Connect with us

FILM

ರಾಜ್ ಕುಂದ್ರಾ ಸ್ಟೈಲ್ ಕಾಪಿ ಮಾಡಿದ್ರಾ ಉರ್ಫಿ! ಮುಖಕ್ಕೆ ಮಾಸ್ಕ್ ಧರಿಸಿದ ಲುಕ್ ವೈರಲ್

Published

on

ಕೆಂಬಣ್ಣದ ನೆಟ್ಟೆಡ್ ಬಟ್ಟೆ ಹಾಕಿ, ಮುಖಕ್ಕೆ ಮಾಸ್ಕ್ ಧರಿಸಿ ಕಾಂಟ್ರವರ್ಸಿ ಕ್ವೀನ್ ಉರ್ಫಿ ಜಾವೇದ್ ಪೋಸ್ ನೀಡಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. 

 

ಕಾಂಟ್ರವರ್ಸಿ ಕ್ವೀನ್ ಉರ್ಫಿ ಜಾವೇದ್ ಅವತಾರ ಅಂತಿದ್ದಲ್ಲ. ನಾವ್ಯಾರು ಊಹೆಯೂ ಮಾಡದಂತಹ ಅವತಾರದಲ್ಲಿ ಉರ್ಫಿ ಜಾವೇದ್ ಕಾಣಿಸಿಕೊಂಡಿದ್ದು ಇದೆ.

ಅರೆ. ಇದೇನಿದು ಉರ್ಫಿ ಈ ರೀತಿಯ ಬಟ್ಟೆಗಳನ್ನು ರಾಜಾರೊಷವಾಗಿ ಹಾಕ್ತಳಲ್ಲ ಅಂತ ಒಂದಿಷ್ಟು ಮಂದಿ ಕೊಂಕು ಮಾತನಾಡಿದ್ದು ಇದೆ ಕೂಡ.ಇದೀಗ ಮತ್ತೆ ಹೊಸ ರೂಪದಲ್ಲಿ ಉರ್ಫಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದು ಇದು ಪಡ್ಡೆ ಹುಡುಗರ ತಲೆ ಕೆಡಿಸಿದೆ.ಕೆಂಬಣ್ಣದ ನೆಟ್ಟೆಡ್ ಬಟ್ಟೆಯನ್ನು ಧರಿಸಿ ಬಂದ ಉರ್ಫಿ ಜಾವೇದ್ ಅವರ ಲುಕ್ ವೈರಲ್ ಆಗಿದೆ.

 

ಮುಖಕ್ಕೆ ಮಾಸ್ಕ್ ಧರಿಸಿ ಬಂದಿರೋ ಉರ್ಫಿ ಕಂಡು ಅಭಿಮಾನಿಗಳು ಇದು ರಾಜ್ ಕುಂದ್ರಾ ಸ್ಟೈಲ್ ಅಲ್ವ ಅಂತ ಕಾಲೆಳೆದಿದ್ದಾರೆ.

ಈ ಹಿಂದೆ ಟಿವಿ ಧಾರಾವಾಹಿಗಳಲ್ಲಿ ಕೆಲಸ ಮಾಡಿದ ಉರ್ಫಿ, ಬಿಗ್ ಬಾಸ್ ಒಟಿಟಿ ಸೀಸನ್ 1 ರಲ್ಲಿ ಟಾಸ್ಕ್ ಗೆಲ್ಲಲು ಕಸದ ಚೀಲಗಳಿಂದ ಮಾಡಿದ ಉಡುಪನ್ನು ಧರಿಸಿ ಖ್ಯಾತಿ ಗಳಿಸಿದರು.ಇದಕ್ಕಾಗಿ ಸಾಕಷ್ಟು ಮೆಚ್ಚುಗೆಯನ್ನೂ ಪಡೆದಿದ್ದರು. ಅಂದಿನಿಂದ ಉರ್ಫಿ ಸಾಮಾನ್ಯ ಉಡುಗೆಯನ್ನು ಧರಿಸಲೇ ಇಲ್ಲ.

