Connect with us

DAKSHINA KANNADA

ಸೌಜನ್ಯ ಪ್ರಕರಣಕ್ಕೆ ನ್ಯಾಯ ಒದಗಿಸುವಂತೆ ಒತ್ತಾಯ- ಒಕ್ಕಲಿಗ ಹೋರಾಟ ಸಮಿತಿಯಿಂದ ಧರಣಿ ಸತ್ಯಾಗ್ರಹ..!

Published

on

ಸೌಜನ್ಯ ಪ್ರಕರಣಕ್ಕೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಮಂಗಳೂರು ನಗರದಲ್ಲಿ ಜಿಲ್ಲಾ ಒಕ್ಕಲಿಗರ ಹೋರಾಟ ಸಮಿತಿಯಿಂದ ಧರಣಿ ಸತ್ಯಾಗ್ರಹ ನಡೆಯಿತು.

ಮಂಗಳೂರು: ಸೌಜನ್ಯ ಪ್ರಕರಣಕ್ಕೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಮಂಗಳೂರು ನಗರದಲ್ಲಿ ಜಿಲ್ಲಾ ಒಕ್ಕಲಿಗರ ಹೋರಾಟ ಸಮಿತಿಯಿಂದ ಧರಣಿ ಸತ್ಯಾಗ್ರಹ ನಡೆಯಿತು.

ನಗರದ ತಾಲೂಕು ಕಚೇರಿ ಎದುರು 2 ದಿನಗಳ ಕಾಲ ನಡೆಯಲಿರುವ ಧರಣಿ‌ ಸತ್ಯಾಗ್ರಹದಲ್ಲಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ನ್ಯಾಯ ಒದಗಿಸುವಂತೆ ಪ್ರತಿಭಟನಾಕಾರರ ಒತ್ತಾಯಿಸಿದ್ದಾರೆ.

ಪ್ರಕರಣದ ನೈಜ್ಯ ಆರೋಪಿಗಳನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆ ನೀಡಬೇಕು.

ಪ್ರಕರಣದ ತನಿಖೆಯ ದಾರಿತಪ್ಪಿಸಿದ ಪೊಲೀಸ್ ತನಿಖಾಧಿಕಾರಿ ಮತ್ತು ವೈದ್ಯಕೀಯ ವರದಿ‌ ನೀಡಿದ ವೈದ್ಯರನ್ನು ತನಿಖೆಗೆ ಒಳ ಪಡಿಸಬೇಕು.

ಅವರ ವಿರುದ್ಧ ಕಾನೂನಾತ್ಮಕ ಕಠಿಣ‌ ಕ್ರಮ ಕೈಗೊಳ್ಳಬೇಕು.

ರಾಜ್ಯ‌ ಸರಕಾರ ಪ್ರಕರಣಕ್ಕೆ ನ್ಯಾಯ ಒದಗಿಸುವ ನಿಟ್ಟಿ‌ನಲ್ಲಿ ಕ್ರಮ ಕೈಗೊಳ್ಳಬೇಕು ಎಂದು  ಈ ಧರಣಿ‌ ಸತ್ಯಾಗ್ರಹ ದಲ್ಲಿ ಪ್ರತಿಭಟನಾಕಾರರ ಒತ್ತಾಯಿಸಿದ್ದಾರೆ.

BANTWAL

ಬೈಕ್‌ಗಳು ಪರಸ್ಪರ ಮು*ಖಾಮು*ಖಿ ; ಬಾಲಕಿ ಸಾ*ವು

Published

on

ಬಂಟ್ವಾಳ: ಬೈಕ್ ಗಳ ನಡುವೆ ಭೀ*ಕರ ಅ*ಪಘಾ*ತ ಸಂಭವಿಸಿ ಬೈಕ್ ನಲ್ಲಿ ಸಹ ಪ್ರಯಾಣಿಕೆಯಾಗಿದ್ದ ಬಾಲಕಿ ಮೃ*ತಪಟ್ಟ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಿನ್ನೆ (ಜ.14) ರಾತ್ರಿ ನಡೆದಿದೆ.

ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶಾ (13) ಮೃ*ತ ಬಾಲಕಿ ಎಂದು ಗುರುತಿಸಲಾಗಿದೆ.

