Connect with us

LATEST NEWS

UPSC ಫಲಿತಾಂಶ ಪ್ರಕಟ: ಟಾಪ್‌ 3ಯಲ್ಲಿ ವನಿತೆಯರು ಮೇಲುಗೈ

Published

on

ನವದೆಹಲಿ: 2021ನೇ ಸಾಲಿನ ಅಖಿಲ ಭಾರತ ನಾಗರಿಕ ಸೇವಾ ಪರೀಕ್ಷೆ(UPSC)ಯ ಫಲಿತಾಂಶ ಪ್ರಕಟವಾಗಿದ್ದು, ಶ್ರುತಿ ಶರ್ಮಾ ಟಾಪರ್​ ಆಗಿ ಹೊರಹೊಮ್ಮಿದ್ದಾರೆ.


ಅಂಕಿತಾ ಅಗರ್ವಾಲ್ ಮತ್ತು ಗಾಮಿನಿ ಸಿಂಗ್ಲಾ ಕ್ರಮವಾಗಿ ಎರಡು ಮತ್ತು ಮೂರನೇ ರ್ಯಾಂಕ್ ಪಡೆದಿದ್ದಾರೆ. ದಾವಣಗೆರೆಯ ಅವಿನಾಶ್ 31ನೇ ರ್ಯಾಂಕ್‌ ಪಡೆದಿದ್ದು, ಕರ್ನಾಟಕಕ್ಕೆ ಇವರೇ ಟಾಪರ್​.

ಉತ್ತರ ಪ್ರದೇಶದ ಬಿಜ್ನೋರ್ ಮೂಲದ ಶ್ರುತಿ ಶರ್ಮಾ, ದೆಹಲಿಯಲ್ಲಿ ವಿದ್ಯಾಭ್ಯಾಸ ಮುಗಿಸಿದ್ದಾರೆ. ಕರ್ನಾಟಕದಿಂದ 25 ಮಂದಿ ತೇರ್ಗಡೆಯಾಗಿದ್ದಾರೆ.


ಮುಖ್ಯ ಪರೀಕ್ಷೆಯ ಫಲಿತಾಂಶ 2022ರ ಮಾರ್ಚ್ 17ರಂದು ಪ್ರಕಟವಾಗಿತ್ತು.

ಮುಖ್ಯ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಗೆ ವ್ಯಕ್ತಿತ್ವ ಪರೀಕ್ಷೆ ಏ.5ರಿಂದ ಮೇ 26ರವರೆಗೆ ನಡೆದಿತ್ತು. ಒಟ್ಟು 685 ಅಭ್ಯರ್ಥಿಗಳು ತೇರ್ಗಡೆಯಾಗಿದ್ದು,

ಇವರಲ್ಲಿ 244 ಸಾಮಾನ್ಯ, 73 EWS, 203 OBC, 105 SC ಮತ್ತು 60 ST ವರ್ಗದ ಅಭ್ಯರ್ಥಿಗಳು ಸೇರಿದ್ದಾರೆ.UPSCಯ ಅಧಿಕೃತ ಸೈಟ್ ನಲ್ಲಿ ಫಲಿತಾಂಶ ನೋಡಬಹುದು. ಯುಪಿಎಸ್​ಸಿ ಪರೀಕ್ಷೆಯಲ್ಲಿ ಟಾಪ್​ 10 ರ್ಯಾಂಕ್‌ ಬಂದವರ ಲಿಸ್ಟ್
1. ಶ್ರುತಿ ಶರ್ಮಾ
2. ಅಂಕಿತಾ ಅಗರ್ವಾಲ್
3. ಗಾಮಿನಿ ಸಿಂಘಾಲ್
4. ಐಶ್ವರ್ಯ ವರ್ಮಾ
5. ಉತ್ಕರ್ಷ್ ದ್ವಿವೇದಿ
6. ಯಕ್ಷ್ ಚೌಧರಿ
7. ಸಮ್ಯಕ್ ಜೈನ್
8. ಇಶಿತಾ ರಾಠಿ
9. ಪ್ರೀತಮ್ ಕುಮಾರ್
10. ಹರ್ಕೀರತ್ ಸಿಂಗ್ ರಾಂಧವ

DAKSHINA KANNADA

MANGALURU : ಪೆಟ್ರೋಲ್ ಬಂಕ್ ಸಿಬ್ಬಂದಿ ಎಡವಟ್ಟು; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿ ಅನಾಹುತ

Published

on

ಮಂಗಳೂರು : ಪೆಟ್ರೋಲ್ ಬಂಕ್ ಸಿಬ್ಬಂದಿ ಎಡವಟ್ಟಿನಿಂದ ಕಾರಿಗೆ ಪೆಟ್ರೋಲ್ ತುಂಬಿಸುವ ಬದಲು ಡೀಸೆಲ್ ತುಂಬಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪರಿಣಾಮ ಕಾರು ಇಂಜಿನ್ ಸಂಪೂರ್ಣ ಹಾಳಾಗಿ ಲಕ್ಷಾಂತರ ರೂ.ನಷ್ಟವಾಗಿದೆ ಎಂದು ಕಾರು ಮಾಲಕ ಆರೋಪಿಸಿದ್ದಾರೆ.