ಅದೆಷ್ಟು ಬಾರಿ ಟ್ರೋಲ್ ಆದ್ರೂ ಉರ್ಫಿ ಜಾವೇದ್ ತಲೆ ಕೆಡಿಸಿಕೊಂಡಿಲ್ಲ. ಯಾರೂ ಊಹಿಸಿಕೊಳ್ಳದಂತಹ ವಿಭಿನ್ನ ವಿನ್ಯಾಸಗಳುಳ್ಳ ಬಟ್ಟೆಗಳನ್ನು ಹಾಕಿ ಪೋಸ್ ಕೊಡ್ತಿದ್ರು.ಇದೀಗ ಕೆಂಪು ಬಣ್ಣದ ನೆಟ್ಟೆಡ್ ಬಟ್ಟೆಗಳನ್ನು ಹಾಕಿ, ಮುಖಕ್ಕೆ ಮಾಸ್ಕ್ ಧರಿಸಿ ಉರ್ಫಿ ಸೋಶಿಯಲ್‌ ಮೀಡಿಯಾದಲ್ಲಿ ಸುದ್ದಿಯಾಗುತ್ತಿದ್ದಾರೆ.

Click to comment

Leave a Reply

Your email address will not be published. Required fields are marked *

FILM

ಮೋದಿಗೆ ರಕ್ತದಲ್ಲಿ ಪತ್ರ ಬರೆದ ಚಿತ್ರ ನಟ ಪ್ರೇಮ್..!

Published

on

ಚಿಕ್ಕಮಗಳೂರು: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಯಬಿಡುವುದನ್ನು ಖಂಡಿಸಿದ ಕನ್ನಡ ಚಿತ್ರನಟ ಪ್ರೇಮ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ​ ರಕ್ತದಲ್ಲಿ ಪತ್ರ ಬರೆದಿದ್ದಾರೆ.

ಕಾವೇರಿ ವಿಚಾರವಾಗಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂದು ರಾಜ್ಯದಾದ್ಯಂತ ಹೋರಾಟ ನಡೆಯುತ್ತಿದ್ದು, ಚಿತ್ರನಟ ನೆನಪಿರಲಿ ಪ್ರೇಮ್ ಸಾಥ್ ನೀಡಿದ್ದಾರೆ.

‘ಕಾವೇರಿ ನಮ್ಮದು’ ಎಂದು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಕಾವೇರಿ ನೀರಿನಿಂದ ರಾಜ್ಯಕ್ಕೆ ನ್ಯಾಯ ನೀಡಬೇಕೆಂದು ಪತ್ರದ ಮೂಲಕ ಪ್ರೇಮ್ ಅವರು  ಮನವಿ ಮಾಡಿದ್ದಾರೆ.

ಇದೀಗ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Continue Reading

bengaluru

ನಟ ನಾಗಭೂಷಣ್ ಕಾರು ಅಪಘಾತ – ಮಹಿಳೆ ಸಾವು..!

Published

on

ಬೆಂಗಳೂರು: ಕನ್ನಡದ ಹೆಸರಾಂತ ನಟ ನಾಗಭೂಷಣ್ ಅವರು ಚಲಾಯಿಸುತ್ತಿದ್ದ ಕಾರು ದಂಪತಿಗಳಿಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನಪ್ಪಿದ್ದು, ಆಕೆಯ ಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಿನ್ನೆ ರಾತ್ರಿ 9 ಗಂಟೆಯ ಹೊತ್ತಿಗೆ ಕುಮಾರಸ್ವಾಮಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಮಹಿಳೆಯ ಸಾವಿಗೆ ಕಾರಣರಾದ ನಟ ನಾಗಭೂಷಣ್ ಅವರನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ವಸಂತಪುರದ ನಿವಾಸಿ ಪ್ರೇಮಾ (48) ಮೃತ ಮಹಿಳೆ ಎಂದು ಗುರುತಿಸಲಾಗಿದೆ.

ನಾಗಭೂಷಣ್ ಶೂಟಿಂಗ್ ಮುಗಿಸಿಕೊಂಡು ಬರುವಾಗ ರಸ್ತೆಯಲ್ಲಿ ಅಡ್ಡಬಂದ ಪಾದಚಾರಿ ದಂಪತಿಗಳಾದ ಪ್ರೇಮಾ ಮತ್ತು ಕೃಷ್ಣ ಅವರಿಗೆ ಕಾರು ಡಿಕ್ಕಿ ಹೊಡೆದಿದೆ.

