Connect with us

    BANTWAL

    ಉಪ್ಪಿನಂಗಡಿ: ಹಿಜಾಬ್ ಕಳಚಿಟ್ಟು ಸಮವಸ್ತ್ರ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರು

    Published

    on

    ಉಪ್ಪಿನಂಗಡಿ: ಹಿಜಾಬ್ ಧರಿಸಿಯೇ ಕಾಲೇಜ್ ಪ್ರವೇಶಿಸುವುದಾಗಿ ಪಟ್ಟು ವಿದ್ಯಾರ್ಥಿನಿಯರಲ್ಲಿ 6 ಮಂದಿ ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 46 ಮಂದಿ ವಿದ್ಯಾರ್ಥಿನಿಯರು ಹಿಜಾಬ್ ತೆಗೆದಿಟ್ಟು ಸಮವಸ್ತ್ರದೊಂದಿಗೆ ತರಗತಿಗೆ ಹಾಜರಾದ ಘಟನೆ ಇಂದು ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದಿದೆ.


    ಸಮವಸ್ತ್ರ ನಿಯಮಾಳಿ ಉಲ್ಲಂಘಿಸುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಟ್ಟ ಹಿನ್ನೆಲೆಯಲ್ಲಿ ತರಗತಿಗೆ ಹಾಜರಾಗಿದ್ದಾರೆ.

    ಹಿಜಾಬ್ ಧರಿಸಿಯೇ ಕಾಲೇಜ್ ಪ್ರವೇಶಿಸುವುದಾಗಿ ಪಟ್ಟು ಹಿಡಿದಿದ್ದ ವಿದ್ಯಾರ್ಥಿನಿಯರಿಗೆ ಸೋಮವಾರದಂದು ಕಾಲೇಜು ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದರೂ ಅಮಾನತಾಗಿದ್ದ ವಿದ್ಯಾರ್ಥಿಗಳ ಪೈಕಿ ಹಲವರು ಮಂಗಳವಾರ ಕಾಲೇಜಿಗೆ ಬಂದು ತರಗತಿಗೆ ಪ್ರವೇಶಿಸಲು ಯತ್ನಿಸಿದ ಘಟನೆಯ ಬೆನ್ನಲ್ಲೇ ಎಲ್ಲ ವಿದ್ಯಾರ್ಥಿನಿಯರ ಹೆತ್ತವರಿಗೆ ಘಟನೆಯ ಬಗ್ಗೆ ಮಾಹಿತಿ ನೀಡಲಾಗಿತ್ತು.

    ಬಹುತೇಕ ಹೆತ್ತವರು ತಮ್ಮ ಮಕ್ಕಳು ಹಿಜಾಬ್ ಹೋರಾಟದಲ್ಲಿ ಭಾಗಿಯಾಗಿರುವ ಬಗ್ಗೆ ತಮಗೆ ಮಾಹಿತಿಯೇ ಇಲ್ಲವೆಂದು ಬೆಳವಣಿಗೆಯ ನಡುವೆ ಅಮಾನತುಗೊಂಡಿರುವ ಎಲ್ಲ 24 ವಿದ್ಯಾರ್ಥಿನಿಯರು ಬುಧವಾರ ಕಾಲೇಜಿಗೆ ಆಗಮಿಸಲಿಲ್ಲ.

    ಆದರೆ ತದನಂತರ ಆದ ಬೆಳವಣಿಗೆಯಲ್ಲಿ ಕಾಲೇಜಿನ ಸಮವಸ್ತ್ರ ನಿಯಮಾಳಿಗಳನ್ನು ಉಲ್ಲಂಘಿಸುವುದಿಲ್ಲ ಎಂದು ಮುಚ್ಚಳಿಕೆ ಬರೆದು ಕೊಟ್ಟಿದ್ದು, ಕಾಲೇಜಿನ ಪ್ರಾಂಶುಪಾಲರು ಇವರಿಗೆ ತರಗತಿಗೆ ಹಾಜರಾಗಲು ಅನುವು ಮಾಡಿಕೊಟ್ಟಿದ್ದಾರೆ.

    ಈ ಕಾಲೇಜಿನಲ್ಲಿ ಈಗಾಗಲೇ ಒಟ್ಟು 101 ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಇದ್ದು, ಈ ಪೈಕಿ 46 ವಿದ್ಯಾರ್ಥಿನಿಯರು ಬುಧವಾರ ಸಮವಸ್ತ್ರ ಹಾಗೂ ನಿಯಮ ಪಾಲನೆಯೊಂದಿಗೆ ಕಾಲೇಜಿಗೆ ಹಾಜರಾಗಿದ್ದಾರೆ.

