Saturday, August 13, 2022

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ: ಉಪ್ಪಿನಂಗಡಿ ವರ್ತಕರಿಂದ ಡಿವೈಎಸ್ಪಿಗೆ ದೂರು

ಪುತ್ತೂರು: ಉಪ್ಪಿನಂಗಡಿಯಲ್ಲಿ ಮುಸ್ಲಿಮರ ಜೊತೆ ದೈನಂದಿನ ವ್ಯವಹಾರ‌ ಮಾಡುವುದಿಲ್ಲ ಎಂಬ ವಾಟ್ಸಪ್‌ ಬರಹಕ್ಕೆ ಸಂಬಂಧಿಸಿ ನೊಂದ ವರ್ತಕರು ಪೊಲೀಸ್‌ ಮೆಟ್ಟಲೇರಿದ್ದಾರೆ.


ಇಂದು ಬೆಳಗ್ಗೆಯಿಂದ ಉಪ್ಪಿನಂಗಡಿ ಪೇಟೆಯ 32 ಅಂಗಡಿಗಳ ಹೆಸರುಗಳಿರುವ ಒಕ್ಕಣೆಯ ಬರಹಗಳು ದಕ್ಷಿಣ ಕನ್ನಡ ಜಿಲ್ಲೆಯ

ಪುತ್ತೂರು ತಾಲೂಕಿನ ಉಪ್ಪಿನಂಗಡಿಯಾದಾದ್ಯಂತ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದಂತೆ ಎಚ್ಚೆತ್ತ ಉಪ್ಪಿನಂಗಡಿಯ 32 ವರ್ತಕರು ಪುತ್ತೂರು ಡಿವೈಎಸ್ಪಿ ಗಾನಕುಮಾರ್‌ ಅವರನ್ನು ಭೇಟಿ ಮಾಡಿ ದೂರು ನೀಡಿದ್ದಾರೆ.

ಸಮಾಜದ ಎಲ್ಲಾ ಮಂದಿಯೂ ನಮ್ಮಲ್ಲಿ ಗ್ರಾಹಕರಾಗಿದ್ದು, ವ್ಯಾಪಾರಿ ಧರ್ಮ ಪರಿಪಾಲನೆಯೊಂದಿಗೆ ವ್ಯವಹಾರ ನಡೆಸಿಕೊಂಡು ಬರುತ್ತಿದ್ದೇವೆ.

ನಮ್ಮ ವ್ಯಾಪಾರ ಮಳಿಗೆಯ ಹೆಸರನ್ನು ಬಳಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿ ಮತೀಯ ಸಂಘರ್ಷವನ್ನು ಮೂಡಿಸಲೆತ್ನಿಸಿದ ದುರ್ಷರ್ಮಿಯನ್ನು ಪತ್ತೆ ಹಚ್ಚುವಂತೆ ಮನವಿ ಮಾಡಲಾಗಿದೆ.

ಮುಸ್ಲಿಂಮರ ಜೊತೆ ವ್ಯವಹಾರ ನಡೆಸಲ್ಲ: 32 ಅಂಗಡಿಗಳ ಹೆಸರಿರುವ ವಾಟ್ಸಪ್‌ ಸಂದೇಶ ವೈರಲ್‌

1 COMMENT

LEAVE A REPLY

Please enter your comment!
Please enter your name here

Hot Topics

ಬೆಳ್ತಂಗಡಿ: ಕ್ಯಾನ್ಸರ್ ರೋಗಿಗಳಿಗೆ ಕೇಶದಾನ ಮಾಡಿದ ನಿತಿನ್ ಪೂಜಾರಿ

ಬೆಳ್ತಂಗಡಿ: ಯುವಕನೋರ್ವ ತನ್ನ ಕೂದಲನ್ನು ಕ್ಯಾನ್ಸರ್ ಪೀಡಿತ ರೋಗಿಗಳಿಗೆ ದಾನ ಮಾಡಿದ ಮಾನವೀಯ ಘಟನೆ ಬೆಳ್ತಂಗಡಿಯ ನಾರಾವಿಯಲ್ಲಿ ನಡೆದಿದೆ.ನಿತಿನ್ ಪೂಜಾರಿ ಎಂಬವರು ಈ ಸತ್ಕಾರ್ಯ ಮಾಡಿದ ಯುವಕ.ಎರಡು ವರ್ಷಗಳಿಂದ ತನ್ನ ಕೂದಲು ಬೆಳೆಸಿದ್ದ...

ಮಣಿಪಾಲ: ಸ್ಕೂಟರ್ ಕಳ್ಳತನ ಸೇರಿ ಹಲವು ಪ್ರಕರಣದಲ್ಲಿ ಶಾಮೀಲಾಗಿದ್ದ ಆರೋಪಿ ಬಂಧನ

ಮಣಿಪಾಲ: ಆ.8ರಂದು ಶಿವಳ್ಳಿ ಗ್ರಾಮದ ವಿ.ಪಿ ನಗರದ ಅಪಾರ್ಟ್‌ಮೆಂಟ್‌ ಒಂದರ ಬಳಿ ನಿಲ್ಲಿಸಿದ್ದ ಸ್ಕೂಟರ್‌ನ್ನು ಕಳವು ಮಾಡಿದ ಆರೋಪಿಯನ್ನು ಮಣಿಪಾಲ ಪೊಲೀಸರು ಇಂದು ಬಂಧಿಸಿದ್ದಾರೆ.ಮಣಿಪಾಲದ ಗುರುರಾಜ್ ನಾಯಕ್ ಬಂಧಿತ ಆರೋಪಿ.ಆರೋಪಿಯ ವಿರುದ್ಧ ಉಡುಪಿ...

ನಾಳೆ ಪುತ್ತೂರಿನಲ್ಲಿ ಬೃಹತ್ ತಿರಂಗಾ ಶೋಭಾಯಾತ್ರೆ-ಶಾಸಕ ಮಠಂದೂರು

ಪುತ್ತೂರು: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಪುತ್ತೂರು ಬಿಜೆಪಿ ವತಿಯಿಂದ ಆಗಸ್ಟ್ 14ರಂದು ಪುತ್ತೂರು ನಗರದಲ್ಲಿ ಬೃಹತ್ ತಿರಂಗಾ ಶೋಭಾಯಾತ್ರೆ ನಡೆಯಲಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ.ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರ ಜೊತೆ...