ಹೊಟೇಲ್ ಉದ್ಯಮಿ ಜೀವನ್ ಶೆಟ್ಟಿ ಎಂಬವರು ತಮ್ಮ ಹುಂಡೈ ಐ 10 ಗ್ರ್ಯಾಂಡ್ ಕಾರ್ ಗೆ ಪೆಟ್ರೋಲ್ ತುಂಬಿಸುವ ಸಲುವಾಗಿ, ಎಪ್ರಿಲ್ 5 ರಂದು ಮಧ್ಯಾಹ್ನ 12 ರ ಸುಮಾರಿಗೆ ಬಲ್ಮಠದ ಜ್ಯೂಸ್ ಜಂಕ್ಷನ್ ಮುಂಭಾಗದ ಹೆಚ್ ಪಿ ಪೆಟ್ರೋಲ್ ಬಂಕ್ ಗೆ ಬಂದಿದ್ದರು. ಕ್ಯಾಪ್ ಮೇಲೆ ಪೆಟ್ರೋಲ್ ಎಂದು ಬರೆದಿದ್ದರೂ, ಸಿಬ್ಬಂದಿ ಮಾತ್ರ ಕಾರಿಗೆ ಡೀಸೆಲ್ ತುಂಬಿಸಿದ್ದಾರೆ.

 

ಪರಿಣಾಮ ಕಾರು ಕೆಲವೇ ಕಿಲೋ ಮೀಟರ್ ಸಂಚರಿಸಿ ಮುಂದಕ್ಕೆ ಹೋಗದೆ ನಿಂತಿದೆ. ಪರಿಶೀಲಿಸಿದಾಗ ಬಂಕ್ ಸಿಬ್ಬಂದಿ ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ತುಂಬಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಪ್ರಶ್ನಿಸಿದಾಗ ಪೆಟ್ರೋಲ್ ಬಂಕ್ ಮ್ಯಾನೇಜರ್ ತಮಗೂ ಇದಕ್ಕೂ ಸಂಬಂಧವೇ ಇಲ್ಲ ಎಂದು ವರ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾರು ಇಂಜಿನ್ ದುರಸ್ಥಿಗೆ 2 ಲಕ್ಷಕ್ಕೂ ಅಧಿಕ ಖರ್ಚು ಆಗಲಿದೆ. ಆದರೆ, ಪೆಟ್ರೋಲ್ ಬಂಕ್ ಮಾಲಕ ಬರೀ 30 ಸಾವಿರ ಕೊಟ್ಟು ಸುಮ್ಮನಾಗಿದ್ದಾರೆ ಎಂದು ಜೀವನ್ ಶೆಟ್ಟಿ ದೂರಿದ್ದಾರೆ. ಕಡಿಮೆ ಸಂಬಳಕ್ಕೆ ಅನುಭವವಿಲ್ಲದ ಕಾರ್ಮಿಕರನ್ನು ನೇಮಿಸುತ್ತಾರೆ. ಇಂತಹ ಸಮಸ್ಯೆಯಾದಾಗ ತಮ್ಮ ಇನ್ಶೂರೆನ್ಸ್ ನಲ್ಲಿ ಪರಿಹಾರ ನೀಡುವ ಅವಕಾಶವಿದ್ದರೂ ಬಂಕ್ ಮಾಲಕರು ಮಾತ್ರ ಹಿಂದೇಟು ಹಾಕುತ್ತಿದ್ದಾರೆ. ಆದ್ದರಿಂದ ತಾನು ಪರಿಹಾರಕ್ಕಾಗಿ ಗ್ರಾಹಕ ನ್ಯಾಯಾಲಯದ ಮೊರೆ ಹೋಗುವುದಾಗಿ ಜೀವನ್ ಶೆಟ್ಟಿ ಹೇಳಿದ್ದಾರೆ.

Continue Reading

DAKSHINA KANNADA

ಹೊತ್ತಿ ಉರಿದು ಭಸ್ಮ*ವಾದ ಸ್ವೀಟ್ ಕಾರ್ನ್ ಸ್ಟಾಲ್‌..!! ಓಡಿ ಜೀವ ಉಳಿಸಿಕೊಂಡ ಸ್ಟಾಲ್ ಮಾಲೀಕ, ಗ್ರಾಹಕರು

Published

on

ಉಳ್ಳಾಲ: ರಸ್ತೆಯ ಬದಿಯಲ್ಲಿ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಸ್ಟಾಲ್ ಒಂದರಲ್ಲಿ ಆಕಸ್ಮಿ*ಕ ಬೆಂಕಿಯಿಂದಾಗಿ ಸ್ಟಾಲ್ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಉಳ್ಳಾಲದ ದೇರಳಕಟ್ಟೆಯಲ್ಲಿ ನಡೆದಿದೆ.

