Connect with us

DAKSHINA KANNADA

ಉರ್ವ ಸ್ಟೋರ್ ಮಹಾಗಣಪತಿ ದೇವರಿಗೆ ನೂತನ ರಥ ಸಮರ್ಪಣೆ- ಅಷ್ಟಬಂಧ ಬ್ರಹ್ಮಕಲಶೋತ್ಸವ, ಜಾತ್ರಾ ಮಹೋತ್ಸವ ಸಂಭ್ರಮ

Published

on

ಮಂಗಳೂರು: ಮಹಾಗಣಪತಿ ದೇವಸ್ಥಾನ ಉರ್ವಸ್ಟೋರ್ ಇಲ್ಲಿನ ಶ್ರೀ ಮಹಾಗಣಪತಿ ದೇವರಿಗೆ ನೂತನ ಬ್ರಹ್ಮರಥ ಸಮರ್ಪಣಾ ಪೂರ್ವ ಅಷ್ಟಬಂಧ ಬ್ರಹ್ಮ ಕಲಶೋತ್ಸವವು 2024 ಫೆಬ್ರವರಿಯಲ್ಲಿ ನಡೆಯಲಿದ್ದು, ವಿವಿಧ ಮಠಾಧೀಶರುಗಳ ಆಶೀರ್ವಚನದೊಂದಿಗೆ ಫೆ. 11 ರಿಂದ 18 ರವರೆಗೆ ನಡೆಯಲಿದೆ ಎಂದು ಕ್ಷೇತ್ರದ ಆಡಳಿತ ಮಂಡಳಿ ತಿಳಿಸಿದೆ.

ಬ್ರಹ್ಮ ಕಲಶೋತ್ಸವದ ಪೂರ್ವಭಾವಿಯಾಗಿ ಬುಧವಾರದಂದು ಬೆಳಗ್ಗೆ 9 ಗಂಟೆಯಿಂದ ಬ್ರಹ್ಮಶ್ರೀ ವೇದಮೂರ್ತಿ ಡಾ ಶಿವಪ್ರಸಾದ್ ತಂತ್ರಿಗಳ ಪೌರೋಹಿತ್ಯ ದಲ್ಲಿ ಅನುಜ್ಞಾ ಕಲಶ ನೆರವೇರಿತು. ನಂತರ ಮಧ್ಯಾಹ್ನ ಆಮಂತ್ರಿತ ಗಣ್ಯರ ಉಪಸ್ಥಿತಿಯಲ್ಲಿ ವಿಜ್ಞಾಪನೆ ಪತ್ರವನ್ನು ಬಿಡುಗಡೆ ಗೊಳಿಸಲಾಯಿತು.

ಕ್ಷೇತ್ರದಲ್ಲಿ ಗಜಪ್ರಷ್ಠಾಕಾರದ ಶಿಲಾಮಯ ಗರ್ಭಗುಡಿಯಲ್ಲಿ ಮಹಾಗಣಪತಿದೇವರು ನೆಲೆಸಿದ್ದು, ಜೊತೆಗೆ ದುರ್ಗಾಪರಮೆಶ್ವರಿ ದೇವರು, ನವಗ್ರಹ, ನಾಗದೇವರ ಸಹಿತ ಸಪರಿವಾರ ದೇವರುಗಳು ಆರಾಧನೆಗೊಳ್ಳುತ್ತಿದ್ದು, ಶ್ರೀ ಮಹಾಗಣಪತಿ ದೇವರಿಗೆ ಸುಮಾರು 65 ಲಕ್ಷ ರೂ ವೆಚ್ಚದಲ್ಲಿ ನೂತನ ರಥ ನಿರ್ಮಾಣಗೊಳ್ಳುತ್ತಿದೆ. ದೇವರ ಅಷ್ಟಬಂಧಬ್ರಹ್ಮಕಲಶ ಫೆ. 11ರಂದು ಪ್ರಾರಂಭವಾಗಿ 15 ಗುರುವಾರದಂದು ಬ್ರಹ್ಮಕಲಶ 16ರಂದು ರಥಸಪ್ತಮಿ ದಿನ ಬ್ರಹ್ಮರಥೋತ್ಸವದೊಂದಿಗೆ ವಾರ್ಷಿಕ ಜಾತ್ರಾಮಹೋತ್ಸವ 18ರಂದು ಕಟೀಲು ಶ್ರೀ ದುರ್ಗಾಪರಮೆಶ್ವರಿ ಅಮ್ಮನವರ ಯಕ್ಷಗಾನದೊಂದಿಗೆ ಜಾತ್ರಮಹೋತ್ಸ್ವವು ಸಂಪನ್ನಗೊಳ್ಳಲಿದ್ದು, ಪ್ರತಿನಿತ್ಯ ಅನ್ನದಾನ ನಡೆಯಲಿದೆ. ಈ ಹಿನ್ನೆಲೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಶ್ರೀ ದೇವರ ಪುಣ್ಯಕಾರ್ಯದಲ್ಲಿ ಭಾಗವಹಿಸುವ ಮೂಲಕ ದೇವರ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ಆಡಳಿತ ಮಂಡಳಿ ತಿಳಿಸಿದೆ.

