ್ತ ಸಿದ್ದೀಕ್ ನೀರಾಜೆ ಪ್ರತಿಕ್ರಿಯಿಸಿ,ಇಬ್ಬರು ಪತ್ರಕರ್ತರಿಗೆ ವಿದ್ಯಾರ್ಥಿಗಳ ಗುಂಪು ದಿಗ್ಭಂಧನ ಹಾಕಿ, ವೀಡಿಯೊ ಡಿಲೀಟ್ ಮಾಡಿರುವುದು ಕಾಲೇಜು ಕಟ್ಟಡದೊಳಗೆ.
ನಾನು ಪ್ರಾಂಶುಪಾಲರಲ್ಲಿ ಮಾಹಿತಿಗಾಗಿ ತೆರಳುವವನೆಂದು ಹೇಳಿದರೂ, ನನ್ನನ್ನು ಅಲ್ಲಿಂದಲೇ ವಿದ್ಯಾರ್ಥಿಗಳ ಗುಂಪು ವಾಪಸ್ ಕಳುಹಿಸಿದೆ.
ಈ ಘಟನೆಯನ್ನು ನನ್ನಿಂದ ಸುಮಾರು 10 ಮೀಟರ್ ದೂರದಲ್ಲಿದ್ದ ಪೊಲೀಸರು ವೀಡಿಯೊ ಚಿತ್ರೀಕರಣ ಕೂಡಾ ಮಾಡಿದ್ದಾರೆ.
ಕಾಲೇಜಿನ ಸಿಸಿ ಟಿವಿಯ ದೃಶ್ಯಾವಳಿಯನ್ನು ಪರಿಶೀಲಿಸಿ ಪೊಲೀಸರು ತನಿಖೆ ನಡೆಸಲಿ, ಈ ವೇಳೆ ನಿಜಾಂಶ ಬಯಲಾಗಲಿದೆ. ಇದೊಂದು ಸುಳ್ಳು ದೂರು ಎಂದು ಅವರು ತಿಳಿಸಿದ್ದಾರೆ.
ಇನ್ನು ಹಿಜಾಬ್ ಗಲಾಟೆ ಪ್ರಕರಣದಲ್ಲಿ ಕಾಲೇಜು ಪ್ರಾಂಶುಪಾಲರ ವಿರುದ್ಧ ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ತೀರ್ಪು ಪಾಲಿಸಲು ನಿರ್ಲಕ್ಷ್ಯ ವಹಿಸಿದ ಆರೋಪದಲ್ಲಿ ನೂರಕ್ಕೂ ಮಿಕ್ಕಿದ ಕಾಲೇಜು ವಿದ್ಯಾರ್ಥಿಗಳಿಂದ ಶಾಸಕರಿಗೆ ದೂರು ನೀಡಲಾಗಿದೆ.
ಅಷ್ಟೇ ಅಲ್ಲದೆ ಕಾಲೇಜಿನ ಸಿಸಿ ಕ್ಯಾಮಾರಾ ದೃಶ್ಯಾವಳಿಗಳನ್ನು ಡಿಲೀಟ್ ಮಾಡಿರುವ ಆರೋಪ ಕೂಡಾ ಮಾಡಲಾಗಿದೆ.
ಹಿಜಾಬ್ ಧರಿಸುವುದರ ಬಗ್ಗೆ ಕೂಡಾ ಪ್ರಾಂಶುಪಾಲರಿಗೆ ಸಾಕಷ್ಟು ಬಾರಿ ಮನವಿ ಮಾಡಲಾಗಿತ್ತು. ಆದರೆ ಯಾವುದೇ ಸ್ಪಂದನೆ ಸಿಕ್ಕಿರಲಿಲ್ಲ.
ಜೂನ್ 2 ರಂದು ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ ಗುಂಪನ್ನು ರಕ್ಷಿಸಲು ಪ್ರಾಂಶುಪಾಲರ ಯತ್ನಿಸಿದ್ದರು. ಅಷ್ಟೇ ಅಲ್ಲದೆ ಪತ್ರಕರ್ತರ ಮೇಲೆ ಗುಂಪು ಹಲ್ಲೆ ಮಾಡುತ್ತಿದ್ದರೂ ಪೋಲೀಸರನ್ನು ಪ್ರಾಂಶುಪಾಲರು ಕರೆಸಿರಲಿಲ್ಲ.
ಹೀಗೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಶಾಸಕರಿಗೆ ವಿದ್ಯಾರ್ಥಿಗಳು ದೂರು ನೀಡಿದರು.
BANTWAL
ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕ ಮೃ*ತ್ಯು
ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃ*ತಪಟ್ಟಿದ್ದಾರೆ.
ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ ಬಾತಿಷಾ( 22) ಮೃ*ತಪಟ್ಟವರು.
ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃ*ತಪಟ್ಟಿದ್ದಾರೆ
BANTWAL
ಬಂಟ್ವಾಳ: ಭಾರೀ ಗಾಳಿ ಮಳೆಗೆ ತಾಲೂಕಿನ ಕೆಲ ಭಾಗಗಳಲ್ಲಿ ಹಾನಿ
ಬಂಟ್ವಾಳ: ರಾತ್ರಿ ಬೀಸಿದ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಕೆಲವು ಭಾಗದಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಹಾನಿಯಾದ ಘಟನೆ ವರದಿಯಾಗಿದೆ.
ಬಿಸಿ ರೋಡಿನ ಸರ್ಕಲ್ ಸಹಿತ ಅನೇಕ ಭಾಗದಲ್ಲಿ ವಿದ್ಯುತ್ ಕಂಬ, ಕಾಂಪೌಂಡ್, ಮರಗಳು ಉರುಳಿಬಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.
ಮಂಗಳವಾರ ರಾತ್ರಿ ಸುಮಾರು 9.30ರ ವೇಳೆ ಭಾರಿ ಗಾಳಿ ಮಳೆಯಾಗಿದ್ದು, ಇದರಿಂದ ಬಿ.ಸಿ.ರೋಡ್ ಸರ್ಕಲ್ ಬಳಿ ಸಹಿತ ಹಲವೆಡೆ ಒಟ್ಟು 5 ವಿದ್ಯುತ್ ಕಂಬಗಳು ಉರುಳಿಬಿದ್ದು ಮೆಸ್ಕಾಂ ಇಲಾಖೆಗೆ ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ ಬಳಿ ಬೃಹತ್ ಮರವೊಂದು ಉರುಳಿಬಿದ್ದಿದ್ದು, ಅನಾಹುತವನ್ನೇ ಉಂಟುಮಾಡಿದೆ.
ಇನ್ನು ಬಂಟ್ವಾಳ ತಾಲೂಕಿನ ಮಾಧ್ವ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದಿದ್ದು, ಅಪಾರ ಹಾನಿಯಾಗಿದೆ.
BANTWAL
ವಿಟ್ಲ: ಯುವಕ ನೇಣು ಬಿಗಿದು ಆತ್ಮಹ*ತ್ಯೆ..!
ವಿಟ್ಲ: ವಿಟ್ಲ ಬುಡೋಳಿ ಮಡಲ ನಿವಾಸಿ ಸುಶಾಂತ್(25 ವ) ಮನೆಯಲ್ಲಿ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಸುಶಾಂತ್ ರವರು ಇತ್ತೀಚೆಗೆ ಮಿನಿ ಬಸ್ ಖರೀದಿಸಿದ್ದು ಬಸ್ಸನ್ನು ತಾನೇ ಚಾಲನೆ ಮಾಡಿಕೊಂಡು ಕೆಲಸ ನಿರ್ವಹಿಸುತ್ತಿದ್ದರು. ಈತ ಸಂಘಟನೆಯ ಜೊತೆಗೆ ಸಾಮಾಜಿಕ ಸೇವಾಕಾರ್ಯಗಳನ್ನು ಮಾಡಿಕೊಂಡಿದ್ದರು. ಗ್ರಾಮದಲ್ಲಿ ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ ಈತನ ಸಾವಿಗೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