sweet corn burn

ಗ್ಯಾಸ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡಿದೆ. ರಸ್ತೆಯ ಬದಿಯಲ್ಲೇ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಅಂಗಡಿ ಮಾಲೀಕ ಕಾರ್ನ್ ತಯಾರಿಸುವಾಗ ಈ ಅವಘಡ ಸಂಭವಿಸಿದೆ. ತಕ್ಷಣ ಅಂಗಡಿ ಮಾಲೀಕ ಹಾಗೂ ಸ್ವೀಟ್ ಕಾರ್ನ ತಿನ್ನಲು ಬಂದಿದ್ದ ಗ್ರಾಹಕರು ಓಡಿ ತಪ್ಪಿಸಿಕೊಂಡಿದ್ದಾರೆ. ಸ್ಥಳೀಯರು ತಕ್ಷಣ ಮರಳು ಹಾಗೂ ನೀರನ್ನ ಹಾಕಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಆದ್ರೆ ಅಷ್ಟರಲ್ಲಾಗಲೇ ಸ್ಟಾಲ್ ಉರಿದು ಭಸ್ಮವಾಗಿ ಹೋಗಿದೆ.

Read More..; ಬೆಂಕಿ ಹಚ್ಚಿ ಯುವತಿಯ ಬರ್ಬ*ರ ಹ*ತ್ಯೆ..!! ಕತ್ತು ಕೊಯ್ದು ಸು*ಟ್ಟು ಹಾಕಿರುವ ಶಂಕೆ

sweet corn burn 2

Continue Reading

LATEST NEWS

ಬೆಂಕಿ ಹಚ್ಚಿ ಯುವತಿಯ ಬರ್ಬ*ರ ಹ*ತ್ಯೆ..!! ಕತ್ತು ಕೊಯ್ದು ಸು*ಟ್ಟು ಹಾಕಿರುವ ಶಂಕೆ

Published

on

ಬೆಳಗಾವಿ: 25 ರಿಂದ 30 ವರ್ಷದ ಯುವತಿಯೊಬ್ಬಳನ್ನು ಬರ್ಬರವಾಗಿ ಹ*ತ್ಯೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕದಲ್ಲಿ ನಡೆದಿದೆ. ಇಲ್ಲಿನ ಗ್ರಾಮೀಣ ಪೊಲೀಸ್ ಠಾಣ ವ್ಯಾಪ್ತಿಯ ಮಮದಾಪುರ ಗ್ರಾಮದಲ್ಲಿ ಈ ಕೃತ್ಯ ನಡೆದಿದ್ದು ಕೊ*ಲೆ ಮಾಡಿದವರಾರು? ಹ*ತ್ಯೆ ಆದವಳು ಯಾರು? ಎಂಬುದಾಗಲಿ ಗೊತ್ತಾಗಿಲ್ಲ. ನಿನ್ನೆ(ಎ.18) ಮಧ್ಯಾಹ್ನ 2 ಗಂಟೆ ಸುಮಾರಿಗೆ ಕಾಲುವೆ ಪಕ್ಕದಲ್ಲಿ ಹೊಗೆಯಾಡುತ್ತಿರುವುದನ್ನು ಜನರು ಗಮನಿಸಿದ್ದಾರೆ. ಬಿಸಿಲಿನ ತಾಪಕ್ಕೆ ಹುಲ್ಲು ಇರುವ ಜಾಗಕ್ಕೆ ಬೆಂಕಿ ಬಿದ್ದಿರಬಹುದು ಎಂದು ಕೆಲವರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದಾಗ ಯುವತಿಯ ಮೃತದೇಹ ಕಂಡು ಬಂದಿದೆ.

murder

ಯುವತಿಯ ಕತ್ತು ಕೊಯ್ದು ಬಳಿಕ ಆಕೆಯ ಗುರುತು ಪತ್ತೆಯಾಗದಂತೆ ಸುಟ್ಟು ಹಾಕಿರಬೇಕು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ವಿಧಿ ವಿಜ್ಞಾನ ತಂಡ ಹಾಗೂ ಪೊಲೀಸರು ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ಯುವತಿಯನ್ನು ಬೇರೆಡೆ ಕೊಲೆ ಮಾಡಿ ಇಲ್ಲಿ ತಂದು ಸುಟ್ಟು ಹಾಕುವ ಪ್ರಯತ್ನ ನಡೆದಿರಬಹುದು ಎಂದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಆದರೆ ಈ ಯುವತಿ ಯಾರು ಹಾಗೂ ಯಾರು ಕೊಲೆ ಮಾಡಿದ್ದಾರೆ ಅನ್ನೋದು ತನಿಖೆಯಿಂದ ಗೊತ್ತಾಗಬೇಕಾಗಿದೆ.

Read More..: ಉಡುಪಿಯಲ್ಲಿ ಭೀಕರ ಅಪಘಾ*ತ; ಲಾರಿಯಡಿ ಸಿಲುಕಿ ಬೈಕ್ ಸವಾರ ಸಾ*ವು

Continue Reading

LATEST NEWS

Trending