DAKSHINA KANNADA

ಪುತ್ತೂರಿನಲ್ಲಿ ಕಳವುಗೈದ ಇತ್ತೆ ಬರ್ಪೆ ಅಬೂಬಕ್ಕರ್ ಬಂಧನ..!

Published

on

ಪುತ್ತೂರು: ಅಂತರ್‌ ಜಿಲ್ಲಾ ಕಳವು ಪ್ರಕರಣದ ಕುಖ್ಯಾತ ಆರೋಪಿ ಅಬೂಬಕ್ಕರ್ ಯಾನೆ ಇತ್ತೆ ಬರ್ಪೆ ಅಬೂಬಕ್ಕರ್ ಎಂಬಾತನನ್ನು ಪುತ್ತೂರು ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಅಬೂಬಕ್ಕರ್ ಯಾನೆ ಇತ್ತೆ ಬರ್ಪೆ ಅಬೂಬಕ್ಕರ್ ಚಿಕ್ಕಮಂಗಳೂರು ತಾಲೂಕಿನ ಉಪ್ಪಳ್ಳಿ ಮನೆ ನಿವಾಸಿಯಾಗಿದ್ದು, ಆತನ ಮೇಲೆ ಮಂಗಳೂರು, ಬಂಟ್ವಾಳ, ಪುತ್ತೂರು, ಮೂಡುಬಿದಿರೆ, ಕಾರ್ಕಳ, ಉಡುಪಿ, ಸುರತ್ಕಲ್, ಚಿಕ್ಕಮಗಳೂರು ಸೇರಿದಂತೆ ವಿವಿಧ ಕಡೆಗಳಲ್ಲಿ 80 ಕ್ಕೂ ಹೆಚ್ಚು ಕಳ್ಳತನದ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ 2023 ರಲ್ಲಿಯೇ ಎರಡು ಪ್ರಕರಣಗಳು ದಾಖಲಾಗಿವೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ಡಿಸೆಂಬರ್‌ 19 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

Continue Reading

BANTWAL

ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

Published

on

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2017 ರಲ್ಲಿ ದಾಖಲಾದ ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಪಾಲಮ ಹೆಹರು ತಾಲೂಕಿನ ಚಿನ್ನಪಳ್ಳಿ ಪೆದ್ದ ಗ್ರಾಮದ ನಿವಾಸಿ ಬಿ. ಮೌಲಾ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಕಳೆದ 6 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬಿ. ಮೌಲಾ ಉಳ್ಳಾಲ ತಾಲೂಕಿನ ದೇರಳಕಟ್ಟೆಯ ಕುತ್ತಾರು ಎಂಬಲ್ಲಿ ಇದ್ದಾನೆ ಎಂಬುದಾಗಿ ಲಭಿಸಿದ ಖಚಿತ ಮಾಹಿತಿ ಮೇರೆಗೆ ಪೊಲೀಸರು ಅಲ್ಲಿಗೆ ತೆರಳಿ ಆತನನ್ನು ಬಂಧಿಸಿದರು. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿ, ನ್ಯಾಯಾಲಯವು ಆರೋಪಿಗೆ ದಂಡ ವಿಧಿಸಿ ಪ್ರಕರಣವನ್ನು ಮುಕ್ತಾಯಗೊಳಿಸಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯ ಹೆಡ್‌ ಕಾನ್‌ ಸ್ಟೆಬಲ್‌ ಗಣೇಶ್ ಪ್ರಸಾದ್ ಮತ್ತು ಕಾನ್‌ ಸ್ಟೆಬಲ್‌ ವಿಜಯ ಕುಮಾರ ಅವರು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