ಈ ಅಪಘಾತದಲ್ಲಿ ದಂಪತಿಗಳಿಬ್ಬರಿಗೂ ತೀವ್ರ ಗಾಯವಾಗಿದ್ದು, ಗಾಯಾಳುಗಳನ್ನು ಖುದ್ದಾಗಿ ನಾಗಭೂಷಣ್ ಅವರೇ ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗಿದೆ.

ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಪ್ರೇಮಾ ಅವರು ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಪತಿ ಕೃಷ್ಣ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನಾಗಭೂಷಣ್ ಅವರೇ ಸ್ವತಃ ಕಾರನ್ನು ಚಲಾಯಿಸುತ್ತಿದ್ದರಿಂದ ಅವರನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಮಾಹಿತಿ ಪಡೆಯುತ್ತಿದ್ದಾರೆ.

ಮೃತರ ಪುತ್ರನು ಕುಮಾರಸ್ವಾಮಿ ಲೇಔಟ್ ಪೊಲೀಸರಿಗೆ ದೂರು ನೀಡಿದ್ದು, ಫುಟ್ ಪಾತ್ ಮೇಲೆ ತಂದೆ ತಾಯಿ ವಾಕ್ ಮಾಡುವಾಗ ಕಾರು ಹಾಯ್ದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Continue Reading

FILM

2ನೇ ಮಗುವಿನ ನಿರೀಕ್ಷೆಯಲ್ಲಿ ವಿರಾಟ್-ಅನುಷ್ಕಾ

Published

on

ಭಾರತೀಯ ಕ್ರಿಕೆಟ್ ತಂಡದ ಸ್ಟಾರ್​ ಆಟಗಾರ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಬಾಲಿವುಡ್ ನಟಿ ಅನುಷ್ಕಾ ಶರ್ಮಾಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

 

Mumbai : ಭಾರತೀಯ ಕ್ರಿಕೆಟ್ ತಂಡದ ಸ್ಟಾರ್​ ಆಟಗಾರ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಬಾಲಿವುಡ್ ನಟಿ ಅನುಷ್ಕಾ ಶರ್ಮಾಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

ಸದ್ಯ ಅನುಷ್ಕಾ ಶರ್ಮಾ ಗರ್ಭೀಣಿಯಾಗಿದ್ದು ಹೀಗಾಗಿಯೇ ಅವರು ಕೆಲವು ದಿನಗಳಿಂದ ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳುತ್ತಿಲ್ಲ ಎಂದು ಹೇಳಲಾಗುತ್ತಿದೆ.

ಕೆಲ ದಿನಗಳ ಹಿಂದೆ ಕೊಹ್ಲಿ ಮತ್ತು ಅನುಷ್ಕಾ ಮುಂಬೈಯ ಹೆರಿಗೆ ಆಸ್ಪತ್ರೆಯೊಂದಕ್ಕೆ ಭೇಟಿ ನೀಡಿರುವುದಾಗಿಯೂ ತಿಳಿದುಬಂದಿದೆ.

ಈ ಸಂದರ್ಭ ತಮ್ಮ ಫೋಟೋಗಳನ್ನು ಎಲ್ಲಿಯೂ ಪ್ರಕಟಿಸದಂತೆ ಪಾಪರಾಜಿಗಳಿಗೆ ವಿನಂತಿಸಿದ್ದಾರೆ ಎನ್ನಲಾಗಿದೆ.

ಅನುಷ್ಕಾ ಅವರು ಗರ್ಭಿಣಿಯಾಗಿದ್ದಾರೆ ಎಂಬ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ತಕ್ಷಣ ವಿರಾಟ್​ ಅವರ ಅಭಿಮಾನಿಗಳು ಪ್ರಿನ್ಸ್​ ಕಿಂಗ್​ ಕೊಹ್ಲಿ ನೋಡಲು ಕಾತರವಾಗಿದ್ದೇವೆ ಎಂದು ಕಮೆಂಟ್​ ಮಾಡಲಾರಂಭಿಸಿದ್ದಾರೆ.

ಸದ್ಯ ವಿರಾಟ್​ ಅವರು ವಿಶ್ವಕಪ್​ ಟೂರ್ನಿಯಲ್ಲಿ ಪಾಲ್ಗೊಂಡಿದ್ದು ಇಂಗ್ಲೆಂಡ್​ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆಡುತ್ತಿದ್ದಾರೆ.

Continue Reading

LATEST NEWS

Trending