Monday, January 24, 2022

ನಾನು ಮುಸ್ಲಿಂ ಹುಡುಗಿ ಎಂದಿಗೂ ಮುಸ್ಲಿಂ ಹುಡುಗನನ್ನು ಮದುವೆ ಆಗಲಾರೆ – ಬಿಗ್ ಬಾಸ್ ಸ್ಪರ್ಧಿ ಉರ್ಫಿ ಜಾವೇದ್

ಮುಂಬೈ : ತನ್ನ ವಿಭಿನ್ನವಾದ ಡ್ರೆಸ್ ಗಳ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸದಾ ಸುದ್ದಿಯಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಇದೀಗ ತನ್ನ ಬೋಲ್ಡ್ ಹೇಳಿಕೆಯಿಂದ ಸುದ್ದಿಯಾಗಿದ್ದಾರೆ. ಸ್ವತಃ ಮುಸ್ಲೀಂ ಧರ್ಮದವರಾಗಿರುವ ಅವರು ನಾನು ಎಂದಿಗೂ ಮುಸ್ಲಿಂ ಹುಡುಗನನ್ನು ಮದುವೆ ಆಗಲಾರೆ’ ಎಂದು ಹೇಳಿಕೆ ಕೊಟ್ಟು ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.


ಸಂದರ್ಶನ ಒಂದರಲ್ಲಿ ಮಾತನಾಡಿದ ಉರ್ಫಿ ನಾನು ಎಂದಿಗೂ ಮುಸ್ಲಿಂ ಹುಡುಗನನ್ನು ಮದುವೆ ಆಗಲಾರೆ. ಅದಕ್ಕೂ ಕಾರಣವಿದೆ. ಇದೇ ರೀತಿ ಮಹಿಳೆಯರು ಇರಬೇಕು ಅಂತ ಮುಸ್ಲಿಂ ಪುರುಷರು ಬಯಸುತ್ತಾರೆ, ಅದು ನನ್ನ ಬಳಿ ಸಾಧ್ಯವಿಲ್ಲ. ಅವರ ಧರ್ಮವನ್ನು ನಾನು ಟ್ರೋಲ್ ಆಗಿ ಹಾಳುಮಾಡುತ್ತಿದ್ದೀನಿ ಎಂದು ಹೇಳುತ್ತಿದ್ದಾರೆ.

ನಾನು ಮುಸ್ಲಿಂ ಹುಡುಗಿ, ಮುಸ್ಲಿಂರಿಂದಲೇ ನನಗೆ ಬಹುತೇಕ ನೆಗೆಟಿವ್ ಕಾಮೆಂಟ್ಸ್ ಬರತ್ತೆ. ನಾನು ಇಸ್ಲಾಂ ಹೆಸರು ಹಾಳುಮಾಡುತ್ತಿದ್ದೇನೆ ಎಂದು ಅವರು ಹೇಳುತ್ತಿದ್ದಾರೆ.

ಮುಸ್ಲಿಂ ಮಹಿಳೆಯರು ಹೀಗೆ ಇರಬೇಕು ಅಂತ ಅವರು ಬಯಸುತ್ತಾರೆ. ಕಮ್ಯುನಿಟಿಯಲ್ಲಿರುವ ಎಲ್ಲ ಮಹಿಳೆಯರನ್ನು ಅವರು ಕಂಟ್ರೋಲ್ ಮಾಡುತ್ತಾರೆ. ಇದೇ ಕಾರಣಕ್ಕೆ ನನಗೆ ಇಸ್ಲಾಂನಲ್ಲಿ ನಂಬಿಕೆ ಇಲ್ಲ. ಹೀಗಾಗಿಯೇ ನನ್ನನ್ನು ಟ್ರೋಲ್ ಮಾಡಲಾಗತ್ತೆ. ಅವರು ಬಯಸಿದ ರೀತಿಯಲ್ಲಿ ನಾನು ಇರಲು ಆಗೋದಿಲ್ಲ” ಎಂದು ಉರ್ಫಿ ಜಾವೇದ್ ಸಂದರ್ಶನದಲ್ಲಿ ಹೇಳಿದ್ದಾರೆ.

Hot Topics

ಮುಡಿಪು: ದ್ವಿಚಕ್ರ ವಾಹನಕ್ಕೆ ಒಂದೇ ತಿಂಗಳಲ್ಲಿ ಬರೋಬ್ಬರಿ 9 ಸಾವಿರ ಟ್ರಾಫಿಕ್ ಫೈನ್-ಬೆಚ್ಚಿಬಿದ್ದ ಮಾಲಕಿ

ಮುಡಿಪು: ಮೆಡಿಕಲ್ ಸ್ಟೋರ್ ಒಂದರ ಎದುರುಗಡೆ ನಿಲ್ಲಿಸಿದ್ದ ಒಂದೇ ದ್ವಿಚಕ್ರ ವಾಹನಕ್ಕೆ ಪೊಲೀಸರು ಒಂದೇ ತಿಂಗಳಲ್ಲಿ ಒಂಭತ್ತು ಸಾವಿರ ದಂಡ ವಿಧಿಸಿರುವ ಘಟನೆ ಮುಡಿಪು ಜಂಕ್ಷನ್‌ನಲ್ಲಿ‌ ನಡೆದಿದೆ.ಗಣೇಶ್ ಕಾಂಪ್ಲೆಕ್ಸ್‌ನಲ್ಲಿರುವ ಸಂಜೀವಿನಿ ಆಯುರ್ವೇದ ಮಡಿಕಲ್...

ಮಂಗಳೂರಿನ ಕುವರಿ ರೆಮೊನಾ ಇವೆಟ್ಟಾ ಪಿರೇರಾಗೆ ರಾಷ್ಟ್ರೀಯ ಬಾಲಪುರಸ್ಕಾರ ಪ್ರಶಸ್ತಿ

ಮಂಗಳೂರು: ಈ ಬಾರಿಯ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲಪುರಸ್ಕಾರ ಪ್ರಶಸ್ತಿ ಮಂಗಳೂರಿನ ರೆಮೊನಾ ಇವೆಟ್ಟಾ ಪಿರೇರಾ ಅವರಿಗೆ ದೊರೆತಿದೆ.ಸಾಂಸ್ಕೃತಿಕ ರಂಗದಲ್ಲಿ ಮಾಡಿದ ಸಾಧನೆಗೆ ಈ ಗೌರವ ಲಭಿಸಿದ್ದು, ಪುರಸ್ಕಾರವು ಒಂದು ಲಕ್ಷ ಮೊತ್ತ,...

ಕೋಟ ಲಾಠಿ ಚಾರ್ಜ್ ಪ್ರಕರಣ: ಹುಸಿಯಾದ ಗೃಹಸಚಿವರ ಭರವಸೆ- ಮತ್ತೆ ಪ್ರತಿಭಟನೆಗೆ ನಿರ್ಧಾರ

ಕೋಟ: ಇಲ್ಲಿನ ಕೋಟತಟ್ಟುವಿನ ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸ್‌ ಲಾಠಿ ಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊರಗ ಸಮುದಾಯದ ಕೆಲವರ ಮೇಲಿನ ಪ್ರಕರಣ ಹಿಂಪಡೆಯುವುದಾಗಿ ಕಾಲೊನಿಗೆ ಭೇಟಿ ನೀಡಿದ್ದ ಗೃಹ ಸಚಿವರ ಭರವಸೆ ಅವರ ಹಿಂದೆಯೇ...