ಬಾಲಕಿಯ ತಂದೆ ಬೈಕ್ ಚಾಲಕ ಅಬ್ದುಲ್ ರಹಮಾನ್ ಕೂಡ ಗಾ*ಯಗೊಂಡಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 

ಇದನ್ನೂ ಓದಿ : ಮಂಗಳೂರು: ಕೈದಿಗಳಿಂದ ಜೈಲು ಅಧಿಕಾರಿ, ಸಿಬಂದಿಯ ಕರ್ತವ್ಯಕ್ಕೆ ಅಡ್ಡಿ

 

ರಾಮಲ್ ಕಟ್ಟೆಯಿಂದ ಹೆದ್ದಾರಿಯಲ್ಲಿ ರಾಂಗ್ ಸೈಡ್ ನಲ್ಲಿ ಬಂದ ನೆತ್ತರಕೆರೆ ನಿವಾಸಿ ರಂಜಿತ್ ಎಂಬಾತ ಬಿ.ಸಿ ರೋಡಿನ ಕಡೆಯಿಂದ ತುಂಬೆ ಕಡೆಗೆ ಸರಿಯಾದ ದಿಕ್ಕಿನಲ್ಲಿ ಬರುತ್ತಿದ್ದ ಬೈಕ್ ಗೆ ಡಿ*ಕ್ಕಿ ಹೊಡೆದಿದ್ದಾನೆ. ರಂಜಿತ್ ಗೆ ಕೂಡ ಗಾ*ಯವಾಗಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ.

ಅ*ಪಘಾ*ತ ನಡೆದ ರಭಸಕ್ಕೆ ಬೈಕ್ ಸಂಪೂರ್ಣ ಜ*ಖಂಗೊಂಡಿದೆ. ಘಟನಾ ಸ್ಥಳಕ್ಕೆ ಪಾಣೆಮಂಗಳೂರು ಟ್ರಾಫಿಕ್ ಎಸ್.ಐ ಸುತೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Continue Reading

DAKSHINA KANNADA

ಮಂಗಳೂರು: ಕೈದಿಗಳಿಂದ ಜೈಲು ಅಧಿಕಾರಿ, ಸಿಬಂದಿಯ ಕರ್ತವ್ಯಕ್ಕೆ ಅಡ್ಡಿ

Published

on

ಮಂಗಳೂರು : ನಗರದ ಜೈಲಿನಲ್ಲಿ ಕೈದಿಗಳು ಜೈಲು ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಹ*ಲ್ಲೆಗೆ ಯತ್ನಿಸಿದ ಘಟನೆ ನಡೆದಿದ್ದು, ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

ಮಂಗಳೂರಿನ ಜಿಲ್ಲಾ ಕಾರಾಗೃಹದ ‘ಎ’ ಬ್ಲಾಕ್‌ನ ಸೆಲ್‌ಗಳಲ್ಲಿ ನಿಷೇಧಿತ ವಸ್ತುಗಳಿರುವ ಶಂಕೆಯ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ಜೈಲು ಸಿಬಂದಿ ತಪಾಸಣೆಗೆ ತೆರಳಿದ್ದರು. ಈ ವೇಳೆ ವಿಚಾರಣಾಧೀನ ಕೈದಿಗಳು ಬೆದರಿಕೆಯೊಡ್ಡಿ ಕರ್ತವ್ಯಕ್ಕೆ ಅಡ್ಡಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

 

ಇದನ್ನೂ ಓದಿ : ಮಂಗಳೂರಿಗೆ ಆಗಮಿಸಲಿದ್ದಾರೆ ಡಾಲಿ ಚಾಯ್ ವಾಲ

 