 

Continue Reading

DAKSHINA KANNADA

ಮಂಗಳೂರಿನಲ್ಲಿ ಮೂರು ದಿನ ನೀರು ಪೂರೈಕೆ ವ್ಯತ್ಯಯ

Published

on

ಮಂಗಳೂರು: ಮಂಗಳೂರು ಮಹಾ ನಗರಪಾಲಿಕೆಯು ನೀರು ಸರಬರಾಜು ವ್ಯವಸ್ಥೆಯ ಕೊಳವೆಯನ್ನು ಬಲಪಡಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಡಿ. 6 ರ ಬುಧವಾರ ಬೆಳಗ್ಗೆ 6 ಗಂಟೆಯಿಂದ ಡಿ. 8 ರ ಶುಕ್ರವಾರ ಬೆಳಗ್ಗೆ 6 ಗಂಟೆಯ ವರೆಗೆ ನಗರ ಪಾಲಿಕೆ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆ ವ್ಯತ್ಯಯಗೊಳ್ಳಲಿದೆ ಎಂದು ಪಾಲಿಕೆಯ ಎಕ್ಸಿಕ್ಯೂಟಿವ್‌ ಎಂಜಿನಿಯರ್‌ ತಿಳಿಸಿದ್ದಾರೆ.

ತುಂಬೆ- ಬೆಂದೂರ್‌ವೆಲ್–ಪಣಂಬೂರು ಪ್ರದೇಶಗಳಿಗೆ ನೀರು ಪೂರೈಸುವ 1 ಸಾವಿರ ಮಿಲಿ ಮೀಟರ್ ವ್ಯಾಸದ ಮುಖ್ಯ ಕೊಳವೆಯನ್ನು ನಾಗುರಿ ಮಾರುಕಟ್ಟೆ ಬಳಿ ಬಲಪಡಿಸುವುದು, ತುಂಬೆ ರಾಮಲ್‌ಕಟ್ಟೆ ಬಳಿ ಕೆಯುಐಡಿಎಫ್‌ಸಿ ವತಿಯಿಂದ ಬಲ್ಕ್‌ ಫ್ಲೋ ಮೀಟರ್‌ ಅಳವಡಿಕೆ ಹಾಗೂ ಪಾಲಿಕೆ ವತಿಯಿಂದ 900 ಮಿ.ಮೀ ವ್ಯಾಸದ ಕೊಳವೆಯನ್ನು ಕೆಐಒಸಿಎಲ್‌ ಬಳಿ ಬದಲಾಯಿಸುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ. ಈ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಮಂಗಳೂರಿನ ಬೆಂದೂರ್‌ವೆಲ್‌ಗಿಂತ ತಗ್ಗಿನಲ್ಲಿರುವ ಪ್ರದೇಶಗಳಾದ ಪಿ.ವಿ.ಎಸ್, ಲೇಡಿಹಿಲ್, ಬಂದರು ಹಾಗೂ ಮೇರಿಹಿಲ್, ಪಚ್ಚನಾಡಿ, ಅಶೋಕನಗರ, ದೇರೆಬೈಲ್, ಕೊಡಿಯಾಲ್‌ಬೈಲ್, ಕದ್ರಿ, ನಾಗುರಿ, ಸುರತ್ಕಲ್, ಕಾಟಿಪಳ್ಳ, ಕೂಳೂರು, ಜಲ್ಲಿಗುಡ್ಡೆ, ಕೋಡಿಕಲ್ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆಯು ಭಾಗಶಃ ಸ್ಥಗಿತಗೊಳ್ಳಲಿದೆ. ಕಾನ, ಬಾಳ, ಕುಳಾಯಿ, ಮುಕ್ಕ, ಪಣಂಬೂರು ಪ್ರದೇಶಗಳಿಗೆ ನೀರು ಪೂರೈಕೆಯನ್ನು ಸಂಪೂರ್ಣವಾಗಿ ಸ್ಥಗಿತ ಮಾಡಲಾಗುತ್ತದೆ ಎಂದವರು ತಿಳಿಸಿದ್ದಾರೆ.

Continue Reading

LATEST NEWS

Trending