    ಮೊದಲ ಹಂತದಲ್ಲಿ ಅಮಾನತು ಆಗಿದ್ದ ಆರು ಮಂದಿ ಮತ್ತು ಹಿಜಾಬ್ ಪ್ರತಿಭಟನೆಯಿಂದ ದೂರ ಸರಿದು ಮೊದಲಿನಿಂದಲೂ ಕಾಲೇಜಿಗೆ ಆಗಮಿಸುತ್ತಿದ್ದ 29 ಮಂದಿ ಹಾಗೂ ಕಾಲೇಜಿಗೂ ಬಾರದೆ ಪ್ರತಿಭಟನೆಯಲ್ಲೂ ಪಾಲ್ಗೊಳ್ಳದೇ ಅಂತರ ಕಾಯ್ದುಕೊಂಡಿದ್ದ 11 ವಿದ್ಯಾರ್ಥಿನಿಯರು ಸೇರಿ ಒಟ್ಟು 46 ವಿದ್ಯಾರ್ಥಿನಿಯರು ಇಂದು ಸಮವಸ್ತ್ರ ಧರಿಸಿ, ತರಗತಿಗೆ ಹಾಜರಾಗಿದ್ದಾರೆ.

    ಇನ್ನೂ ಎರಡು ದಿನಗಳ ಹಿಂದೆ ಅಮಾನತು ಆಗಿರುವ 24 ವಿದ್ಯಾರ್ಥಿನಿಯರು ಕಾಲೇಜಿಗೆ ಬಂದಿಲ್ಲ ಎನ್ನಲಾಗಿದೆ.

    BANTWAL

    ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕ ಮೃ*ತ್ಯು

    Published

    on

    ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃ*ತಪಟ್ಟಿದ್ದಾರೆ.

    ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ ಬಾತಿಷಾ( 22) ಮೃ*ತಪಟ್ಟವರು.

    ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃ*ತಪಟ್ಟಿದ್ದಾರೆ

    Continue Reading

    BANTWAL

    ಬಂಟ್ವಾಳ: ಭಾರೀ ಗಾಳಿ ಮಳೆಗೆ ತಾಲೂಕಿನ ಕೆಲ ಭಾಗಗಳಲ್ಲಿ ಹಾನಿ

    Published

    on

    ಬಂಟ್ವಾಳ: ರಾತ್ರಿ ಬೀಸಿದ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಕೆಲವು ಭಾಗದಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಹಾನಿಯಾದ ಘಟನೆ ವರದಿಯಾಗಿದೆ.

    ಬಿಸಿ ರೋಡಿನ ಸರ್ಕಲ್ ಸಹಿತ ಅನೇಕ ಭಾಗದಲ್ಲಿ ವಿದ್ಯುತ್ ಕಂಬ, ಕಾಂಪೌಂಡ್, ಮರಗಳು ಉರುಳಿಬಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

    ಮಂಗಳವಾರ ರಾತ್ರಿ ಸುಮಾರು 9.30ರ ವೇಳೆ ಭಾರಿ ಗಾಳಿ ಮಳೆಯಾಗಿದ್ದು, ಇದರಿಂದ ಬಿ.ಸಿ.ರೋಡ್ ಸರ್ಕಲ್ ಬಳಿ ಸಹಿತ ಹಲವೆಡೆ ಒಟ್ಟು 5 ವಿದ್ಯುತ್ ಕಂಬಗಳು ಉರುಳಿಬಿದ್ದು ಮೆಸ್ಕಾಂ ಇಲಾಖೆಗೆ ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ ಬಳಿ ಬೃಹತ್ ಮರವೊಂದು ಉರುಳಿಬಿದ್ದಿದ್ದು, ಅನಾಹುತವನ್ನೇ ಉಂಟುಮಾಡಿದೆ.

    ಇನ್ನು ಬಂಟ್ವಾಳ ತಾಲೂಕಿನ ಮಾಧ್ವ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದಿದ್ದು, ಅಪಾರ ಹಾನಿಯಾಗಿದೆ.

    Continue Reading

    BANTWAL

    ವಿಟ್ಲ: ಯುವಕ ನೇಣು ಬಿಗಿದು ಆತ್ಮಹ*ತ್ಯೆ..!

    Published

    on

    ವಿಟ್ಲ: ವಿಟ್ಲ ಬುಡೋಳಿ ಮಡಲ ನಿವಾಸಿ ಸುಶಾಂತ್(25 ವ) ಮನೆಯಲ್ಲಿ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಸುಶಾಂತ್ ರವರು ಇತ್ತೀಚೆಗೆ ಮಿನಿ ಬಸ್‌ ಖರೀದಿಸಿದ್ದು ಬಸ್ಸನ್ನು ತಾನೇ ಚಾಲನೆ ಮಾಡಿಕೊಂಡು ಕೆಲಸ ನಿರ್ವಹಿಸುತ್ತಿದ್ದರು. ಈತ ಸಂಘಟನೆಯ ಜೊತೆಗೆ ಸಾಮಾಜಿಕ ಸೇವಾಕಾರ್ಯಗಳನ್ನು ಮಾಡಿಕೊಂಡಿದ್ದರು. ಗ್ರಾಮದಲ್ಲಿ ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ ಈತನ ಸಾವಿಗೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

    ಸುರತ್ಕಲ್: ಖಾಸಗಿ ಬಸ್ ಢಿ*ಕ್ಕಿ; ದ್ವಿಚಕ್ರ ಸವಾರನಿಗೆ ಗಾ*ಯ

    Continue Reading

    LATEST NEWS

    Trending