ಜೈಲಿನಲ್ಲಿ ಮೊಬೈಲ್, ಗಾಂಜಾ ಮೊದಲಾದ ನಿಷೇಧಿತ ವಸ್ತುಗಳಿರುವ ಶಂಕೆಯಿಂದ ಜೈಲು ಅಧೀಕ್ಷಕ ಎಂ.ಎಚ್.ಆಶೇಖಾನ್ ನೇತೃತ್ವದಲ್ಲಿ ತಪಾಸಣೆಗೆ ಮುಂದಾಗಿದ್ದರು. ಆಗ ಪಾತ್ರೆ ಮತ್ತಿತರ ವಸ್ತುಗಳಿಂದ ವಿಚಾರಣಾ ಕೈದಿಗಳು ಹಲ್ಲೆಗೆ ಮುಂದಾಗಿದ್ದಾರೆ. ಅಲ್ಲದೆ ಅ*ವಾಚ್ಯ ಶಬ್ದಗಳಿಂದ ಬೈ*ದು ಬೆದರಿಕೆ ಒಡ್ಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಬರ್ಕೆ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

Continue Reading

DAKSHINA KANNADA

ರಾಜ್ಯದ 6 ಜಿಲ್ಲೆಗಳಿಗೆ ಭಾರೀ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ; ಎಲ್ಲೆಲ್ಲಿ?

Published

on

ಮಂಗಳೂರು/ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ನಿನ್ನೆ ಸಂಜೆ ಮತ್ತು ರಾತ್ರಿ ಮಳೆಯಾಗಿದ್ದು, ಕೆಲವೆಡೆ ಮಳೆಗಾಲದಂತೆ ಜೋರಾಗಿ ಮಳೆಯಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ದಕ್ಷಿಣ ಕನ್ನಡ, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸಾಧಾರಣ ಮಳೆ ಆಗಿದ್ದು, ಇನ್ನೂ ಮುಂದಿನ 2 ದಿನ ಮಳೆಯಾಗಲಿದೆ ಎಂದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೊಮೊರಿನ್ ಪ್ರದೇಶ ಮತ್ತು ನೆರೆಹೊರೆಗಳಲ್ಲಿ ಚಂಡಮಾರುತದ ಪರಿಚಲನೆಯು ಈಗ ಅಗ್ನೇಯ ಅರೇಬಿಯನ್ ಸಮುದ್ರ ಮತ್ತು ಪಕ್ಕದ ಸಮಭಾಜಕ ವೃತ್ತದ ಹಿಂದೂ ಮಹಾಸಾಗರದ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ. ಎತ್ತರದಲ್ಲಿದೆ. ಇದರಿಂದ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಇದನ್ನೂ ಓದಿ: ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸಾಧಾರಣ ಮಳೆ

ಯಾವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ?
ಹಾಸನ, ಚಾಮರಾಜನಗರ, ಕೊಡಗು, ಮೈಸೂರು, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದ್ದು, ಇನ್ನು ಉತ್ತರ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಮಂಜು ಬೀಳುವ ಸಾಧ್ಯತೆ ಇದೆ. ಜನವರಿ 20 ರವರೆಗೂ ಇದೇ ಹವಾಮಾನ ಮುಂದುವರಿಯಲಿದೆ.

ಮುಂದಿನ 24 ಗಂಟೆಗಳ ಕಾಲ ಬೆಂಗಳೂರು ಹಾಗೂ ನೆರೆಯ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28 ಡಿ.ಸೆ ಮತ್ತು 20 ಡಿ. ಸೆ ಇರುವ ಸಾಧ್ಯತೆ ಇದ್ದು, ನಾಳೆಯೂ ಹೀಗೆ ಇರಲಿದೆ.

ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸೋಮವಾರ ಹಗುರ ಮಳೆಯಾಗಿದೆ. ವಿಜಯಪುರದಲ್ಲಿ ಕನಿಷ್ಠ ತಾಪಮಾನ 14.6 ಡಿ. ಸೆ ಹಾಗೂ ಉತ್ತರ ಕನ್ನಡ ಜಿಲ್ಲೆ ಹೊನ್ನಾವರದಲ್ಲಿ ಗರಿಷ್ಠ ತಾಪಮಾನ 32.8 ಡಿ. ಸೆ ದಾಖಲಾಗಿದೆ. ಇನ್ನು ಬೆಂಗಳೂರಿನಲ್ಲಿ ಇನ್ನೆರಡು ದಿನ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಮುಂದುವರಿಯುವ ಸಾಧ್ಯತೆ ಇದೆ.

Continue Reading

LATEST NEWS

Trending

Exit mobile version